Share

ಮೈಬಣ್ಣವೆಂಬ ಮಾನದಂಡ ಮತ್ತು ‘ವಿಪ್ಲವ’ ಮನಃಸ್ಥಿತಿಯ ರಾಜಕಾರಣ
ಸಂಪಾದಕ

ಈ ‘ವಿಪ್ಲವ’ ಮನಃಸ್ಥಿತಿ ಅಧಿಕಾರಸ್ಥವಾದುದಾಗಿದೆ. ದೇವರು, ಧರ್ಮದ ಹೆಸರಲ್ಲಿ ಒಡೆಯುವುದನ್ನು ತನ್ನ ಪರಮೋನ್ನತಿ ಎಂಬಂತೆ ಭ್ರಮಿಸುವ ಈ ಕುರೂಪವು ಮನುಷ್ಯರ ಮೇಲೆ ಮನುಷ್ಯರನ್ನು ಎತ್ತಿಕಟ್ಟುತ್ತದೆ. ಹೆಣ್ಣಿನ ಮೇಲೆ ಹೆಣ್ಣನ್ನೇ ಅಸ್ತ್ರವಾಗಿ ಪ್ರಯೋಗಿಸುವ ಹುನ್ನಾರಗಳ ಮೂಲಕ, ನಿಜವಾದ ಸೌಂದರ್ಯವನ್ನು ನಾಶಗೈಯುತ್ತಿದೆ.

21 ವರ್ಷಗಳ ಕೆಳಗೆ ಅಂದರೆ 1997ರಲ್ಲಿ ವಿಶ್ವಸುಂದರಿ ಪಟ್ಟ ಗೆದ್ದ ಡಯಾನಾ ಹೇಡನ್ ಮೈಬಣ್ಣದ ಬಗ್ಗೆ ಅತಿ ಕೀಳು ಅಭಿರುಚಿಯಿಂದ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ಮತ್ತೊಮ್ಮೆ ಜೋಕರ್ ಥರ ತನ್ನನ್ನು ತಾನೇ ಸಾರ್ವಜನಿಕವಾಗಿ ಬಯಲುಗೊಳಿಸಿಕೊಂಡಿದ್ದಾಗಿದೆ. ‘ಲಕ್ಷ್ಮೀ, ಸರಸ್ವತಿಯರಂತಿರುವ ಐಶ್ವರ್ಯ ರೈ ಭಾರತದ ಮಹಿಳೆಯರ ನಿಜವಾದ ಪ್ರತಿನಿಧಿ. ಅವರು ವಿಶ್ವಸುಂದರಿಯಾದದ್ದು ಸರಿ. ಆದರೆ ಡಯಾನಾ ಹೇಡನ್ ಅವರನ್ನು ವಿಶ್ವಸುಂದರಿಯಾಗಿ ಆಯ್ಕೆ ಮಾಡಿದ ಮಾನದಂಡಗಳೇನೆಂಬುದೇ ಅರ್ಥವಾಗುತ್ತಿಲ್ಲ. ಇದೆಲ್ಲಾ ವಿದೇಶಿ ಉದ್ಯಮದ ಮಾಫಿಯಾ ಅಷ್ಟೆ’ ಎಂದು ನಾಲಿಗೆಯನ್ನು ಹೇಗೆಲ್ಲಾ ಹರಿಯಬಿಟ್ಟು, ಡಯಾನಾಗೆ ಮಾತ್ರವಲ್ಲ, ಐಶ್ವರ್ಯಾಗೂ ಅವಮಾನ ಮಾಡಿದಂತೆಯೇ ಆಗಿದೆ. ಅಧಿಕಾರದ ಅಮಲು ಏರಿದಾಗ ನಾಲಿಗೆ ಹೀಗೆ ನಿಯಂತ್ರಣ ಕಳೆದುಕೊಳ್ಳುವುದು ಕೂಡ ಈ ಜಗತ್ತಿನಲ್ಲಿ ಒಂದು ‘ಪರಂಪರೆ’ಯೇ ಆಗಿದೆಯಲ್ಲವೇ?

‘ಮಹಾಭಾರತ ಕಾಲದಲ್ಲೇ ಇಂಟರ್‍ನೆಟ್ ಇತ್ತು’ ಎಂದಿದ್ದ ಈ ಜೋಕುಮಾರ, ಪ್ರಾಚೀನ ಭಾರತ ಏನೆಂಬುದರ ಬಗ್ಗೆ ಕೊಂಚ ಮಟ್ಟಿನ ಪರಿಜ್ಞಾನವನ್ನಾದರೂ ಹೊಂದಿದ್ದಿದ್ದರೆ, ಪ್ರಾಚೀನ ಭಾರತವು ಸೌಂದರ್ಯವನ್ನು ಮೈಬಣ್ಣದಿಂದ ಅಳೆಯುವ ಸಂಕುಚಿತ ದೃಷ್ಟಿಕೋನವನ್ನು ಮೀರಿ ನಿಂತಿತ್ತು ಎಂಬ ರಾಮಮನೋಹರ ಲೋಹಿಯಾ ಅವರ ಮಾತುಗಳ ಬಗ್ಗೆಯಾದರೂ ತಿಳಿದಿದ್ದಿದ್ದರೆ ಇಷ್ಟೊಂದು ಕೀಳುಮಟ್ಟದ ಮಾತಾಡುತ್ತಿರಲಿಲ್ಲ. ಅಥವಾ ಕ್ಷೋಭೆಗೊಳಗಾಗಿರುವ ಇಂಥ ಮನಃಸ್ಥಿತಿಗಳಿಗೆ ಅವಾವುದೂ ಬೇಕಿಲ್ಲ.

ಲೋಹಿಯಾ ಅವರೇ ಹೇಳುವಂತೆ, ಮೈಬಣ್ಣವನ್ನು ಸೌಂದರ್ಯವನ್ನು ಅಳೆಯುವ ಮಾನದಂಡವಾಗಿಸಿರುವುದರ ಹಿಂದೆ ಇರುವುದು ಇಂಥ ಮನಃಸ್ಥಿತಿಗಳ ರಾಜಕಾರಣವೇ ಆಗಿದೆ. ಯುರೋಪಿನ ಬಿಳಿಯರು ಹೇಗೆ ಶತ ಶತಮಾನಗಳಿಂದ ಜಗತ್ತನ್ನೇ ನಿಯಂತ್ರಣದಲ್ಲಿರಿಸಿಕೊಂಡು, ವರ್ಣೀಯರನ್ನು ಸಂಪತ್ತು ಮತ್ತು ಅಧಿಕಾರದಿಂದ ವಂಚಿತರನ್ನಾಗಿಸಿದರು ಎಂಬುದನ್ನೂ ಈ ಬಿಳಿಯರಂತೆ ಆಫ್ರಿಕಾದ ನಿಗ್ರೋಗಳು ಜಗತ್ತನ್ನಾಳಿದ್ದರೆ ಸೌಂದರ್ಯದ ಕುರಿತ ಪರಿಭಾವನೆಯೇ ಬೇರೆಯಿರುತ್ತಿತ್ತು ಎಂಬುದನ್ನೂ ಲೋಹಿಯಾ ಹೇಳುತ್ತಾರೆ.

ಮೈಬಣ್ಣವು ಸೌಂದರ್ಯದ ಪ್ರಮಾಣವಲ್ಲದಿದ್ದರೂ ಮೈಬಣ್ಣವನ್ನೇ ಸೌಂದರ್ಯವೆಂದುಕೊಳ್ಳುವುದು, ಈ ದೇಶದ ಒಂದು ಕಾಲದ ಮಾನಸಿಕ ಪ್ರಬುದ್ಧತೆಯನ್ನು ಅನಂತರದ ಪೀಳಿಗೆಯು ಕಳೆದುಕೊಂಡದ್ದರ ಪರಿಣಾಮ ಎಂಬ ಲೋಹಿಯಾ ಅವರ ಗ್ರಹಿಕೆಯ ಹಿನ್ನೆಲೆಯಲ್ಲಿ ಇವತ್ತಿನ ಅತಿರೇಕಗಳನ್ನು ನೋಡಬೇಕು. ಈ ಕಾಲವು ಇತಿಹಾಸವನ್ನು ಅದರ ಸತ್ಯಗಳೊಂದಿಗೆ ಎದುರಿಸಲಾರದೆಂಬುದೇ, ಸುಮಾರು ಅರವತ್ತು ವರ್ಷಗಳಷ್ಟು ಹಿಂದೆ ಲೋಹಿಯಾ ಅವರೇ ಕೇಳಿದ್ದ ‘ಕಪ್ಪು ಬಣ್ಣದ ಚೆಲುವೆ ಯಾವಾಗ ಇತರರೊಂದಿಗೆ ತನ್ನ ಅರ್ಹತೆಯಾದ ಸಮಾನತೆಯನ್ನು ಗಳಿಸಿಕೊಳ್ಳುವುದು?’ ಎಂಬ ಪ್ರಶ್ನೆಯಿನ್ನೂ ಅವತ್ತಿನದಕ್ಕಿಂತ ಹೆಚ್ಚು ಸಂಕಟದೊಂದಿಗೆ ಕಾಡುತ್ತಿರುವುದಕ್ಕೆ ಕಾರಣ. ಅಂದು ಲೋಹಿಯಾ ಅವರು ಸುಮಾರು ಅರ್ಧ ಶತಮಾನದಿಂದಲೂ ಸೌಂದರ್ಯ ಸ್ಪರ್ಧೆಯಲ್ಲಿ ಮನ್ನಣೆಗೆ ಪಾತ್ರಳಾಗದೇ ಉಳಿದ ಕಪ್ಪು ಸುಂದರಿಯೂ ಕ್ಯಾಲಿಫೋರ್ನಿಯಾ ಸೌಂದರ್ಯ ಮೀಮಾಂಸಕರ ಕಣ್ಣಿಗೆ ಬೀಳುವ ಕಾಲ ಬರಬಹುದು ಎಂದಿದ್ದರು. ದುರಂತವೇನೆಂದರೆ, ಅವರು ಅಂದಿದ್ದ ಆ ಕಾಲ ಬಂದ ಮೇಲೂ ಕಪ್ಪು ಮೈಬಣ್ಣವನ್ನು ಜರೆಯುವ ಕುರೂಪವು ಮಾತ್ರ ವ್ಯಾಪಿಸಿಕೊಳ್ಳುತ್ತಲೇ ಇದೆ.

ಆತಂಕದ ಸಂಗತಿಯೇನೆಂದರೆ, ಈ ‘ವಿಪ್ಲವ’ ಮನಃಸ್ಥಿತಿ ಅಧಿಕಾರಸ್ಥವಾದುದಾಗಿದೆ. ದೇವರು, ಧರ್ಮದ ಹೆಸರಲ್ಲಿ ಒಡೆಯುವುದನ್ನು ತನ್ನ ಪರಮೋನ್ನತಿ ಎಂಬಂತೆ ಭ್ರಮಿಸುವ ಈ ಕುರೂಪವು ಮನುಷ್ಯರ ಮೇಲೆ ಮನುಷ್ಯರನ್ನು ಎತ್ತಿಕಟ್ಟುತ್ತದೆ. ತನ್ನ ದೃಷ್ಟಿಯಲ್ಲಿ ಯಾರು ನಿಮ್ನರೊ ಅವರನ್ನು ನಿಮ್ನರ ಮೂಲಕವೇ ಮಣಿಸುವ, ಹೆಣ್ಣಿನ ಮೇಲೆ ಹೆಣ್ಣನ್ನೇ ಅಸ್ತ್ರವಾಗಿ ಪ್ರಯೋಗಿಸುವ ಹುನ್ನಾರಗಳ ಮೂಲಕ, ನಿಜವಾದ ಸೌಂದರ್ಯವನ್ನು ನಾಶಗೈಯುತ್ತಿದೆ. ಈ ಕುರೂಪ ರಾಜಕಾರಣವನ್ನು ನಾಶಗೊಳಿಸಬಲ್ಲ ಶಕ್ತಿಯಿರುವುದು, ಕಪ್ಪು ಬಣ್ಣದ ಕಾರಣಕ್ಕಾಗಿ ನೋವು ಉಣ್ಣುತ್ತಲೂ ಮೆರುಗಿನಿಂದಿರುವ ಡಯಾನಾ ಹೇಡನ್ ಥರದವರ ದಿಟ್ಟತನ ಮತ್ತು ದೃಢತೆಯಲ್ಲಿ. ಆ ದಿಟ್ಟತನ ಮತ್ತು ದೃಢತೆಯೆದುರು ವಿಪ್ಲವ ಕುಮಾರ್ ದೇವ್ ಥರದವರ ದುರಹಂಕಾರ ಒಡೆದುಬೀಳಲು ಹೆಚ್ಚು ಹೊತ್ತು ಬೇಕಾಗುವುದಿಲ್ಲ.

(ಫೋಟೊ ಕೃಪೆ: ರೆಡಿಫ್ ಡಾಟ್‍ಕಾಂ)

Share

Leave a comment

Your email address will not be published. Required fields are marked *

Recent Posts More

 • 2 days ago No comment

  ಈ ಸಂಜೆಯೊಳಗೆ

    ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

 • 5 days ago No comment

  ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                      ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

 • 6 days ago No comment

  ಹುಲ್ಲಿನ ಕಡ್ಡಿ

    ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

 • 2 weeks ago No comment

  ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                      ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

 • 2 weeks ago No comment

  ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

    ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

 • 15 August 2018
  5 days ago No comment

  ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                      ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

 • 09 August 2018
  2 weeks ago No comment

  ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                      ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

 • 01 August 2018
  3 weeks ago No comment

  ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                      ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

 • 25 July 2018
  4 weeks ago No comment

  ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                      ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

 • 11 May 2018
  3 months ago No comment

  ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

  ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...