Share

ಘನತೆಯುಕ್ತ ಸಾವಿನ ಪ್ರಶ್ನೆ!
ಸಂಪಾದಕ

 

 

ಸಾವಿನ ಬಗೆಗಿನ ಭಯಕ್ಕಿಂತ, ಸಾವಿನ ಸಮೀಪದಲ್ಲಿ ಅಸಹಾಯಕರಾಗಿಬಿಡುತ್ತೇವೇನೋ ಎಂಬ ಭಯ ನಿಜಕ್ಕೂ ಎದೆ ನಡುಗಿಸುವಂಥದ್ದು.

 

 

ಯಾಮರಣದ ವಿಷಯವಾಗಿ ಮಹತ್ವದ ತೀರ್ಪು ಕೊಟ್ಟಿರುವ ಸುಪ್ರೀಂ ಕೋರ್ಟ್, ಘನತೆಯಿಂದ ಸಾಯುವ ಹಂಬಲವನ್ನು ಬೆಂಬಲಿಸಿದೆ. ಯಾರಿಗೂ ಭಾರವಾಗದೆ ಸಾಯಬೇಕೆಂಬ ಇಂಗಿತವನ್ನು ಮೂಲಭೂತ ಹಕ್ಕೆಂದು ಅದು ಪರಿಗಣಿಸಿದೆ.

ಈ ತೀರ್ಪಿನಂತೆ, ಜೀವಚ್ಛವ ಸ್ಥಿತಿಯಲ್ಲಿರುವ ವ್ಯಕ್ತಿಯ ದಯಾಮರಣಕ್ಕೆ ಮಾರ್ಗಸೂಚಿಯನ್ವಯ ಅನುವು ಸಿಗಲಿದೆ. ಇದಕ್ಕಾಗಿ ನೇಮಕಗೊಳ್ಳುವ ವೈದ್ಯಕೀಯ ಮಂಡಳಿಯ ಮಾತು ಇಲ್ಲಿ ನಿರ್ಣಾಯಕವಾಗುತ್ತದೆ. ಅದರ ಮೇರೆಗೇ ಮುಂದಿನ ಪ್ರಕ್ರಿಯೆಗಳು ಕಾರ್ಯಗತಗೊಳ್ಳಲು ಅವಕಾಶ. ಇದಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಕೊಟ್ಟಿದೆ.

ಸಾವು ಒಮ್ಮೆಲೆ ಬರದೆ, ಇಷ್ಟಿಷ್ಟೇ ಇಷ್ಟಿಷ್ಟೇ ಆವರಿಸುತ್ತ ಜೀವವೊಂದನ್ನು ಇನ್ನೊಬ್ಬರ ಹಂಗಿನಲ್ಲಿ ಬೀಳಿಸುವುದರ ಕುರಿತ ಕಲ್ಪನೆಯೂ ಕರಾಳ. ಅಂಥ ಸ್ಥಿತಿಯಿಂದ ಜೀವವನ್ನು ಕಠಿಣ ಕಾನೂನಿನ ನಜರಿನಡಿಯಲ್ಲೇ ಮುಕ್ತ ಮಾಡುವ ದಿಸೆಯಲ್ಲಿ ಸುಪ್ರೀಂ ಕೋರ್ಟ್ ಕೊಟ್ಟಿರುವುದು ಐತಿಹಾಸಿಕ ತೀರ್ಪು.

ಕೆಲ ತಿಂಗಳುಗಳ ಹಿಂದೆ ಕರುಳು ಹಿಂಡುವ ಸಂಗತಿಯೊಂದು ಮುಂಬೈನಿಂದ ವರದಿಯಾಗಿತ್ತು. 90 ದಾಟಿದ ವೃದ್ಧ ದಂಪತಿ ನಾಳೆ ತಾವು ಅನಾರೋಗ್ಯದಿಂದ ಹಾಸಿಗೆಗೆ ಬಿದ್ದು ಒಬ್ಬರನ್ನೊಬ್ಬರು ನೋಡಿಕೊಳ್ಳಲಿಕ್ಕಾಗದ ಪರಿಸ್ಥಿತಿ ಬಂದೀತೆಂಬ ಆತಂಕ ಮುಂದೆ ಮಾಡಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದ ಅತ್ಯಂತ ನೋವಿನ ವಿಚಾರ ಅದು. ಸಾವಿನ ಬಗೆಗಿನ ಭಯಕ್ಕಿಂತ, ಸಾವಿನ ಸಮೀಪದಲ್ಲಿ ಅಸಹಾಯಕರಾಗಿಬಿಡುತ್ತೇವೇನೋ ಎಂಬ ಭಯ ನಿಜಕ್ಕೂ ಎದೆ ನಡುಗಿಸುವಂಥದ್ದು.

ಬದುಕು ಮತ್ತು ಸಾವು ಒಂದರಿಂದ ಇನ್ನೊಂದನ್ನು ಪ್ರತ್ಯೇಕಿಸಲಾಗದಂಥವು. ಪ್ರತಿ ಕ್ಷಣವೂ ನಮ್ಮ ದೇಹದಲ್ಲಿ ಬದಲಾವಣೆಗಳಾಗುತ್ತ ಹೋಗುತ್ತವೆ ಮತ್ತು ಬದುಕನ್ನು ಅಂತಿಮವಾಗಿ ಆವರಿಸುವುದು ಸಾವೇ. ಸಾವೆಂಬುದು ಬದುಕುವ ಪ್ರಕ್ರಿಯೆಯ ಭಾಗವೇ ಹೌದು.

ಸಾವು ಯಾವುದೇ ಹಂತದಲ್ಲೂ ಅಮಾನವೀಯವಾಗಿ ಬದುಕನ್ನು ಕಾಡಬಹುದು. ಅಂಥ ಸ್ವರೂಪದ ಸಾವಿನ ಎದುರಲ್ಲಿ ವ್ಯಕ್ತಿಯ ದೀನ ಕಣ್ಣುಗಳಲ್ಲಿ ಕಾಣುವುದು, ಇದು ತಾನು ಬಯಸಿದ್ದಲ್ಲ ಎಂಬುದೊಂದೇ. ಬದುಕನ್ನು ಅಂಥ ಅನಪೇಕ್ಷಿತ, ನಿಕೃಷ್ಟ ಅಂಚಿಗೆ ಒಯ್ದುಬಿಡುವ ದುರ್ಭರ ಘಳಿಗೆ ಬೇಡವೆಂದೇ ಪ್ರತಿಯೊಬ್ಬರೂ ಬಯಸುತ್ತಾರೇನೊ. ಮತ್ತು ಸಾವಿನ ಭಯವೆಂಬುದೂ ಅದೇ ಆಗಿರಲು ಸಾಕು.

ನಾವ್ಯಾರೂ ಇನ್ನೊಬ್ಬರ ಸಾವು ಬಯಸಲಾರೆವು. ಉಸಿರು ಇರುವಾಗಲೇ ಇಲ್ಲವಾಗಿಸಿ ಮುಕ್ತರಾಗುವುದೂ ಸಾಧ್ಯವಿಲ್ಲ. ಆದರೆ ಹಾಸಿಗೆಯಲ್ಲಿ ಅಸಹಾಯಕನಾಗಿ ಬಿದ್ದ ವ್ಯಕ್ತಿಯ ಕಣ್ಣಲ್ಲಿನ ಘನತೆಗಾಗಿನ ಯಾಚನೆಗಿಂತ ದೊಡ್ಡ ಯಾತನೆಯೂ ಇರಲಾರದು. ಇದೊಂದು ವಿಲಕ್ಷಣ ಸಂಘರ್ಷ. ಈ ಸಂಘರ್ಷವೇ ನ್ಯಾಯಾಸ್ಥಾನದಲ್ಲೂ ಹಲವು ಕಾಲದಿಂದ ನಡೆದಿತ್ತು. ಅಂತಿಮವಾಗಿ ಘನತೆಯುಕ್ತ ಸಾವಿನ ಪ್ರಶ್ನೆಯನ್ನೇ ಕೋರ್ಟ್ ಎತ್ತಿಹಿಡಿದಿದೆ.

Share

Leave a comment

Your email address will not be published. Required fields are marked *

Recent Posts More

  • 2 days ago No comment

    ಈ ಸಂಜೆಯೊಳಗೆ

      ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

  • 5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 6 days ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 2 weeks ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

  • 15 August 2018
    5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    3 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    4 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...