Share

‘ಹೆಣ್ಣನ್ನು ದಲಿತ ಗಂಡಸರು ನೋಡುವುದೂ ಲಿಂಗತರತಮದ ಕಣ್ಣಿಂದಲೇ!’
ಮರಾಠಿ ಕವಯಿತ್ರಿ ಪ್ರದ್ನ್ಯಾ ಪವಾರ್

ವ್ಯವಸ್ಥೆಯನ್ನು ಆಳುವ ಗಂಡಸರು ಮಹಿಳೆಯರನ್ನು ನೋಡುವ ದೃಷ್ಟಿ, ಅವರೆಲ್ಲ ತಾವು ಹೇಗೆ ಬೇಕಾದರೂ ಬಳಸಿಕೊಳ್ಳುವುದಕ್ಕಿರುವ ಸ್ವಂತ ಆಸ್ತಿ ಎಂಬುದೇ ಆಗಿದೆ.

 

“ಹೆಣ್ಣೆಂದರೆ ಲಿಂಗತರತಮ ದೃಷ್ಟಿಯಿಂದ ನೋಡುವುದರಲ್ಲಿ ದಲಿತ ಗಂಡಸರೂ ಬೇರೆ ಗಂಡಸರ ಹಾಗೆಯೇ” ಎನ್ನುತ್ತಾರೆ ಮರಾಠಿಯ ಖ್ಯಾತ ದಲಿತ ಕವಯತ್ರಿ ಪ್ರದ್ನ್ಯಾ ಪವಾರ್.

ಮರಾಠಿ ಲೇಖಕ, ಆತ್ಮಕಥೆ ಬರೆದ ಮೊದಲ ದಲಿತ ಬರಹಗಾರನೆಂಬ ಹೆಗ್ಗಳಿಕೆಯಿರುವ ದಯಾ ಪವಾರ್ ಅವರ ಪುತ್ರಿ ಪ್ರದ್ನ್ಯಾ ಪವಾರ್, ‘ಲೈವ್ ಮಿಂಟ್‍’ಗೆ ಕೊಟ್ಟಿರುವ ಸಂದರ್ಶನದಲ್ಲಿ ಈ ಮಾತು ಹೇಳಿದ್ದಾರೆ. “ತಮ್ಮನ್ನು ತಾವು ಪ್ರಗತಿಪರರು, ಸುಧಾರಕರು ಎಂದು ಕರೆದುಕೊಳ್ಳುವ ಬಹಳಷ್ಟು ದಲಿತ ಗಂಡಸರು – ಅವರಲ್ಲಿ ಅನೇಕರು ಪ್ರಾಮಾಣಿಕರೂ ಹೌದು – ಹೆಣ್ಣಿನ ವಿಚಾರದಲ್ಲಿ ಲಿಂಗತಾರತಮ್ಯ ದೃಷ್ಟಿಯಿಂದಲೇ ವರ್ತಿಸುತ್ತಾರೆ. ಇದರ ಬಗ್ಗೆ ಇತರ ದಲಿತ ಲೇಖಕಿಯರು ದಾಖಲಿಸಿರುವುದಿದೆ” ಎಂದಿದ್ದಾರೆ.

“ಲಿಂಗತಾರತಮ್ಯದ ಕಾರಣದಿಂದಾಗಿಯೇ ಇವತ್ತು ಹೆಣ್ಣಿನೆದುರು ಹಲವಾರು ಆತಂಕಗಳಿವೆ. ಜಾಗತೀಕರಣದ ಈ ದಿನಗಳಲ್ಲಿ ಆರ್ಥಿಕ ಸರಕಿನಂತೆ ಬಂಡವಾಳಶಾಹಿ ಶಕ್ತಿಗಳಿಂದ ಶೋಷಣೆಗೊಳಗಾಗುವುದು ಒಂದು ಬಗೆಯದ್ದಾದರೆ, ಸಮಾಜ ಮತ್ತು ಸಮುದಾಯದೊಳಗಡೆ ಜಾತಿವ್ಯವಸ್ಥೆಯ ಹಂಗಿನಲ್ಲಿ ಸಾಮಾಜಿಕ, ಸಾಮುದಾಯಿಕ, ಸಾಂಸ್ಕೃತಿಕ ಮತ್ತು ವೈಯಕ್ತಿಕ ಹೀಗೆ ಹಲವು ಅರ್ಥಗಳು ಮತ್ತು ಆಯಾಮಗಳಲ್ಲಿ ಆಕ್ರಮಿಸುವ ಆತಂಕಗಳು ಮತ್ತೊಂದು ಬಗೆಯವು.

“ನಿಶ್ಚಿತವಾಗಿಯೂ ದಲಿತ ಮಹಿಳೆಯೊಬ್ಬಳು ಬಲಿಪಶುವಾಗುವುದು, ದಬ್ಬಾಳಿಕೆಗೆ ಒಳಗಾಗುವುದು ಹಲವು ಪಾತಳಿಗಳಲ್ಲಿ. ಮತ್ತಿದು ಆಕೆಯ ಸಾಮಾಜಿಕ, ಬೌದ್ಧಿಕ ಮತ್ತು ಆರ್ಥಿಕ ಸ್ಥಿತಿಗೆ ಅನುಗುಣವಾಗಿರುತ್ತದೆ. 28 ವರ್ಷ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿದ ನಾನು ಒಬ್ಬ ದಲಿತ ವ್ಯಕ್ತಿಯಾಗಿ, ಒಬ್ಬ ಮಹಿಳೆಯಾಗಿ ಮತ್ತು ಒಬ್ಬ ದಲಿತ ಮಹಿಳೆಯಾಗಿ ತಾರತಮ್ಯದ ಹಲವು ಪದರಗಳನ್ನು ಅನುಭವಿಸಿದ್ದೇನೆ” ಎನ್ನುತ್ತಾರೆ ಪ್ರದ್ನ್ಯಾ.

“ನಾನು ಕಂಡಂತೆ ದಲಿತ ಮಹಿಳೆಯರು ಮಾತ್ರವಲ್ಲ, ಇಡೀ ಮಹಿಳಾ ಸಮುದಾಯವೇ ದಬ್ಬಾಳಿಕೆ, ದೌರ್ಜನ್ಯ, ರಾಜಕೀಯ ಚಳವಳಿಗಳು, ಯುದ್ಧ ಇಂಥ ಎಲ್ಲವುಗಳ ಅತಿ ದುರ್ಬಲ ಗುರಿಯಾಗಿದೆ. ಇತಿಹಾಸದುದ್ದಕ್ಕೂ ಕಾಣಿಸುವ ಸತ್ಯ ಇದೇ. 2006ರಲ್ಲಿ ಮಹಾರಾಷ್ಟ್ರದ ಖೈರ್ಲಾಂಜಿಯಲ್ಲಿ ದಲಿತ ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ಮಾಡಿ ಕೊಂದಲ್ಲಿಂದ ಹಿಡಿದು ಉನ್ನಾವೋ ಅತ್ಯಾಚಾರ ಪ್ರಕರಣದವರೆಗೆ, ಜಮ್ಮು-ಕಾಶ್ಮೀರದ ಕತುವಾದಲ್ಲಿ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯವರೆಗೆ ನಮಗೆ ಕಾಣಿಸುವುದು ಮಹಿಳೆಯರ ವಿರುದ್ಧದ ಅತ್ಯಂತ ಹೇಯ ದೌರ್ಜನ್ಯಗಳೇ. ಮಹಿಳೆಯರ ಮೇಲಿನ ಹಿಂಸಾಚಾರಕ್ಕೂ ಹಲವು ಪದರಗಳಿವೆ. ಖೈರ್ಲಾಂಜಿಯಲ್ಲಿ ಆದದ್ದು ಆ ಮಹಿಳೆಯರು ದಲಿತರಾಗಿದ್ದ ಕಾರಣಕ್ಕಾಗಿ. ಕತುವಾದಲ್ಲಿ ಬಾಲಕಿಯ ಬಲಿಯಾದದ್ದು ಆಕೆ ಮುಸ್ಲಿಂಳಾಗಿದ್ದುದರಿಂದ. ಆದರೆ ಉನ್ನಾವೋ ಪ್ರಕರಣದ ಸಂತ್ರಸ್ತೆ ಹಿಂದೂ ಮಹಿಳೆ. ಅಂದರೆ ವ್ಯವಸ್ಥೆಯನ್ನು ಆಳುವ ಗಂಡಸರು ಮಹಿಳೆಯರನ್ನು ನೋಡುವುದೇ ಅವರೆಲ್ಲ ತಾವು ಹೇಗೆ ಬೇಕಾದರೂ ಬಳಸಿಕೊಳ್ಳುವುದಕ್ಕಿರುವ ಸ್ವಂತ ಆಸ್ತಿ ಎಂಬ ದೃಷ್ಟಿಯಿಂದಲೇ.”

ಇವತ್ತಿನ ದಲಿತ ರಾಜಕಾರಣದ ಬಗ್ಗೆಯೂ ಮಾತನಾಡಿರುವ ಪ್ರದ್ನ್ಯಾ, ಆಶಾವಾದ ವ್ಯಕ್ತಪಡಿಸುತ್ತಾರೆ. ಜಿಗ್ನೇಶ್ ಮೇವಾನಿಯಂಥ ಯುವ ರಾಜಕೀಯ ನಾಯಕರು ತಮ್ಮ ರಾಜಕೀಯ ತಳಪಾಯವನ್ನು ದಲಿತರು, ಹಿಂದುಳಿದವರು, ರೈತರು, ಕಾರ್ಮಿಕರು ಮತ್ತು ಮಹಿಳೆಯರ ಒಗ್ಗೂಡುವಿಕೆಯ ಮೇಲೆ ಕಟ್ಟಹೊರಟಿರುವ ನಡೆಯ ಬಗ್ಗೆ ಅವರಿಗೆ ಅಪಾರ ನಿರೀಕ್ಷೆಗಳಿವೆ. “ದಲಿತರು, ರೈತರು, ವಿದ್ಯಾರ್ಥಿಗಳು, ಮಹಿಳೆಯರು, ಕಾರ್ಮಿಕರೆಲ್ಲರ ಸಾಮಾನ್ಯ ಶತ್ರು ಯಾರೆಂಬುದನ್ನು ಮೇವಾನಿ, ಪ್ರಕಾಶ್ ಅಂಬೇಡ್ಕರ್ ಥರದ ನಾಯಕರು ಗುರುತಿಸಿದ್ದಾರೆ ಮತ್ತು ಶತ್ರುವಿನ ವಿರುದ್ಧ ಎಲ್ಲರೂ ಒಂದಾಗಿ ಹೋರಾಡುತ್ತಿದ್ದಾರೆ. ಜಾತಿ ನಿರ್ಮೂಲನೆ ವಿಚಾರದಲ್ಲಿ 1936ರಷ್ಟು ಹಿಂದೆ ಅಂಬೇಡ್ಕರರ ಪ್ರತಿಪಾದನೆ ಏನಾಗಿತ್ತೊ ಅದು ಇವತ್ತಿನ ಚರ್ಚೆಗಳಲ್ಲಿ ಮುನ್ನೆಲೆಯಲ್ಲಿರುವುದು ಅತ್ಯಂತ ಗಮನೀಯ” ಎಂಬುದು ಪ್ರದ್ನ್ಯಾ ಪವಾರ್ ಅಭಿಮತ.

Share

Leave a comment

Your email address will not be published. Required fields are marked *

Recent Posts More

  • 1 week ago No comment

    ನಮ್ಮ ಕಣ್ಣುಗಳೇಕೆ ಭಾರವಾಗುತ್ತಿವೆ?

          ಕವಿಸಾಲು           ತಿರುಕನ ಕನಸಲ್ಲ ನನ್ನದು ತಿರುಕನಲ್ಲ ಕಣ್ರಿ ನಾನು ನಿಮ್ಮ ಮರುಕ ಗಿರುಕ ಎಲ್ಲಾ ನನಗೆ ಹಿಡಿಸಲ್ಲ ಅವ್ರು ಕೋಟೆ ಕಟ್ಟಿ ನ್ಯಾಯ ನೀತಿಗಳ ತಮ್ಮಲ್ಲೆ ಬಚ್ಚಿಟ್ಟು ಒಳಗೆ ಬೆಚ್ಚಗೆ ಕೂತಿರಬಹುದು ನ್ಯಾಯಕ್ಕೆ ಕನ್ನ ಹಾಕೋ ನಾನು ತಿರುಕ ಹೇಗೆ ಆಗಬೇಕು? ತಿರುಕನದೇನೋ ಕನಸಿತ್ತು ನನ್ನದು ಕೂಡಾ ಕನಸೆಂದು ಆ ಕೋಟೆ ಒಳಗಿರುವವರು ಕನವರಿಸುತ್ತಿರಬಹುದು ಬೂದಿ ಮುಚ್ಚಿದ ...

  • 1 week ago No comment

    ಕೊಂಕಣಿ ಪ್ರತಿಭೆಯನ್ನರಸಿ ಕರ್ನಾಟಕಕ್ಕೆ ಬಂದ ಪ್ರಶಸ್ತಿ

        ಅತಿಥಿ           ಈ ಬಾರಿ ಕರ್ನಾಟಕವು ಎರಡು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿತು ಎಂದರೆ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಪ್ರಮಾದವೇನಾದರೂ ಆಯಿತೇ? ಒಂದೇ ಪುರಸ್ಕಾರವನ್ನು ಇಬ್ಬರಿಗೆ ಹಂಚಿರಬಹುದೇ? ಎಂದೆಲ್ಲ ಯೋಚಿಸಿ ತಲೆ ಕೆರೆದುಕೊಳ್ಳುತ್ತಿದ್ದೀರಾ? ಇಲ್ಲಿದೆ ನೋಡಿ ಉತ್ತರ. ಕನ್ನಡಕ್ಕೆ 2018ರ ಕೇಂದ್ರಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಘೋಷಣೆಯಾದಾಗಲೇ ಕರ್ನಾಟಕದ ಕೊಂಕಣಿ ಕವಯತ್ರಿ ವಿಲ್ಮಾ ...

  • 2 weeks ago No comment

    ಸಾಹಸದ ಆ ನಿಮಿಷಗಳು

            ಮೊದಲ ಬಾರಿಯಾದ್ದರಿಂದ ಕೆಲವೇ ನಿಮಿಷಗಳ ಈ ಜಿಗಿತದ ರೋಚಕತೆ ಒಂದು ತಿಂಗಳ ಕಾಲ ನನ್ನನ್ನು ಆವರಿಸಿದ್ದು ಸುಳ್ಳಲ್ಲ.         ಬ್ಯಾಂಕರುಗಳು, ಅಕೌಂಟೆಂಟುಗಳು ವರ್ಷದ ಮೊದಲಿಂದ ಹಿಡಿದು ಮಾರ್ಚಿ ತಿಂಗಳವರೆಗೆ ಭಾರೀ ಬ್ಯುಸಿಯಾಗುವಂತೆ ಇಂಗ್ಲೆಂಡಿನ ಸರ್ಕಾರೀ ದಂತ ವೈದ್ಯಕೀಯ ರಂಗದಲ್ಲೂ ಧಾವಂತ ಕಾಣಿಸಿಕೊಳ್ಳುತ್ತದೆ. ಸರ್ಕಾರದಿಂದ ಗುತ್ತಿಗೆ ಪಡೆದ ಕೆಲಸವನ್ನು ಮಾರ್ಚಿಯ ಕೊನೆಗೆ ಪೂರ್ತಿಗೊಳಿಸದಿದ್ದರೆ ಮುಂದಿನ ವರ್ಷದ ಕಾಂಟ್ರಾಕ್ಟ್ ನ್ನು ಕಳೆದುಕೊಳ್ಳುವ ...

  • 3 weeks ago No comment

    ಪ್ರಸಾದ್ ಪಟ್ಟಾಂಗ | ಫಿಫಾ ಫಿವರ್

    ಅಂದು ಎಲ್ಲರ ಕಣ್ಣುಗಳೂ ಬೇರೇನನ್ನೋ ದಿಟ್ಟಿಸುತ್ತಿದ್ದವು. ಅದೊಂದು ಸುಂದರ ರೆಸ್ಟೊರೆಂಟ್. ಆವರಣದ ಒಳಗೂ ಹೊರಗೂ ಬಂದವರಿಗೆ ಕುಳಿತುಕೊಳ್ಳಲು ಸಾಕಷ್ಟು ಜಾಗವಿರುವಂಥದ್ದು. ಜೊತೆಗೇ ಒಂದು ಪುಟ್ಟ ಮೈದಾನದಂತಿರುವ ಜಾಗವನ್ನೂ, ಈಜುಕೊಳವನ್ನೂ ಹೊಂದಿರುವ ಸುಸಜ್ಜಿತ ರೆಸ್ಟೊರೆಂಟ್. ನಾನು ಪ್ರತೀ ತಿಂಗಳು ಲುವಾಂಡಾಗೆ ಬಂದಿಳಿದಾಗಲೆಲ್ಲಾ ಇಲ್ಲಿಯ ಸಿಬ್ಬಂದಿಯೇ ನನಗೆ ಅನ್ನದಾತರು. ಹೀಗಾಗಿ ಎಲ್ಲೆಲ್ಲೂ ನನಗೆ ಪರಿಚಿತ ಮುಖಗಳೇ. ಅಂದು ಮಾತ್ರ ಸಿಬ್ಬಂದಿಯೊಬ್ಬ ಗಡಿಬಿಡಿಯಲ್ಲಿ ನನ್ನ ಆರ್ಡರ್ ಬರೆದುಕೊಂಡು ಅಷ್ಟೇ ಅವಸರದಲ್ಲಿ ಖಾದ್ಯಗಳನ್ನು ತಂದಿಟ್ಟು ...

  • 3 weeks ago No comment

    ಸವಿತಾ ನಾಗಭೂಷಣ ಪ್ರವಾಸ ಕಥನ | ದಾರಿಯೇ ದೈವ… ವೈಷ್ಣೋದೇವಿ

    ಪ್ರವಾಸಿ ಸವಿತಾ ಕಂಡ ಇಂಡಿಯಾ   ಇದು ನಾನು 2011ರ ಮಾರ್ಚ್ ತಿಂಗಳಲ್ಲಿ ನನ್ನ ಕೆಲ ಗೆಳತಿಯರೊಂದಿಗೆ ಒಂದು ಜನಸಾಮಾನ್ಯರ ಸಮೂಹದೊಂದಿಗೆ ಸಾಮಾನ್ಯ ದರ್ಜೆಯ ರೈಲು ಪ್ರಯಾಣದ ಮೂಲಕ ಕೈಗೊಂಡ ಭಾರತ ಯಾತ್ರೆಯ ಸಂದರ್ಭದಲ್ಲಿ ಮಾಡಿಕೊಂಡ ಟಿಪ್ಪಣಿಗಳನ್ನು ಆಧರಿಸಿ ಬರೆದ ಪುಟ್ಟ ಪ್ರವಾಸ ಕಥನ. ಇದು ಈಗಾಗಲೇ 12 ಭಾಗಗಳಲ್ಲಿ ಡಿ ಎಸ್ ನಾಗಭೂಷಣ ಅವರ ಸಂಪಾದಕತ್ವದ ‘ನವ ಮಾನವ’ ಸಮಾಜವಾದಿ ಮಾಸಿಕದ (ಈ ಪತ್ರಿಕೆ ನವೆಂಬರ್ 2011ರ ...


Editor's Wall

  • 11 May 2018
    2 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...

  • 10 May 2018
    2 months ago No comment

    ಒಂದು ಪುಸ್ತಕ; ವಾರವಿಡೀ ಬಿಡುಗಡೆ!

    ಪುಸ್ತಕವೊಂದನ್ನು ಪ್ರಕಟಿಸಿದ ಬಳಿಕ ಅದರ ಬಿಡುಗಡೆ ಕಾರ್ಯಕ್ರಮವೂ ಕಡ್ಡಾಯವೆಂಬಂಥ ಕಾಲವಿತ್ತು. ಈಗಲೂ ಇಲ್ಲವೆಂದಲ್ಲ. ಆದರೆ ಸಾವಿರ, ಲಕ್ಷದ ಲೆಕ್ಕದಲ್ಲಿ ಹಣ ಸುರಿದು ವ್ಯವಸ್ಥೆ ಮಾಡುವ ಬಿಡುಗಡೆ ಕಾರ್ಯಕ್ರಮವು ಒಂದು ಪುಸ್ತಕದ ಕುರಿತ ಮಾತಿಗೆ ಬೇಕಾದ ಆಪ್ತ ವಾತಾವರಣವನ್ನು ಕಟ್ಟಿಕೊಡುತ್ತದೆಯೇ? ದುಡ್ಡಿನ ವಿಚಾರಕ್ಕಿಂತ ಹೆಚ್ಚಾಗಿ ಕಾರ್ಯಕ್ರಮ ಆಯೋಜನೆ ಬೇಡುವ ಶ್ರಮ ಬಹಳ ದೊಡ್ಡದು. ಹಾಲ್ ಬುಕ್ ಮಾಡಬೇಕಾದಲ್ಲಿಂದ ಹಿಡಿದು, ಅತಿಥಿಗಳನ್ನು ಗೊತ್ತುಮಾಡುವುದು, ಅವರಿಗೆಲ್ಲರಿಗೂ ಹೊಂದುವಂತೆ ದಿನಾಂಕ ನಿಗದಿಪಡಿಸುವುದು, ಆಮಂತ್ರಣ ಪತ್ರಿಕೆ ಪ್ರಕಟಿಸುವುದು, ...

  • 03 May 2018
    2 months ago No comment

    ಕಾದಂಬಿನಿ ಕಾಲಂ | ಏನಿಲ್ಲದಿದ್ದರೂ ಬದುಕು ದೂಡಬೇಕು

                      ಆಗೆಲ್ಲ ತಪಸ್ಸು ಮಾಡುವ, ದೇವರು ಪ್ರತ್ಯಕ್ಷವಾಗುವ ಮತ್ತು ಕೇಳಿದ ವರ ಕೊಡುವ ಕಥೆಗಳು ಮಸ್ತು ಚಾಲ್ತಿಯಲ್ಲಿದ್ದ ಕಾರಣ ನಾನು ದೇವರನ್ನು ಕಾಣುವ ಹಟಕ್ಕೆ ಬಿದ್ದು ತಪಸ್ಸು ಮಾಡುತ್ತಿದ್ದೆ.   ನನ್ನ ಜೊತೆ ಇವೆಲ್ಲ ಯಾವ ಕಾರಣಕ್ಕೆ ಘಟಿಸಿತ್ತೋ ಅರಿಯೆ. ಬಾಲ್ಯದಲ್ಲಿ ನಮ್ಮ ಮನೆಗೆ ನೆರೆಮನೆಯ ಒಬ್ಬ ಹೆಂಗಸು ಬರುತ್ತಿದ್ದರು. ಮೂಕಕ್ಕ ಎಂದು ಅವರನ್ನು ಎಲ್ಲರೂ ಕರೆಯುತ್ತಿದ್ದುದು. ...

  • 30 April 2018
    3 months ago No comment

    ಅತ್ಯಾಚಾರ, ಹೋರಾಟದ ಐದು ವರ್ಷಗಳು ಮತ್ತು ಆ ಪುಟ್ಟ ಗೂಡು

    ತನ್ನ ಬದುಕಿನ ಅಮೂಲ್ಯ ಘಳಿಗೆಯೇ ಇಂಥದೊಂದು ಘಟನೆಗೆ ಬಲಿಯಾದ ಆಘಾತದಲ್ಲಿರುವ ಆಕೆ ಒಮ್ಮೆ ಗೆಲುವಾದವಳಂತೆ ಕಂಡರೂ ಮತ್ತೆ ಗಂಭೀರಳಾಗುತ್ತಾಳೆ. ಎಷ್ಟು ಬೇಕೋ ಅಷ್ಟೇ ಮಾತು. ಕಟ್ಟಿಕೊಂಡಿದ್ದ ಕನಸೂ ಒಡೆದುಹೋಗಿದೆ.   ಅನ್ಯಾಯದ ವಿರುದ್ಧದ ಹೋರಾಟ, ಸಮಾಜದೆದುರು ದೊಡ್ಡ ಮನುಷ್ಯನಂತೆ ಕಾಣಿಸಿಕೊಳ್ಳುವ ಮುಖವಾಡ ತೊಟ್ಟುಕೊಂಡ ಮತ್ತು ಸಾಧ್ಯವಿರುವಷ್ಟೂ ವಾಮಮಾರ್ಗಗಳಿಂದ ಎಲ್ಲರನ್ನೂ ಎಲ್ಲವನ್ನೂ ನಿಯಂತ್ರಣದಲ್ಲಿಟ್ಟುಕೊಳ್ಳಬಲ್ಲಂಥ ಅತ್ಯಂತ ಬಲಿಷ್ಠ ದುಷ್ಟನೊಬ್ಬನನ್ನು ಎದುರುಹಾಕಿಕೊಳ್ಳುವ ದಿಟ್ಟತನ ಹೇಗೆ ಅಗಾಧ ಸಾಗರದ ನಟ್ಟ ನಡುವಿನ ಒಂದು ಸಣ್ಣ ...

  • 28 April 2018
    3 months ago No comment

    ಮೈಬಣ್ಣವೆಂಬ ಮಾನದಂಡ ಮತ್ತು ‘ವಿಪ್ಲವ’ ಮನಃಸ್ಥಿತಿಯ ರಾಜಕಾರಣ

    ಈ ‘ವಿಪ್ಲವ’ ಮನಃಸ್ಥಿತಿ ಅಧಿಕಾರಸ್ಥವಾದುದಾಗಿದೆ. ದೇವರು, ಧರ್ಮದ ಹೆಸರಲ್ಲಿ ಒಡೆಯುವುದನ್ನು ತನ್ನ ಪರಮೋನ್ನತಿ ಎಂಬಂತೆ ಭ್ರಮಿಸುವ ಈ ಕುರೂಪವು ಮನುಷ್ಯರ ಮೇಲೆ ಮನುಷ್ಯರನ್ನು ಎತ್ತಿಕಟ್ಟುತ್ತದೆ. ಹೆಣ್ಣಿನ ಮೇಲೆ ಹೆಣ್ಣನ್ನೇ ಅಸ್ತ್ರವಾಗಿ ಪ್ರಯೋಗಿಸುವ ಹುನ್ನಾರಗಳ ಮೂಲಕ, ನಿಜವಾದ ಸೌಂದರ್ಯವನ್ನು ನಾಶಗೈಯುತ್ತಿದೆ. 21 ವರ್ಷಗಳ ಕೆಳಗೆ ಅಂದರೆ 1997ರಲ್ಲಿ ವಿಶ್ವಸುಂದರಿ ಪಟ್ಟ ಗೆದ್ದ ಡಯಾನಾ ಹೇಡನ್ ಮೈಬಣ್ಣದ ಬಗ್ಗೆ ಅತಿ ಕೀಳು ಅಭಿರುಚಿಯಿಂದ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ...