Share

ಕನ್ನಡಿಗರ ನಿರೀಕ್ಷೆ ಸುಳ್ಳಾಗಿಸಿದ ಪ್ರಧಾನಿ
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ

 

ರಾಜ್ಯದಲ್ಲಿ ಮೋದಿ ಮಾಡುತ್ತಿರುವ ಬಹುತೇಕ ಭಾಷಣಗಳು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸುವುದರಲ್ಲಿಯೇ ಮುಗಿದು ಹೋಗುತ್ತಿವೆ.

 

 

ದನ್ನು ಪ್ರಜಾಪ್ರಭುತ್ವದ ವೈಫಲ್ಯ ಎನ್ನಬೇಕೊ ಇಲ್ಲ ಕನ್ನಡಿಗ ಮತದಾರರ ದುರಂತ ಎನ್ನಬೇಕೊ ಅರ್ಥವಾಗುತ್ತಿಲ್ಲ. ಇದೀಗ ನಡೆಯುತ್ತಿರುವುದು ನಮ್ಮ ರಾಜ್ಯದ ವಿದಾನಸಭೆ ಚುನಾವಣೆಯೊ ಇಲ್ಲ ಲೋಕಸಭೆಯ ಚುನಾವಣೆಯೊ ಎನ್ನುವ ಸಂಶಯವೂ ಮೂಡುವಂತಾದರೆ ಅಚ್ಚರಿಯೇನೂ ಇಲ್ಲ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ತಮ್ಮ ಪಕ್ಷದ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದು, ದಿನಕ್ಕೆ ಮೂರರಂತೆ ಒಟ್ಟು ಐದು ದಿನಗಳ ಅವಧಿಯಲ್ಲಿ ಸುಮಾರು ಹದಿನೈದು ರ್ಯಾಲಿಗಳನ್ನು ಉದ್ದೇಶಿಸಿ ಮಾತಾಡಲಿದ್ದಾರೆ. ಪ್ರಧಾನಿಯೊಬ್ಬರು ಆಡಬಹುದಾದ ಮಾತುಗಳ ಬಗ್ಗೆ ರಾಜ್ಯದ ಜನತೆಗೆ ತೀವ್ರವಾದ ಕುತೂಹಲವಿರುತ್ತದೆ. ಮತ್ತು ತಮ್ಮ ರಾಜ್ಯಕ್ಕೆ ಕೇಂದ್ರ ನೀಡಬಹುದಾದ ಕೊಡುಗೆಗಳ ಬಗ್ಗೆ ಜನರಿಗೆ ಅಪಾರವಾದ ನಿರೀಕ್ಷೆಯಿರುವುದು ಸಹಜ. ಕೊಡುಗೆಗಳ ಮಾತಿರಲಿ, ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆಯಾದರೂ ಅವರು ಮಾತಾಡಿಯಾರು ಮತ್ತು ಪರಿಹಾರೋಪಾಯಗಳನ್ನು ಸೂಚಿಸಬಲ್ಲರೆಂದು ಜನತೆ ಕಾಯುತ್ತ ಕೂತಿದ್ದರೆ ಅದರಲ್ಲಿ ಜನರ ತಪ್ಪೇನಿಲ್ಲ. ರಾಜ್ಯದ ಎಲ್ಲ ಸಮಸ್ಯೆಗಳನ್ನೂ ಕೇಂದ್ರವೇ ಬಗೆಹರಿಸಬೇಕು ಮತ್ತು ಪ್ರಧಾನಿಯವರೇ ಪರಿಹರಿಸಬೇಕೆಂದು ಯಾರೂ ಹೇಳುವುದಿಲ್ಲ. ಆದರೆ ಪ್ರಧಾನಿಯಾದವರು ಚುನಾವಣಾ ಪ್ರಚಾರಕ್ಕೆಂದು ಬಂದಾಗ ಆ ಬಗ್ಗೆ ಕನಿಷ್ಠ ಒಂದಿಷ್ಟು ಮಾತುಗಳನ್ನಾಡುತ್ತಾರೆಂದು ಜನ ಕಾಯುವುದು ಸಹಜ.

ಆದರೆ ಅವರ ಮೊದಲ ದಿನದ ಮೂರು ರ್ಯಾಲಿಗಳ ಭಾಷಣಗಳನ್ನು ಕೇಳಿದ ಜನತೆಗೆ ಬಹಳಷ್ಟು ನಿರಾಸೆಯಾಗಿದೆ.

ನ್ಯಾಯಾಧಿಕರಣದ ಕಟಕಟೆಯೇರಿರುವ ಮಹಾದಾಯಿಯ ಸಮಸ್ಯೆಯನ್ನು ನ್ಯಾಯಾಧಿಕರಣದ ಹೊರಗೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಧಾನಿಯಾಗಿ ಸಂಬಂಧಿಸಿದ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತಾಡಿ ಸಮಸ್ಯೆಗೊಂದು ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡುತ್ತೇನೆಂದು ಪ್ರಧಾನಿ ಹೇಳಬಹುದೆಂಬ ಉತ್ತರ ಕರ್ನಾಟಕದ ಜನತೆಯ ನಿರೀಕ್ಷೆ ಹುಸಿಯಾಗಿದೆ.

ತೀವ್ರವಾಗಿರುವ ಕೃಷಿ ಬಿಕ್ಕಟ್ಟಿನಿಂದಾಗಿ ರೈತರ ಸರಣಿ ಆತ್ಮಹತ್ಯೆಗಳು ನಡೆಯುತ್ತಿರುವುದು ಪ್ರಧಾನಿಗೆ ಗೊತ್ತಿರದ ವಿಚಾರವೇನಲ್ಲ. ಕನಿಷ್ಠ ಈ ಬಗ್ಗೆ ಅವರು ನಿಷ್ಪಕ್ಷಪಾತವಾಗಿ ಮಾತಾಡಿ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಿ ರೈತರ ಸಂಕಷ್ಟ ಬಗೆಹರಿಸುವತ್ತ ಗಮನ ಹರಿಸುತ್ತೇವೆಂದು ಹೇಳುತ್ತಾರೆಂದು ಕಾದಿದ್ದೇ ಬಂತು, ಫಲ ಸಿಗಲಿಲ್ಲ.

ಕಳೆದೊಂದು ವರ್ಷದಿಂದ ನಿರುದ್ಯೋಗಿ ಯುವಕರು ಉದ್ಯೋಗಾವಕಾಶಗಳಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದು, ಸ್ವತಃ ಪ್ರದಾನಿಯವರೇ 2014ರಲ್ಲಿ ನೀಡಿದ್ದ ಕೋಟಿ ಉದ್ಯೋಗ ಸೃಷ್ಠಿಯ ಭರವಸೆ ಹುಸಿಯಾಗಿದೆ. ಹೊಸ ಉದ್ಯೋಗಗಳ ಸೃಷ್ಠಿಯಿರಲಿ, ಇರುವ ಉದ್ಯೋಗಗಳೇ ಇಲ್ಲವಾಗುತ್ತ ಯುವಜನತೆ ದಿಕ್ಕುಗಾಣದಂತಾಗಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಕಾನೂನಿಗೆ ತಿದ್ದುಪಡಿ ತಂದು ಜನತೆಯ ಉದೋಗ ಭದ್ರತೆಯನ್ನೇ ಅಸ್ಥಿರಗೊಳಿಸಲಾಗುತ್ತಿದೆ. ಉದ್ಯೋಗವಿರದ ಯುವಜನತೆ ಆಕ್ರೋಶಗೊಳ್ಳುತ್ತಿದ್ದಾರೆ. ಪ್ರಧಾನಿಯವರು ಈ ಬಗ್ಗೆ ಮಾತನಾಡಿ ಯುವಜನತೆಯಲ್ಲಿ ಭರವಸೆಯೊಂದನ್ನು ಹುಟ್ಟುಹಾಕುತ್ತಾರೆಂಬ ನಂಬಿಕೆ ಹುಸಿಯಾಗಿದೆ.

ಇನ್ನು ಕಾವೇರಿ ವಿಚಾರದಲ್ಲಿ ನ್ಯಾಯಾಲಯ ತೀರ್ಪು ನೀಡಿದ್ದು, ನಿರ್ವಹಣಾ ಮಂಡಳಿ ರಚನೆಯ ಬಗ್ಗೆ ಕೇಂದ್ರಕ್ಕೆ ಸ್ಕೀಮ್ ಮಾಡಲು ಸೂಚ್ಯವಾಗಿ ತಿಳಿಸಿದೆ. ಈ ಬಗ್ಗೆ ಈಗಾಗಲೇ ತಮಿಳುನಾಡಲ್ಲಿ ಮುಷ್ಕರ ನಡೆಯುತ್ತಿದ್ದು, ತಮ್ಮ ಸರಕಾರ ಈ ಸ್ಕೀಮ್ ರಚನೆಯ ಬಗ್ಗೆ ತಳೆದಿರುವ ನಿಲುವಿನ ಬಗ್ಗೆ ಪ್ರಧಾನಿ ಇಲ್ಲಿ ಸ್ಪಷ್ಟನೆ ನೀಡಬೇಕಿತ್ತು. ಆದರೆ ಅವರ ಬಾಯಲ್ಲಿ ಕಾವೇರಿ ಎನ್ನುವ ಶಬ್ದವೇ ಹೊರಡಲಿಲ್ಲ.

ಇನ್ನು ತಮ್ಮ ಭಾಷಣವನ್ನು ಕನ್ನಡದ ಕೆಲವು ಸಾಲುಗಳ ಮೂಲಕ ಆರಂಭಿಸಿದ ಪ್ರದಾನಿ, ನಮ್ಮ ನಾಡಧ್ವಜದ ಬಗ್ಗೆ ಮತ್ತು ರಾಜ್ಯ ಸರಕಾರ ಮಾಡಿರುವ ಶಿಫಾರಸ್ಸಿನ ಬಗ್ಗೆ ತಮ್ಮ ಸರಕಾರದ ನಿಲುವಿನ ಬಗ್ಗೆ ಬಾಯಿ ಬಿಡಲಿಲ್ಲ.

ಇದೇ ರೀತಿ ತಮ್ಮದೇ ಸರಕಾರ ರಾಜ್ಯಗಳ ಮೇಲೆ ಹಿಂದಿ ಹೇರುತ್ತಿರುವ ಬಗ್ಗೆಯಾಗಲಿ, ಕನ್ನಡಿಗರ ಅಸ್ಮಿತೆಯ ಬಗ್ಗೆಯಾಗಲಿ ಮಾತಾಡಲಿಲ್ಲ. ನಮ್ಮ ರಾಜ್ಯದ ಒಂದು ದೊಡ್ಡ ಸಮುದಾಯದೊಳಗೆ ಪ್ರತ್ಯೇಕ ದರ್ಮದ ಕೂಗು ಕೇಳಿ ಬರುತ್ತಿದ್ದು, ಆ ಬಗ್ಗೆ ಸಹ ಪ್ರಧಾನಿ ಸೊಲ್ಲೆತ್ತಲಿಲ್ಲ.

ಇನ್ನು ಬಿಹಾರ ಸೇರಿದಂತೆ ಉಳಿದ ರಾಜ್ಯಗಳಿಗೆ ಪ್ರಧಾನಿ ಭೇಟಿ ನೀಡಿದಾಗೆಲ್ಲ ಆ ರಾಜ್ಯಗಳಿಗೆ ವಿಶೇಷ ಪ್ಯಾಕೇಜುಗಳನ್ನು ನೀಡುವ ಭರವಸೆ ಕೊಡುತ್ತ ಬಂದಿರುವುದನ್ನು ಕಾಣಬಹುದಾಗಿದೆ. ಆದರೆ ನಮ್ಮ ರಾಜ್ಯಕ್ಕೆ ಅಂತಹ ಯಾವುದೇ ವಿಶೇಷ ಅನುದಾನವನ್ನೂ ನೀಡುವ ಬಗ್ಗೆ ಅವರು ಮಾತನಾಡಿಲ್ಲ. ರಾಜ್ಯದಲ್ಲಿ ಅವರು ಮಾಡುತ್ತಿರುವ ಬಹುತೇಕ ಭಾಷಣಗಳು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸುವುದರಲ್ಲಿಯೇ ಮುಗಿದು ಹೋಗಿದ್ದು, ಕನ್ನಡಿಗರಿಗಂತೂ ನಿರಾಸೆಯನ್ನುಂಟು ಮಾಡಿದೆ.

Share

Leave a comment

Your email address will not be published. Required fields are marked *

Recent Posts More

  • 2 weeks ago No comment

    ಕವಿಸಾಲು | ಇಂಡೋನೇಶಿಯಾ

        ಕವಿಸಾಲು         ಕಿಚ್ಚೆದ್ದು ಕುಣಿವ ನೀರು ಬಿರುಗಾಳಿ ತುಂಬಿದ ಒಡಲು ಎತ್ತೊಯ್ದು ಬಿಸಾಡಿ ಇಳೆಗೆ ಎದೆಯಿಳಿಸಿದೆ ಕಡಲು ನಡುಗಿಬಿಟ್ಟಳೆ ವಸುಂಧರೆ ಶತಕೋಟಿ ಬಿರುಕು ಬಿಟ್ಟು ಸುನಾಮಿಯ ಕೋಪಕ್ಕೆ ವಿಕಾರವಾಗಿ ಬೊಬ್ಬಿರಿದು ಊಳಿಟ್ಟು ಜೀವ ಜಲ, ಉಸಿರ ಗಾಳಿ ಹುಚ್ಚೆದ್ದು ಕುಣಿದು ಅಪ್ಪಳಿಸಿದ ಆಘಾತಕ್ಕೆ ಕಂಗೆಟ್ಟು ತತ್ತರಿಸಿವೆ ಪ್ರಾಣಿ, ಮನುಜ ಕುಲ ಮಾಡು ಹಾರಿ, ಕಂಬಗಳು ಕುಸಿದು ನೆಲಕಚ್ಚಿವೆ ಮಾನವನ ಬೀಡು ಕತ್ತರಿಸಿ ...

  • 2 weeks ago No comment

    ಕವಿಸಾಲು | ತಡವಿಲ್ಲದಿರಲಿ ಇನ್ನು…

        ಕವಿಸಾಲು         ದಾಳಿಗಳಿಗೆ ಮುಕ್ಕಾದ ಮಂದಿರವಿದು ಕುಸಿದು ಕುಳಿತ ದ್ವಾರಪಾಲಕರು ಎತ್ತರದ ಗೋಡೆಗಳ, ಎಚ್ಚರಿಕೆಯ ಗಂಟೆಗಳು ಕೂಡ ಮೌನವಿಂದು ಮನ ನಿರ್ಮಿಸಿದ ಹೆಬ್ಬಾಗಿಲುಗಳು ಒಲವ ಸಿರಿಗೆ ಚೇತರಿಸಿ ತೆರೆದ ಗಳಿಗೆ ಎತ್ತರದ ಹೊಸ್ತಿಲುಗಳ ತಡೆಯ ದಾಟಿ ತಲುಪಬೇಕಿದೆಯಷ್ಟೆ ಬಯಕೆ ಗುರಿಯನ್ನು ದಟ್ಟ ಹಸಿರಿನ ಕಾಡು, ಆಗಸದ ನೀಲಿ ಬಿಳಿಯ ಮೋಡಗಳ, ಬಿಸಿಲ ಬೆಳಕಿನ ನಡುವೆ ಬಯಲ ಸ್ವೇಚ್ಛೆಯ, ತಿಳಿಗಾಳಿ ತವಕದಲಿ ಬಂಧನಗಳ ...

  • 1 month ago No comment

    ಸ್ವಿಟ್ಜರ್ಲ್ಯಾಂಡಿನ ಕಣ್ಮಣಿ – ಲ್ಯೂಸರ್ನ್

        ನಾನಾ ಆಕರ್ಷಣೆಗಳಿರುವ ಈ ನಗರ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ. ಸ್ವಲ್ಪವೂ ಬೇಸರ ತರಿಸದ ಸುಂದರ ಸ್ವಿಸ್ ನಗರಿ.         “ನಾಳೆ ಸ್ವಿಟ್ಜರ್ಲ್ಯಾಂಡ್” ಎಂದ ಕೂಡಲೇ ಬಸ್ಸಿನಲ್ಲಿ ಹರ್ಷೋದ್ಗಾರ! ಯೂರೋಪಿನ ಪ್ರವಾಸದಲ್ಲಿದ್ದ ನಮಗೆಲ್ಲ ಸ್ವಿಟ್ಜರ್ಲ್ಯಾಂಡ್ ಹೆಸರು ಇಂಪಾಗಿ ಕೇಳಿಸಲು ಕಾರಣಗಳು ಹಲವು. ಮೈಲುಗಟ್ಟಲೆ ಹಸಿರು ನೆಲ, ಹಚ್ಚಹಸಿರು ತುಂಬಿದ ಬೆಟ್ಟಗಳು, ಪರ್ವತಗಳಲ್ಲಿನ ಹಿಮ ಕರಗಿ ಜುಳಜುಳನೆ ಹರಿವ ತಿಳಿ ಬೂದು, ಬಿಳಿ ಬಣ್ಣದ ...

  • 1 month ago No comment

    ಕವಿಸಾಲು | ಒಲವಿನಾಟ

        ಕವಿಸಾಲು       ಶರದೃತು ತೂರಿದ ಪುಂಡ ಗಾಳಿಗೆ ಎಲೆಗಳೆಲ್ಲ ಹಾರಿ ಉದುರಿ ಮಳೆಗೆ, ಬಿಸಿಲ ಝಳಕ್ಕೆ ಒಡಲನೊಡ್ಡಿ ಹಾಡೋ ಹಕ್ಕಿಯ ಗೂಡು ಬರಿದು ಮೈಯ ಕೊಂಕಿಸಿ, ತಲೆಯ ಹೊರಳಿಸಿ ಚಳಿಯ ಮುಸುಕಿನಲ್ಲಿ ಕಂಪಿಸಿದ ಮರಕ್ಕೆ ಚಿಗುರ ಬಯಕೆಯ ನಸು ಪುಳಕ ಹಸಿರ ಉಸಿರಿನ, ಹಕ್ಕಿ ಹಾಡಿನ ಕನಸ ಹೊದಿಕೆಯ ಬಿಸಿ ಒಡಲು ತುಂಬಲು ಬಯಕೆಯಾಗಿ ಟೊಂಗೆ-ರೆಂಬೆಗಳಲಿ ಕವನ ಸದ್ದು ಗದ್ದಲವಿಲ್ಲದೆ ಇತ್ತ ಒಲವಿನೋಲೆಯ ...

  • 1 month ago No comment

    ಕವಿಸಾಲು | ನಕ್ಷತ್ರ ನಾವೆ

      ಕವಿಸಾಲು       ಮೋಡವೇ ಮನೆಯೊಳಗೆ ಇಳಿದಂತೆ ದಟ್ಟವಾದ ಹೊಗೆ ಮನೆಜಂತಿಗಳ ತುಂಬಾ ನೇತುಕೊಂಡಿದೆ ಚುಕ್ಕಿಗಳೇ ಮನೆಯ ಜಂತಿಗಳಲಿ ಯಾತ್ರೆ ಹೊರಟಂತೆ ಕಂಡರು ಮಿನುಕು ಹುಳುಗಳ ಹಾಗೆ ಚಿಮಣಿದೀಪದ ನೆರಳು ಸದಾ ಬೆನ್ನಿಗೆ ಗೋಡೆಗಳು ಅಕ್ಷರಶಃ ಬೂದಿಗುಡ್ಡದಂತೆ ಕಪ್ಪುಕಾಡಿಗೆಗಳ ಹಾಗೆ ಗೋಚರ ಬಾಗಿಲು ಕಿಟಕಿಗಳ ಮೂಲಕ ಬುಸುಗುಡುವ ಹೊಗೆ ಉಗಿಬಂಡಿಯ ಕಾಲಚಕ್ರದಲಿ ದಿನಗಳ ದೂಡಿದಂತೆ ಹೊಗೆಯ ಬೇಗೆಯಲಿ ಅವಳೆಂದೂ ಎದೆಗುಂದಲಿಲ್ಲ ಹಣೆಯ ಬೆವರಿನ ಗಟ್ಟಿ ತಾಜಾತನದ ...


Editor's Wall

  • 31 August 2018
    2 months ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...

  • 30 August 2018
    2 months ago No comment

    ಕಾದಂಬಿನಿ ಕಾಲಂ | ತಮ್ಮ ಶವಪೆಟ್ಟಿಗೆಗೆ ತಾವೇ ಹೊಡೆದುಕೊಂಡ ಮೊದಲ ಮೊಳೆ

                        ಬಹುದೊಡ್ಡ ಪ್ರಜಾಪ್ರಭುತ್ವದ ಅಖಂಡ ಭಾರತವನ್ನು ಅಷ್ಟು ಸುಲಭವಾಗಿ ಸರ್ವಾಧಿಕಾರದ ಹಿಡಿತದಲ್ಲಿ ಬಂಧಿಸುವುದು ಸಾಧ್ಯವಿಲ್ಲ.   2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಕಳವಳಕಾರಿ ಘಟನಾವಳಿಗಳು ಜರುಗುತ್ತಾ ಈ ದೇಶದ ಪ್ರಜ್ಞಾವಂತ ನಾಗರೀಕರ ಕಣ್ಣೆದುರು ಭಯದ ನೆರಳು ಕವಿಯುವಂತೆ ಮಾಡುತ್ತಿವೆ. ದೇಶದೊಳಗೆ ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಸುಳ್ಳು ಸುದ್ಧಿ ಹಬ್ಬಿಸುವುದು, ಆತಂಕ ಸೃಷ್ಟಿಸುವುದು ಇನ್ನೂ ...

  • 26 August 2018
    2 months ago No comment

    ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

        ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.” ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ...

  • 26 August 2018
    2 months ago No comment

    ಕಡು ಭಯಂಕರ ಕತ್ತಲೊಳಗೆ ಅವಳಂಥ ಅದೆಷ್ಟು ಜೀವಗಳೊ!

      ಅವಳೊಳಗೀಗ ಕನಸುಗಳೇ ಇಲ್ಲ. ಮಿಂಚು ಸ್ಫುರಿಸಬೇಕಿದ್ದ ಕಣ್ಣುಗಳಲ್ಲಿ ನಾಳೆಗಳನ್ನು ಚಿಂತಿಸುವ ಯಾತನೆ ಮಾತ್ರವೇ ಸರಿದಾಡುತ್ತಿದೆ.       ಒಂದು ವರದಿಯ ಪ್ರಕಾರ, ಕಳೆದ ಏಪ್ರಿಲ್ ಹೊತ್ತಿಗೆ ಹತ್ತಿರ ಹತ್ತಿರ ಏಳು ಲಕ್ಷದಷ್ಟು ರೋಹಿಂಗ್ಯಾಗಳು ಬಾಂಗ್ಲಾದೇಶದೊಳಕ್ಕೆ ಸೇರಿಕೊಂಡಿದ್ದಾರೆ. ಅವರಲ್ಲಿ ಅರ್ಧಕ್ಕರ್ಧದಷ್ಟು ಮಕ್ಕಳೇ. ಆ ಮಕ್ಕಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ದಮನಿತರು. ಆ ಮಕ್ಕಳ – ಅದರಲ್ಲೂ ಹೆಣ್ಣುಮಕ್ಕಳ ಬದುಕು ಎಂಥ ನರಕಮಯ ಎಂಬುದನ್ನು ...

  • 23 August 2018
    2 months ago No comment

    ಕಾದಂಬಿನಿ ಕಾಲಂ | ದುರ್ಬಲ ಗಳಿಗೆಗಳನ್ನೇ ಹೊಂಚುವ ಹದ್ದುಗಣ್ಣುಗಳೆದುರು ಹೆಣ್ಣು ದೇಹ

                        ಲೋಕದ ನೀತಿಯೇ ಅದಲ್ಲವೇ? ತನ್ನ ಮೂಗಿನ ನೇರಕ್ಕೆ ನ್ಯಾಯ ವಿತರಿಸುವುದು ಮತ್ತು ದುರ್ಬಲರನ್ನೇ ಅಲ್ಲವೇ ಬಲಿಗಂಬಕ್ಕೇರಿಸುವುದು?   ‘ಟೈಟಾನಿಕ್’ ಎನ್ನುವುದು ವಿಕೋಪದ ಸಂದರ್ಭದಲ್ಲಿ ಬಲಿಷ್ಠರ ಕೈ ಹೇಗೆ ಮೇಲಾಗುತ್ತದೆನ್ನುವುದಕ್ಕೆ ಒಂದು ಸಶಕ್ತ ರೂಪಕ. ಅಂಥಲ್ಲಿ ಕೆಳಗಿನವರನ್ನು ತುಳಿಯುವ, ಅವರ ಸವಲತ್ತುಗಳನ್ನು ಕಬಳಿಸಲು ಹವಣಿಸುವ ವಿಕರಾಳ ಆಟವೊಂದು ನಿರಾತಂಕವಾಗಿ ಜರುಗುತ್ತದೆ. ನೆನ್ನೆ ರಾತ್ರಿ ಒಬ್ಬ ಯುವಕ ...