Share

ಥೇಟ್ ನಿನ್ನಂತೆ
ಶ್ರೀದೇವಿ ಕೆರೆಮನೆ

ಳಿ ಬಂದು ಅಪ್ಪಿ ಮುದ್ದಾಡಿ
ಎದೆಯ ಗೂಡಲ್ಲಿ ಬೆಚ್ಚಗಿಟ್ಟುಕೊಳ್ಳಲು
ಆ ಸಾವಿಗೂ ಭಯ
ಥೇಟ್ ನಿನ್ನಂತೆಯೆ

ಕಣ್ಣಲ್ಲಿ ಕಣ್ಣಿಟ್ಟು ಪುಳಕಗೊಳ್ಳುವ ದನಿಯಲ್ಲಿ
ಬಯಸುತ್ತೇನೆಂದು ಅರುಹಲೂ
ಆ ಮರಣಕ್ಕೆ ಅದೇಕೋ ಅಂಜಿಕೆ
ಥೇಟ್ ನಿನ್ನಂತೆ

ಕೈಗೆಟಕುವಷ್ಟೇ ಸನಿಹದಲ್ಲಿದ್ದರೂ
ತೆಕ್ಕೆಯೊಳಗೆ ಬಿಗಿದಪ್ಪಲು
ಆ ಸಾವಿಗೇಕೋ ಮುಜುಗರ
ಥೇಟ್ ನಿನ್ನಂತೆ

ಬಿಸಿಯುಸಿರು ಸೋಕಿ ವಿರಹದಲಿ
ಬಾಡಿ ಬಸವಳಿದು ನರಳಿದರೂ
ಮರಣಕ್ಕೇಕೋ ಹಿಂಜರೆತ
ಥೇಟ್ ನಿನ್ನಂತೆ

ದಮ್ಮಯ್ಯ ಹಾಕಿ ಹತ್ತಿರ ಕರೆದು
ನನ್ನನ್ನೇ ಅರ್ಪಿಸಿಕೊಂಡರೂ
ಸುಖಿಸಿ ಏದುಸಿರು ಬಿಡಲು
ಸಾವಿನ ಮನದಲ್ಲೇಕೋ ಅಳುಕು
ಥೇಟ್ ನಿನ್ನಂತೆ

ಇರಲಿ ಬಿಡು ಈಗಲಾದರೂ ಒಂದು ಒಪ್ಪಂದ ಮಾಡಿಕೊಳ್ಳೋಣ
ಬಿಂಕ ಬಿಗುಮಾನ ಬಿಟ್ಟು ನೀನಾದರೂ ಬಂದುಬಿಡು
ಆಗದೆಂದರೆ ನನಗಾಗಿ ಆ ಸಾವನ್ನಾದರೂ ಕಳಿಸು.

———–————-

ಶ್ರೀದೇವಿ ಕೆರೆಮನೆ

shrಉತ್ತರ ಕನ್ನಡದ ಅಂಕೋಲದವರು. ವೃತ್ತಿಯಲ್ಲಿ ಶಿಕ್ಷಕಿ. ಕವಿತೆ, ಅಂಕಣ ಬರಹಗಳಿಂದ ಪರಿಚಿತರು.

Share

6 Comments For "ಥೇಟ್ ನಿನ್ನಂತೆ
ಶ್ರೀದೇವಿ ಕೆರೆಮನೆ
"

  1. Sunil
    31st August 2017

    Very beautiful

    Reply
  2. Raju
    31st August 2017

    Nice mam

    Reply
  3. ರಮೇಶ ಗಬ್ಬೂರು
    31st August 2017

    ಕವಿತೆ… ಮಾರ್ಮಿಕವಾಗಿದೆ…ಸಾವಿನ ಮನೆಯ ಕದ ತಟ್ಟಿಬಂದವಳಂತೆ ಸಾವನ್ನೆ ಕಳಿಸೆಂದು ಕೇಳುವ ಮಾತಿನೊಳಗಣ ಮರ್ಮ ಯಾವುದು …ಕವಿತೆ ಸೂಪರ್ ಸಿರಿಯವರೆ..
    ರಮೇಶ ಗಬ್ಬೂರ್

    Reply
  4. ವಸ್ತ್ರದ
    31st August 2017

    ಹೃದಯ ಕಲಕುವ ಸಾಲುಗಳು

    Reply
  5. ಸಂಗೀತ ರ ರವಿರಾಜ್
    31st August 2017

    ಕವಿತೆ ತುಂಬಾ ಚೆನ್ನಾಗಿದೆ ದೇವಿಯವರೆ …..
    ಸಂಗೀತ ರವಿರಾಜ್

    Reply
  6. Prathibha kudthadka
    2nd September 2017

    ಬಹಳ ಬಹಳ ಇಷ್ಟವಾದ ಕವನ… Its ultimate

    Reply

Leave a comment

Your email address will not be published. Required fields are marked *

Recent Posts More

  • 4 days ago No comment

    ಕಣ್ಣ ತುಂಬ ನಿಶ್ಶಬ್ದ!

        ಕವಿಸಾಲು       ಆಗೆಲ್ಲ ನಿತ್ಯ ಬರುತಿದ್ದ ನಿಯಮಿತ ವಸಂತ ಮುಂದಿಲ್ಲ ಶಿಶಿರ-ಹೇಮಂತ ಹಿಂದೆ ನಿರ್ವಾತ ಕುಕಿಲು-ನವಿಲಲ್ಲದ ಬಂದ ಪುಳಕವಷ್ಟೇ ಆದವ ಬೆರಳಂಚು ತಾಕುವ ಮುನ್ನ ಇನ್ನು ನಾಳೆ ಎಂದು ಹೋದವ ಮತ್ತೊಂದು ದಿನ ಕಾಯುವಿಕೆ ಶುರುವಾದದ್ದೋ ಅವ ಬಾರದುಳಿದದ್ದೋ ನಿನ್ನೆವರೆಗೂ ಕತ್ತಲೊಳಗಣ ಕಪ್ಪಿನಂತೆ ಸಂಜೆಯುದ್ದ ಬಿರುಗಣ್ಣು ಕಣ್ಣ ತುಂಬ ನಿಶ್ಶಬ್ದ! ಇಂದು ಬೆಳಗಲೇನೋ ಬೆಳಕಿತ್ತು ಅಚ್ಚರಿ ಮರಿ ಹಾಕುತಿದೆ ಸಂಜೆಯಷ್ಟೆ ಖಾಲಿಖಾಲಿ ಮರೆವೊಂದು ...

  • 4 days ago No comment

    ಔರ್ ಕರೀಬ್ ಆ ಜಾವೋ…

                ಖ್ವಾಬ್ ಹೋ ತುಮ್ ಯಾ ಕೋಯೀ ಹಕೀಕತ್.. ಕೌನ್ ಹೋ ತುಮ್ ಬತಲಾವೋ.. ದೇರ್ ಸೇ ಕಿತನೀ ದೂರ್ ಖಡೀ ಹೋ ಔರ್ ಕರೀಬ್ ಆ ಜಾವೋ… ಬಯಸೋದು ಬೆಟ್ಟದಷ್ಟು ಪ್ರೀತಿಯನ್ನು, ದೊಡ್ಡ ವೃತ್ತದಲ್ಲೊಂದು ಜಾಗವನ್ನು, ಆದರೆ ತಾವೇ ಚಿಕ್ಕದೊಂದು ವೃತ್ತ‌ ಬರೆದುಕೊಂಡು ಅಲ್ಲಿಗೆ ‘ಪ್ರವೇಶವಿಲ್ಲ’ ಅಂತ ನೇರವಾಗೇ ಹೇಳೋ ಧಾರ್ಷ್ಟ್ಯ… ಏನನ್ನುವುದು ಇದಕ್ಕೆ? ಕೊಡೋ ಕೈ ಯಾವಾಗಲೂ ಮೇಲಿರತ್ತೆ, ...

  • 6 days ago No comment

    ಮೋಹದ ಹಯವೇರಿದ ಕಿನ್ನರಿಯರ ಲೋಕದಲ್ಲಿ…

                        ಇಷ್ಟೆಲ್ಲ ಆದ ಬಳಿಕ ಸೋತು ಹಣ್ಣಾಗಿರಬಹುದು ಎಂದುಕೊಂಡರೆ ಅವಳು ಮೊದಲಿಗಿಂತ ದುಪ್ಪಟ್ಟು ಲಕಲಕ ಹೊಳೆಯುತ್ತ ಪಕ್ಕಾ ವ್ಯವಹಾರಸ್ಥಳಂತೆ ನಡೆದುಕೊಳ್ಳತೊಡಗಿದಳು. ಉಳಿದ ಹೆಣ್ಣುಮಕ್ಕಳಾದರೂ ಇವಳಿಗಿಂತ ಭಿನ್ನವಾಗಿಯೇನೂ ಇರಲಿಲ್ಲ.   ಆ ಪುಟ್ಟ ಊರಿನ ಎರಡು ಬೀದಿಗಳ ಅಷ್ಟೂ ಕ್ವಾರ್ಟರ್ಸ್ ಗಳ ತುಂಬ ಗುತ್ತಿಗೆ ಕೆಲಸದ ನಿಮಿತ್ತ ಬೇರೆ ರಾಜ್ಯಗಳ ಜನ ಬಂದು ನೆಲೆಸಿದ ಮೇಲೆ ಊರಿನಲ್ಲಿ ...

  • 1 week ago No comment

    ದೊರೆ ಏನೆಂದನು ಎಂದರೆ…

      ಗೆದ್ದವರು ಅವನನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ನಾಡಿಗೆ ಕರೆತಂದರು. ಚಾನೆಲ್ಲುಗಳೆಲ್ಲ ಇದನ್ನು ದಿನವಿಡೀ ಲೈವಾಗಿ ತೋರಿಸಿ ಕೃತಾರ್ಥತೆ ಅನುಭವಿಸಿದವು.   ಅವನೊಬ್ಬ ತುಂಬಾ ವರ್ಷಗಳಿಂದ ಕಾಡೊಳಗೇ ಗಡ್ಡೆ ಗೆಣಸು ತಿಂದ್ಕೊಂಡು ಇದ್ದ. ಆದ್ರೆ ಅವನ ಕಣ್ಣುಗಳು ಮಾತ್ರ ನಾಡ ಕಡೇನೇ ನೋಡ್ತಿದ್ವಂತೆ. ಕಿವಿಗಳು ನಾಡ ಕಡೆಯ ಸದ್ದುಗಳಿಗೇ ತೆರಕೊಂಡಿದ್ವಂತೆ. ಬಾಯಿ ಕೂಡ ನಾಡ ಬಗ್ಗೆಯೇ ವಟಗುಡೋ ರೂಢಿ ಬೆಳೆಸಿಕೊಂಡಿತ್ತಂತೆ. ವಿಚಾರ ಹೀಗಿದೆ ನೋಡಿ ಅಂತ ನಾಡಿಂದ ಕಾಡ ಕಡೆ ...

  • 1 week ago No comment

    ಪಟ್ಟಾಂಗದ ಕತೆ – ಕರಣ್ ಜೋಹರ್ ಜೊತೆ

      ಅಂದು ಅಲ್ಲಿ ನಡೆಯುತ್ತಿದ್ದಿದ್ದು ಕೂಡ ‘ಕಾಫಿ ವಿದ್ ಕರಣ್’. ವ್ಯತ್ಯಾಸವೆಂದರೆ ನಾನೋ ಕಾಫಿಶಾಪಿನಲ್ಲಿ ಆಪ್ತರೊಬ್ಬರ ಆಗಮನಕ್ಕಾಗಿ ಕಾಯುತ್ತಿದ್ದೆ. ಕರಣ್ ಜೋಹರ್ ಎದುರಿನ ಮೇಜಿನ ಮೇಲಿರಿಸಲಾಗಿದ್ದ ತನ್ನ ಆತ್ಮಕಥೆಯ ಮುಖಪುಟದಲ್ಲಿ ಪೋಸು ಕೊಡುತ್ತಿದ್ದ. ಹೀಗೆ ಕೆಲಹೊತ್ತಿನಲ್ಲೇ ಆ ಪುಟ್ಟಜಾಗವು ‘ಮೆಹಫಿಲ್’ ಆಗುವ ನಿರೀಕ್ಷೆಯಲ್ಲಿತ್ತು. ಭಾರತಕ್ಕೆ ಇನ್ನೇನು ಬಂದಿಳಿಯುವ ತರಾತುರಿಯಲ್ಲಿ ಆಗಲೇ ನಾನು ಹಲವು ಪುಸ್ತಕಗಳನ್ನು ಸೀದಾ ಮನೆಗೇ ತರಿಸಿಟ್ಟುಕೊಂಡಿದ್ದೆ. ನೋಡನೋಡುತ್ತಾ ಇಪ್ಪತ್ತು-ಇಪ್ಪತ್ತೈದು ಪುಸ್ತಕಗಳು ಆಗಲೇ ಜಮೆಯಾಗಿದ್ದವು. ಹೀಗಾಗಿ ಅದೇನೇ ...


Editor's Wall

  • 18 January 2018
    6 days ago No comment

    ಮೋಹದ ಹಯವೇರಿದ ಕಿನ್ನರಿಯರ ಲೋಕದಲ್ಲಿ…

                        ಇಷ್ಟೆಲ್ಲ ಆದ ಬಳಿಕ ಸೋತು ಹಣ್ಣಾಗಿರಬಹುದು ಎಂದುಕೊಂಡರೆ ಅವಳು ಮೊದಲಿಗಿಂತ ದುಪ್ಪಟ್ಟು ಲಕಲಕ ಹೊಳೆಯುತ್ತ ಪಕ್ಕಾ ವ್ಯವಹಾರಸ್ಥಳಂತೆ ನಡೆದುಕೊಳ್ಳತೊಡಗಿದಳು. ಉಳಿದ ಹೆಣ್ಣುಮಕ್ಕಳಾದರೂ ಇವಳಿಗಿಂತ ಭಿನ್ನವಾಗಿಯೇನೂ ಇರಲಿಲ್ಲ.   ಆ ಪುಟ್ಟ ಊರಿನ ಎರಡು ಬೀದಿಗಳ ಅಷ್ಟೂ ಕ್ವಾರ್ಟರ್ಸ್ ಗಳ ತುಂಬ ಗುತ್ತಿಗೆ ಕೆಲಸದ ನಿಮಿತ್ತ ಬೇರೆ ರಾಜ್ಯಗಳ ಜನ ಬಂದು ನೆಲೆಸಿದ ಮೇಲೆ ಊರಿನಲ್ಲಿ ...

  • 15 January 2018
    1 week ago No comment

    ದೊರೆ ಏನೆಂದನು ಎಂದರೆ…

      ಗೆದ್ದವರು ಅವನನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ನಾಡಿಗೆ ಕರೆತಂದರು. ಚಾನೆಲ್ಲುಗಳೆಲ್ಲ ಇದನ್ನು ದಿನವಿಡೀ ಲೈವಾಗಿ ತೋರಿಸಿ ಕೃತಾರ್ಥತೆ ಅನುಭವಿಸಿದವು.   ಅವನೊಬ್ಬ ತುಂಬಾ ವರ್ಷಗಳಿಂದ ಕಾಡೊಳಗೇ ಗಡ್ಡೆ ಗೆಣಸು ತಿಂದ್ಕೊಂಡು ಇದ್ದ. ಆದ್ರೆ ಅವನ ಕಣ್ಣುಗಳು ಮಾತ್ರ ನಾಡ ಕಡೇನೇ ನೋಡ್ತಿದ್ವಂತೆ. ಕಿವಿಗಳು ನಾಡ ಕಡೆಯ ಸದ್ದುಗಳಿಗೇ ತೆರಕೊಂಡಿದ್ವಂತೆ. ಬಾಯಿ ಕೂಡ ನಾಡ ಬಗ್ಗೆಯೇ ವಟಗುಡೋ ರೂಢಿ ಬೆಳೆಸಿಕೊಂಡಿತ್ತಂತೆ. ವಿಚಾರ ಹೀಗಿದೆ ನೋಡಿ ಅಂತ ನಾಡಿಂದ ಕಾಡ ಕಡೆ ...

  • 14 January 2018
    1 week ago No comment

    ಸದ್ದಿಲ್ಲದೇ ಅವನನ್ನು ಹೋಗಗೊಟ್ಟೆ…

              | ಕಮಲಾ ದಾಸ್ ಕಡಲು     ಕಮಲಾ ದಾಸ್ ಕವಿತೆಗಳ ಅನುವಾದ ಶುರು ಮಾಡಿದ ಮೊದಲ ದಿನಗಳಲ್ಲಿ ಇದು ಕಣ್ಣಿಗೆ ಬಿದ್ದದ್ದು. ಈ ಕವಿತೆಯಲ್ಲಿನ ಅಸಹಾಯಕತೆ ಮತ್ತು ಅದರ ಹಿಂದೆಯೇ ಆವರಿಸುವ ನಿರ್ಲಿಪ್ತತೆ ನನಗೆ ತುಂಬ ಕಾಡಿಸಿಬಿಟ್ಟಿತು. ಯಾಕೆ ಒಂದು ಪ್ರೇಮ ಬಹುತೇಕ ಗಂಡಸರಿಗೆ ಬಂಧನದಂತೆ ಅನ್ನಿಸುತ್ತದೆ, ಒಂದು ಹಂತದ ನಂತರ ಯಾಕೆ ಹೆಣ್ಣಿಗೂ ಹಿಡಿದಿಟ್ಟುಕೊಳ್ಳುವುದು ನಿರರ್ಥಕ ಅನ್ನಿಸಿಬಿಡುತ್ತದೆ… ಹತ್ತು ...

  • 11 January 2018
    2 weeks ago No comment

    ಕಾಲಡಿಯ ತುಂಡು ನೆಲದಲ್ಲಿ ಮಾಯಾವನ ಅರಳಿ…

                        ಒಂದು ತೊಟ್ಟೂ ವಿಷ ನೆಲಕ್ಕೆ ಬೀಳದಂಥ ಸಾವಯವ ಬೆಳೆಗಳನ್ನು ನಾವೇ ಬೆಳೆದು ತಿನ್ನುವುದು ನಮಗೆ ಖಂಡಿತ ಸಾಧ್ಯವಿದೆ.   “ನನ್ನ ಭುಜವಸ್ತ್ರವನ್ನು ಬಾವುಟದಂತೆ ಹಾರಿಸಲು ನನಗೆ ಅಂಗೈಯಷ್ಟು ಜಾಗ ಬೇಕು ಶಾಶ್ವತ ವಿಳಾಸ ಬೇಕು” -ಎಜ್ರಾಶಾಸ್ತ್ರಿ ಭೂಮಿ ಮತ್ತು ವಸತಿ ಹೋರಾಟದಲ್ಲಿ ಸಕ್ರಿಯ ಕಾರ್ಯಕರ್ತರಾಗಿರುವ ಪದ್ಮಾ ಕೆ. ರಾಜ್ ತಮ್ಮ ಹೋರಾಟದ ಬಗ್ಗೆ ತಿಳಿಸಿದಾಗ ...

  • 04 January 2018
    3 weeks ago No comment

    ಬತ್ತಿಹೋದ ಎದೆಗೂಡುಗಳಲ್ಲಿ ಸುಪ್ತ ಜ್ವಾಲಾಮುಖಿಗಳು

                        ಅವಳು ಅಡುಗೆ ಮಾಡುತ್ತಾಳೆ ‘ನೀನೂ ಹೊತ್ತು ಹೊತ್ತಿಗೆ ಉಂಡೆಯಾ ತಿಂದೆಯಾ?’ ಎಂದು ಎಂದೂ ಕೇಳ ಹೇಳದವನೊಬ್ಬನಿಗಾಗಿ ಅವಳು ಅಡುಗೆ ಮಾಡುತ್ತಲೇ ಇರುತ್ತಾಳೆ   ಒಲೆಯ ಜ್ವಾಲೆಯಂತೆ ಧಗಧಗಿಸುತ್ತ, ಬೇಯುವ ಅಡುಗೆಯಂತೆ ಕೊತಕೊತನೆ ಕುದಿಯುತ್ತ, ಬಚ್ಚಲ ಬಿಸಿಬಿಸಿ ಹಬೆಯ ಜೊತೆ ಆರಲೆತ್ನಿಸುತ್ತ, ಕಣ್ಣೀರಾಗಿ ಹರಿವೊಡೆಯುತ್ತ, ಶೀತಲ ಮೌನದೊಳಗೆ ಹೆಪ್ಪುಗಟ್ಟುತ್ತ ಕೌಟುಂಬಿಕ ಚೌಕಟ್ಟಿನೊಳಗಿನ ಹೆಣ್ಣು ಅನುಭವಿಸುವ ತಳಮಳಗಳು ...