Share

ಪರಿಧಿ
ಜಯಶ್ರೀ ದೇಶಪಾಂಡೆ

 

 

ಕವಿಸಾಲು

 

 

ಶೂನ್ಯವೋ ನಿರ್ವಾತವೋ
ಯಾವುದಾದರೊಂದಿರಲಿ
ನಮ್ಮಿಬ್ಬರ ನಡುವೆ,
ಒಟ್ಟಿನಲ್ಲಿ ಒಂದವಕಾಶ ಉಸಿರಾಡಲು…

ಬಿಟ್ಟು ಬಿಟ್ಟೆವಲ್ಲ ಉಸಿರುಗಟ್ಟಲು, ಅದಕೊಂದು ಮಾರ್ಕಿರಲಿ!

ಬಿಗಿದು ನರಗಳ ಮಸ್ತಿಷ್ಕ ಸಿಡಿಯುವ ಮೊದಲು ಕಪ್ಪನೆಯ ಆಕಾಶವ ನಡುವಿಟ್ಟುಕೊಂಡುಬಿಡೋಣ..
ಏನೂ ಕಾಣದಂತೆ!

ಯಾವುದೋ ಜನ್ಮ ಶುರು ಹಚ್ಚಿದ್ದ
ನಮ್ಮ ನಂಟು
ಏಳು ಸಮುದ್ರ, ಆರುಕೋಟೆ
ಇನ್ನಷ್ಟು ಗಿರಿಕಾನನ, ತೊರೆಗಿರೆಗಳ
ಹಾಯುತ್ತ ಹಾಡ ಗುನುಗಿ ಬಂತೆಂಬ ಭ್ರಮೆ…
ಕಿತ್ತು ಕೊಳೆಗಟ್ಟುವ ಮೊದಲು
ಇಲ್ಲೊಂದು ಕದನವಿರಾಮಕ್ಕೆ
ನಾಂದಿಯ ಹಿಟ್ಟಿನ ಕಟ್ಟೆ ಕಟ್ಟೋಣ!

ನನ್ನೊಳಗೆ ನಿನಗೂ, ನಿನ್ನಲ್ಲಿ ನನಗೂ ಇದ್ದ ಪರಕಾಯ ಪ್ರವೇಶದ
ದಾರಿ ದ್ವಾರಗಳ ನಿಬ೯ಂಧಿಸಿ
ನಾವೇನಾವಾಗೋಣ

ಕೆಲ ಕಾಲ….

ಅಲ್ಲಿ ಹಿಂದಿರುಗಿದ ಲೋಕ
ತನ್ಮಯತೆ-
ಯ ತಾನಗಳ ಮಧ್ಯ
ಇದುವರೆಗಿಟ್ಟ ಹೆಜ್ಜೆಗಳ ಹಿಂದಿರುಗಿ ನೋಡೋಣ…
ಅದೇ ಪರಾಗಸ್ಪರ್ಶಕ್ಕೆ
ಕಾದ ಹೂ ನಾನಾಗಿದ್ದರೆ ಅಥವಾ
ನನ್ನನ್ನೇ ಅರಸಿ ಸುತ್ತಿ ಸುಳಿವ ಭೃಂಗ
ನೀನಾಗಿದ್ದರೆ..

ಖಂಡಿತ ಆ ಮೊದಲಿನ ಪರಕಾಯ ಪ್ರವೇಶ ನಮ್ಮಲ್ಲಿ !
ಯಾಕೆ ಹೇಳಲೇ??
ಜನ್ಮಾಂತರಗಳ ದಾಟಿ ಬಂದಾಯ್ತು ನಾವು, ಹಳತು ಕಳಚಿ ಹೊಸ ಪರೆ ಬೆಳೆದಾಯ್ತು.
ಇನ್ನೀಗ- ಇಂದಿಗೆ
ಅದೇ ದಕ್ಕಲಿ ನಮಗೆ, ಸೊನ್ನೆಯೋ
ಶೂನ್ಯವೋ, ನಿರ್ವಾತವೋ ಯಾವುದೋ ಒಂದು!

ಜಯಶ್ರೀ ದೇಶಪಾಂಡೆ

ಉತ್ತರ ಕರ್ನಾಟಕದ ವಿಜಯಪುರದವರು. ತಮ್ಮ ವಿಶಿಷ್ಟ ಶೈಲಿಯ ಕಥೆ, ಕಾದಂಬರಿಗಳ ಮೂಲಕ ಚಿರಪರಿಚಿತರು. ಪದ್ಮಿನಿ, ಮೂರನೆಯ ಹೆಜ್ಜೆ, ರೇಖೆಗಳ ನಡುವೆ ಇವರ ಕಥಾ ಸಂಕಲನಗಳು. ಕಾಲಿಂದಿ, ಚಕ್ರವಾತ, ಕೆಂಪು ಹಳದಿ ಹಸಿರು, ಬೇವು, ದೂರ ದಾರಿಯ ತೀರ, ಸರಸ್ವತಿ ಕಾಯದ ದಿನವಿಲ್ಲ, ಧರಾಶಯ್ಯಿ ಕಾದಂಬರಿಗಳು. ಹಾಸ್ಯಪ್ರಬಂಧಗಳನ್ನೂ ಬರೆದಿದ್ದು, ಹೌದದ್ದು ಅಲ್ಲ ಅಲ್ಲದ್ದು ಹೌದು ಎಂಬ ಸಂಕಲನ ಪ್ರಕಟಿಸಿದ್ದಾರೆ. ಅತ್ತಿಮಬ್ಬೆ ಪ್ರಶಸ್ತಿ, ಗೊರೂರು ಪ್ರತಿಷ್ಠಾನದ ಶ್ರೇಷ್ಠ ಪುಸ್ತಕ ಪ್ರಶಸ್ತಿಗಳು ಬಂದಿವೆ. ಪ್ರಥಮ್ ಬುಕ್ಸ್ ಸ೦ಸ್ಥೆಯವರ ಮಕ್ಕಳ ಕಥಾಮಾಲಿಕೆ ಯೋಜನೆಯಡಿಯಲ್ಲಿ ಇವರ ಸ್ವ೦ತ ರಚನೆ ಹಾಗೂ ಮರಾಠಿ, ಇ೦ಗ್ಲಿಷ್ ಭಾಷೆಗಳಿ೦ದ ಭಾವಾನುವಾದ ಮಾಡಿದ ಐವತ್ತಕ್ಕೂ ಹೆಚ್ಚು ಪುಸ್ತಕಗಳು ಪ್ರಕಟವಾಗಿವೆ. ‘ಅಕ್ಷರ ಪ್ರತಿಷ್ಠಾನ’ದ ಕಲಿಕಾ ಏಣಿ ಎ೦ಬ ಮಕ್ಕಳ ಶೈಕ್ಷಣಿಕ ಪುಸ್ತಕ ಪ್ರಕಟಣೆಯಲ್ಲೂ ಕೆಲಸ. ಆಕಾಶವಾಣಿ, ದೂರದರ್ಶನ ಮತ್ತು ಉದಯ ವಾಹಿನಿಗಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ.

Share

One Comment For "ಪರಿಧಿ
ಜಯಶ್ರೀ ದೇಶಪಾಂಡೆ
"

  1. Jayashree
    27th March 2018

    ತುಂಬು ಧನ್ಯವಾದಗಳು.

    Reply

Leave a comment

Your email address will not be published. Required fields are marked *

Recent Posts More

  • 2 weeks ago No comment

    ಕವಿಸಾಲು | ಇಂಡೋನೇಶಿಯಾ

        ಕವಿಸಾಲು         ಕಿಚ್ಚೆದ್ದು ಕುಣಿವ ನೀರು ಬಿರುಗಾಳಿ ತುಂಬಿದ ಒಡಲು ಎತ್ತೊಯ್ದು ಬಿಸಾಡಿ ಇಳೆಗೆ ಎದೆಯಿಳಿಸಿದೆ ಕಡಲು ನಡುಗಿಬಿಟ್ಟಳೆ ವಸುಂಧರೆ ಶತಕೋಟಿ ಬಿರುಕು ಬಿಟ್ಟು ಸುನಾಮಿಯ ಕೋಪಕ್ಕೆ ವಿಕಾರವಾಗಿ ಬೊಬ್ಬಿರಿದು ಊಳಿಟ್ಟು ಜೀವ ಜಲ, ಉಸಿರ ಗಾಳಿ ಹುಚ್ಚೆದ್ದು ಕುಣಿದು ಅಪ್ಪಳಿಸಿದ ಆಘಾತಕ್ಕೆ ಕಂಗೆಟ್ಟು ತತ್ತರಿಸಿವೆ ಪ್ರಾಣಿ, ಮನುಜ ಕುಲ ಮಾಡು ಹಾರಿ, ಕಂಬಗಳು ಕುಸಿದು ನೆಲಕಚ್ಚಿವೆ ಮಾನವನ ಬೀಡು ಕತ್ತರಿಸಿ ...

  • 2 weeks ago No comment

    ಕವಿಸಾಲು | ತಡವಿಲ್ಲದಿರಲಿ ಇನ್ನು…

        ಕವಿಸಾಲು         ದಾಳಿಗಳಿಗೆ ಮುಕ್ಕಾದ ಮಂದಿರವಿದು ಕುಸಿದು ಕುಳಿತ ದ್ವಾರಪಾಲಕರು ಎತ್ತರದ ಗೋಡೆಗಳ, ಎಚ್ಚರಿಕೆಯ ಗಂಟೆಗಳು ಕೂಡ ಮೌನವಿಂದು ಮನ ನಿರ್ಮಿಸಿದ ಹೆಬ್ಬಾಗಿಲುಗಳು ಒಲವ ಸಿರಿಗೆ ಚೇತರಿಸಿ ತೆರೆದ ಗಳಿಗೆ ಎತ್ತರದ ಹೊಸ್ತಿಲುಗಳ ತಡೆಯ ದಾಟಿ ತಲುಪಬೇಕಿದೆಯಷ್ಟೆ ಬಯಕೆ ಗುರಿಯನ್ನು ದಟ್ಟ ಹಸಿರಿನ ಕಾಡು, ಆಗಸದ ನೀಲಿ ಬಿಳಿಯ ಮೋಡಗಳ, ಬಿಸಿಲ ಬೆಳಕಿನ ನಡುವೆ ಬಯಲ ಸ್ವೇಚ್ಛೆಯ, ತಿಳಿಗಾಳಿ ತವಕದಲಿ ಬಂಧನಗಳ ...

  • 1 month ago No comment

    ಸ್ವಿಟ್ಜರ್ಲ್ಯಾಂಡಿನ ಕಣ್ಮಣಿ – ಲ್ಯೂಸರ್ನ್

        ನಾನಾ ಆಕರ್ಷಣೆಗಳಿರುವ ಈ ನಗರ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ. ಸ್ವಲ್ಪವೂ ಬೇಸರ ತರಿಸದ ಸುಂದರ ಸ್ವಿಸ್ ನಗರಿ.         “ನಾಳೆ ಸ್ವಿಟ್ಜರ್ಲ್ಯಾಂಡ್” ಎಂದ ಕೂಡಲೇ ಬಸ್ಸಿನಲ್ಲಿ ಹರ್ಷೋದ್ಗಾರ! ಯೂರೋಪಿನ ಪ್ರವಾಸದಲ್ಲಿದ್ದ ನಮಗೆಲ್ಲ ಸ್ವಿಟ್ಜರ್ಲ್ಯಾಂಡ್ ಹೆಸರು ಇಂಪಾಗಿ ಕೇಳಿಸಲು ಕಾರಣಗಳು ಹಲವು. ಮೈಲುಗಟ್ಟಲೆ ಹಸಿರು ನೆಲ, ಹಚ್ಚಹಸಿರು ತುಂಬಿದ ಬೆಟ್ಟಗಳು, ಪರ್ವತಗಳಲ್ಲಿನ ಹಿಮ ಕರಗಿ ಜುಳಜುಳನೆ ಹರಿವ ತಿಳಿ ಬೂದು, ಬಿಳಿ ಬಣ್ಣದ ...

  • 1 month ago No comment

    ಕವಿಸಾಲು | ಒಲವಿನಾಟ

        ಕವಿಸಾಲು       ಶರದೃತು ತೂರಿದ ಪುಂಡ ಗಾಳಿಗೆ ಎಲೆಗಳೆಲ್ಲ ಹಾರಿ ಉದುರಿ ಮಳೆಗೆ, ಬಿಸಿಲ ಝಳಕ್ಕೆ ಒಡಲನೊಡ್ಡಿ ಹಾಡೋ ಹಕ್ಕಿಯ ಗೂಡು ಬರಿದು ಮೈಯ ಕೊಂಕಿಸಿ, ತಲೆಯ ಹೊರಳಿಸಿ ಚಳಿಯ ಮುಸುಕಿನಲ್ಲಿ ಕಂಪಿಸಿದ ಮರಕ್ಕೆ ಚಿಗುರ ಬಯಕೆಯ ನಸು ಪುಳಕ ಹಸಿರ ಉಸಿರಿನ, ಹಕ್ಕಿ ಹಾಡಿನ ಕನಸ ಹೊದಿಕೆಯ ಬಿಸಿ ಒಡಲು ತುಂಬಲು ಬಯಕೆಯಾಗಿ ಟೊಂಗೆ-ರೆಂಬೆಗಳಲಿ ಕವನ ಸದ್ದು ಗದ್ದಲವಿಲ್ಲದೆ ಇತ್ತ ಒಲವಿನೋಲೆಯ ...

  • 1 month ago No comment

    ಕವಿಸಾಲು | ನಕ್ಷತ್ರ ನಾವೆ

      ಕವಿಸಾಲು       ಮೋಡವೇ ಮನೆಯೊಳಗೆ ಇಳಿದಂತೆ ದಟ್ಟವಾದ ಹೊಗೆ ಮನೆಜಂತಿಗಳ ತುಂಬಾ ನೇತುಕೊಂಡಿದೆ ಚುಕ್ಕಿಗಳೇ ಮನೆಯ ಜಂತಿಗಳಲಿ ಯಾತ್ರೆ ಹೊರಟಂತೆ ಕಂಡರು ಮಿನುಕು ಹುಳುಗಳ ಹಾಗೆ ಚಿಮಣಿದೀಪದ ನೆರಳು ಸದಾ ಬೆನ್ನಿಗೆ ಗೋಡೆಗಳು ಅಕ್ಷರಶಃ ಬೂದಿಗುಡ್ಡದಂತೆ ಕಪ್ಪುಕಾಡಿಗೆಗಳ ಹಾಗೆ ಗೋಚರ ಬಾಗಿಲು ಕಿಟಕಿಗಳ ಮೂಲಕ ಬುಸುಗುಡುವ ಹೊಗೆ ಉಗಿಬಂಡಿಯ ಕಾಲಚಕ್ರದಲಿ ದಿನಗಳ ದೂಡಿದಂತೆ ಹೊಗೆಯ ಬೇಗೆಯಲಿ ಅವಳೆಂದೂ ಎದೆಗುಂದಲಿಲ್ಲ ಹಣೆಯ ಬೆವರಿನ ಗಟ್ಟಿ ತಾಜಾತನದ ...


Editor's Wall

  • 31 August 2018
    2 months ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...

  • 30 August 2018
    2 months ago No comment

    ಕಾದಂಬಿನಿ ಕಾಲಂ | ತಮ್ಮ ಶವಪೆಟ್ಟಿಗೆಗೆ ತಾವೇ ಹೊಡೆದುಕೊಂಡ ಮೊದಲ ಮೊಳೆ

                        ಬಹುದೊಡ್ಡ ಪ್ರಜಾಪ್ರಭುತ್ವದ ಅಖಂಡ ಭಾರತವನ್ನು ಅಷ್ಟು ಸುಲಭವಾಗಿ ಸರ್ವಾಧಿಕಾರದ ಹಿಡಿತದಲ್ಲಿ ಬಂಧಿಸುವುದು ಸಾಧ್ಯವಿಲ್ಲ.   2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಕಳವಳಕಾರಿ ಘಟನಾವಳಿಗಳು ಜರುಗುತ್ತಾ ಈ ದೇಶದ ಪ್ರಜ್ಞಾವಂತ ನಾಗರೀಕರ ಕಣ್ಣೆದುರು ಭಯದ ನೆರಳು ಕವಿಯುವಂತೆ ಮಾಡುತ್ತಿವೆ. ದೇಶದೊಳಗೆ ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಸುಳ್ಳು ಸುದ್ಧಿ ಹಬ್ಬಿಸುವುದು, ಆತಂಕ ಸೃಷ್ಟಿಸುವುದು ಇನ್ನೂ ...

  • 26 August 2018
    2 months ago No comment

    ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

        ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.” ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ...

  • 26 August 2018
    2 months ago No comment

    ಕಡು ಭಯಂಕರ ಕತ್ತಲೊಳಗೆ ಅವಳಂಥ ಅದೆಷ್ಟು ಜೀವಗಳೊ!

      ಅವಳೊಳಗೀಗ ಕನಸುಗಳೇ ಇಲ್ಲ. ಮಿಂಚು ಸ್ಫುರಿಸಬೇಕಿದ್ದ ಕಣ್ಣುಗಳಲ್ಲಿ ನಾಳೆಗಳನ್ನು ಚಿಂತಿಸುವ ಯಾತನೆ ಮಾತ್ರವೇ ಸರಿದಾಡುತ್ತಿದೆ.       ಒಂದು ವರದಿಯ ಪ್ರಕಾರ, ಕಳೆದ ಏಪ್ರಿಲ್ ಹೊತ್ತಿಗೆ ಹತ್ತಿರ ಹತ್ತಿರ ಏಳು ಲಕ್ಷದಷ್ಟು ರೋಹಿಂಗ್ಯಾಗಳು ಬಾಂಗ್ಲಾದೇಶದೊಳಕ್ಕೆ ಸೇರಿಕೊಂಡಿದ್ದಾರೆ. ಅವರಲ್ಲಿ ಅರ್ಧಕ್ಕರ್ಧದಷ್ಟು ಮಕ್ಕಳೇ. ಆ ಮಕ್ಕಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ದಮನಿತರು. ಆ ಮಕ್ಕಳ – ಅದರಲ್ಲೂ ಹೆಣ್ಣುಮಕ್ಕಳ ಬದುಕು ಎಂಥ ನರಕಮಯ ಎಂಬುದನ್ನು ...

  • 23 August 2018
    2 months ago No comment

    ಕಾದಂಬಿನಿ ಕಾಲಂ | ದುರ್ಬಲ ಗಳಿಗೆಗಳನ್ನೇ ಹೊಂಚುವ ಹದ್ದುಗಣ್ಣುಗಳೆದುರು ಹೆಣ್ಣು ದೇಹ

                        ಲೋಕದ ನೀತಿಯೇ ಅದಲ್ಲವೇ? ತನ್ನ ಮೂಗಿನ ನೇರಕ್ಕೆ ನ್ಯಾಯ ವಿತರಿಸುವುದು ಮತ್ತು ದುರ್ಬಲರನ್ನೇ ಅಲ್ಲವೇ ಬಲಿಗಂಬಕ್ಕೇರಿಸುವುದು?   ‘ಟೈಟಾನಿಕ್’ ಎನ್ನುವುದು ವಿಕೋಪದ ಸಂದರ್ಭದಲ್ಲಿ ಬಲಿಷ್ಠರ ಕೈ ಹೇಗೆ ಮೇಲಾಗುತ್ತದೆನ್ನುವುದಕ್ಕೆ ಒಂದು ಸಶಕ್ತ ರೂಪಕ. ಅಂಥಲ್ಲಿ ಕೆಳಗಿನವರನ್ನು ತುಳಿಯುವ, ಅವರ ಸವಲತ್ತುಗಳನ್ನು ಕಬಳಿಸಲು ಹವಣಿಸುವ ವಿಕರಾಳ ಆಟವೊಂದು ನಿರಾತಂಕವಾಗಿ ಜರುಗುತ್ತದೆ. ನೆನ್ನೆ ರಾತ್ರಿ ಒಬ್ಬ ಯುವಕ ...