Share

ಮಧ್ಯರಾತ್ರಿ ಮಳೆ ಮಿಂದ ಭೂಮಿ ನಿದ್ದೆಹೋಗಿದೆ
ನಾಗರಾಜ ಹರಪನಹಳ್ಳಿ

ಧ್ಯರಾತ್ರಿ ಜಗತ್ತು ಮಲಗಿದ್ದ ಹೊತ್ತು
ಜೋರು ಮಳೆ
ಕಣಿವೆ ತೋಳುಗಳಲಿ
ರಭಸದಿ ಹರಿವ ನದಿಗೆ
ಎದೆ ಕೊಟ್ಟ ಪರ್ವತ ಶೃಂಗಾರೋನ್ಮತ್ತ
ಕಾಮನ್ಮೋದದಿ ಮಿಂದ ನಗ್ನ ಭೂಮಿ
ನಗು ನಗುತ್ತಾ ನಿದ್ದೆ ಹೋಗಿರಲು

ಕತ್ತಲಲ್ಲೂ ಎಚ್ಚರಾದ ನನಗೆ
ಬೀದಿದೀಪದಲ್ಲಿ ಕಂಡದ್ದು
ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ
ಭುವಿಯ ವಸ್ತ್ರ
ಕೈಬಳೆ ,ಕೊರಳ ನಕ್ಲೇಸು, ಸೊಂಟ ವಡ್ಯಾಣ
ಕಾಲಂದುಗೆ ಎಲ್ಲವೂ ಒಂದೊಂದು ಕಡೆ

ಮುಖದ ತುಂಬಾ ಉಲ್ಲಾಸ,ಸುಖದ ಮತ್ತಿನ
ನಗೆಸಾಗರದಲ್ಲಿ ನಿದ್ದೆಹೋಗಿದೆ ಪೃಥ್ವಿ

ಎರಡನೇ ಸಲ ಗಾಳಿ ಸಹಿತ ಮಳೆ
ಮತ್ತೂ ಉತ್ಕರ್ಷದಿ ಮದೋನ್ಮತ್ತ
ಭೂಮಿ ಸ್ವಲ್ಪವೂ ದಣಿವಿಲ್ಲ
ಸುರಿ …ಸುರಿ …ಮತ್ತಷ್ಟೂ ಸುರಿ…
ನನ್ನ ಕೂದಲೂ ಸಹ ಒದ್ದೆಯಾಗಿಲ್ಲ
ಮತ್ತಷ್ಟು ಸುರಿಯೋ ಮಳೆರಾಯ ಎಂದ ಭೂಮಿ
ಸೋತದ್ದು ಅವನು
ನಕ್ಕದ್ದು ಅವಳು

ಮೂರನೇ ಸಲ
ಸಣ್ಣಗೆ ಮಳೆ ಜಡಿ ಮಳೆ
ತಪ್ತವಾಗಿ ಮಲಗಿದ್ದ ಭೂಮಿ
ನಿದ್ದೆಗಣ್ಣಿನ ಸರಸ
ಬೆಳಗಿನ ಜಾವದ ಸಿಹಿ ಸವಿ ನಿದ್ದೆಯಲ್ಲಿನ
ಸಮ್ಮಿಲನದಿ ಭೂಮಿ ನಕ್ಕಂತೆ
ಕಿವಿ ತುಂಬಿದ ನಗು ಪ್ರತಿಧ್ವನಿಸುತ್ತಲೇ

ಬೆಳಗಾದರೂ
ಮಳೆಯುಂಡ ಭೂಮಿ ನಿದ್ದೆಹೋಗಿದೆ
ಗೆದ್ದ ಅವಳು ಉಲ್ಲಾಸದಿ ಊರತುಂಬಾ
ತಿರುಗಿದಳು
ಬೆವರುಂಡ ಗದ್ದೆಗಳು ಹಸಿರಾದವು

————-

ನಾಗರಾಜ್ ಹರಪನಹಳ್ಳಿ

nhಹರಪನಹಳ್ಳಿ ಹುಟ್ಟೂರು. ಹರಪನಹಳ್ಳಿ ತಾಲೂಕಿನ ಮೈದೂರು-ಚಿಗಟೇರಿ  ಬೆಳೆದ ಊರು. ಪಿಯು ಓದಿದ್ದು ಕೊಟ್ಟೂರಿನಲ್ಲಿ. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ., ಕವಿವಿಯಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. ದಾವಣಗೆರೆ, ಸದಾಶಿವಗಡ ಮತ್ತು ಭಟ್ಕಳದಲ್ಲಿ ಕನ್ನಡ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿ, ಸದ್ಯ ಕಾರವಾರದಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜನವಾಹಿನಿ, ಜನಾಂತರಂಗ, ಲೋಕದರ್ಶನ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ  ಇವರು, ಈ ಟಿವಿ ಕನ್ನಡ ನ್ಯೂಸ್ ಚಾನೆಲ್ಲಿಗೆ ವರದಿಗಾರಿಕೆ ಬಳಿಕ ಈಗ ಉದಯವಾಣಿ ಪತ್ರಿಕೆಗೆ ವರದಿಗಾರರಾಗಿದ್ದಾರೆ. 2009ರಲ್ಲಿ ‘ಕಡಲದಂಡೆಗೆ ಬಂದ ಬಯಲು’ ಎಂಬ ಕಥಾ ಸಂಕಲನ, 2013ರಲ್ಲಿ ‘ಬಿಸಿಲ ಬಯಲ ಕಡಲು’ ಎಂಬ ಕವಿತಾ ಸಂಕಲನ ಪ್ರಕಟಣೆ.

Share

Leave a comment

Your email address will not be published. Required fields are marked *

Recent Posts More

  • 16 hours ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 2 days ago No comment

    ಎರಡು ಕವಿತೆಗಳು

        ಕವಿಸಾಲು         ಸುನಾಮಿಯ ಊರಲ್ಲಿ ಗುಟ್ಟುಗಳ ರಟ್ಟು ಮಾಡದ ಒಡಲು ಸುನಾಮಿ ತವರಾದ ಕಡಲು ಒಳಗಿನ ಕತ್ತಲೆಯ ಕಳೆಯಲು ಹುಡುಕಿ ಹೊರಟವು ತಾವು ಕಳೆದುಕೊಂಡ ಕನಸುಗಳಷ್ಟೂ ಹಾವುಗಳು ಬಿಸಿಲಿಗೆ ಹೊರಳಿ ಪೊರೆ ಕಳಚಿ ನಚ್ಚಗಾದವು ಅದೇ ಕ್ಷಣದೊಳಗೆ ಅರಳಿಬಿರಿಯಬೇಕಿದ್ದ ಹೂವುಗಳು ಬಿಸಿಲ ಧಗೆಗೆ ಬೆಂದು ಬಾಡಿ ಉದುರಿಬಿದ್ದವು ನೆಲಕೆ ಶಬ್ದಗಳ ಮುಕ್ಕಳಿಸಿ ಉಗಿದ ರಭಸಕೆ ಊರ ತುಂಬಾ ನೆರೆ ಪರಿಹಾರದ ಗಂಜಿಕೇಂದ್ರಗಳಲಿ ...

  • 5 days ago No comment

    ಈ ಸಂಜೆ ಪ್ರಿತಿಯೊಡನೆ…

        ಸಣ್ಣಕಥೆ ಮೂಲ ಇಂಗ್ಲೀಷ್: ಸುಲಮಿತ್ ಈಶ್-ಕಿಶೋರ್ ಕನ್ನಡಕ್ಕೆ: ಉದಯ್ ಇಟಗಿ       ಸಂಜೆಯ ಆರು ಘಂಟೆಗೆ ಆರು ನಿಮಿಷ ಮಾತ್ರ ಬಾಕಿಯಿದೆ – ಹಾಗಂತ ನಗರದ ಗ್ರ್ಯಾಂಡ್ ಸೆಂಟ್ರಲ್ ರೈಲ್ವೇ ಸ್ಟೇಷನ್ನು ಮಾಹಿತಿ ಕೇಂದ್ರದ ಮೇಲಿದ್ದ ದೊಡ್ಡ ದುಂಡನೆಯ ಗಡಿಯಾರ ಹೇಳಿತು. ಎತ್ತರದ ಹದಿಹರೆಯದ ಸೇನಾಧಿಕಾರಿಯೊಬ್ಬ ಆಗಷ್ಟೆ ರೈಲ್ವೇ ಸ್ಟೇಷನ್ನಿಂದ ಹೊರಗೆ ಬಂದು ಬಿಸಿಲಿಗೆ ಬಾಡಿ ಕಂದಾಗಿದ್ದ ತನ್ನ ಮುಖವನ್ನೊಮ್ಮೆತ್ತಿ ಕಣ್ಣಲ್ಲಿ ಕಣ್ಣಿಟ್ಟು ...

  • 6 days ago No comment

    ಯಾವುದು ಈ ಧಾವಂತದ ದಿಕ್ಕು?

      ನ್ಯಾಯದ ಬಾಗಿಲಲ್ಲಿ ನ್ಯಾಯವಾಗಿ ಹೋಗುವವರಿಗೆ ಮಾತ್ರ ಪ್ರವೇಶ ಇಲ್ಲ, ಆದರೆ ನ್ಯಾಯವಲ್ಲದ, ಅದರ ಬಗ್ಗೆ ಕಿಂಚಿತ್ತೂ ಆಸಕ್ತಿಯಿಲ್ಲದವರಿಗೆ ಮಾತ್ರ ಹಾರ ತುರಾಯಿಗಳೊಂದಿಗೆ ಭರ್ಜರಿ ಆಹ್ವಾನ.       रिमझिम गिरे सावन, सुलग सुलग जाये मन भीगे आज इस मौसम में लगी कैसी ये अगन ಏನೋ ಒಂದು ಜ್ವಾಲೆ, ಏನೋ ಒಂದು ಉರಿ, ಏನೋ ಒಂದು ಚಡಪಡಿಕೆ, ಒಂಥರಾ ಬೂದಿ ...

  • 1 week ago No comment

    ಭ್ರಷ್ಟತೆಯೆಂಬ ಕೊಳಚೆಯ ಹರಿವೊಡೆದು…

                        ನಮ್ಮ ನಮ್ಮ ಠಕ್ಕ ಮನಸ್ಸುಗಳನ್ನು ನಾವು ಶುದ್ಧಗೊಳಿಸಬಲ್ಲೆವಾ? ಭ್ರಷ್ಟ ವ್ಯವಸ್ಥೆಯೊಂದನ್ನು ನಿರ್ಮೂಲನ ಮಾಡಬಲ್ಲೆವಾ?   ನಾನು ತುಂಬ ಸಣ್ಣವಳಿದ್ದಾಗ ನಾವು ಆ ಮನೆ ಖರೀದಿಸಿದ್ದೆವು. ಅದರ ಎದುರಲ್ಲಿ ಒಂದು ಬೋರ್ಡ್ಗಲ್ಲು ಇತ್ತು. ನಾನು ಮತ್ತು ತಮ್ಮ ಅದರ ಸುತ್ತ ಮುತ್ತ ಆಡಿಕೊಂಡಿರುತ್ತಿದ್ದೆವು. ಆ ಸಣ್ಣ ವಯಸ್ಸಿನಲ್ಲಿ ನಾನು ಅಕ್ಷರಗಳು ಕಂಡಲ್ಲೆಲ್ಲ ಕೂಡಿಸಿ ಓದತೊಡಗುತ್ತಿದ್ದೆ. ಆ ...


Editor's Wall

  • 22 February 2018
    16 hours ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 15 February 2018
    1 week ago No comment

    ಭ್ರಷ್ಟತೆಯೆಂಬ ಕೊಳಚೆಯ ಹರಿವೊಡೆದು…

                        ನಮ್ಮ ನಮ್ಮ ಠಕ್ಕ ಮನಸ್ಸುಗಳನ್ನು ನಾವು ಶುದ್ಧಗೊಳಿಸಬಲ್ಲೆವಾ? ಭ್ರಷ್ಟ ವ್ಯವಸ್ಥೆಯೊಂದನ್ನು ನಿರ್ಮೂಲನ ಮಾಡಬಲ್ಲೆವಾ?   ನಾನು ತುಂಬ ಸಣ್ಣವಳಿದ್ದಾಗ ನಾವು ಆ ಮನೆ ಖರೀದಿಸಿದ್ದೆವು. ಅದರ ಎದುರಲ್ಲಿ ಒಂದು ಬೋರ್ಡ್ಗಲ್ಲು ಇತ್ತು. ನಾನು ಮತ್ತು ತಮ್ಮ ಅದರ ಸುತ್ತ ಮುತ್ತ ಆಡಿಕೊಂಡಿರುತ್ತಿದ್ದೆವು. ಆ ಸಣ್ಣ ವಯಸ್ಸಿನಲ್ಲಿ ನಾನು ಅಕ್ಷರಗಳು ಕಂಡಲ್ಲೆಲ್ಲ ಕೂಡಿಸಿ ಓದತೊಡಗುತ್ತಿದ್ದೆ. ಆ ...

  • 12 February 2018
    2 weeks ago No comment

    ಇಳಿಸಂಜೆಯ ಪ್ರೀತಿ

    ಹೊರಡುವ ಹೊತ್ತು ಬಂದಿದೆ. ಕ್ಷಣಗಣನೆ ಮಾಡಲು ಇನ್ನು ಕೈಯಲ್ಲೀಗ ಕ್ಷಣಗಳು ಉಳಿದಿಲ್ಲ. ಜೊತೆಯಲ್ಲಿ ಕಳೆದ ಕ್ಷಣಗಳು ಪದಗಳಲ್ಲಿ ಹಿಡಿದಿಡಲಾರದಷ್ಟು ಸುಂದರ. ನೆನಪುಗಳು ಬರೋಬ್ಬರಿ ಮೂರು ಜನ್ಮಗಳಿಗಾಗುವಷ್ಟು ಸಾಕು.   ಅವರಿಬ್ಬರೂ ಅಂದು ಜೊತೆಯಾಗಿದ್ದರು. ಎಲ್ಲಾ ರೀತಿಯಲ್ಲೂ ಕ್ಷಣಗಣನೆಯ ಕಾಲವದು. ಈ ಹಿಂದೆ ಇದ್ದಿದ್ದು ಆ ಭೇಟಿಗಾಗಿ ನಿರೀಕ್ಷೆಯ ಕ್ಷಣಗಣನೆ. ಈಗಿರುವುದು ಇನ್ನೇನು ಈ ಕ್ಷಣವು ಮುಗಿದು ಹೋಗಲಿದೆಯಲ್ಲಾ ಎಂಬ ಆತಂಕದ ಕ್ಷಣಗಣನೆ. ಏಕೆಂದರೆ ಈ ಭೇಟಿಯ ನಂತರ ಮತ್ತೆ ...

  • 11 February 2018
    2 weeks ago One Comment

    ತ್ಯಾಗಮಯಿ ತಾಯಿ ಕನಲಿದಳೇ ಎಂದು ಕೇಳುವವರಿಲ್ಲ…

      ವ್ಯಾವಹಾರಿಕ ಅಗತ್ಯವಾಗಿ ಮಾತ್ರವೇ ಹೆಣ್ಣನ್ನು ನೋಡುವ ಜಾಯಮಾನ ಕೊನೆಗಾಣುವವರೆಗೂ ಪುರುಷ ಪ್ರಧಾನ ವ್ಯವಸ್ಥೆ ತನ್ನ ಕೇಡುಗಾಲವನ್ನು ಆಹ್ವಾನಿಸುತ್ತಲೇ ಇರುತ್ತದೆ.     ಒಂದು ವರದಿಯನ್ನೋದುತ್ತಿದ್ದೆ. ಚೀನಾಕ್ಕೆ ಸಂಬಂಧಿಸಿದ್ದು. ತನ್ನ ಇವತ್ತಿನ ಜನಸಂಖ್ಯೆಯಲ್ಲಿ ಸೇರಿರಬೇಕಿದ್ದ 6 ಕೋಟಿ ಮಹಿಳೆಯರನ್ನು ಕಳೆದುಕೊಂಡಿದೆ ಆ ದೇಶ. ಅಲ್ಲೀಗ ಮದುವೆಗೆ ಬೆಳೆದುನಿಂತ ಯುವಕರಿಗೆ ಹುಡುಗಿಯರೇ ಇಲ್ಲ. ಇಂಥದೊಂದು ವಿಪರೀತಕ್ಕೆ ಕಾರಣವಾದದ್ದು ಒಂದು ಕುಟುಂಬಕ್ಕೆ ಒಂದೇ ಮಗು ಎಂಬ ನೀತಿ. ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ...

  • 11 February 2018
    2 weeks ago No comment

    ನಿಮಗಿಂತ ಹೆಚ್ಚು ನಿರ್ಜೀವ

            | ಕಮಲಾದಾಸ್ ಕಡಲು       ಇಂದಿರಾಗಾಂಧಿ ಬಿಟ್ಟರೆ… (Next to Indira Gandhi) ಕಮಲಾದಾಸ್ ಕವಿತೆಯ ಅನುವಾದ       ಇಂದಿರಾಗಾಂಧಿಯನ್ನು ಬಿಟ್ಟರೆ, ನಾನು ಅತಿ ಹೆಚ್ಚು ಹೆದರಿದ್ದು ನನ್ನ ಅಪ್ಪನಿಗೆ ಮಾತ್ರ ನಾನು ಐದು ವರ್ಷದವಳಿರುವಾಗ ಅವರೇ ನನಗೆ ಹೇಳಿದ್ದು ಕಪ್ಪು ಮಕ್ಕಳು ಬಿಳಿಬಣ್ಣದ ಬಟ್ಟೆಗಳನ್ನು ಮಾತ್ರ ತೊಡಬೇಕೆಂದು. ಬೆಳೆಯುವ ದಿನಗಳಲ್ಲಿ ಕಳೆದುಹೋದಂತಿರುತ್ತಿದ್ದ, ಬಡಕಲಾಗಿದ್ದ, ಹಲ್ಲಿಗೆ ಕ್ಲಿಪ್ ...