Share

ನಾನು ಕಾಯುವುದಿಲ್ಲ
ಅನುರಾಧಾ ಪಿ ಎಸ್

 

 

ಕವಿಸಾಲು

 

 

ದ್ದುದ್ದ ಕಾಯಿಸಿದೆನೆಂಬ
ಹೆಗ್ಗಳಿಕೆ ನಿನಗಿರಲಿ
ವಿಧಿಸಿ ಪರೀಕ್ಷೆ ಮತ್ತೆಳೆದೆಳೆದು ನೋಡುವ
ಹಗ್ಗದ ಕಣ್ಣು ನಿನದಿರಲಿ
ಬಂಧಿಸಿ ಸವಿ ಭಾವಸೋಗೊಳಗೆ
ಹಿಗ್ಗಿಸಿದ ಗರಿಮೆಯೂ ನಿನದಿರಲಿ
ಕಡುದಯೆಯ ಅಪರಾವತಾರವೇ,
ನಾನು ಕಾಯುವುದಿಲ್ಲ;
ಕಾಯಿಸಿದ ಹೆಗ್ಗಳಿಕೆ ನಿನದಿರಲಿ

ಕಂಡು ಕೆಲವು
ಕಟ್ಟಿ ಕೆಲವು
ಕೆಡವಿ ಕೆಲವು
ದಾಟಿ ಕೆಲವು
ಇಣುಕಿ ಕಾಣದೆ ಕೊರಗಿ
ತಡಕಿ ದಕ್ಕದೆ ಮರುಗಿ
ಗೋಡೆಯಾಚೆಗೊಮ್ಮೆ ಈಚೆಗೊಮ್ಮೆ
ತೆವಳುತೊಮ್ಮೆ ಓಡಿ ದಣಿಯುತೊಮ್ಮೆ
ನರಳಿ ನಲುಗಿದ್ದು ಬದುಕು
ಕಾದು ಕುದಿದದ್ದು ಬದುಕು

ನಿನ್ನೆ ನೀ ಬರಲಿಲ್ಲ
ನಿನ್ನೆ ಕಾಯಲು ಇಲ್ಲ
ಕಾಲ ಹರಿಯುವ ನದಿ ಸರಿದು
ಬದುಕಿಗಷ್ಟು ಮತ್ತಷ್ಟು
ನೋಟ ಕಟ್ಟಿಕೊಟ್ಟದ್ದು

ಕಾಣಲಿಲ್ಲ ಎಟುಕಲಿಲ್ಲ
ದೂರಿ, ದೂರ ದೂರಕೆ
ಒಳಗೆಲ್ಲೋ ಎದೆಬಡಿತದಂತಂಟಿದ ನನನೂ
ಕೈಮೈಗಷ್ಟೇ ಸಲುವ ಮನವನೂ
ಸೆರಗ ಗಂಟಲಿ ಗಟ್ಟಿ ಕಟ್ಟಿ
ಗಾಳಿ ಒಯ್ದೆಡೆಗೊಯ್ದು
ಬರಿದೆ ಕಾದದ್ದು ಬದುಕು

ನೀ ಮುಟ್ಟಿ ತಟ್ಟಿದಂದು
ನಾನು ಬೇರ್ಪಟ್ಟದ್ದು;
ಮತ್ತಳುತಲೇ ಕಾಯುತಿದೆ,
ಬೆರಗು ಬದುಕೊಂದು!

ನಿಂತೊದರಿ ಬಿಟ್ಟ ಕಣ್ಣ
ಸನ್ನೆಗಳು ಕೈ ಹಿಡಿದು
ಮಾತುಮೌನ ಹಾದಿ ತೆರೆದು
ಜೋಡಿಯೊಂದು ಕಣ್ಣೆದುರು ಮೆಲ್ಲನೈತಂದು
ಕನ್ನಡಿಯ ಕಣ್ಣಲ್ಲಿ ಬರಿ ನಾನು
ಬದುಕಿಲ್ಲ; ಜೊತೆಯಲ್ಲಿ ನೀನು

ಮೊನ್ನೆ ನೀ ಬಂದಿದ್ದೆ; ಮೊನ್ನೆಯೂ ನಿಲಲಿಲ್ಲ
ದಾಟಿ ಮೊನ್ನೆ ನಿನ್ನೆಗಳ
ನಾ ಕಾಯುತಿಲ್ಲದ ಇಂದಿನೊಳಗೆ
ಏನೆಲ್ಲ ಇದೆ;
ನೀನಿಲ್ಲ ನೀರಿಲ್ಲ ಬದುಕೂ ಕಾಣಿಸುತಿಲ್ಲ
ಆದರೂ, ನಾನು ಕಾಯುವುದಿಲ್ಲ
ಶಿಶಿರನ ತೆರೆದ ಹೆಬ್ಬಾಗಿಲ ನಡೆಯೊಳಗೆ
ಬೆಚ್ಚನೆ ತೋಯಿಸುವ ಪಸೆಧಾರೆಯನ್ನು
ಕಾಯಿಸಿದೆನೆಂಬ ಹೆಗ್ಗಳಿಕೆ ನಿನದಿರಲಿ
ಕಾಯ್ದುಕೊಳಲು ನಂಬಿಕೆಯಷ್ಟೆ ನನಗಿರಲಿ

ಅನುರಾಧಾ ಪಿ ಎಸ್

ಊರು ಉಡುಪಿ. ಮೈಸೂರಿನಲ್ಲಿ 20 ವರ್ಷಗಳಿಂದ ವಾಸ. ಕಾವ್ಯ, ಸುಗಮ ಸಂಗೀತ ಆಸಕ್ತಿಯ ಕ್ಷೇತ್ರಗಳು. ಮೊಗ್ಗು ಮಾತಾಡಿತು, ಮುಚ್ಚಿದೆವೆಯಡಿ ಕಣ್ಣ ಕನ್ನಡಿ ಪ್ರಕಟಿತ ಕವನಸಂಕಲನಗಳು.

Share

One Comment For "ನಾನು ಕಾಯುವುದಿಲ್ಲ
ಅನುರಾಧಾ ಪಿ ಎಸ್
"

  1. Rajesh
    27th December 2017

    Chennaagide

    Reply

Leave a comment

Your email address will not be published. Required fields are marked *

Recent Posts More

  • 1 week ago No comment

    ನಮ್ಮ ಕಣ್ಣುಗಳೇಕೆ ಭಾರವಾಗುತ್ತಿವೆ?

          ಕವಿಸಾಲು           ತಿರುಕನ ಕನಸಲ್ಲ ನನ್ನದು ತಿರುಕನಲ್ಲ ಕಣ್ರಿ ನಾನು ನಿಮ್ಮ ಮರುಕ ಗಿರುಕ ಎಲ್ಲಾ ನನಗೆ ಹಿಡಿಸಲ್ಲ ಅವ್ರು ಕೋಟೆ ಕಟ್ಟಿ ನ್ಯಾಯ ನೀತಿಗಳ ತಮ್ಮಲ್ಲೆ ಬಚ್ಚಿಟ್ಟು ಒಳಗೆ ಬೆಚ್ಚಗೆ ಕೂತಿರಬಹುದು ನ್ಯಾಯಕ್ಕೆ ಕನ್ನ ಹಾಕೋ ನಾನು ತಿರುಕ ಹೇಗೆ ಆಗಬೇಕು? ತಿರುಕನದೇನೋ ಕನಸಿತ್ತು ನನ್ನದು ಕೂಡಾ ಕನಸೆಂದು ಆ ಕೋಟೆ ಒಳಗಿರುವವರು ಕನವರಿಸುತ್ತಿರಬಹುದು ಬೂದಿ ಮುಚ್ಚಿದ ...

  • 2 weeks ago No comment

    ಕೊಂಕಣಿ ಪ್ರತಿಭೆಯನ್ನರಸಿ ಕರ್ನಾಟಕಕ್ಕೆ ಬಂದ ಪ್ರಶಸ್ತಿ

        ಅತಿಥಿ           ಈ ಬಾರಿ ಕರ್ನಾಟಕವು ಎರಡು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿತು ಎಂದರೆ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಪ್ರಮಾದವೇನಾದರೂ ಆಯಿತೇ? ಒಂದೇ ಪುರಸ್ಕಾರವನ್ನು ಇಬ್ಬರಿಗೆ ಹಂಚಿರಬಹುದೇ? ಎಂದೆಲ್ಲ ಯೋಚಿಸಿ ತಲೆ ಕೆರೆದುಕೊಳ್ಳುತ್ತಿದ್ದೀರಾ? ಇಲ್ಲಿದೆ ನೋಡಿ ಉತ್ತರ. ಕನ್ನಡಕ್ಕೆ 2018ರ ಕೇಂದ್ರಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಘೋಷಣೆಯಾದಾಗಲೇ ಕರ್ನಾಟಕದ ಕೊಂಕಣಿ ಕವಯತ್ರಿ ವಿಲ್ಮಾ ...

  • 2 weeks ago No comment

    ಸಾಹಸದ ಆ ನಿಮಿಷಗಳು

            ಮೊದಲ ಬಾರಿಯಾದ್ದರಿಂದ ಕೆಲವೇ ನಿಮಿಷಗಳ ಈ ಜಿಗಿತದ ರೋಚಕತೆ ಒಂದು ತಿಂಗಳ ಕಾಲ ನನ್ನನ್ನು ಆವರಿಸಿದ್ದು ಸುಳ್ಳಲ್ಲ.         ಬ್ಯಾಂಕರುಗಳು, ಅಕೌಂಟೆಂಟುಗಳು ವರ್ಷದ ಮೊದಲಿಂದ ಹಿಡಿದು ಮಾರ್ಚಿ ತಿಂಗಳವರೆಗೆ ಭಾರೀ ಬ್ಯುಸಿಯಾಗುವಂತೆ ಇಂಗ್ಲೆಂಡಿನ ಸರ್ಕಾರೀ ದಂತ ವೈದ್ಯಕೀಯ ರಂಗದಲ್ಲೂ ಧಾವಂತ ಕಾಣಿಸಿಕೊಳ್ಳುತ್ತದೆ. ಸರ್ಕಾರದಿಂದ ಗುತ್ತಿಗೆ ಪಡೆದ ಕೆಲಸವನ್ನು ಮಾರ್ಚಿಯ ಕೊನೆಗೆ ಪೂರ್ತಿಗೊಳಿಸದಿದ್ದರೆ ಮುಂದಿನ ವರ್ಷದ ಕಾಂಟ್ರಾಕ್ಟ್ ನ್ನು ಕಳೆದುಕೊಳ್ಳುವ ...

  • 3 weeks ago No comment

    ಪ್ರಸಾದ್ ಪಟ್ಟಾಂಗ | ಫಿಫಾ ಫಿವರ್

    ಅಂದು ಎಲ್ಲರ ಕಣ್ಣುಗಳೂ ಬೇರೇನನ್ನೋ ದಿಟ್ಟಿಸುತ್ತಿದ್ದವು. ಅದೊಂದು ಸುಂದರ ರೆಸ್ಟೊರೆಂಟ್. ಆವರಣದ ಒಳಗೂ ಹೊರಗೂ ಬಂದವರಿಗೆ ಕುಳಿತುಕೊಳ್ಳಲು ಸಾಕಷ್ಟು ಜಾಗವಿರುವಂಥದ್ದು. ಜೊತೆಗೇ ಒಂದು ಪುಟ್ಟ ಮೈದಾನದಂತಿರುವ ಜಾಗವನ್ನೂ, ಈಜುಕೊಳವನ್ನೂ ಹೊಂದಿರುವ ಸುಸಜ್ಜಿತ ರೆಸ್ಟೊರೆಂಟ್. ನಾನು ಪ್ರತೀ ತಿಂಗಳು ಲುವಾಂಡಾಗೆ ಬಂದಿಳಿದಾಗಲೆಲ್ಲಾ ಇಲ್ಲಿಯ ಸಿಬ್ಬಂದಿಯೇ ನನಗೆ ಅನ್ನದಾತರು. ಹೀಗಾಗಿ ಎಲ್ಲೆಲ್ಲೂ ನನಗೆ ಪರಿಚಿತ ಮುಖಗಳೇ. ಅಂದು ಮಾತ್ರ ಸಿಬ್ಬಂದಿಯೊಬ್ಬ ಗಡಿಬಿಡಿಯಲ್ಲಿ ನನ್ನ ಆರ್ಡರ್ ಬರೆದುಕೊಂಡು ಅಷ್ಟೇ ಅವಸರದಲ್ಲಿ ಖಾದ್ಯಗಳನ್ನು ತಂದಿಟ್ಟು ...

  • 4 weeks ago No comment

    ಸವಿತಾ ನಾಗಭೂಷಣ ಪ್ರವಾಸ ಕಥನ | ದಾರಿಯೇ ದೈವ… ವೈಷ್ಣೋದೇವಿ

    ಪ್ರವಾಸಿ ಸವಿತಾ ಕಂಡ ಇಂಡಿಯಾ   ಇದು ನಾನು 2011ರ ಮಾರ್ಚ್ ತಿಂಗಳಲ್ಲಿ ನನ್ನ ಕೆಲ ಗೆಳತಿಯರೊಂದಿಗೆ ಒಂದು ಜನಸಾಮಾನ್ಯರ ಸಮೂಹದೊಂದಿಗೆ ಸಾಮಾನ್ಯ ದರ್ಜೆಯ ರೈಲು ಪ್ರಯಾಣದ ಮೂಲಕ ಕೈಗೊಂಡ ಭಾರತ ಯಾತ್ರೆಯ ಸಂದರ್ಭದಲ್ಲಿ ಮಾಡಿಕೊಂಡ ಟಿಪ್ಪಣಿಗಳನ್ನು ಆಧರಿಸಿ ಬರೆದ ಪುಟ್ಟ ಪ್ರವಾಸ ಕಥನ. ಇದು ಈಗಾಗಲೇ 12 ಭಾಗಗಳಲ್ಲಿ ಡಿ ಎಸ್ ನಾಗಭೂಷಣ ಅವರ ಸಂಪಾದಕತ್ವದ ‘ನವ ಮಾನವ’ ಸಮಾಜವಾದಿ ಮಾಸಿಕದ (ಈ ಪತ್ರಿಕೆ ನವೆಂಬರ್ 2011ರ ...


Editor's Wall

  • 11 May 2018
    2 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...

  • 10 May 2018
    2 months ago No comment

    ಒಂದು ಪುಸ್ತಕ; ವಾರವಿಡೀ ಬಿಡುಗಡೆ!

    ಪುಸ್ತಕವೊಂದನ್ನು ಪ್ರಕಟಿಸಿದ ಬಳಿಕ ಅದರ ಬಿಡುಗಡೆ ಕಾರ್ಯಕ್ರಮವೂ ಕಡ್ಡಾಯವೆಂಬಂಥ ಕಾಲವಿತ್ತು. ಈಗಲೂ ಇಲ್ಲವೆಂದಲ್ಲ. ಆದರೆ ಸಾವಿರ, ಲಕ್ಷದ ಲೆಕ್ಕದಲ್ಲಿ ಹಣ ಸುರಿದು ವ್ಯವಸ್ಥೆ ಮಾಡುವ ಬಿಡುಗಡೆ ಕಾರ್ಯಕ್ರಮವು ಒಂದು ಪುಸ್ತಕದ ಕುರಿತ ಮಾತಿಗೆ ಬೇಕಾದ ಆಪ್ತ ವಾತಾವರಣವನ್ನು ಕಟ್ಟಿಕೊಡುತ್ತದೆಯೇ? ದುಡ್ಡಿನ ವಿಚಾರಕ್ಕಿಂತ ಹೆಚ್ಚಾಗಿ ಕಾರ್ಯಕ್ರಮ ಆಯೋಜನೆ ಬೇಡುವ ಶ್ರಮ ಬಹಳ ದೊಡ್ಡದು. ಹಾಲ್ ಬುಕ್ ಮಾಡಬೇಕಾದಲ್ಲಿಂದ ಹಿಡಿದು, ಅತಿಥಿಗಳನ್ನು ಗೊತ್ತುಮಾಡುವುದು, ಅವರಿಗೆಲ್ಲರಿಗೂ ಹೊಂದುವಂತೆ ದಿನಾಂಕ ನಿಗದಿಪಡಿಸುವುದು, ಆಮಂತ್ರಣ ಪತ್ರಿಕೆ ಪ್ರಕಟಿಸುವುದು, ...

  • 03 May 2018
    3 months ago No comment

    ಕಾದಂಬಿನಿ ಕಾಲಂ | ಏನಿಲ್ಲದಿದ್ದರೂ ಬದುಕು ದೂಡಬೇಕು

                      ಆಗೆಲ್ಲ ತಪಸ್ಸು ಮಾಡುವ, ದೇವರು ಪ್ರತ್ಯಕ್ಷವಾಗುವ ಮತ್ತು ಕೇಳಿದ ವರ ಕೊಡುವ ಕಥೆಗಳು ಮಸ್ತು ಚಾಲ್ತಿಯಲ್ಲಿದ್ದ ಕಾರಣ ನಾನು ದೇವರನ್ನು ಕಾಣುವ ಹಟಕ್ಕೆ ಬಿದ್ದು ತಪಸ್ಸು ಮಾಡುತ್ತಿದ್ದೆ.   ನನ್ನ ಜೊತೆ ಇವೆಲ್ಲ ಯಾವ ಕಾರಣಕ್ಕೆ ಘಟಿಸಿತ್ತೋ ಅರಿಯೆ. ಬಾಲ್ಯದಲ್ಲಿ ನಮ್ಮ ಮನೆಗೆ ನೆರೆಮನೆಯ ಒಬ್ಬ ಹೆಂಗಸು ಬರುತ್ತಿದ್ದರು. ಮೂಕಕ್ಕ ಎಂದು ಅವರನ್ನು ಎಲ್ಲರೂ ಕರೆಯುತ್ತಿದ್ದುದು. ...

  • 30 April 2018
    3 months ago No comment

    ಅತ್ಯಾಚಾರ, ಹೋರಾಟದ ಐದು ವರ್ಷಗಳು ಮತ್ತು ಆ ಪುಟ್ಟ ಗೂಡು

    ತನ್ನ ಬದುಕಿನ ಅಮೂಲ್ಯ ಘಳಿಗೆಯೇ ಇಂಥದೊಂದು ಘಟನೆಗೆ ಬಲಿಯಾದ ಆಘಾತದಲ್ಲಿರುವ ಆಕೆ ಒಮ್ಮೆ ಗೆಲುವಾದವಳಂತೆ ಕಂಡರೂ ಮತ್ತೆ ಗಂಭೀರಳಾಗುತ್ತಾಳೆ. ಎಷ್ಟು ಬೇಕೋ ಅಷ್ಟೇ ಮಾತು. ಕಟ್ಟಿಕೊಂಡಿದ್ದ ಕನಸೂ ಒಡೆದುಹೋಗಿದೆ.   ಅನ್ಯಾಯದ ವಿರುದ್ಧದ ಹೋರಾಟ, ಸಮಾಜದೆದುರು ದೊಡ್ಡ ಮನುಷ್ಯನಂತೆ ಕಾಣಿಸಿಕೊಳ್ಳುವ ಮುಖವಾಡ ತೊಟ್ಟುಕೊಂಡ ಮತ್ತು ಸಾಧ್ಯವಿರುವಷ್ಟೂ ವಾಮಮಾರ್ಗಗಳಿಂದ ಎಲ್ಲರನ್ನೂ ಎಲ್ಲವನ್ನೂ ನಿಯಂತ್ರಣದಲ್ಲಿಟ್ಟುಕೊಳ್ಳಬಲ್ಲಂಥ ಅತ್ಯಂತ ಬಲಿಷ್ಠ ದುಷ್ಟನೊಬ್ಬನನ್ನು ಎದುರುಹಾಕಿಕೊಳ್ಳುವ ದಿಟ್ಟತನ ಹೇಗೆ ಅಗಾಧ ಸಾಗರದ ನಟ್ಟ ನಡುವಿನ ಒಂದು ಸಣ್ಣ ...

  • 28 April 2018
    3 months ago No comment

    ಮೈಬಣ್ಣವೆಂಬ ಮಾನದಂಡ ಮತ್ತು ‘ವಿಪ್ಲವ’ ಮನಃಸ್ಥಿತಿಯ ರಾಜಕಾರಣ

    ಈ ‘ವಿಪ್ಲವ’ ಮನಃಸ್ಥಿತಿ ಅಧಿಕಾರಸ್ಥವಾದುದಾಗಿದೆ. ದೇವರು, ಧರ್ಮದ ಹೆಸರಲ್ಲಿ ಒಡೆಯುವುದನ್ನು ತನ್ನ ಪರಮೋನ್ನತಿ ಎಂಬಂತೆ ಭ್ರಮಿಸುವ ಈ ಕುರೂಪವು ಮನುಷ್ಯರ ಮೇಲೆ ಮನುಷ್ಯರನ್ನು ಎತ್ತಿಕಟ್ಟುತ್ತದೆ. ಹೆಣ್ಣಿನ ಮೇಲೆ ಹೆಣ್ಣನ್ನೇ ಅಸ್ತ್ರವಾಗಿ ಪ್ರಯೋಗಿಸುವ ಹುನ್ನಾರಗಳ ಮೂಲಕ, ನಿಜವಾದ ಸೌಂದರ್ಯವನ್ನು ನಾಶಗೈಯುತ್ತಿದೆ. 21 ವರ್ಷಗಳ ಕೆಳಗೆ ಅಂದರೆ 1997ರಲ್ಲಿ ವಿಶ್ವಸುಂದರಿ ಪಟ್ಟ ಗೆದ್ದ ಡಯಾನಾ ಹೇಡನ್ ಮೈಬಣ್ಣದ ಬಗ್ಗೆ ಅತಿ ಕೀಳು ಅಭಿರುಚಿಯಿಂದ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ...