Share

ಮುಗಿದ ಚುನಾವಣಾ ಪ್ರಚಾರ ಮತ್ತು ಉಳಿದುಹೋದ ಬೇಸರ!
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ

ಎಲ್ಲವನ್ನೂ ಮೌನವಾಗಿಯೇ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಮತದಾರ ಯಾವ ತೀರ್ಮಾನಕ್ಕೆ ಬರುತ್ತಾನೆಂಬುದನ್ನು ಕಾದು ನೋಡಬೇಕಿದೆ.

 

ಅಂತೂ ಒಂದು ತಿಂಗಳ ಅಬ್ಬರದ ಚುನಾವಣಾ ಪ್ರಚಾರ ಕೊನೆಗೂ ಮುಗಿದಿದೆ. ಕಳೆದೊಂದು ತಿಂಗಳಲ್ಲಿನ ರಾಜಕೀಯ ವಿದ್ಯಾಮಾನಗಳನ್ನು ಹಿಂದಿರುಗಿ ನೋಡಿದರೆ ವಿಷಾದದ ನಿಟ್ಟುಸಿರು ಹೊರಬರುತ್ತದೆ. ಬಹುಶಃ ನಮ್ಮ ರಾಜ್ಯದ ಚುನಾವಣಾ ಪ್ರಚಾರ ನಾವ್ಯಾರೂ ನಿರೀಕ್ಷಿಸಿರದಷ್ಟು ಕೆಳಮಟ್ಟದಲ್ಲಿ ನಡೆದಿದೆ. ವಸ್ತುನಿಷ್ಠವಾದ ಯಾವುದೇ ಆರೋಗ್ಯಕಾರಿ ಚರ್ಚೆಗಳು ನಡೆಯದೆ, ಆರೋಪ-ಪ್ರತ್ಯಾರೋಪ, ಟೀಕೆ-ಪ್ರತಿಟೀಕೆಗಳೇ ಪ್ರಚಾರದಲ್ಲಿ ಮುಖ್ಯವಾಗಿಹೋಗಿದ್ದು ನಮ್ಮ ದುರಂತವೆನ್ನಬಹುದು.

ಎಲ್ಲಾ ಚುನಾವಣೆಗಳಲ್ಲಿ ನಡೆಯುವಂತೆ ಈ ಚುನಾವಣೆಗಳಲ್ಲಿಯೂ ಹಣದ ಹೊಳೆ ಹರಿದಿದೆ. ತಮ್ಮ ಗೆಲುವಿಗೆ ಬೇಕಾದಂತಹ ಎಲ್ಲ ತಂತ್ರಗಾರಿಕೆಗಳನ್ನೂ ನಮ್ಮ ರಾಜಕೀಯ ಪಕ್ಷಗಳು ಮಾಡಿವೆ. ಅಗತ್ಯವೊ-ಅನಗತ್ಯವೊ ನಮ್ಮ ರಾಜಕಾರಣಿಗಳು ಜಾತಿ ಧರ್ಮಗಳನ್ನು ಚುನಾವಣೆಯ ವಿಷಯವನ್ನಾಗಿಸಿ ಲಾಭ ಪಡೆಯಲು ರಾಜಾರೋಷವಾಗಿಯೇ ಪ್ರಯತ್ನಿಸಿದ್ದಾರೆ.

ನಾವು ಊಹಿಸದ ರೀತಿಯಲ್ಲಿ ರಾಜ್ಯವೊಂದರ ಚುನಾವಣೆಯನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಪ್ರಶ್ನೆಯನ್ನಾಗಿಸಿಕೊಂಡು ಪ್ರಚಾರ ನಡೆಸಿದ್ದು ಕಂಡುಬಂದಿದೆ. ಅದರಲ್ಲೂ ಪ್ರಧಾನಿ ಸ್ವತಃ ವಾರಗಟ್ಟಲೆ ರಾಜ್ಯದಲ್ಲಿ ಸತತವಾಗಿ ರ್ಯಾಲಿಗಳನ್ನು ನಡೆಸಿ ತಮಗೆ ಈ ಚುನಾವಣೆಯಲ್ಲಿ ಗೆಲುವು ಬೇಕೇ ಬೇಕೆಂಬುದನ್ನು ಸೂಚ್ಯವಾಗಿ ತೋರಿಸಿದ್ದಾರೆ. ಅದೇ ರೀತಿ ಇನ್ನೊಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಗೆ ಕೂಡ ಕರ್ನಾಟಕವನ್ನು ಗೆಲ್ಲಬೇಕಾದ ಅನಿವಾರ್ಯತೆ ಇದ್ದು, ಅದರ ರಾಷ್ಟ್ರಾದ್ಯಕ್ಷರು ಎರಡು ತಿಂಗಳುಗಳ ಕಾಲ ರಾಜ್ಯದ ಮೂಲೆಮೂಲೆಗಳನ್ನು ಬಿಡದೆ ಸುತ್ತಾಡಿದ್ದಾರೆ. ಇನ್ನು ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ ಸಹ ಈ ಚುನಾವಣೆಯಲ್ಲಿ ಗೆದ್ದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕಾಗಿದ್ದು ಕುಮಾರಸ್ವಾಮಿಯವರು ತಮ್ಮ ಅನಾರೋಗ್ಯದ ನಡುವೆಯೂ ರಾಜ್ಯ ಪ್ರವಾಸ ಮಾಡಿದ್ದಾರೆ. ಬಿಜೆಪಿ ರಾಷ್ಟ್ರಾದ್ಯಕ್ಷರಂತೂ ರಾಜ್ಯದಲ್ಲಿಯೇ ವಾಸ್ತವ್ಯ ಹೂಡಿ ಪಕ್ಷದ ಪ್ರಚಾರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದನ್ನು ನಾವು ಗಮನಿಸಬೇಕಾಗುತ್ತದೆ. ಕಾಂಗ್ರೆಸ್ ಕೂಡ ರಾಹುಲ್ ಗಾಂದಿಯವರನ್ನು ಮಾತ್ರ ನಂಬದೆ ಒಂದು ದಿನದ ಮಟ್ಟಿಗೆ ಸೋನಿಯಾ ಗಾಂಧಿಯವರನ್ನು ರಾಜ್ಯಕ್ಕೆ ಕರೆಸಿ ಪ್ರಚಾರ ಭಾಷಣ ಮಾಡಿಸಿದೆ.

ವಿಷಾದದ ಸಂಗತಿಯೆಂದರೆ ಈ ಚುನಾವವಣೆಯಲ್ಲಿ ಮತ್ತೆ ನಾಯಕರುಗಳ ವೈಯಕ್ತಿಕ ವಿಚಾರಗಳೇ ಹೆಚ್ಚು ಚರ್ಚೆಗೊಳಪಟ್ಟಿದ್ದು. ಮೋದಿಯವರು ರಾಹುಲರ ಮೇಲೆ ವೈಯಕ್ತಿಕ ದಾಳಿ ನಡೆಸಿ ಅವರ ಸಾಮಾನ್ಯ ಜ್ಞಾನ ಮತ್ತು ಭಾಷಣ ಮಾಡುವ ಪ್ರತಿಭೆಯ ಬಗ್ಗೆ ಅಪಹಾಸ್ಯ ಮಾಡಿದರೆ, ರಾಹುಲರು ಮೋದಿಯವರು ಧರಿಸುವ ಬೆಲೆ ಬಾಳುವ ಉಡುಪುಗಳ ಬಗ್ಗೆ, ಅವರು ಸೇವಿಸುವ ಆಹಾರ-ನೀರಿನ ಬೆಲೆಗಳ ಬಗ್ಗೆ ದಾಳಿ ನಡೆಸಿದರು. ಪ್ರಚಾರದ ಕೊನೆಯ ದಿನಗಳಲ್ಲಿ ಮೋದಿಯವರು ಮತ್ತೆ ಸೋನಿಯಾ ಗಾಂದಿಯವರ ಮೂಲದ ಬಗ್ಗೆ ಪ್ರಸ್ತಾಪಿಸಿ, ಜನತೆ ಮರೆತಿದ್ದ ಅವರ ವಿದೇಶಿ ಮೂಲದ ಬಗ್ಗೆ ನೆನಪು ಮಾಡಿಕೊಡಲು ಪ್ರಯತ್ನಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಭ್ರಷ್ಟಾಚಾರವನ್ನೇ ಪದೇ ಪದೇ ಪ್ರಸ್ತಾಪಿಸುತ್ತ ಗಣಿ ಹಗರಣಗಳನ್ನು ಕೆದಕುತ್ತ ಹೋದರೆ, ಯಡಿಯೂರಪ್ಪನವರು ಸಿದ್ದರಾಮಯ್ಯನವರ ವಾಚಿನ ಬಗ್ಗೆಯೇ ಮಾತಾಡುತ್ತ ಹೋದರು. ಈ ಟೀಕೆ ಪ್ರತಿಟೀಕೆಯಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಏಕವಚನದಲ್ಲಿಯೇ ದೂಷಿಸಿಕೊಳ್ಳುವ ಮಟ್ಟಕ್ಕೂ ಇಳಿದರು. ಇನ್ನು ಕುಮಾರಸ್ವಾಮಿಯವರು ಪ್ರಚಾರದ ಕೊನೆಯ ದಿನ ತಾವು ಗೆಲ್ಲಿಸಿದರೆ ಮಾತ್ರ ನಾನು ಬದುಕುತ್ತೇನೆಂದು ಹೇಳುತ್ತಾ ತಮ್ಮ ಅನಾರೋಗ್ಯದ ಬಗ್ಗೆ ಜನರಿಗೆ ತಿಳಿಸಿ ಅನುಕಂಪ ಗಿಟ್ಟಿಸಲು ಪ್ರಯತ್ನಿಸಿದರು.

ಇನ್ನು ಈ ಪ್ರಚಾರದ ಉದ್ದಕ್ಕೂ ಸುಳ್ಳುಗಳೇ ಪ್ರಮುಖ ಪಾತ್ರ ವಹಿಸಿದ್ದು ವಿಶೇಷವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಕೃತವಾದ ಸುಳ್ಳುಗಳನ್ನು ಹರಿಯಬಿಟ್ಟು ಯವಜನತೆಯನ್ನು ಒಲಿಸಿಕೊಳ್ಳಲು ಪ್ರಯತ್ನಿಸಲಾಯಿತು. ಸ್ವತಃ ಪ್ರಧಾನಿಯವರೇ ಇತಿಹಾಸದ ಕೆಲವು ಸತ್ಯಗಳನ್ನು ಮರೆಮಾಚಿ ಸುಳ್ಳುಗಳನ್ನು ಹೇಳಿ ಸತ್ಯಕ್ಕೆ ಅಪಚಾರ ಮಾಡಿದರು. ನೆಹರೂ ಮಂತ್ರಿಮಂಡಲದಲ್ಲಿ ರಕ್ಷಣಾ ಸಚಿವರಾಗಿದ್ದ ಕೃಷ್ಣ ಮೆನನ್ ಅವರು ಜನರಲ್ ಕಾರ್ಯಪ್ಪ ಮತ್ತು ತಿಮ್ಮಯ್ಯನವರಿಗೆ ಅವಮಾನ ಮಾಡಿದ್ದರೆಂಬ ಸುಳ್ಳು ಹೇಳಿ ನಗೆಪಾಟಲಿಗೀಡಾದರೆ, ಅಂಬೇಡ್ಕರ್ ಅವರಿಗೆ ವಾಜಪೇಯಿಯವರು ಭಾರತ ರತ್ನ ನೀಡಿದರೆಂದು ಮತ್ತೊಂದು ಸುಳ್ಳು ಹೇಳಿ ಇತಿಹಾಸದ ಬಗ್ಗೆ ತಪ್ಪು ಮಾಹಿತಿ ನೀಡಿದರು. ರಾಹುಲ್ ಗಾಂಧಿಯವರು ಸಹ ರಾಜ್ಯದ ಸಮಸ್ಯೆಗಳ ಬಗ್ಗೆ ಹೆಚ್ಚು ಮಾತನಾಡದೆ ಕೇಂದ್ರ ಸರಕಾರದ ಆರ್ಥಿಕ ನೀತಿಗಳ ವಿಚಾರಗಳ ಸುತ್ತ ಮತ್ತು ಮೋದಿಯವರ ಕಾರ್ಯವೈಖರಿಯ ಬಗ್ಗೆಯೇ ಹೆಚ್ಚು ಪ್ರಸ್ತಾಪಿಸುತ್ತ ಹೋದರು.

ಇದರ ಜೊತೆಗೆ ರಾಹುಲ್ ಮತ್ತು ಮೋದಿ ಇಬ್ಬರೂ ಕನ್ನಡಿಗರನ್ನು ಒಲಿಸಿಕೊಳ್ಳಲು ಕನ್ನಡದಲ್ಲಿ ಮಾತಾಡಬೇಕೆಂದು ಹಟಕ್ಕೆ ಬಿದ್ದವರಂತೆ ತಮ್ಮ ಭಾಷಣದ ಮೊದಲ ಕೆಲವು ಸಾಲುಗಳನ್ನು ಕನ್ನಡದ ಕವಿತೆ, ವಚನಗಳನ್ನು ಹೇಳಲು ಹೋಗಿ ಕನ್ನಡವನ್ನು ಅಪಭ್ರಂಶಗೊಳಿಸಿದ್ದು ಜನರಿಗೆ ಮನೋರಂಜನೆ ಒದಗಿಸಿತು.

ಈ ನಡುವೆ ಎಂದಿನಂತೆ ರಾಜ್ಯದಲ್ಲಿ ಅಪಾರ ಹಣ ಜಪ್ತಿಯಾಗಿದೆ. ಆದರೆ ಮಾಮೂಲಿನಂತೆಯೇ ಅದರ ವಾರಸುದಾರರು ಯಾವ ಪಕ್ಷದವರೆಂಬುದನ್ನು ಚುನಾವಣಾ ಆಯೋಗ ಬಹಿರಂಗಪಡಿಸಿಲ್ಲ.

ಈ ಮೊದಲಿನಂತೆ ನಮ್ಮ ರಾಜಕೀಯ ಪಕ್ಷಗಳು ಬೇಗನೆ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡದೆ, ಕೊನನೇ ಗಳಿಗೆಯಲ್ಲಿ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿ ಅವುಗಳ ಬಗ್ಗೆ ಮತದಾರರು ವಿಸ್ತಾರವಾದ ಚರ್ಚೆ ನಡೆಸದಂತೆ ಕಣ್ಣಿಗೆ ಮಣ್ಣೆರಚಲು ಸಫಲವಾಗಿವೆ. ಸಮಾಜದ ಕಟ್ಟ ಕಡೆಯ ಮತದಾರನವರೆಗೂ ಈ ಪ್ರಣಾಳಿಕೆಗಳ್ಯಾವುವೂ ತಲುಪಲೇ ಇಲ್ಲವೆಂಬುದೇ ನೋವಿನ ಸಂಗತಿ.

ಒಟ್ಟಿನಲ್ಲಿ ಚುನಾವಣಾ ಪ್ರಚಾರವೆಂಬ ಒಂದು ತಿಂಗಳ ಬಯಲು ನಾಟಕ ಮುಕ್ತಾಯಗೊಂಡಿದ್ದು, ರಾಜಕೀಯ ಪಕ್ಷಗಳ, ಮತ್ತವುಗಳ ನಾಯಕರುಗಳ ನಿಜಬಣ್ಣ ಬಯಲಾಗಿವೆ. ನಿಜಕ್ಕೂ ಈ ಪ್ರಚಾರದ ವೇಳೆಯಲ್ಲಿ ಚರ್ಚೆಯಾಗಬೇಕಿದ್ದ ಕೃಷಿಬಿಕ್ಕಟ್ಟು, ಬೆಲೆಯೇರಿಕೆ, ನಿರುದ್ಯೋಗ ಸಮಸ್ಯೆಯಂತಹ ವಿಚಾರಗಳು ಮರೆಯಾಗಿ ವೈಯುಕ್ತಿಕ ತೇಜೋವಧೆ, ಸವಾಲು-ಪ್ರತಿಸವಾಲುಗಳ ಜುಗಲ್ ಬಂದಿಯಲ್ಲಿಯೇ ಒಂದು ತಿಂಗಳ ಪ್ರಚಾರ ಕಾರ್ಯ ಮುಗಿದು ಹೋಗಿದೆ.

ಇದನ್ನೆಲ್ಲ ಮೌನವಾಗಿಯೇ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಮತದಾರ ಯಾವ ತೀರ್ಮಾನಕ್ಕೆ ಬರುತ್ತಾನೆಂಬುದನ್ನು ಕಾದು ನೋಡಬೇಕಿದೆ. ಆದರೆ ಸಿದ್ಧಾಂತಬದ್ದವಾದ-ತಾತ್ವಿಕ ನೆಲೆಗಟ್ಟಿನಲ್ಲಿ ಚುನಾವಣೆ ನಡೆಯಬೇಕೆಂದು ಆಶಿಸಿದ್ದ ಮತದಾರನಿಗೆ ತೀವ್ರ ನಿರಾಸೆಯಾಗಿರುವುದಂತೂ ನಿಜ.

Share

Leave a comment

Your email address will not be published. Required fields are marked *

Recent Posts More

 • 2 days ago No comment

  ಈ ಸಂಜೆಯೊಳಗೆ

    ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

 • 6 days ago No comment

  ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                      ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

 • 7 days ago No comment

  ಹುಲ್ಲಿನ ಕಡ್ಡಿ

    ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

 • 2 weeks ago No comment

  ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                      ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

 • 2 weeks ago No comment

  ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

    ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

 • 15 August 2018
  6 days ago No comment

  ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                      ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

 • 09 August 2018
  2 weeks ago No comment

  ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                      ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

 • 01 August 2018
  3 weeks ago No comment

  ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                      ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

 • 25 July 2018
  4 weeks ago No comment

  ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                      ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

 • 11 May 2018
  3 months ago No comment

  ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

  ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...