Share

‘ಸನ್ಯಾಸ’ ಕಾಲದಲ್ಲಿ ಗೆಲ್ಲಬಲ್ಲರೆ ಸಿನ್ಹಾ?
ಕನೆಕ್ಟ್ ಕನ್ನಡ

ಪಕ್ಷ ತೊರೆಯುವುದಿಲ್ಲ ಎಂದೇ ಹೇಳುತ್ತಿದ್ದ ಸಿನ್ಹಾ, ಕಳೆದ ಫೆಬ್ರವರಿಯಲ್ಲಿ ಇಂಥದೊಂದು ನಿರ್ಧಾರದ ಸುಳಿವು ಕೊಟ್ಟಿದ್ದೂ ಇತ್ತು. ಈಗ ಅವರು ಹೊರಬಂದದ್ದೂ ಆಗಿದೆ. ಪಕ್ಷದೊಳಗೆ ಮೋದಿ ಪಾಳೆಯವನ್ನು ಕೆಣಕುವವರು ಸದ್ಯಕ್ಕಂತೂ ಯಾರೂ ಇದ್ದಂತಿಲ್ಲ.

 

ಬಿಜೆಪಿಯೊಳಗೆ ಮೋದಿ ವಿರುದ್ಧದ ಪ್ರಬಲ ಅಸ್ತ್ರದಂತಿದ್ದ ಹಿರಿಯ ನಾಯಕ ಯಶವಂತ್ ಸಿನ್ಹಾ ಕಡೆಗೂ ಶನಿವಾರ (ಏಪ್ರಿಲ್ 21) ಪಕ್ಷ ತೊರೆದಿದ್ದಾರೆ. ತಮ್ಮ ನಿರ್ಧಾರವನ್ನು ಸಿನ್ಹಾ ಪ್ರಕಟಿಸಿರುವ ವೇದಿಕೆಯೂ ರಾಜಕೀಯವಾಗಿ ಕುತೂಹಲಕ್ಕೆಡೆ ಮಾಡಿಕೊಟ್ಟಿದೆ. ಬಿಹಾರದ ಪಾಟ್ನಾದಲ್ಲಿ ಪ್ರತಿಪಕ್ಷಗಳ ಮುಖಂಡರುಗಳೊಂದಿಗಿನ ಕಾರ್ಯಕ್ರಮವೊಂದರಲ್ಲಿ ಅವರು ಬಿಜೆಪಿ ತ್ಯಜಿಸುವುದಾಗಿ ಘೋಷಿಸಿದ್ದಾರೆ.

ಬಿಜೆಪಿಯೊಂದಿಗಿನ ಎಲ್ಲ ಸಂಬಂಧಗಳನ್ನು ಕೊನೆಗೊಳಿಸಿದ್ದೇನೆ ಎಂದ ಅವರು, ಇನ್ನು ಮುಂದೆ ಪಕ್ಷ ರಾಜಕಾರಣದಿಂದ ದೂರ ಉಳಿಯುವುದಾಗಿಯೂ, ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳಲಾರೆ ಎಂದೂ ಇದೇ ವೇಳೆ ಸ್ಪಷ್ಟವಾಗಿ ಹೇಳಿರುವುದು ವರದಿಯಾಗಿದೆ.

ಮೋದಿ ಸರ್ಕಾರದ ಆಳ್ವಿಕೆಯಲ್ಲಿ ದೇಶದ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಗಂಭಿರ ಆರೋಪ ಮಾಡಿದ್ದ ಸಿನ್ಹಾ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕ್ರಾಂತಿಯನ್ನೇ ಮಾಡುವವರಿದ್ದೇವೆ ಎಂದಿದ್ದಾರೆ. ಆಮ್ ಆದ್ಮಿ ಪಾರ್ಟಿ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ರಾಷ್ಟ್ರೀಯ ಲೋಕದಳ ಮುಖಂಡರಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿನ್ಹಾ, ಸಂಸತ್ ಅಧಿವೇಶನ ಕಲಾಪ ವ್ಯರ್ಥವಾಗುತ್ತಿದ್ದ ಹೊತ್ತಲ್ಲಿ ಒಮ್ಮೆಯಾದರೂ ಪ್ರತಿಪಕ್ಷಗಳನ್ನು ಒಂದೆಡೆಗೆ ಸೇರಿಸಿ ಮಾತನಾಡುವ ಪ್ರಯತ್ನವನ್ನು ಮೋದಿ ಮಾಡಿದರೇ ಎಂದು ಪ್ರಶ್ನಿಸಿದರು. ಸಂಸತ್ ಕಲಾಪ ನಡೆಯದಿದ್ದುದು ಸರ್ಕಾರಕ್ಕೆ ಸಂಭ್ರಮದ ವಿಚಾರವೇ ಆಗಿದೆ ಎಂದೂ ಅವರು ಟೀಕಿಸಿದರು.

ದೇಶದಲ್ಲಿ ಬಿಕ್ಕಟ್ಟುಗಳು ತಲೆದೋರಿದಾಗ ಸುಮ್ಮನೆ ಕುಳಿತುಕೊಳ್ಳಲಾರೆ ಎಂದಿರುವ ಸಿನ್ಹಾ, ಸರ್ಕಾರದ ವಿರುದ್ಧವಿರುವ ಸತ್ಯಗಳನ್ನು ಕೊಲ್ಲುವ ಕೆಲಸವಾಗುತ್ತಿದೆ ಎಂತಲೂ ಆರೋಪಿಸಿರುವುದಾಗಿ ಫಸ್ಟ್ ಪೋಸ್ಟ್ ವರದಿ ಮಾಡಿದೆ.

ಸಿನ್ಹಾ ಕಳೆದ ಜನವರಿ 30ರಂದು ‘ರಾಷ್ಟ್ರ ಮಂಚ್’ ರಚಿಸಿದ್ದರು. ಇದೊಂದು ಅರಾಜಕೀಯ ವೇದಿಕೆಯಾಗಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಎಚ್ಚರ ಮೂಡಿಸಲಿದೆ ಎಂದೂ ಅಂದಿನ ಸಮಾರಂಭದಲ್ಲಿ ಸಿನ್ಹಾ ಹೇಳಿದ್ದರು. ಆ ಸಮಾರಂಭಕ್ಕೂ ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳ ನಾಯಕರು ಸಾಕ್ಷಿಯಾಗಿದ್ದರು.

ಪಕ್ಷ ತೊರೆಯುವುದಿಲ್ಲ ಎಂದೇ ಹೇಳುತ್ತಿದ್ದ ಸಿನ್ಹಾ, ಕಳೆದ ಫೆಬ್ರವರಿಯಲ್ಲಿ ಇಂಥದೊಂದು ನಿರ್ಧಾರದ ಸುಳಿವು ಕೊಟ್ಟಿದ್ದೂ ಇತ್ತು. ಈಗ ಅವರು ಹೊರಬಂದದ್ದೂ ಆಗಿದೆ. ಪಕ್ಷದೊಳಗೆ ಮೋದಿ ಪಾಳೆಯವನ್ನು ಕೆಣಕುವವರು ಸದ್ಯಕ್ಕಂತೂ ಯಾರೂ ಇದ್ದಂತಿಲ್ಲ. ‘ಪ್ರಜಾಪ್ರಭುತ್ವ ವಿರೋಧಿ ಧೋರಣೆಯ ಆಡಳಿತ’ ನೀಡಿದ ಪಕ್ಷವನ್ನು ಒಳಗಿದ್ದುಕೊಂಡೇ ಸರಿಪಡಿಸಲಾಗದ ಸಿನ್ಹಾ, ಇನ್ನು ‘ಸನ್ಯಾಸ’ದ ಕಾಲದಲ್ಲಿ ಆ ಪಕ್ಷದ ವಿರುದ್ಧ ಗೆಲ್ಲುವರೇ ಎಂಬ ಪ್ರಶ್ನೆಯಂತೂ ಉಳಿದುಕೊಳ್ಳುತ್ತದೆ.

ಇದನ್ನೂ ಓದಿ: ಮೋದಿ ವಿರುದ್ಧ ಮತ್ತೊಮ್ಮೆ ಸಿನ್ಹಾ ಕಟುಟೀಕೆಯ ಹತಾರ

Share

Leave a comment

Your email address will not be published. Required fields are marked *

Recent Posts More

  • 2 days ago No comment

    ಈ ಸಂಜೆಯೊಳಗೆ

      ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

  • 5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 6 days ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 2 weeks ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

  • 15 August 2018
    5 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    3 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    4 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...