Share

ಜಿಎಸ್‍ಎಸ್ ಅಧ್ಯಾಪಕರಾಗಿದ್ದ ವಿವಿಯಲ್ಲಿ ಕನ್ನಡದ ಕಥೆ ಹೀಗಾಗಿ ಹೋಯ್ತಾ?
ಅರ್ಪಣಾ ಹೆಚ್ ಎಸ್

 

 

ಜಿಎಸ್‍ಎಸ್ ಸೇರಿದಂತೆ ಹಲವು ಪ್ರಮುಖ ಸಾಹಿತಿಗಳು ಇಲ್ಲಿ ಬೋಧಿಸಿದ್ದಾರೆ. ಒಂದು ಕಾಲದಲ್ಲಿ ಅಂಥ ಸಮೃದ್ಧತೆ ಕಂಡಿದ್ದ ಕನ್ನಡ ವಿಭಾಗವೀಗ ಕುಂಟುತ್ತ ಸಾಗಿದೆ.

 

 

 

ಯೂನಿವರ್ಸಿಟಿಗೆ ಈ ವರ್ಷ ಶತಮಾನೋತ್ಸವ.  ಆ ವಿಶ್ವವಿದ್ಯಾಲಯದ ಕನ್ನಡ ವಿಭಾಗಕ್ಕೆ ಈಗ 99 ವರ್ಷ ವಯಸ್ಸು. ಹಳೆಯ ಕನ್ನಡ ವಿಭಾಗಗಳಲ್ಲಿ ಒಂದೆಂಬ ಹೆಗ್ಗಳಿಕೆಯೂ ಇದೆ ಅದಕ್ಕೆ.

ಅಂಥ ಹೆಚ್ಚುಗಾರಿಕೆಯ ಕನ್ನಡ ವಿಭಾಗ ಈಗ ಹೇಗಿದೆ? ಉತ್ತರ ಗೊತ್ತಾದರೆ ಕನಲಿಹೋಗುತ್ತೀರಿ.

ಅಂದಹಾಗೆ ಅದು ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾನಿಲಯ. ಇಲ್ಲಿನ ಕನ್ನಡ ವಿಭಾಗಕ್ಕೆ ಶತಮಾನದ ಸಡಗರ ಕಾಣುವ ಹುರುಪೂ ಹುದುಗಿಹೋಗಿದೆ.  ಕರ್ನಾಟಕದ ಎಷ್ಟೋ ವಿವಿಗಳ (ಪ್ರಾಯಶಃ ಬೆಂಗಳೂರು ಮತ್ತು ಮೈಸೂರು ವಿವಿ ಬಿಟ್ಟು) ಕನ್ನಡ ವಿಭಾಗಕ್ಕಿಂತ ಇಲ್ಲಿಯ ಕನ್ನಡ ವಿಭಾಗ ಹಳೆಯದು. ಜಿಎಸ್‍ಎಸ್ ಸೇರಿದಂತೆ ಹಲವು ಪ್ರಮುಖ ಸಾಹಿತಿಗಳು ಇಲ್ಲಿ ಬೋಧಿಸಿದ್ದಾರೆ. ಒಂದು ಕಾಲದಲ್ಲಿ ಅಂಥ ಸಮೃದ್ಧತೆ ಕಂಡಿದ್ದ ಕನ್ನಡ ವಿಭಾಗವೀಗ ಕುಂಟುತ್ತ ಸಾಗಿದೆ.

ಮುಂದಿನ ವರ್ಷ ಶತಮಾನೋತ್ಸವ ಆಚರಿಸಿಕೊಳ್ಳಬೇಕು ಈ ಕನ್ನಡ ವಿಭಾಗ. ವಿಪರ್ಯಾಸವೆಂದರೆ ಇಂಥ ಹಿರಿತನದ ಈ ವಿಭಾಗಕ್ಕೆ ಈಗ ವಿದ್ಯಾರ್ಥಿಗಳ ಕೊರತೆ. ಕಳೆದ ವರ್ಷ ಒಬ್ಬ ವಿದ್ಯಾರ್ಥಿ ಕೂಡ ಇರಲಿಲ್ಲವಂತೆ. ಈ ವರ್ಷ ವಿಭಾಗದ ಮುಖ್ಯಸ್ಥ ಲಿಂಗಪ್ಪ ಗೋನಾಳ್ ಅವರ ಶ್ರಮ ಮತ್ತು ವೈಯಕ್ತಿಕ ಕಾಳಜಿಯಿಂದಾಗಿ ಕೆಲ ವಿದ್ಯಾರ್ಥಿಗಳು ಸೇರಿದ್ದಾರೆ.

ಕರ್ನಾಟಕದಲ್ಲೇ ಈಗ ಸಾಕಷ್ಟು ವಿವಿಗಳು, ಸ್ತಾತಕೋತ್ತರ ಕೇಂದ್ರಗಳು ಇರುವುದರಿಂದ ವಿದ್ಯಾರ್ಥಿಗಳು ಇಲ್ಲಿಗೆ ಬರುವುದು ಕಷ್ಟವೇ ನಿಜ. ಆದರೆ, ಇಲ್ಲಿ ಕನ್ನಡ ಎಂಎ ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವೇ ಧನಸಹಾಯ ಮಾಡುತ್ತದೆ. 5 ಅರ್ಹ ವಿದ್ಯಾರ್ಥಿಗಳಿಗೆ( ಮೊದಲ ಮತ್ತು ಎರಡನೇ ವರ್ಷ ಸೇರಿ ಒಟ್ಟು 10 ಮಂದಿಗೆ) ಮಾಸಿಕ 2,500 ರೂ ವಿದ್ಯಾರ್ಥಿ ವೇತನ ನೀಡುತ್ತದೆ. ಕನ್ನಡ ಎಂಎ ಮಾಡಲು ಇಚ್ಛೆ ಇರುವ, ಆದರೆ ಹಣದ ತೊಂದರೆಯಿಂದ ಹಿಂಜರಿಯುತ್ತಿರುವ ವಿದ್ಯಾರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಶುಲ್ಕ ಮತ್ತು ಇಲ್ಲಿನ ಹಾಸ್ಟೆಲ್ ಖರ್ಚು ಕೂಡ ತೀರಾ ತೀರಾ ಕಡಿಮೆ.

ವಿದ್ಯಾರ್ಥಿಗಳ ಕೊರತೆಯಿಂದ ಈ ವಿಭಾಗ ಮುಚ್ಚಬಾರದಲ್ಲವೇ? ಆಸಕ್ತರಿದ್ದರೆ ಅಂಥವರಿಗೆ ಒಸ್ಮಾನಿಯಾ ವಿವಿ ಕನ್ನಡ ವಿಭಾಗದ ಬಗ್ಗೆ ಮತ್ತು ಕರ್ನಾಟಕ ಸರ್ಕಾರ ನೀಡುವ ಧನಸಹಾಯದ ಬಗ್ಗೆ ಗೊತ್ತಾಗುವಂತಾಗಬೇಕು.

ಹೈದ್ರಾಬಾದಿನ ಕನ್ನಡ ವಿಭಾಗ 100 ವರ್ಷ ಆಚರಿಸಿಕೊಳ್ಳುವ ಸಂದರ್ಭದಲ್ಲಿ ಮತ್ತೆ ಆ ವಿಭಾಗದ ತುಂಬ ಕನ್ನಡದ ಕಲರವ ಕೇಳಿಬರುವಂತಾದರೆ ಅದಕ್ಕಿಂತ ಖುಷಿ ಇನ್ನೇನಿದೆ?

————–

ಅರ್ಪಣಾ ಹೆಚ್ ಎಸ್

ಟಿವಿ ಮೀಡಿಯಾದಲ್ಲಿ ದಶಕದ ಅನುಭವ ಇರುವ ಪತ್ರಕರ್ತೆ. ಸದ್ಯ ಫ್ರೀಲ್ಯಾನ್ಸ್ ಅನುವಾದಕರಾಗಿ, ಕಂಠದಾನ ಕಲಾವಿದೆಯಾಗಿ ಹಾಗೂ ಬರಹಗಾರರಾಗಿ ತಮ್ಮ ಪ್ರೊಫೆಷನಲ್ ಬದುಕಿನಲ್ಲಿ ಮುಂದೆ ಸಾಗುತ್ತಿದ್ದಾರೆ. ಈಟಿವಿ ಕನ್ನಡ ವಾಹಿನಿಯಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಆಗಿದ್ದವರು. ಕನ್ನಡಪ್ರಭ, ವಿಜಯವಾಣಿಯಲ್ಲಿ ಪ್ರಕಟವಾದ ಸಣ್ಣಕಥೆಗಳಿಗಾಗಿ ಹಲವು ಪ್ರಶಸ್ತಿ ಪಡೆದಿದ್ದಾರೆ. ಸರ್ಕಾರದ ಪ್ರಾಜೆಕ್ಟ್‌ಗಳಿಗೆ ಡಾಕ್ಯುಮೆಂಟರಿ ಫಿಲಂಗಳನ್ನೂ ಮಾಡಿದ ಅನುಭವ ಹೊಂದಿದ್ದಾರೆ.

Share

Leave a comment

Your email address will not be published. Required fields are marked *

Recent Posts More

  • 1 day ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 2 days ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 1 week ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 1 week ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...

  • 2 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...


Editor's Wall

  • 15 August 2018
    1 day ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    1 week ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    2 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    3 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...