Share

‘ನೀನು ನನ್ನ ಲೋಕದವಳು’
ಉಷಾ ಕಟ್ಟೆಮನೆ ಕಾಲಂ

IMG-20160516-WA0001

ಸ್ವಗತ | svagata

 

 

usha

ವಳು ಮೊಣಕಾಲ ಮೇಲೆ ತಲೆಯಿಟ್ಟು ಬಿಕ್ಕಿ ಬಿಕ್ಕಿ ಅಳುತ್ತಿದ್ದಳು.

ಏನಾಯ್ತೋ ಗೊತ್ತಿಲ್ಲ. ಮೆಲ್ಲನೆ ಹೋಗಿ ತಲೆ ಮೇಲೆ ಕೈಯಿಟ್ಟೆ. ತಲೆ ಸವರಿದೆ.

ದೂರ ಸರಿದಳು. ಬೆನ್ನು ತಿರುಗಿಸಿ ಕೊಂಚ ತಲೆಯೆತ್ತಿ ಸೆರಗಿನಿಂದ ಸಿಂಬಳ ಒರೆಸಿಕೊಂಡಳು.

ಏನು ಮಾಡುವುದಕ್ಕೂ ತೋಚಲಿಲ್ಲ. ಒಳಗೆ ಹೋಗಿ ನೀರಿನ ಜಗ್ ಮತ್ತು ಒಂದು ಲೋಟ ತಂದು ಪಕ್ಕದಲ್ಲಿಟ್ಟೆ.

ನಡುಗುವ ಕೈಗಳಿಂದ ಗ್ಲಾಸಿಗೆ ನೀರು ಸುರುವಿಕೊಳ್ಳತೊಡಗಿದಳು. ಅರ್ಧಕ್ಕರ್ಧ ಚೆಲ್ಲಿ ಹೋಯಿತು.

ಎರಡೂ ಕೈಗಳಿಂದ ಗ್ಲಾಸ್ ಗಟ್ಟಿಯಾಗಿ ಹಿಡಿದು ಕಚ್ಚಿ ಗಟಗಟನೆ ನೀರು ಹೀರತೊಡಗಿದಳು.

ಕಟವಾಯಿಯಿಂದ ಹರಿದ ನೀರು ಅವಳ ಎದೆಯನ್ನು ತೋಯಿಸಿತು.

ಅವಳಿಗೇನಾಯ್ತು?

ಪಕ್ಕದಲ್ಲಿ ಹೋಗಿ ಕುಳಿತೆ.

ಅವಳು ಕೊಂಚ ಇತ್ತ ತಿರುಗಿ ನನ್ನ ತೋಳನ್ನು ಗಟ್ಟಿಯಾಗಿ ಹಿಡಿದು ಆರ್ತಳಾಗಿ ನೋಡಿದಳು.

ತಡೆ ತಡೆದು ನುಡಿದಳು:

‘ಸಾಯಬೇಕೆನಿಸುತ್ತಿದೆ. ಆದರೆ ಸಾಯಲಾರೆ, ಏನು ಮಾಡಲಿ?’

ಮಾತಾಡುವ ಸಮಯವಲ್ಲವದು, ಹಗುರವಾಗಿ ಭುಜಕ್ಕಾನಿಸಿಕೊಂಡೆ.

ಟೀಶರ್ಟಿಗೆ ಮೂಗು ಉಜ್ಜಿದಳು. ಬಿಸಿ ಕಣ್ಣೀರ ಬಿಂದುಗಳು ಚರ್ಮಕ್ಕೆ ತಾಗಿದವು. ಮನಸು ಸುಡತೊಡಗಿತು.

a2ಯಾಕೆ ಹೀಗೆ?

ಮಧ್ಯವಯಸ್ಸು.

ಮದುವೆಯಾಗಿ ಇಪ್ಪತ್ತು ವರ್ಷ ಉರುಳಿ ಹೋಗಿದೆ.

ಭುಜದೆತ್ತರ ಬೆಳೆದ ಇಬ್ಬರು ಮಕ್ಕಳಿದ್ದಾರೆ.

ಅನುರೂಪ ದಾಂಪತ್ಯವೇನೂ ಆಗಿರಲಿಲ್ಲ; ಬದುಕಿನ ಬಂಡಿ ಸರಾಗವಾಗಿ ಸಾಗುತ್ತಿತ್ತು.

ಹೆಗಲ ಮೇಲಿರುವ ನೊಗ ಒಂದೇ ಪಕ್ಕಕ್ಕೇ ವಾಲಿತ್ತು. ಆದರೂ ಬಲಾಢ್ಯ ಕೈ-ಕಾಲುಗಳು ಎಂದೂ ಮುಗ್ಗರಿಸಿರಲಿಲ್ಲ.

ನಡು ಮಧ್ಯಾಹ್ನ, ಬಿರುಬೇಸಿಗೆ, ಋತುಮಾನ ಪಲ್ಲಟ; ಬಳಲಿಕೆ ಸಹಜ.

ನನ್ನ ಯೋಚನಾ ಲಹರಿ ಸಾಗುತ್ತಲಿತ್ತು.

‘ಅವಳಿಗೆ ಮಗುವಾಯ್ತಂತೆ’

ಹೆಗಲಿನಿಂದ ತಲೆ ಜಾರಿ ಮತ್ತೆ ಮೊಣಕಾಲುಗಳ ಮೇಲೆ ಬಿತ್ತು.

‘ನಿನಗೆ ನಾಲ್ಕು ಮಕ್ಕಳಾದವು’ ನಾನು ನಕ್ಕೆ. ಅವಳು ತಲೆಯೆತ್ತಲಿಲ್ಲ.

ಸದಾ ಸುಂದರಿಯರ, ಸೆಲೆಬ್ರಿಟಿಗಳ ನಡುವೆ ಅಲೆದಾಡುವ ಅವನಿಗೆ ಹಳ್ಳಿ ಗಮಾರಳಂತಿರುವ ಇವಳು ಹೇಗೆ ಸಂಗಾತಿಯಂತೆ ಕಾಣಲು ಸಾಧ್ಯ?

ಅವಳತ್ತ ಸರಿದೆ, ಒತ್ತಿ ಕೂತೆ. ಗಲ್ಲವನು ಹಿಡಿದೆತ್ತಿದೆ. ಮುಂದಲೆಯನ್ನು ಮೃದುವಾಗಿ ಹಿಡಿದು ನೆತ್ತಿಯ ಮೇಲೆ ತುಟಿಯೂರಿದೆ.

ಮನಸು ಪಿಸುಗುಟ್ಟುತ್ತಿತ್ತು ‘ನೀನು ಈ ಲೋಕಕ್ಕೆ ಸೇರಿದವಳಲ್ಲ; ನನ್ನ ಲೋಕದವಳು.’

ಅವಳು ಕಣ್ಮಚ್ಚಿ  ಜೀವ ಚೈತನ್ಯವನ್ನು ಹೀರುತ್ತಾ ಸಹಸ್ರಾರಕ್ಕೇರುತ್ತಿದ್ದಳು.

———-

usha2ಉಷಾ ಕಟ್ಟೆಮನೆ, ಪತ್ರಕರ್ತೆಯಾಗಿ, ಅದಕ್ಕೂ ಮೊದಲು ಕನ್ನಡ ಉಪನ್ಯಾಸಕಿಯಾಗಿ ಕೆಲಸ ಮಾಡಿದವರು. ದೃಶ್ಯ ಮಾಧ್ಯಮಕ್ಕಾಗಿಯೂ ಕೆಲಸ ಮಾಡಿದ ಅನುಭವ. ಆದರೆ ಅವರು ಪರಿಚಿತರಾಗಿರುವುದು ತಮ್ಮ ವಿಶಿಷ್ಟ ಸಂವೇದನೆಯ ಬರವಣಿಗೆಯಿಂದಾಗಿ. ಕೆಲ ವರ್ಷಗಳಿಂದ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ದೇಶ ಸುತ್ತುವುದೆಂದರೆ ಇವರಿಗೆ ಅತ್ಯಂತ ಇಷ್ಟ.

Share

Leave a comment

Your email address will not be published. Required fields are marked *

Recent Posts More

  • 2 days ago No comment

    ಈ ಸಂಜೆಯೊಳಗೆ

      ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

  • 5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 6 days ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 2 weeks ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

  • 15 August 2018
    5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    3 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    4 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...