Share

ಬುದ್ಧ ಇಂದಿಗೆ: ನಿರೀಕ್ಷಿಸಿ… ವಿಚಾರ ಸರಣಿ

ಣಿಪುರದ ಮಗಳು ಇರೋಮ್ ಶರ್ಮಿಳಾ ಅಸ್ಸಾಂ ರೈಫಲ್ಸ್ ವಿರುದ್ಧದ ಹೋರಾಟದ ಭಾಗವಾಗಿ ಕಳೆದ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸವನ್ನು ನಿರರ್ಥಕತೆಯ ಕಾರಣದ ಹತಾಶೆಯಿಂದ ನಿಲ್ಲಿಸಿದಾಗ ಗಾಂಧಿ ತತ್ವದ ಸೋಲು ಎಂಬರ್ಥದ ಮಾತುಗಳೇ ಕೇಳಿಬಂದವು. ಸ್ವತಃ ಮಣಿಪುರವೇ ಶರ್ಮಿಳಾ ಅಂತರಂಗವನ್ನು, ಕಳಕಳಿಯನ್ನು ಅರ್ಥ ಮಾಡಿಕೊಳ್ಳದೇ ಹೋದಾಗ ಇನ್ನು ದೂರದ ಕೇಂದ್ರ ಸರ್ಕಾರಕ್ಕೆ ಅದು ಹೇಗೆ ಅರ್ಥವಾದೀತು ಎಂದು ಆಳದಲ್ಲಿ ಕೇಳಿಕೊಳ್ಳುವ ಪ್ರಯತ್ನವಾದಂತೆ ಕಾಣಲಿಲ್ಲ. ಯಾಕೆಂದರೆ ಗಾಂಧಿ ಸೋಲುವುದು ಈ ದೇಶದ ವ್ಯವಸ್ಥೆಗೆ ಬೇಕು.

ಇವತ್ತು ಯಾರು ಏನು ತಿನ್ನುತ್ತಿದ್ದಾರೆ ಎಂದು ಹೊಂಚಿ ನೋಡುವ ಹದ್ದುಗಣ್ಣುಗಳಿವೆ ಎಲ್ಲೆಲ್ಲೂ. ತಮಗೆ ಪ್ರಿಯವೆನಿಸುವ ಆಹಾರದ ಬಗ್ಗೆ ಮಾತಾಡುವ ಮಂದಿಯೇ ಮತ್ತೊಬ್ಬರ ಪ್ರೀತಿಯ ಆಹಾರದ ಬಗ್ಗೆ ಅಸಹ್ಯಪಟ್ಟುಕೊಳ್ಳುವುದು, ಅವರ ಆ ಆಹಾರದ ಕಾರಣಕ್ಕಾಗಿಯೇ ಅಪರಾಧಿ ಸ್ಥಾನದಲ್ಲಿ ಅವರನ್ನು ನಿಲ್ಲಿಸುವುದು ನಡೆಯುತ್ತಿದೆ. ಬುದ್ಧನನ್ನು ಅವತಾರ ಎಂದು ಬೊಗಳೆ ಬಿಡುವ ಜನರಿಗೆ ಬುದ್ಧ ನಿಜವಾಗಿಯೂ ಏನನ್ನು ಪ್ರತಿಪಾದಿಸಿದ್ದ, ಏನನ್ನು ನಂಬಿದ್ದ ಎಂಬ ಸತ್ಯವನ್ನು ಬೆಳಕಿನಲ್ಲಿಟ್ಟು ನೋಡುವ ನೈತಿಕತೆ ಇಲ್ಲ. ಕನಿಷ್ಠಪಕ್ಷ ಆ ಸೌಜನ್ಯವೂ ಇಲ್ಲ. ಯಾಕೆಂದರೆ ಅವರಿಗೆ ತಮ್ಮ ದಾರಿಗೆ ಅಡ್ಡವಾಗಬಹುದಾದ ಬುದ್ಧ ಸೋಲುವುದು ಬೇಕು.

ಇತಿಹಾಸಕ್ಕೆ ಪುರಾಣದ ಕವಚ ತೊಡಿಸಿ ತನ್ನನ್ನು ತಾನು ರಕ್ಷಿಸಿಕೊಳ್ಳುವ, ನಮ್ಮ ಮಧ್ಯದ ಅಸಾಧಾರಣ ವ್ಯಕ್ತಿತ್ವಗಳನ್ನು ಪ್ರಭಾವಳಿಯ ಅಸಡ್ಡಾಳ ಝಗಮಗದಲ್ಲಿ ಅಡಗಿಸುವ ಮೂಲಕ ಅತ್ತ ಅವರನ್ನೂ ಕೊಲ್ಲುತ್ತ ಇತ್ತ ಅಮಾಯಕರನ್ನೂ ಅಸತ್ಯದ ದಟ್ಟಣೆಯಲ್ಲಿ ಉಸಿರುಗಟ್ಟಿಸುತ್ತ ಕ್ರೂರವಾಗಿ ನಗುತ್ತ ಬದುಕುವ ಒಂದು ವರ್ಗವೇ ಇದೆ. ಯಾವ ದಾಳವೆತ್ತಿಕೊಂಡರೂ ತನಗೆ ಬೇಕಾದಂತೆ ಬೀಳಿಸಬಲ್ಲ ಶಕುನಿ ಸಂತಾನದ ಛಾಯೆ ಅದು.

ಇವತ್ತಿನ ಈ ವಿಕೃತ ಸನ್ನಿವೇಶದಲ್ಲಿ ಸಹಜವನ್ನು, ಗುಣವನ್ನು ಕಂಡುಕೊಳ್ಳುವ ಜರೂರು ಇದೆ. ಗಾಂಧಿಯನ್ನು ಮರೆಯಲ್ಲಿ ನಿಂತು ಸೋಲಿಸುತ್ತಿರುವವರು ಯಾರೆಂದು ತಿಳಿಯಬೇಕಿದೆ. ಬುದ್ಧನನ್ನು ಅವತಾರಿಯೆನ್ನದೆ, ಜೀವನಪ್ರೀತಿಯಿದ್ದ ಒಬ್ಬ ಮನುಷ್ಯ ಮಾತ್ರ ಆಗಿದ್ದ ಎಂಬ ಸತ್ಯದ ಸದ್ದಡಗಿಸುತ್ತಲೇ ಬಂದವರ ಬಗ್ಗೆ ಒಂದು ಎಚ್ಚರ ಇಟ್ಟುಕೊಂಡೇ ನಡೆಯಬೇಕಾಗಿದೆ.

ಆಗಲೇ ನಮಗೆ ಇರೋಮ್ ಶರ್ಮಿಳಾ ಸೋಲು ಗಾಂಧಿಯ ಸೋಲಾಗಿ ಕಾಣದೆ, ಶರ್ಮಿಳಾ ಎಂಬ ಅಮಾಯಕ ಹೆಣ್ಣುಮಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡವರ ಸದ್ಯದ ಗೆಲುವು ಮಾತ್ರವೆಂದು ಕಂಡೀತು. ನೀರಿಗಾಗಿ ಶುರುವಾದ ಜಗಳದಲ್ಲಿ, ಜಗಳ ಬೇಡವೆಂದು ಹೇಳಿ ತನ್ನದೇ ಕುಲದವರ ವಿರೋಧ ಕಟ್ಟಿಕೊಂಡು ಜೀವ ಉಳಿಸಿಕೊಳ್ಳಲು ದೇಶಾಂತರ ಹೋದ ಬುದ್ಧ ಮತ್ತೆ ನಮ್ಮ ಎದುರಿಗೆ ಬಂದು ನಿಲ್ಲುವುದು ಸಾಧ್ಯವಾದೀತು.

ಬುದ್ಧನನ್ನು ವರ್ತಮಾನದ ಮತ್ತು ಅಂತರಂಗದ ಕನ್ನಡಿಯಲ್ಲಿ ನೋಡಿಕೊಳ್ಳುವ, ಬಿಂಬವಲ್ಲದ ಸತ್ಯವನ್ನು ಮುಟ್ಟುವ ವಿನಯದಲ್ಲಿ ವಿಚಾರ ಸರಣಿಯೊಂದನ್ನು ಆರಂಭಿಸಬಯಸಿದೆ ಕನೆಕ್ಟ್ ಕನ್ನಡ. ‘ಬುದ್ಧ ಇಂದಿಗೆ’ ಎಂಬ ಈ ಸರಣಿಯಲ್ಲಿ ಹಲವರು ಬರೆಯಲಿದ್ದಾರೆ.

ನಿಮ್ಮ ಪ್ರತಿಕ್ರಿಯೆಗೂ ಸ್ವಾಗತ.

Share

Leave a comment

Your email address will not be published. Required fields are marked *

Recent Posts More

  • 2 days ago No comment

    ಸವಿತಾ ನಾಗಭೂಷಣ ಪ್ರವಾಸ ಕಥನ | ದಾರಿಯೇ ದೈವ… ವೈಷ್ಣೋದೇವಿ

    ಪ್ರವಾಸಿ ಸವಿತಾ ಕಂಡ ಇಂಡಿಯಾ   ಇದು ನಾನು 2011ರ ಮಾರ್ಚ್ ತಿಂಗಳಲ್ಲಿ ನನ್ನ ಕೆಲ ಗೆಳತಿಯರೊಂದಿಗೆ ಒಂದು ಜನಸಾಮಾನ್ಯರ ಸಮೂಹದೊಂದಿಗೆ ಸಾಮಾನ್ಯ ದರ್ಜೆಯ ರೈಲು ಪ್ರಯಾಣದ ಮೂಲಕ ಕೈಗೊಂಡ ಭಾರತ ಯಾತ್ರೆಯ ಸಂದರ್ಭದಲ್ಲಿ ಮಾಡಿಕೊಂಡ ಟಿಪ್ಪಣಿಗಳನ್ನು ಆಧರಿಸಿ ಬರೆದ ಪುಟ್ಟ ಪ್ರವಾಸ ಕಥನ. ಇದು ಈಗಾಗಲೇ 12 ಭಾಗಗಳಲ್ಲಿ ಡಿ ಎಸ್ ನಾಗಭೂಷಣ ಅವರ ಸಂಪಾದಕತ್ವದ ‘ನವ ಮಾನವ’ ಸಮಾಜವಾದಿ ಮಾಸಿಕದ (ಈ ಪತ್ರಿಕೆ ನವೆಂಬರ್ 2011ರ ...

  • 1 week ago One Comment

    ಅಜ್ಜಿಗೇನು ಬೇಕು ಅಂತ ಅಜ್ಜಂಗೇನು ಗೊತ್ತು!

            ಕಥನ         ಅಜ್ಜ ಪೆನ್ಷನ್ ತರೋದಕ್ಕೆ ಅಂತ ಪೇಟೆಗೆ ಹೋಗಿದ್ದ. ಅಷ್ಟರಲ್ಲಿ ಮನೆ ಬಾಗಿಲಲ್ಲಿ ಕಾರು ಬಂದು ನಿಂತಿತು. ಕಾರಲ್ಲಿ ಅಜ್ಜಿಯ ಮಗ, ಸೊಸೆ ಮತ್ತೆ ಆರು ವರ್ಷದ ಮೊಮ್ಮಗ ಬಂದಿದ್ರು. ಅಜ್ಜಿಗೆ ಖುಷಿ ತಡೆಯಕ್ಕಾಗದೇ ಅಡಿಗೆ ಮನೆ ಸಂದಿ ಮೂಲೇನೆಲ್ಲಾ ಹುಡುಕಿದ್ಲು. ದಡಾ ಬಡಾ ಸದ್ದು ಮಾಡಿದ್ಲು, ಸರಾಪರಾ ಸದ್ದು ಮಾಡಿದ್ಲು. ಅಡುಗೆ ಮನೆಯಿಂದ ಕೊತಾಕೊತಾ ಸದ್ದು ...

  • 1 week ago No comment

    ವಸಂತದ ನೆನಪು; ಮಾಗುವ ಹುರುಪು!

      ಜಗತ್ತಿನ ಬಗ್ಗೆ ತಿಳಿಯುತ್ತ ಸಾಗಿ, ನಮಗೆ ಈ ಜಗತ್ತು ಹೀಗೆ ನಡೆಯುತ್ತಿದೆ ಅಂತ ಅರಿತುಕೊಳ್ಳುವವರೆಗಿನದು ಮಧ್ಯವಯಸ್ಸಿನ ಕಾಲ. ನಾವು ಅಲ್ಲಿಯವರೆಗೆ, ಕಲಿತದ್ದು, ಕೇಳಿದ್ದು, ನಮಗೆ ತಿಳಿದಿದ್ದು ಎಲ್ಲವೂ ಬದಲಾಗುವ ವೇಳೆಗೆ ನಮಗೆ ವಯಸ್ಸಾಗಿಬಿಟ್ಟಿರುತ್ತದೆ. ಕಾಲದಲ್ಲಿ ಹೊಸ ಚಿಗುರು ಟಿಸಿಲೊಡೆದಿರುತ್ತದೆ.     ಕುಣಿದಾಡುವಷ್ಟು ಚೈತನ್ಯವಿರುವ ಯೌವನಕ್ಕೂ, ಕುಂದಿದ ಶಕ್ತಿಯ ಇಳಿಗಾಲದ ವೃದ್ಧಾಪ್ಯಕ್ಕೂ ನಡುವೆ ಬರುವುದು ಮಧ್ಯವಯಸ್ಸು! ಹುಟ್ಟು, ಬದುಕು ,ಸಾವು ಎಲ್ಲರಿಗೂ ಬರುತ್ತದೆ. ಬದುಕನ್ನು ಹಲವರು ಸಾಧನೆಗಳ ...

  • 1 week ago No comment

    ಸವಿತಾ ನಾಗಭೂಷಣ ಪ್ರವಾಸ ಕಥನ | ಬಂಗಾರದ ಹೊಳಪು, ಬೇಗುದಿಯ ನೆನಪು…

    ಪ್ರವಾಸಿ ಸವಿತಾ ಕಂಡ ಇಂಡಿಯಾ   ಇದು ನಾನು 2011ರ ಮಾರ್ಚ್ ತಿಂಗಳಲ್ಲಿ ನನ್ನ ಕೆಲ ಗೆಳತಿಯರೊಂದಿಗೆ ಒಂದು ಜನಸಾಮಾನ್ಯರ ಸಮೂಹದೊಂದಿಗೆ ಸಾಮಾನ್ಯ ದರ್ಜೆಯ ರೈಲು ಪ್ರಯಾಣದ ಮೂಲಕ ಕೈಗೊಂಡ ಭಾರತ ಯಾತ್ರೆಯ ಸಂದರ್ಭದಲ್ಲಿ ಮಾಡಿಕೊಂಡ ಟಿಪ್ಪಣಿಗಳನ್ನು ಆಧರಿಸಿ ಬರೆದ ಪುಟ್ಟ ಪ್ರವಾಸ ಕಥನ. ಇದು ಈಗಾಗಲೇ 12 ಭಾಗಗಳಲ್ಲಿ ಡಿ ಎಸ್ ನಾಗಭೂಷಣ ಅವರ ಸಂಪಾದಕತ್ವದ ‘ನವ ಮಾನವ’ ಸಮಾಜವಾದಿ ಮಾಸಿಕದ (ಈ ಪತ್ರಿಕೆ ನವೆಂಬರ್ 2011ರ ...

  • 2 weeks ago No comment

    ಪ್ರಸಾದ್ ನಾಯ್ಕ್ ಪಟ್ಟಾಂಗ | ನನಗೂ ಒಬ್ಬ ಗೆಳೆಯ ಬೇಕು…

    ಆ ಘಟನೆಯನ್ನು ನೆನಪಿಸಿಕೊಂಡಾಗಲೆಲ್ಲಾ ಈಗಲೂ ನಗು ಉಕ್ಕುಕ್ಕಿ ಬರುತ್ತದೆ. ಅಂದು ವಿಚಿತ್ರ ಘಟನೆಯೊಂದು ನಡೆದಿತ್ತು. ಅವು ನನ್ನ ಕಾಲೇಜಿನ ದಿನಗಳು. ಮಂಗಳೂರಿನ ಶಾಪಿಂಗ್ ಮಾಲ್ ಒಂದಕ್ಕೆ ಮಧ್ಯಾಹ್ನದ ಊಟಕ್ಕೆಂದು ಬಂದಿದ್ದ ನಾನು ಫುಡ್ ಕೋರ್ಟಿನಲ್ಲಿ ಸುಮ್ಮನೆ ಅಡ್ಡಾಡುತ್ತಿದ್ದೆ. ಎತ್ತ ಹೋಗಬೇಕೆಂದು ತಿಳಿಯದೆ ಸುಮ್ಮನೆ ಒಂದು ಕೌಂಟರಿನತ್ತ ನಡೆದು ಬೇಕಿದ್ದದ್ದನ್ನು ಆರ್ಡರ್ ಮಾಡಿದೆ. ಕೆಲಸವಿಲ್ಲದೆ ನೊಣ ಹೊಡೆಯುತ್ತಿದ್ದ ಆ ಹೆಂಗಸಿಗೆ ನನ್ನ ಆಗಮನವು ಅಂಥಾ ಉತ್ಸಾಹವೇನೂ ತರಲಿಲ್ಲವಾದರೂ ನಾನು ಹೇಳಿದ್ದನ್ನೆಲ್ಲಾ ...


Editor's Wall

  • 11 May 2018
    2 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...

  • 10 May 2018
    2 months ago No comment

    ಒಂದು ಪುಸ್ತಕ; ವಾರವಿಡೀ ಬಿಡುಗಡೆ!

    ಪುಸ್ತಕವೊಂದನ್ನು ಪ್ರಕಟಿಸಿದ ಬಳಿಕ ಅದರ ಬಿಡುಗಡೆ ಕಾರ್ಯಕ್ರಮವೂ ಕಡ್ಡಾಯವೆಂಬಂಥ ಕಾಲವಿತ್ತು. ಈಗಲೂ ಇಲ್ಲವೆಂದಲ್ಲ. ಆದರೆ ಸಾವಿರ, ಲಕ್ಷದ ಲೆಕ್ಕದಲ್ಲಿ ಹಣ ಸುರಿದು ವ್ಯವಸ್ಥೆ ಮಾಡುವ ಬಿಡುಗಡೆ ಕಾರ್ಯಕ್ರಮವು ಒಂದು ಪುಸ್ತಕದ ಕುರಿತ ಮಾತಿಗೆ ಬೇಕಾದ ಆಪ್ತ ವಾತಾವರಣವನ್ನು ಕಟ್ಟಿಕೊಡುತ್ತದೆಯೇ? ದುಡ್ಡಿನ ವಿಚಾರಕ್ಕಿಂತ ಹೆಚ್ಚಾಗಿ ಕಾರ್ಯಕ್ರಮ ಆಯೋಜನೆ ಬೇಡುವ ಶ್ರಮ ಬಹಳ ದೊಡ್ಡದು. ಹಾಲ್ ಬುಕ್ ಮಾಡಬೇಕಾದಲ್ಲಿಂದ ಹಿಡಿದು, ಅತಿಥಿಗಳನ್ನು ಗೊತ್ತುಮಾಡುವುದು, ಅವರಿಗೆಲ್ಲರಿಗೂ ಹೊಂದುವಂತೆ ದಿನಾಂಕ ನಿಗದಿಪಡಿಸುವುದು, ಆಮಂತ್ರಣ ಪತ್ರಿಕೆ ಪ್ರಕಟಿಸುವುದು, ...

  • 03 May 2018
    2 months ago No comment

    ಕಾದಂಬಿನಿ ಕಾಲಂ | ಏನಿಲ್ಲದಿದ್ದರೂ ಬದುಕು ದೂಡಬೇಕು

                      ಆಗೆಲ್ಲ ತಪಸ್ಸು ಮಾಡುವ, ದೇವರು ಪ್ರತ್ಯಕ್ಷವಾಗುವ ಮತ್ತು ಕೇಳಿದ ವರ ಕೊಡುವ ಕಥೆಗಳು ಮಸ್ತು ಚಾಲ್ತಿಯಲ್ಲಿದ್ದ ಕಾರಣ ನಾನು ದೇವರನ್ನು ಕಾಣುವ ಹಟಕ್ಕೆ ಬಿದ್ದು ತಪಸ್ಸು ಮಾಡುತ್ತಿದ್ದೆ.   ನನ್ನ ಜೊತೆ ಇವೆಲ್ಲ ಯಾವ ಕಾರಣಕ್ಕೆ ಘಟಿಸಿತ್ತೋ ಅರಿಯೆ. ಬಾಲ್ಯದಲ್ಲಿ ನಮ್ಮ ಮನೆಗೆ ನೆರೆಮನೆಯ ಒಬ್ಬ ಹೆಂಗಸು ಬರುತ್ತಿದ್ದರು. ಮೂಕಕ್ಕ ಎಂದು ಅವರನ್ನು ಎಲ್ಲರೂ ಕರೆಯುತ್ತಿದ್ದುದು. ...

  • 30 April 2018
    2 months ago No comment

    ಅತ್ಯಾಚಾರ, ಹೋರಾಟದ ಐದು ವರ್ಷಗಳು ಮತ್ತು ಆ ಪುಟ್ಟ ಗೂಡು

    ತನ್ನ ಬದುಕಿನ ಅಮೂಲ್ಯ ಘಳಿಗೆಯೇ ಇಂಥದೊಂದು ಘಟನೆಗೆ ಬಲಿಯಾದ ಆಘಾತದಲ್ಲಿರುವ ಆಕೆ ಒಮ್ಮೆ ಗೆಲುವಾದವಳಂತೆ ಕಂಡರೂ ಮತ್ತೆ ಗಂಭೀರಳಾಗುತ್ತಾಳೆ. ಎಷ್ಟು ಬೇಕೋ ಅಷ್ಟೇ ಮಾತು. ಕಟ್ಟಿಕೊಂಡಿದ್ದ ಕನಸೂ ಒಡೆದುಹೋಗಿದೆ.   ಅನ್ಯಾಯದ ವಿರುದ್ಧದ ಹೋರಾಟ, ಸಮಾಜದೆದುರು ದೊಡ್ಡ ಮನುಷ್ಯನಂತೆ ಕಾಣಿಸಿಕೊಳ್ಳುವ ಮುಖವಾಡ ತೊಟ್ಟುಕೊಂಡ ಮತ್ತು ಸಾಧ್ಯವಿರುವಷ್ಟೂ ವಾಮಮಾರ್ಗಗಳಿಂದ ಎಲ್ಲರನ್ನೂ ಎಲ್ಲವನ್ನೂ ನಿಯಂತ್ರಣದಲ್ಲಿಟ್ಟುಕೊಳ್ಳಬಲ್ಲಂಥ ಅತ್ಯಂತ ಬಲಿಷ್ಠ ದುಷ್ಟನೊಬ್ಬನನ್ನು ಎದುರುಹಾಕಿಕೊಳ್ಳುವ ದಿಟ್ಟತನ ಹೇಗೆ ಅಗಾಧ ಸಾಗರದ ನಟ್ಟ ನಡುವಿನ ಒಂದು ಸಣ್ಣ ...

  • 28 April 2018
    2 months ago No comment

    ಮೈಬಣ್ಣವೆಂಬ ಮಾನದಂಡ ಮತ್ತು ‘ವಿಪ್ಲವ’ ಮನಃಸ್ಥಿತಿಯ ರಾಜಕಾರಣ

    ಈ ‘ವಿಪ್ಲವ’ ಮನಃಸ್ಥಿತಿ ಅಧಿಕಾರಸ್ಥವಾದುದಾಗಿದೆ. ದೇವರು, ಧರ್ಮದ ಹೆಸರಲ್ಲಿ ಒಡೆಯುವುದನ್ನು ತನ್ನ ಪರಮೋನ್ನತಿ ಎಂಬಂತೆ ಭ್ರಮಿಸುವ ಈ ಕುರೂಪವು ಮನುಷ್ಯರ ಮೇಲೆ ಮನುಷ್ಯರನ್ನು ಎತ್ತಿಕಟ್ಟುತ್ತದೆ. ಹೆಣ್ಣಿನ ಮೇಲೆ ಹೆಣ್ಣನ್ನೇ ಅಸ್ತ್ರವಾಗಿ ಪ್ರಯೋಗಿಸುವ ಹುನ್ನಾರಗಳ ಮೂಲಕ, ನಿಜವಾದ ಸೌಂದರ್ಯವನ್ನು ನಾಶಗೈಯುತ್ತಿದೆ. 21 ವರ್ಷಗಳ ಕೆಳಗೆ ಅಂದರೆ 1997ರಲ್ಲಿ ವಿಶ್ವಸುಂದರಿ ಪಟ್ಟ ಗೆದ್ದ ಡಯಾನಾ ಹೇಡನ್ ಮೈಬಣ್ಣದ ಬಗ್ಗೆ ಅತಿ ಕೀಳು ಅಭಿರುಚಿಯಿಂದ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ...