Share

ಮರಗಳ ಪಾಲಿನ ಅಮೃತವಾಗಲು ಪ್ರಾಣ ಕೊಟ್ಟವಳು!
ಉಷಾ ಕಟ್ಟೆಮನೆ ಕಾಲಂ

 

 

 

 

 

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಈ ಸಂದಭದಲ್ಲಿ ಮರಗಳನ್ನು ಅರ್ಥಾತ್ ನಿಸರ್ಗವನ್ನು ಉಳಿಸಿಕೊಳ್ಳುವುದಕ್ಕಾಗಿ ತನ್ನ ಮೂವರು ಹೆಣ್ಣುಮಕ್ಕಳೊಂದಿಗೆ ಪ್ರಾಣತ್ಯಾಗ ಮಾಡಿದ ಅಮೃತಾದೇವಿ ಎಂಬ ರಾಜಸ್ತಾನಿ ಮಹಿಳೆಯ ಜೀವನಗಾಥೆಯನ್ನು ನಿಮ್ಮಲ್ಲಿ ಹಂಚಿಕೊಳ್ಳುತ್ತೇನೆ. ಮುಂದೆ ಅಪ್ಪಿಕೋ ಚಳುವಳಿಗೆ ಈಕೆಯೇ ಪ್ರೇರಣೆಯಾದಳು ಎಂಬುದು ಈಗ ಇತಿಹಾಸ.

ಪಾಲನೆಯ ಗುಣ ಯಾರಲ್ಲೇ ಇರಲಿ, ಅವರು ಹೆಣ್ಣಾಗಲಿ ಗಂಡಾಗಲಿ, ಅಥವಾ ಗಿಡಮರ ಪ್ರಾಣಿಯೇ ಇರಲಿ ಅದನ್ನು ನಾವು ಹೆಣ್ಣೆಂದು ಭಾವಿಸುತ್ತೇನೆ. ಹಾಗಾಗಿಯೇ ನಾವು ನದಿ, ಭೂಮಿ ಸೇರಿದಂತೆ ಇಡೀ ನಿಸರ್ಗದಲ್ಲಿ ಹೆಣ್ತನವನ್ನು ಕಾಣುತ್ತೇವೆ. ಇಂತಹ ನಿಸರ್ಗವನ್ನು ತಾಯಿಯೆಂದು ನಾವು ಪೂಜಿಸುತ್ತೇವೆ. ಆಕೆಯ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ನಾವು ಅವಳ ರಕ್ಷಣೆಗೆ ಧಾವಿಸಿ ಬರಬೇಕಾಗುತ್ತದೆ. ಯಾಕೆಂದರೆ ಅವಳಿಲ್ಲದೆ ನಾವಿಲ್ಲ. ನಿಸರ್ಗವನ್ನು ಹೆಣ್ಣಾಗಿ ಪರಿಭಾವಿಸುವುದು, ಹೆಣ್ಣನ್ನು ಭೂಮಿಗೆ ಹೋಲಿಸುವುದು ಇಕೋ ಫೆಮಿನಸಂನ ಭಾಗವೇ ಆಗಿದೆ.

ರಾಜಸ್ತಾನ ರಾಜ್ಯದ ಜೋಧಪುರ ಜಿಲ್ಲೆಯಲ್ಲಿರುವ ಪುಟ್ಟ ಗ್ರಾಮ ಕೇಜ್ರಾಲಿ. ಥಾರ್ ಮರುಭೂಮಿಯ ಮಧ್ಯೆ ಇದ್ದರೂ ಅದು ಹಸಿರಿನಿಂದ ಕಂಗೊಳಿಸುತ್ತಿತ್ತು. ಅದಕ್ಕೆ ಕಾರಣವಾಗಿದ್ದು ಕೇಜ್ರಿ ಮರಗಳು. ಆ ಮರಗಳು ಆ ಪ್ರದೇಶದಲ್ಲಿ ಹೇರಳವಾಗಿ ಬೆಳೆಯುತ್ತಿದ್ದುದರಿಂದ ಆ ಮರದ ಹೆಸರನ್ನೇ ಆ ಗ್ರಾಮವೂ ಪಡೆದಿತ್ತು. ಆ ಗ್ರಾಮದಲ್ಲಿ ಬಿಸ್ನೌ ಎಂಬ ಪಂಥದ ಜನರು ವಾಸಿಸುತ್ತಿದ್ದರು. ಅವರಿಗೆ ಆ ಮರ ಪೂಜನೀಯವಾಗಿತ್ತು.

ಅದು ಕ್ರಿ.ಶ.೧೭೩೧ರ ಸಮಯ. ಜೋಧಪುರದ ಮಹಾರಾಜನ ಆಣತಿಯಂತೆ ಗಿರಿಧರ್ ಭಂಡಾರ್ ಎಂಬ ವ್ಯಕ್ತಿ ತನ್ನ ಸಹಚರರೊಡನೆ ಕೇಜ್ರಾಲಿ ಗ್ರಾಮಕ್ಕೆ ಬಂದು ಅಲ್ಲಿದ್ದ ಕೇಜ್ರಿ ಮರಗಳನ್ನು ಕಡಿಯಲು ಆರಂಭಿಸುತ್ತಾನೆ. ಆ ಮರಗಳನ್ನು ಕಡಿದು ಹೊಸ ಅರಮನೆಯನ್ನು ಕಟ್ಟುವುದು ಅವರ ಉದ್ದೇಶವಾಗಿತ್ತು. ಗ್ರಾಮಸ್ಥರು ಪ್ರತಿಭಟಿಸುತ್ತಾರೆ. ಅವರ ಭಾವನೆಗಳಿಗೆ ಬೆಲೆ ಕೊಡದೆ ಸೈನಿಕರು ಮರ ಕಡಿಯುವುದನ್ನು ಮುಂದುವರಿಸುತ್ತಾರೆ. ಆಗ ಅಮೃತಾದೇವಿ ಎಂಬ ಮಹಿಳೆ ಪ್ರಾಣ ಬೇಕಾದರೂ ಕೊಡುತ್ತೇನೆ. ಆದರೆ ಮರ ಕಡಿಯಲು ಬಿಡುವುದಿಲ್ಲ ಎನ್ನುತ್ತಾ ತನ್ನ ಮೂವರು ಹೆಣ್ಣು ಮಕ್ಕಳಾದ ಅಸು, ರತನಿ, ಭಾಗು ಜೊತೆ ಅಲ್ಲಿರುವ ಮರಗಳನ್ನು ತಬ್ಬಿಕೊಂಡು ನಿಲ್ಲುತ್ತಾಳೆ. ಗಿರಿಧರ ಭಂಡಾರ್ ನ ಜನರು ಆ ತಾಯಿಮಕ್ಕಳನ್ನು ನಿರ್ದಾಕ್ಷಿಣ್ಯವಾಗಿ ಕೊಚ್ಚಿಹಾಕುತ್ತಾರೆ.

ಗಿರಿಧರ್ ಇನ್ನಷ್ಟು ಜನರನ್ನು ಮರ ಕಡಿಯಲು ಕಳುಹಿಸುತ್ತಾನೆ.. ಆಗ ಎಲ್ಲಾ ಗ್ರಾಮಸ್ಥರೂ ಒಂದೊಂದು ಮರವನ್ನು ತಬ್ಬಿ ನಿಲ್ಲುತ್ತಾರೆ. ಮರದೊಂದಿಗೆ ಅವರ ತಲೆಗಳೂ ಉರುಳುತ್ತವೆ. ಮರ ಕಡಿಯುವವರೂ ಗ್ರಾಮಸ್ಥರ ನಡೆಯಿಂದ ದಿಗ್ಭ್ರಮೆಗೊಳ್ಳುತ್ತಾರೆ. ವಿಷಯ ತಿಳಿದ ಮಹಾರಾಜ ಮರ ಕಡಿಯುವುದನ್ನು ನಿಲ್ಲಿಸಲು ಆಜ್ಞೆ ಹೊರಡಿಸುತ್ತಾನೆ. ಆದರೆ ಅದಾಗಲೇ ೩೬೩ ಗ್ರಾಮಸ್ಥರ ತಲೆ ಉರುಳಿಹೋಗಿರುತ್ತದೆ.

೧೯೭೩ರಲಿ ಉತ್ತರಪ್ರದೇಶದಲ್ಲಿ ಸುಂದರಲಾಲ್ ಬಹುಗುಣ ಆರಂಭಿಸಿದ ಚಿಪ್ಕೋ ಚಳುವಳಿಗೆ ಅಮೃತಾದೇವಿಯ ಬಲಿದಾನವೇ ಸ್ಫೂರ್ತಿಯಾಯ್ತು. ಕನ್ನಡಲ್ಲಿಯೂ ಇದು ಅಪ್ಪಿಕೋ ಚಳುವಳಿಯಾಗಿ ಮುಂದುವರಿಯಿತು. ಕೇಜ್ರಾಲಿ ಗ್ರಾಮದಲ್ಲಿ ಅಂದು ಬಲಿದಾನಗೈದ ಗ್ರಾಮಸ್ಥರ ಹೆಸರಿನಲ್ಲಿ ಸ್ಮಾರಕವೊಂದನ್ನು ಕಟ್ಟಲಾಗಿದೆ. ಮತ್ತು ಅಂದು ಮಡಿದವರ ಹೆಸರುಗಳನ್ನು ಇಂದಿಗೂ ಜನ ನೆನಪು ಮಾಡಿಕೊಳ್ಳುತ್ತಿದ್ದಾರೆ.

ದಂತಕಥೆಯಂತೆ ಭಾಸವಾಗುವ ಅಮೃತಾದೇವಿಯಂಥವರ ತ್ಯಾಗ ಬಲಿದಾನದಿಂದ ಕೇಜ್ರಾಲಿಯಂತಹ ಹಲವಾರು ದೇವರ ಕಾಡುಗಳು ಇಂದು ಹಸಿರಿನಿಂದ ಕಂಗೊಳಿಸುತ್ತಿವೆ.

ಉಷಾ ಕಟ್ಟೆಮನೆ

ಪತ್ರಕರ್ತೆಯಾಗಿ, ಅದಕ್ಕೂ ಮೊದಲು ಕನ್ನಡ ಉಪನ್ಯಾಸಕಿಯಾಗಿ ಕೆಲಸ ಮಾಡಿದವರು. ದೃಶ್ಯ ಮಾಧ್ಯಮಕ್ಕಾಗಿಯೂ ಕೆಲಸ ಮಾಡಿದ ಅನುಭವ. ಆದರೆ ಅವರು ಪರಿಚಿತರಾಗಿರುವುದು ತಮ್ಮ ವಿಶಿಷ್ಟ ಸಂವೇದನೆಯ ಬರವಣಿಗೆಯಿಂದಾಗಿ. ಕೆಲ ವರ್ಷಗಳಿಂದ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ದೇಶ ಸುತ್ತುವುದೆಂದರೆ ಇವರಿಗೆ ಅತ್ಯಂತ ಇಷ್ಟ. ‘ಪಾರಿಜಾತದ ಬಿಕ್ಕಳಿಕೆ’ ಅವರ ಪ್ರಕಟಿತ ಕೃತಿ.

Share

Leave a comment

Your email address will not be published. Required fields are marked *

Recent Posts More

  • 6 days ago No comment

    ಕವಿಸಾಲು | ಒಲವಿನಾಟ

        ಕವಿಸಾಲು       ಶರದೃತು ತೂರಿದ ಪುಂಡ ಗಾಳಿಗೆ ಎಲೆಗಳೆಲ್ಲ ಹಾರಿ ಉದುರಿ ಮಳೆಗೆ, ಬಿಸಿಲ ಝಳಕ್ಕೆ ಒಡಲನೊಡ್ಡಿ ಹಾಡೋ ಹಕ್ಕಿಯ ಗೂಡು ಬರಿದು ಮೈಯ ಕೊಂಕಿಸಿ, ತಲೆಯ ಹೊರಳಿಸಿ ಚಳಿಯ ಮುಸುಕಿನಲ್ಲಿ ಕಂಪಿಸಿದ ಮರಕ್ಕೆ ಚಿಗುರ ಬಯಕೆಯ ನಸು ಪುಳಕ ಹಸಿರ ಉಸಿರಿನ, ಹಕ್ಕಿ ಹಾಡಿನ ಕನಸ ಹೊದಿಕೆಯ ಬಿಸಿ ಒಡಲು ತುಂಬಲು ಬಯಕೆಯಾಗಿ ಟೊಂಗೆ-ರೆಂಬೆಗಳಲಿ ಕವನ ಸದ್ದು ಗದ್ದಲವಿಲ್ಲದೆ ಇತ್ತ ಒಲವಿನೋಲೆಯ ...

  • 1 week ago No comment

    ಕವಿಸಾಲು | ನಕ್ಷತ್ರ ನಾವೆ

      ಕವಿಸಾಲು       ಮೋಡವೇ ಮನೆಯೊಳಗೆ ಇಳಿದಂತೆ ದಟ್ಟವಾದ ಹೊಗೆ ಮನೆಜಂತಿಗಳ ತುಂಬಾ ನೇತುಕೊಂಡಿದೆ ಚುಕ್ಕಿಗಳೇ ಮನೆಯ ಜಂತಿಗಳಲಿ ಯಾತ್ರೆ ಹೊರಟಂತೆ ಕಂಡರು ಮಿನುಕು ಹುಳುಗಳ ಹಾಗೆ ಚಿಮಣಿದೀಪದ ನೆರಳು ಸದಾ ಬೆನ್ನಿಗೆ ಗೋಡೆಗಳು ಅಕ್ಷರಶಃ ಬೂದಿಗುಡ್ಡದಂತೆ ಕಪ್ಪುಕಾಡಿಗೆಗಳ ಹಾಗೆ ಗೋಚರ ಬಾಗಿಲು ಕಿಟಕಿಗಳ ಮೂಲಕ ಬುಸುಗುಡುವ ಹೊಗೆ ಉಗಿಬಂಡಿಯ ಕಾಲಚಕ್ರದಲಿ ದಿನಗಳ ದೂಡಿದಂತೆ ಹೊಗೆಯ ಬೇಗೆಯಲಿ ಅವಳೆಂದೂ ಎದೆಗುಂದಲಿಲ್ಲ ಹಣೆಯ ಬೆವರಿನ ಗಟ್ಟಿ ತಾಜಾತನದ ...

  • 2 weeks ago No comment

    ಕಲರವ | ಒಂದು ಸಿನಿಮಾ ನೋಡಿದ ಕಥೆ…

        ಕಲರವ           “ಎರಡು ವರ್ಷಕ್ಕೊಮ್ಮೆ ಬರ್ತೀಯ, ಈ ಬಾರಿಯಾದರೂ ಒಂದು ಸಿನಿಮಾ ನೋಡು” ಎಂದಳು ಭಾರತದ ನನ್ನ ಅಕ್ಕ. “ಹೌದಲ್ಲವಾ” ಅಂತ ನಮ್ಮೂರಿನಲ್ಲಿ ನಡೆಯುತ್ತಿದ್ದ ಸಿನಿಮಾ ಪಟ್ಟಿ ನೋಡಿದೆ. ಪ್ರೀತಿ –ಪ್ರೇಮ, ಫೈಟಿಂಗ್ ಗಳ ಚಲನಚಿತ್ರವನ್ನು ನೋಡುವುದೆಂದರೆ, ‘ನೋಡಿದ್ದನ್ನೇ ನೋಡುವ’ ಕಷ್ಟ. ವೈಚಾರಿಕ ಸಿನಿಮಾಗಳು ಜಾಸ್ತಿ ಓಡದ ಕಾಲವಿದು. ಇನ್ನು ಸಾಂಸಾರಿಕ ಚಿತ್ರಗಳು ಬರುವುದು ನಿಂತ ಮೇಲೆ ಸಂಸಾರಗಳು ಒಟ್ಟಿಗೆ ...

  • 2 weeks ago No comment

    ಕವಿಸಾಲು | ಅಲೆಗಳೆದ್ದ ಕೊಳ…

        ಕವಿಸಾಲು         ಅಲೆಗಳೆದ್ದ ಕೊಳವಿದು, ಕಲ್ಲು ತೂರಿದ ಕಾಯಕವಷ್ಟೇ ನಿನ್ನದು ಎದ್ದ ಅಲೆಗಳ ಮೇಲಿಲ್ಲ ನಿನಗೆ ಇನಿತು ಅಧಿಕಾರವು ದೂರಿಲ್ಲ ನನ್ನಲ್ಲಿ, ಬೇಡಿಕೆ ತಾನೇ ಏಕೆ? ತುಂಬಿದ ಮನದಿ ಹೊಕ್ಕ ಹರ್ಷಕೆ ಪುರಾವೆಗಳ ಹಂಗಿಲ್ಲ, ನಕ್ಕ ನಗುವಿನಲಿ ನೋವಿಲ್ಲ, ತುಂಬಿವೆ ನೂರು ಭಾವಾರ್ಥ ಮುಚ್ಚಟೆಯಿಂದ ಬಚ್ಚಿಟ್ಟುಕೊಂಡು ಬೇಕಾದ ಪರಿಭಾಷೆಯಲಿ ದಿರಿಸಿಟ್ಟು ಸಿಂಗರಿಸಿ ನೋಡುತ್ತ ನಿನ್ನ ಅನುಪಸ್ಥಿತಿಯಲ್ಲೂ ಸಿಗುವ ಅನುಪಮ ಭಾವದಿ ದೊರಕಿದ್ದು ...

  • 3 weeks ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...


Editor's Wall

  • 31 August 2018
    3 weeks ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...

  • 30 August 2018
    3 weeks ago No comment

    ಕಾದಂಬಿನಿ ಕಾಲಂ | ತಮ್ಮ ಶವಪೆಟ್ಟಿಗೆಗೆ ತಾವೇ ಹೊಡೆದುಕೊಂಡ ಮೊದಲ ಮೊಳೆ

                        ಬಹುದೊಡ್ಡ ಪ್ರಜಾಪ್ರಭುತ್ವದ ಅಖಂಡ ಭಾರತವನ್ನು ಅಷ್ಟು ಸುಲಭವಾಗಿ ಸರ್ವಾಧಿಕಾರದ ಹಿಡಿತದಲ್ಲಿ ಬಂಧಿಸುವುದು ಸಾಧ್ಯವಿಲ್ಲ.   2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಕಳವಳಕಾರಿ ಘಟನಾವಳಿಗಳು ಜರುಗುತ್ತಾ ಈ ದೇಶದ ಪ್ರಜ್ಞಾವಂತ ನಾಗರೀಕರ ಕಣ್ಣೆದುರು ಭಯದ ನೆರಳು ಕವಿಯುವಂತೆ ಮಾಡುತ್ತಿವೆ. ದೇಶದೊಳಗೆ ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಸುಳ್ಳು ಸುದ್ಧಿ ಹಬ್ಬಿಸುವುದು, ಆತಂಕ ಸೃಷ್ಟಿಸುವುದು ಇನ್ನೂ ...

  • 26 August 2018
    3 weeks ago No comment

    ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

        ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.” ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ...

  • 26 August 2018
    4 weeks ago No comment

    ಕಡು ಭಯಂಕರ ಕತ್ತಲೊಳಗೆ ಅವಳಂಥ ಅದೆಷ್ಟು ಜೀವಗಳೊ!

      ಅವಳೊಳಗೀಗ ಕನಸುಗಳೇ ಇಲ್ಲ. ಮಿಂಚು ಸ್ಫುರಿಸಬೇಕಿದ್ದ ಕಣ್ಣುಗಳಲ್ಲಿ ನಾಳೆಗಳನ್ನು ಚಿಂತಿಸುವ ಯಾತನೆ ಮಾತ್ರವೇ ಸರಿದಾಡುತ್ತಿದೆ.       ಒಂದು ವರದಿಯ ಪ್ರಕಾರ, ಕಳೆದ ಏಪ್ರಿಲ್ ಹೊತ್ತಿಗೆ ಹತ್ತಿರ ಹತ್ತಿರ ಏಳು ಲಕ್ಷದಷ್ಟು ರೋಹಿಂಗ್ಯಾಗಳು ಬಾಂಗ್ಲಾದೇಶದೊಳಕ್ಕೆ ಸೇರಿಕೊಂಡಿದ್ದಾರೆ. ಅವರಲ್ಲಿ ಅರ್ಧಕ್ಕರ್ಧದಷ್ಟು ಮಕ್ಕಳೇ. ಆ ಮಕ್ಕಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ದಮನಿತರು. ಆ ಮಕ್ಕಳ – ಅದರಲ್ಲೂ ಹೆಣ್ಣುಮಕ್ಕಳ ಬದುಕು ಎಂಥ ನರಕಮಯ ಎಂಬುದನ್ನು ...

  • 23 August 2018
    4 weeks ago No comment

    ಕಾದಂಬಿನಿ ಕಾಲಂ | ದುರ್ಬಲ ಗಳಿಗೆಗಳನ್ನೇ ಹೊಂಚುವ ಹದ್ದುಗಣ್ಣುಗಳೆದುರು ಹೆಣ್ಣು ದೇಹ

                        ಲೋಕದ ನೀತಿಯೇ ಅದಲ್ಲವೇ? ತನ್ನ ಮೂಗಿನ ನೇರಕ್ಕೆ ನ್ಯಾಯ ವಿತರಿಸುವುದು ಮತ್ತು ದುರ್ಬಲರನ್ನೇ ಅಲ್ಲವೇ ಬಲಿಗಂಬಕ್ಕೇರಿಸುವುದು?   ‘ಟೈಟಾನಿಕ್’ ಎನ್ನುವುದು ವಿಕೋಪದ ಸಂದರ್ಭದಲ್ಲಿ ಬಲಿಷ್ಠರ ಕೈ ಹೇಗೆ ಮೇಲಾಗುತ್ತದೆನ್ನುವುದಕ್ಕೆ ಒಂದು ಸಶಕ್ತ ರೂಪಕ. ಅಂಥಲ್ಲಿ ಕೆಳಗಿನವರನ್ನು ತುಳಿಯುವ, ಅವರ ಸವಲತ್ತುಗಳನ್ನು ಕಬಳಿಸಲು ಹವಣಿಸುವ ವಿಕರಾಳ ಆಟವೊಂದು ನಿರಾತಂಕವಾಗಿ ಜರುಗುತ್ತದೆ. ನೆನ್ನೆ ರಾತ್ರಿ ಒಬ್ಬ ಯುವಕ ...