Share

ಬದುಕು ರಹಸ್ಯಗಳನ್ನು ಭೇದಿಸುವ ಆಟವಲ್ಲ!
ಉದಯ್ ಇಟಗಿ

 

 

ಕವಿಸಾಲು

 

 

 

ಕಳೆದ ಶತಮಾನದ ಮೂವತ್ತರ ದಶಕದ ಆರಂಭದಲ್ಲಿ ಬಂದ ಅರೇಬಿಯಾ ಮೂಲದ ಅಮೆರಿಕಾದ ಪ್ರಸಿದ್ಧ ಕವಿ ಇಲ್ಯಾ ಅಬು ಮಾಧಿ, ಜೀವನದ ಅರ್ಥದ ಹುಡುಕಾಟದ ಪ್ರಯತ್ನದಲ್ಲಿ ನಿರರ್ಥಕತೆಯನ್ನು ಕಾಣುವುದನ್ನು ತನ್ನ ಪ್ರಸಿದ್ಧ ಅರೇಬಿ ಕವನ ‘ಒಗಟು’ನಲ್ಲಿ ವಿವರಿಸುತ್ತಾನೆ. ಇದಕ್ಕೆ ಪ್ರತ್ಯುತ್ತರವಾಗಿ ರೇಬಿ ಇಲ್ ಸಯ್ಯದ್ ಅಬ್ದುಲ್ ಹಲೀಮ್ ತನ್ನ ‘ಒಗಟಿಗೆ ಉತ್ತರ’ ಕವನದಲ್ಲಿ ಜೀವನದ ಅರ್ಥದ ಹುಡುಕಾಟವೇ ಒಂದು ವ್ಯರ್ಥ ಪ್ರಯತ್ನ, ಅದೊಂದು ಬಂದಂತೆ ಬಂದ ಹಾಗೆ ಸ್ವೀಕರಿಸಿ ಉಳಿದು ಬೆಳೆಯುವ ಪ್ರಕ್ರಿಯೆ ಎಂದು ವಿವರಿಸುತ್ತಾನೆ.

ಒಗಟು

ನಾನು ಎಲ್ಲಿಂದ ಬಂದೆನೋ ಗೊತ್ತಿಲ್ಲ, ಆದರೆ ಬಂದೆ.
ನನ್ನ ಮುಂದೆ ಹಾದಿ ಹಾಸಿತ್ತು, ನಡೆದೆ.
ನನಗೆ ಬೇಕೋ ಬೇಡವೋ ನಡೆಯುತ್ತಲೇ ಇರಬೇಕು, ನಡೆಯುತ್ತಿದ್ದೇನೆ.
ನಾನು ಹೇಗೆ ಬಂದೆ? ಯಾಕೆ ಬಂದೆ?
ನನ್ನ ದಾರಿಯನ್ನು ಹೇಗೆ ಕಂಡೆ?
ನನಗೆ ಗೊತ್ತಿಲ್ಲ!

ಈ ಹುಡುಕಾಟದಲ್ಲಿ ನಾನು ಹೊಸಬನೋ? ಹಳಬನೋ?
ಸ್ವತಂತ್ರನೋ? ಬಂಧಿಯೋ?
ನಡೆಯುತ್ತಿದ್ದೇನೆಯೋ, ನಡೆಸಲ್ಪಡುತ್ತಿದ್ದೇನೆಯೋ
ಉತ್ತರ ತಿಳಿಯುವ ಆಸೆ, ಆದರೆ
ತಿಳಿಯುತ್ತೇನೆಯೆ? ಗೊತ್ತಿಲ್ಲ!

ನನ್ನ ಹಾದಿ ಯಾವುದದು?
ದೂರವಿದೆಯೋ? ಹತ್ತಿರವಿದೆಯೋ?
ಮೇಲೇರುತ್ತಿದ್ದೇನೆಯೋ? ಕೆಳಗಿಳಿಯುತ್ತಿದ್ದೇನೆಯೋ?
ಸಾಗುತ್ತಿರುವದು ನಾನೋ? ದಾರಿಯೋ?
ಅಥವಾ ನಾವಿಬ್ಬರು (ನಾನು ಮತ್ತು ದಾರಿ) ನಿಂತಿದ್ದೇವೆಯೋ?
ಓಡುತ್ತಿರುವದು ಕಾಲ ಮಾತ್ರವೋ?
ನನಗೆ ಗೊತ್ತಿಲ್ಲ!

ನಾನು ಹುಟ್ಟುವ ಮುನ್ನ
ನಾನು ನಾನಾಗಿದ್ದೆನೆ? ಅಥವಾ ಬೇರೆನಾದರಾಗಿದ್ದೆನೆ?
ಈ ಒಗಟಿಗೆ ಉತ್ತರವಿದೆಯೆ?
ಅಥವಾ ಇಲ್ಲವೇ ಇಲ್ಲವೋ?
ನನಗೆ ಗೊತ್ತಿಲ್ಲ! ಯಾಕೆ ಗೊತ್ತಿಲ್ಲ?
ಗೊತ್ತಿಲ್ಲ ಅಷ್ಟೆ!

(ಅರಬಿ ಮೂಲ: ಇಲ್ಯಾ ಅಬು ಮಾಧಿ | ಇಂಗ್ಲೀಷಿಗೆ: ಮೊಸ್ತಾಫಾ ಮಲೈಖಾ | ಕನ್ನಡಕ್ಕೆ: ಉದಯ್ ಇಟಗಿ)

~

ಒಗಟಿಗೆ ಉತ್ತರ

ನಾನು ಬಂದಿದ್ದೇನೆ ಈ ಜಗಕೆ ಬದುಕಲು
ಹೇಗೆ ಬಂದೆ? ಏಕೆ ಬಂದೆ?
ಇವುಗಳ ಗೊಡವೆ ಯಾಕೆ?
ಬದುಕಲೆಂದೇ ಬಂದಿದ್ದೇನೆ: ಬದುಕಬೇಕು
ಕಾರಣ ಅಕಾರಣಗಳ ತಿಳಿಯುವ ಹುಚ್ಚು ಯಾಕೆ?

ಬದುಕು ರಹಸ್ಯಗಳನ್ನು ಭೇದಿಸುವ ಆಟವಲ್ಲ
ಅಥವಾ ಸಾಕೆಂದು ಬಿಟ್ಟು ಹೊರಡುವದಲ್ಲ
ಅದೊಂದು ಉಳಿದು ಬೆಳೆಯುವ ಸಾಹಸ ಪ್ರಕ್ರಿಯೆ!
ಭೂಮಿ ಸಾಗರದ ಇತರೆ ಜೀವಿಗಳೆಲ್ಲ ಹಾಯಾಗಿ ಬದುಕುವಾಗ
ಮನುಷ್ಯರಿಗೇಕೆ ಆಗದು?
ಈ ಸೂಕ್ಷ್ಮ ಜನರಿಗೇಕೆ ಅರ್ಥವಾಗೊಲ್ಲ?
ನನಗೆ ಆಶ್ಚರ್ಯ!

ನನ್ನ ಹಾದಿ ಯಾವುದದು?
ದೂರವಿದೆಯೋ? ಹತ್ತಿರವಿದೆಯೋ?
ಸುಗಮವಾಗಿದೆಯೋ? ದುರ್ಗಮವಾಗಿದಿಯೋ?
ಇದನ್ನೆಲ್ಲ ಹುಡುಕುವ ವ್ಯರ್ಥ ಪ್ರಯತ್ನ ಯಾಕೆ?
ನೆನಪಿರಲಿ…………
ಇಲ್ಲಿ ಯಾವುದೇ ಸಿದ್ಧ ಹಾದಿಗಳಿಲ್ಲ
ಸುಮ್ಮನೆ ನಡೆಯುತ್ತಾ ಹೋಗಬೇಕಷ್ಟೆ
ಆಗ ಅದು ತಾನೇ ತಾನಾಗಿ ಮೂಡುವದು.
ಈ ಸತ್ಯ ಜನರಿಗೇಕೆ ತಿಳಿಯುವದಿಲ್ಲ?
ನನಗೆ ಆಶ್ಚರ್ಯೇ!

ಇದು ನನ್ನ ಬದುಕು
ನಾನು ನಾನಾಗಿ ನಡೆಯಬೇಕು.
ನಾನು ನಾನೇನಾ? ಇಲ್ಲ ಬೇರೇನಾ?
ಎನ್ನುವ ಗೊಂದಲ ಯಾಕೆ?
ನನಗೆ ನಾನೇ ಒಡೆಯ
ನನ್ನ ಆಯ್ಕೆಯಲ್ಲಿನಾನು ಸ್ವತಂತ್ರ
ಸರಿಯೋ? ತಪ್ಪೋ?
ಎಲ್ಲ ನನ್ನ ಕೈಲಿದೆ.

ನನ್ನ ತಾತ ಮುತ್ತಾತರಂತೆ
ದೇವರು ನನಗೂ ಬುದ್ಧಿಯನ್ನಿಟ್ಟು ಕಳುಹಿದ್ದಾನೆ.
ನಾನು ಸುಮ್ಮನೆ ದೀಪ ಹಚ್ಚುತ್ತಾ ಸಾಗಬೇಕು
ಆಗ ಕತ್ತಲಡಿಯಿರುವ ರಹಸ್ಯಗಳೆಲ್ಲ
ತಾನೇ ತಾನಾಗಿ ಬಯಲಾಗುತ್ತವೆ.
ಸುಮ್ಮನೆ ಗುಟ್ಟು ಒಳಗುಟ್ಟುಗಳನ್ನು
ಒಡೆಯುವ ಉಸಾಬರಿ ಯಾಕೆ?
ಈ ಸರಳ ಸಂಗತಿ ಜನರಿಗೇಕೆ ಅರ್ಥವಾಗೊಲ್ಲ?
ನನಗೆ ಆಶ್ಚರ್ಯ!

(ಅರೇಬಿ ಮೂಲ: ರೇಬಿ ಇಲ್ ಸಯ್ಯದ್ ಅಬ್ದುಲ್ ಹಲೀಮ್ | ಇಂಗ್ಲೀಷಿಗೆ: ಐಮಾನ್ ಆಲ್ ಖತೀಬ್ | ಕನ್ನಡಕ್ಕೆ: ಉದಯ್ ಇಟಗಿ)

ಉದಯ್ ಇಟಗಿ

ಊರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ. ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಎಂಟು ವರ್ಷಗಳ ಕಾಲ ಇಂಗ್ಲೀಷ್ ಅಧ್ಯಾಪಕರಾಗಿದ್ದವರು. ಅರೇಬಿ ಕವನಗಳು ಸೇರಿದಂತೆ ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು ಬೇರೆ ಬೇರೆ ಅಂತರ್ಜಾಲ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಶಿಕ್ಷಣ, ಪ್ರವಾಸ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿ.

Share

Leave a comment

Your email address will not be published. Required fields are marked *

Recent Posts More

  • 3 days ago No comment

    ಈ ಸಂಜೆಯೊಳಗೆ

      ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

  • 6 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 1 week ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 2 weeks ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

  • 15 August 2018
    6 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    3 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    4 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...