Share

ಬದುಕು ಮತ್ತು ಶೂನ್ಯದ ನಡುವೆ…
ಡಾ. ಪ್ರೇಮಲತ ಬಿ

 

 

ಕವಿಸಾಲು

 

 

 

 

 

 

ಸಂಭವನೀಯ ಘಟನಾ ಪರಂಪರೆಗೆ
ನಿರ್ದಿಷ್ಟತೆಯ ನೆಂಟಸ್ತನ ಬೇಕಿಲ್ಲ
ಅದ್ಭುತ ರಮ್ಯದ ( ಫಂಟಾಸ್ಟಿಕ್ ಫ್ಯಾಂಟಸಿಯ) ಬಣ್ಣಗಳಿಗೆ
ರೂಢಿಯ ಆಲೋಚನಾ ಕ್ರಮವಿಲ್ಲ!

~

ನ್ನ ಫ್ಯಾಂಟಸಿಗಳೆಲ್ಲ ನನ್ನ
ಮನದ ಭೀತಿಯಷ್ಟೇ ಹಳೆಯವು
ವಾಸ್ತವಕ್ಕೆ ದಕ್ಕದ ಅತೀಂದ್ರಿಯ ಅನುಭವಗಳೆಲ್ಲ
ನನ್ನ ಸೃಜನಶೀಲ ಕನಸುಗಳು!

~

ದಿನನಿತ್ಯದ ಜಗತ್ತು ನನಗೆ ಹೊರಕವಚ
ಅದರ ಮೈಯೊಳಗೆ ಬೆಚ್ಚಗೆ ಅರಳುವುದೆಲ್ಲ
ನನ್ನೊಳಗಿನ ಅಸಂಗತ, ವಾಸ್ತವ-ಅವಾಸ್ತವಿಕ
ಅನಿರೀಕ್ಷಿತತೆಯ ತರ್ಕದ ಹರ್ಷ!

~

ದುಕು ಮತ್ತು ಶೂನ್ಯಗಳ ನಡುವೆ
ಬಡಕಲಾಗುವ ಜೀವನ ಪಯಣಕ್ಕೆ ಬೇಕು
ಒಮ್ಮೊಮ್ಮೆ ಸುಪ್ತಪ್ರಗ್ನೆಯ ಸಂದಿಗ್ಧಾರ್ಥಗಳ
ಅವಾಸ್ತವಿಕತೆಯ ಮಾರ್ಗದರ್ಶನ!

~

ಭೂತಕಾಲದ ಆಸೆಗಳ ಬೀಜಕ್ಕೆ
ಭವಿಷ್ಯತ್ತಿನ ಮೊಳಕೆಯ ಮಣ್ಣಿದ್ದರೆ
ಕವಿಸೃಷ್ಟಿಯ ಬಾಧೆಗಳಿಗೆ ಅದು
ಭ್ರಮರದ ವಸಂತ ಸಂಭ್ರಮ!

~

ಸಿಡಿಲೆರೆದು ಒಣಗಿದ ಕಾಷ್ಠ ದಿನನಿತ್ಯದ
ವಿದ್ಯಮಾನಕ್ಕೆ ಜಡವಾಗಿ ನಿದ್ರಿಸುತ್ತಿರುವಂತೆ
ಕಲಕಿದ ಮನೋಲೋಕದ ಭ್ರಾಮಕ ಅಂಶಗಳಿಗೆ
ಬಸಿರಾಗಿ ಚಿಗುರೊಡೆದದ್ದು ಅದ್ಭುತ ರಮ್ಯ!

~

ನ್ನ ಕಾಲಕ್ಕೂ ಎರಡು ಬಗೆಯ ಅಸ್ತಿತ್ವ
ನನಗಾಗಿ ಬದುಕುವ ಕಾಲ
ನಾನು ಇತರರಿಗಾಗಿ ಬದುಕಿ
ತೀರಿಸಬೇಕಿರುವ ಈ ಜಗತ್ತಿನ ಸಾಲ!

~

ಇಂದಿನ ಸ್ಥಿತಿಗೆ ನನ್ನ ಬಂಧಿಸುವ ಶಕ್ತಿ
ನನ್ನ ಕಣ್ನೆಲೆಯಿಂದ ಗ್ರಹಿಸಿದ ಅರ್ಥವೇ
ಅಲ್ಲದೆ, ಮನದಾಳದ ಅನುಭಾವವೂ ಹೌದೆಂಬುದು
ಜಗತ್ತಿನ ಕಠೋರ ಸತ್ಯಗಳಷ್ಟೆ ವಿಪರ್ಯಾಸ!

~

ವಾಸ್ತವದಿಂದ ಬೇಸತ್ತ ಮನಸ್ಸಿಗೆ
ಬೇಕು ಫಂಟ್ಯಾಸ್ಟಿಕ್ ಫ್ಯಾಂಟಸಿಗಳು
ಅವುಗಳಿಂದ ಪಾರಾಗಲು ಪರದಾಡುವಾಗ
ವಾಸ್ತವವೊಡ್ಡುವ ಸವಾಲುಗಳೂ!

~

ಮ್ಮ ಕಲ್ಪನೆಗಳಿಗೆಲ್ಲ ಈ ಜಗದಿ
ಜಾಗವಿದೆ ಎಂದೇ ನಂಬಿಸುವ
ಆಶಯಗಳಿಗೆ ಜೀವನ ಭಯಗಳ
ಬೇಡಿಯಿಂದ ಬಿಡುಗಡೆಯಾಗುವ ಕನಸು!

ಡಾ. ಪ್ರೇಮಲತ ಬಿ

ದಂತವೈದ್ಯೆ. ಕಳೆದ 15 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ. ಬಾಲ್ಯದಿಂದಲೇ ಸಾಹಿತ್ಯದಲ್ಲಿ ಆಸಕ್ತಿ. ಹಲವಾರು ಪತ್ರಿಕೆಗಳಲ್ಲಿ ಬರಹಗಳು ಪ್ರಕಟವಾಗಿವೆ. ಕಥೆ, ಕಾವ್ಯ ಸ್ಪರ್ಧೆಗಳಲ್ಲಿ ಬಹುಮಾನಿತರು.

Share

One Comment For "ಬದುಕು ಮತ್ತು ಶೂನ್ಯದ ನಡುವೆ…
ಡಾ. ಪ್ರೇಮಲತ ಬಿ
"

  1. 13th June 2018

    ಕವಿತೆ ತುಂಬಾ ಇಷ್ಟವಾಯಿತು. ಭಾವನೆಗಳ ಮಹಾಪೂರವೇ ಕವನದ ಗುಚ್ಛವಾಗಿದೆ. ಸೂಪರ್.

    Reply

Leave a comment

Your email address will not be published. Required fields are marked *

Recent Posts More

  • 3 days ago No comment

    ಈ ಸಂಜೆಯೊಳಗೆ

      ಕವಿಸಾಲು       ಈ ಸಂಜೆಯೊಳಗೆ ಗರಿಗೆದರುತ್ತವೆ ಮೌನದಲ್ಲೆ ಗರಬಡಿದ ಮಾತುಗಳು ಹೊಸ ಬಟ್ಟೆಯ ತೊಟ್ಟ ಮಗುವಂತೆ ಸಮುದ್ರದ ದಂಡೆಯಲಿ ದೂರ ಉಳಿದ ಭಾವಗಳು ಅಲೆಗಳಾಗಿ ಬಂದು ಪಾದಮುಟ್ಟಿ ತಮಾಷೆ ಮಾಡುತವೆ ಆಪ್ತ ಗೆಳೆಯನಂತೆ ಗೂಡಿಗೆ ಹೊರಟ ಹಕ್ಕಿಗಳು ತಿರುಗಿ ನೋಡಿವೆ ಬರುವಾಗ ಏನೋ ತಂದಿದ್ದು ಮರೆತು ಬಂದನೋ ಎಂಬಂತೆ ಅಪ್ಪನಿಲ್ಲದ ಮಕ್ಕಳು ಕೂಲಿಗೆ ಹೋದ ತಾಯಿಯ ದಾರಿಯ ಕಣ್ಣು ಮಿಟುಕಿಸದೇ ನೋಡುತಿವೆ ಅರ್ಧದಲೇ ಮರೆತ ...

  • 6 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 1 week ago No comment

    ಹುಲ್ಲಿನ ಕಡ್ಡಿ

      ಕವಿಸಾಲು       ಜೋಪಡಿ ತುಂಬಾ ಮಂಪರುಗಣ್ಣಲ್ಲಿ ನೇತಾಡುವ ಚುಕ್ಕಿಗಳು ಚಂದಿರನ ಅಂಗಳ ಸೃಷ್ಟಿಸಿದ್ದವು ಗುಡಿಸಲು ಕಣ್ಣೊಳಗೆ ಜಾತಿ ಧರ್ಮದ ಹಂಗು ತೊರೆದು ನಡು ಮನೆಯ ದೀಪವಾಗಿ ಬೆಳಗಿದ ಕಸಬರಿಗೆಯ ನಾಡಿಗಳು ಹಲವು ಬಗೆಯ ರಕ್ತ ಬಸಿದವರ ರೂಪಾಂತರ ಸಾಲು ನದಿಗಳ ಸರಪಳಿಯಂತೆ ಬೆಸೆದುಕೊಂಡ ಹುಲ್ಲಿನ ಕಡ್ಡಿಗಳು ಹೊಗೆ ಜಂತಿಯ ಮನೆಯೊಳಗೆ ಜಪ್ಪೆನ್ನದ ತಪೋ ವನಗಳು ಮಳೆ ಗುಡುಗು ಬಿರುಗಾಳಿಯ ಅಬ್ಬರದೊಳಗೂ ಸದಾ ಕುದಿಯುತ್ತಾ ಹದಗೊಳ್ಳೊ ...

  • 2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 2 weeks ago No comment

    ಪ್ರಸಾದ್ ಪಟ್ಟಾಂಗ | ಅರ್ಥ ಅರಿಯದವರಿಗೆ ಸ್ವಾತಂತ್ರ್ಯವೂ ಅಗ್ಗವೇ!

      ನಾವಿಂದು ಸವಿಯುತ್ತಿರುವ ಸ್ವಾತಂತ್ರ್ಯದ ಹಿಂದೆ ಅದೆಷ್ಟೋ ಜೀವಗಳ ಬಲಿದಾನದ ಇತಿಹಾಸವಿದೆ, ಮುತ್ಸದ್ದಿಗಳ ಕನಸಿದೆ, ಧೀಮಂತ ನಾಯಕರ ದೂರದೃಷ್ಟಿಯ ಹಿನ್ನೆಲೆಗಳಿವೆ. ಇವೆಲ್ಲದರ ಬಗ್ಗೆ ಒಂದಿಷ್ಟಾದರೂ ನಮಗೆ ಕೃತಜ್ಞತೆಯ ಭಾವವಿರಬೇಕಷ್ಟೇ.   ಅದೊಂದು ಟೆಲಿವಿಷನ್ ಕಾರ್ಯಕ್ರಮ. ಸುದ್ದಿವಾಹಿನಿಯೊಂದು ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ, ಪ್ರಸ್ತುತ ರಾಜಕೀಯ ನಾಯಕರ ಬಗ್ಗೆ… ಹೀಗೆ ಸಾಮಾನ್ಯಜ್ಞಾನ ಎಂದು ಕರೆಯಬಹುದಾದ ಹಲವು ಪ್ರಶ್ನೆಗಳನ್ನು ತರುಣ-ತರುಣಿಯರಲ್ಲಿ ಕ್ಯಾಮೆರಾ ಮುಂದೆ ಕೇಳುತ್ತಿತ್ತು. ಮಹಾತ್ಮಾ ಗಾಂಧಿಯವರ ಸಂಪೂರ್ಣ ಹೆಸರೇನು? ...


Editor's Wall

  • 15 August 2018
    6 days ago No comment

    ಕಾದಂಬಿನಿ ಕಾಲಂ | ವೇದಿಕೆ, ಶಾಲು, ಸನ್ಮಾನ, ಬಿರುದು ಬಾವಲಿ ಇತ್ಯಾದಿ

                        ಕವಿತೆಯ ಬಗ್ಗೆ ಇರುವ ಆಸಕ್ತಿ ಆ ದೀನ ಹೆಣ್ಣುಮಗಳ ಮಾತು ಆಲಿಸುವುದರಲ್ಲಿ ಇಲ್ಲವೆಂಬುದು ಲೈಕು ಕಮೆಂಟುಗಳಿಂದಲೇ ಸಾಬೀತಾಯಿತು. ಉಳ್ಳವರ ಜಗಮಗಿಸುವ ಲೋಕದಲ್ಲಿ ಒಬ್ಬ ನಿರಾಶ್ರಿತ ಅಲೆಮಾರಿ ಜನಾಂಗದ ನಿರ್ಗತಿಕ ಹೆಣ್ಣಿನ ಅಳಲಿಗೆ ಯಾವ ಜಾಗವಿದೆ ಎನ್ನುವುದನ್ನು ಅದು ನನಗೆ ಮನಗಾಣಿಸತೊಡಗಿತು.   ಮೊನ್ನೆ ಒಬ್ಬ ಕವಿಯ ಜೊತೆ ಬೇಸರದಿಂದ ಮಾತಾಡಿಬಿಟ್ಟೆ. ‘ಶುಭಾಶಯಗಳು. ಆದರೆ ಇಂಥ ...

  • 09 August 2018
    2 weeks ago No comment

    ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

                        ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ಆದರೆ ಹೀಗೆ ಅನಾಥಾಲಯ, ಪುನರ್ವಸತಿ ಕೇಂದ್ರಗಳಿಗೆ ದಾಖಲಾಗುವ ಮುನ್ನಿನ ಆ ಒಂದೊಂದು ಮಗುವಿನ ಕಥೆಯೂ ಅಷ್ಟೇ ಯಾತನಾಪೂರಿತವಾಗಿರುತ್ತವೆ.   ಮೊನ್ನೆ ಮೊನ್ನೆ ಬಿಹಾರದ ಮುಜಫರ್ ನಗರದ ಪುನರ್ವಸತಿ ...

  • 01 August 2018
    3 weeks ago No comment

    ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

                        ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ‘ನಾನ್ ಕಣೇ ರಾಜಿ’ ಎಂದರೆ ನಾನು, ‘ರಾಣಿನಾ?’ ಅನ್ನುತ್ತಿದ್ದೆ. ಅಷ್ಟರಲ್ಲಿ ‘ರಾಜಿ ಮಾರಾಯ್ತೀ ಮರೆತುಬಿಟ್ಯಲ್ಲ’ ಆಪಾದಿಸಿದಳು. ರಾಣಿ ನನ್ನ ಮನೆಯ ಎಡಕ್ಕಿದ್ದ ಗೆಳತಿ. ರಾಜಿ ಬಲಕ್ಕಿದ್ದವಳು. ಇಬ್ಬರ ...

  • 25 July 2018
    4 weeks ago No comment

    ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

                        ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ಹಾಡು ಹಾಕಿದಂತೆಲ್ಲ ಪತಿ ಅದನ್ನು ಆಫ್ ಮಾಡುತ್ತಿದ್ದ. ಚಾಲಕನಿಗೆ ವಿಚಿತ್ರವೆನಿಸಿರಬೇಕು. ‘ಏನ್ ಸಾರ್ ನಿಮಗೆ ಹಾಡು ಕೇಳುವ ಹವ್ಯಾಸ ಇಲ್ವಾ’ ಅಂದಾಗ ‘ಇಲ್ಲ ಅದರಿಂದೇನು ಸಿಗುತ್ತೆ?’ ಎಂದಿದ್ದ ...

  • 11 May 2018
    3 months ago No comment

    ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

    ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ಕಂಡಿದ್ದರಾ? ಆದರೆ ಕಾಂಗ್ರೆಸ್ ನಾಯಕರು ಭ್ರಷ್ಟನೊಬ್ಬ ಜೈಲಿನಲ್ಲಿದ್ದರೆ ಅವನನ್ನು ನೋಡಲು ಹೋಗುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚುನಾವಣೆ ಪ್ರಚಾರ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದರು. ಬ್ರಿಟಿಷ್ ...