Share

ಮಾತನಾಡುವ ಬೊಂಬೆ
ಕಾದಂಬಿನಿ

 

 

 

 

ಕವಿಸಾಲು

 

 

 

 

ದು ಮಾತನಾಡುವ ಬೊಂಬೆಯೇ ಆಗಿತ್ತು
ಮತ್ತು ಈಗಲೂ ಮಾತನಾಡುತ್ತಲೇ ಇತ್ತು

ಹಲವು ಬಿಡಿ ಭಾಗಗಳಿಂದ
ಜೋಡಿಸಲ್ಪಟ್ಟು ರೂಪುತಳೆದ ಆ ಬೊಂಬೆಯು
ಆ ದುಷ್ಟು ಹುಡುಗನ ಕೈಗೆ ಸೇರುವಷ್ಟರೊಳಗೇ
ಅವ ಅಷ್ಟೂ ಭ್ರಮಣ ಮದ್ಯವ ಕುಡಿದು ಮುಗಿಸಿದ್ದ

ಈಗವನ ಉಪದ್ರ ಕೇಳಬೇಕು ನೀವು!
ಒಮ್ಮೆ ಹಿಂದೆ ಮುಂದೆ, ಅತ್ತಿತ್ತ. ಮೇಲೆ ಕೆಳಗೆ
ಬೊಂಬೆಯ ತಿರುಗಿಸಿ ಮುರುಗಿಸಿ
ಅದರ ಜೋಡಣೆಯನ್ನು ನೋಡಿದ ಬಳಿಕ
ಅದರ ಅಂಗಿಯನ್ನು ಕಳಚಿ ಎಸೆದ
ಅದಕ್ಕೆ ನಾಚಿಕೆಯೇನಾಗಲಿಲ್ಲ
ಅದು ಮಾತಾಡುತ್ತಲೇ ಇತ್ತು

ಅವ ಬೊಂಬೆಯ ಸೊಂಟಕ್ಕೆ ಕೈಹಾಕಿ
ಒಂದೊಂದೇ ಕಾಲುಗಳನ್ನು ಕಿತ್ತೆಸೆದ
ಬೊಂಬೆಗೆ ನೋವೇನಾದಂತಿರಲಿಲ್ಲ
ಅದು ನಡೆಯುವುದನ್ನು ನಿಲ್ಲಿಸಿತಾದರೂ
ಮಾತನಾಡುತ್ತಲೇ ಇತ್ತು

ಈಗವನು ಒಂದೊಂದಾಗಿ
ಕೈಗಳನು ಕಿತ್ತೆಸೆಯುವಾಗ
ಬಿಡಿಸಿಕೊಳ್ಳಲೆತ್ನಿಸಲೂ ಇಲ್ಲ
ಬರಿದೆ ಕೈಯಾಡಿಸುವುದನು ನಿಲ್ಲಿಸಿಬಿಟ್ಟಿತು
ಆದರೆ ಇನ್ನೂ ಮಾತನಾಡುತ್ತಲೇ ಇತ್ತು

ಈಗ ಆ ದುಷ್ಟ ಹುಡುಗ
ಬೊಂಬೆಯ ಟೋಫನ್ ಕಿತ್ತು
ತೋರುಬೆರಳ ತುದಿಗೆ ಸಿಗಿಸಿ
ಗಿರ್ರನೆ ತಿರುಗಿಸಿ ಎಸೆದುಬಿಟ್ಟ

ಮತ್ತು ಬೊಂಬೆಯು ತಲೆಯಿಂದ
ಮಾತಾಡುತ್ತಿದೆ ಎಂದುಕೊಂಡವನೇ
ಕುತ್ತಿಗೆಯನ್ನು ಒತ್ತಿ ಹಿಡಿದು
ತಲೆಯನ್ನು ಕಿತ್ತೆಸೆದುಬಿಟ್ಟ
ಮುಂಡದಿಂದ ಬೇರ್ಪಟ್ಟ ತಲೆಯೀಗ
ಪಿಳಿಪಿಳಿ ಕಣ್ಣುಬಿಡುವುದನ್ನೂ,
ಮಾತಿಗೆ ತಕ್ಕಂತೆ ಪಿಟಿಪಿಟಿ
ತುಟಿಯಲುಗಿಸುವುದನ್ನೂ ನಿಲ್ಲಿಸಿಬಿಟ್ಟಿತು
ಬೊಂಬೆಯು ಇನ್ನೂ ಮಾತನಾಡುತ್ತಲೇ ಇತ್ತು

ಬೊಂಬೆಯು ಇನ್ನೂ ಮಾತನಾಡುತ್ತಲೇ ಇತ್ತು
ಆದರೆ ಅಷ್ಟು ಹೊತ್ತಿಗೆ
ಅದರ ಬ್ಯಾಟರಿ ಮುಗಿಯುತ್ತ ಬಂದ ಕಾರಣ
ಬೊಂಬೆಯೇ ಭ್ರಮಣ ಮದ್ಯವ
ಕುಡಿದು ಉನ್ಮತ್ತವಾದಂತೆ ಎಳೆ ಎಳೆದು
ಅತ್ತಹಾಗೆ ಮತ್ತು ಅರ್ಥವಾಗದ ಹಾಗೆ
ಮಾತನಾಡತೊಡಗಿದ್ದು
ಆ ದುಷ್ಟ ಹುಡುಗನಿಗೆ
ಅತೀವ ತಮಾಶೆಯಾಗಿ ಕಾಣತೊಡಗಿತು

ಆ ದುಷ್ಟ ಹುಡುಗನಿಗೀಗ
ಬೊಂಬೆ ಹೃದಯದಿಂದ ಮಾತನಾಡುತ್ತಿದೆ
ಎಂಬುದು ತಿಳಿದುಹೋಗಿದೆ
ಇನ್ನೇನು ಅವನು ಅದರ ಬೆನ್ನು ಮೇಲೆ ಮಾಡಿ
ಟಕ್ಕನೆ ಮುಚ್ಚಳವ ಕಿತ್ತು
ಬೊಂಬೆಯ ಎದೆಯೊಳಗೆ ಬೆರಳು ತೂರಿ
ಬ್ಯಾಟರಿಯನ್ನು ಕಿತ್ತೆಸೆಯಲಿದ್ದಾನೆ
ಮಾತು ನಿಂತು ಸಂಪೂರ್ಣ ಹೋಗಲಿದೆ
ಹೌದು!
ಹಾಗೆಯೇ ಅನಿಸುತ್ತದೆ..!

——–

ಕಾದಂಬಿನಿ

ಹೈಡ್ರೋ ಇಂಜಿನಿಯರ್ಸ್ ಕಂಪನಿಯಲ್ಲಿ ಆಫೀಸ್ ಎಕ್ಸಿಕ್ಯೂಟೀವ್. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾಸ್ತಿಕಟ್ಟೆಯಲ್ಲಿ ವಾಸ. ಬಿಡುವಿನ ವೇಳೆಯಲ್ಲಿ ಬರೆಯುವ ಹವ್ಯಾಸ. ಕೆಲವು ಪತ್ರಿಕೆಗಳಲ್ಲಿ ಬರಹಗಳು ಪ್ರಕಟವಾಗಿವೆ.

Share

Leave a comment

Your email address will not be published. Required fields are marked *

Recent Posts More

  • 1 day ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 2 days ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 1 week ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 1 week ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...

  • 2 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...


Editor's Wall

  • 15 August 2018
    1 day ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    1 week ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    2 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    3 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...