Share

ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

 

 

ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?

 

 

“ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.”

ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ಅಗತ್ಯವಿರುವಲ್ಲಿನ ವಿಚಾರಗಳನ್ನು ವಿಮರ್ಶೆಗೊಳಪಡಿಸಲೇಬೇಕಿದೆ. ಇವತ್ತಿನ ಅತ್ಯಂತ ದೊಡ್ಡ ಅಪಾಯವಾಗಿರುವ ಕೋಮುವಾದದ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವಂತಿಲ್ಲ” ಎಂಬ ಎಚ್ಚರಿಕೆಯನ್ನು ಅಮರ್ತ್ಯ ಸೇನ್ ನೀಡಿರುವುದರ ಹಿಂದೆ ಒಂದು ಸೂಕ್ಷ್ಮವಿದೆ. ಅದು, ಒಗ್ಗೂಡಬೇಕಾದ ಪ್ರತಿಶಕ್ತಿಗಳು ಅನವಶ್ಯಕ ಕಲಹಗಳಲ್ಲಿ, ಪ್ರತಿಷ್ಠೆಗಳಲ್ಲಿ ಕಳೆದುಹೋಗುತ್ತ, ಎದುರಾಳಿಯ ವಿರುದ್ಧ ಸೆಣಸಲಾರದ ಸುಳಿಗಳಲ್ಲಿ ಸಿಕ್ಕಿಹಾಕಿಕೊಳ್ಳುತ್ತಿರುವ ಸಂದರ್ಭವನ್ನೇ ಕಾಣುತ್ತಿದ್ದೇವೆಂಬುದು.

ವರದಿಯಾಗಿರುವಂತೆ, ಕೋಲ್ಕೊತ್ತಾದಲ್ಲಿ ‘ಭಾರತ ಎತ್ತ ಸಾಗುತ್ತಿದೆ?’ ಎಂಬ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅಮರ್ತ್ಯ ಸೇನ್, ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸುತ್ತ, 2014ರ ಚುನಾವಣೆಯಲ್ಲಿ ಶೇ.31ರಷ್ಟು ವೋಟುಗಳನ್ನು ಮಾತ್ರವೇ ಪಡೆದಿದ್ದ ಪಕ್ಷವೊಂದು ಕುತ್ಸಿತ ರಾಜಕೀಯ ಉದ್ದೇಶಗಳಿಂದ ಅಧಿಕಾರಕ್ಕೇರಿತು ಎಂದರು. ಕಳೆದ ಕೆಲ ಸಮಯದಿಂದ ದೇಶದ್ರೋಹ ಆಪಾದನೆ ಮೇಲೆ ವಿದ್ಯಾರ್ಥಿಗಳನ್ನು ಬಂಧಿಸಿ, ಪೊಲೀಸರ ವಶದಲ್ಲಿರುವಾಗ ಅವರ ಮೇಲೆ ಕಾನೂನಿಗೆ ವಿರಯದ್ಧವಾಗಿ ದೌರ್ಜನ್ಯ ನಡೆಸಿದ್ದನ್ನೂ, ಅವರ ಮೇಲೆ ಹೊರಿಸಲಾಗಿದ್ದ ದೇಶದ್ರೋಹದ ಆರೋಪ ಸಾಬೀತಾಗದೇ ಇರುವುದನ್ನೂ ಪ್ರಸ್ತಾಪಿಸಿದ ಸೇನ್, ಈಗ ವಿದ್ಯಾರ್ಥಿಗಳ ಮೇಲಾಗುತ್ತಿರುವುದು ನಾಳೆ ಈ ದೇಶದ ಯಾವುದೇ ನಾಗರಿಕನ ಮೇಲೆಯೂ ಆಗುವ ಸಾಧ್ಯತೆ ಇದೆಯೆಂದು ಆತಂಕ ವ್ಯಕ್ತಪಡಿಸಿದರು.

ಸರ್ವಾಧಿಕಾರವನ್ನು ಕೊನೆಗೊಳಿಸುತ್ತೇವೆಂದು ಕೋಮುವಾದದ ಬೀಜವನ್ನು ಬಿತ್ತಹೊರಡುವುದರ ಅಪಾಯವನ್ನೂ ಅಮರ್ತ್ಯ ಸೇನ್ ಇಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ. ಒಗ್ಗಟ್ಟಿನಲ್ಲಿ ಹೋರಾಟದ ಸಮುದ್ರವನ್ನು ನೆರೆಸಬೇಕಾದವರು ಒಬ್ಬೊಬ್ಬರದು ಒಂದೊಂದು ಕಡೆ ಮುಖ ಮಾಡಿಕೊಂಡವರಂತೆ ಹೊರಟಾಗ ಆಗುವ ಬಿರುಕುಗಳು ಇವರನ್ನೇ ನುಂಗಿಹಾಕುವುದೆಂಬ ಸತ್ಯ ಅರ್ಥವಾಗದೇ ಹೋಗುವಲ್ಲೇ ದುಷ್ಟ ರಾಜಕೀಯ ಉದ್ದೇಶಗಳು ಗೆದ್ದು ಬೀಗುವುದೆಂಬ ಎಚ್ಚರವನ್ನು ಧ್ವನಿಸುವ ಅಮರ್ತ್ಯ ಸೇನ್ ಅವರ ಮಾತುಗಳು ಎಡರಂಗಕ್ಕೆ ಸ್ಪಷ್ಟವಾಗಿ ಕೇಳಿಸುವ ಜರೂರು ಇದೆ.

“ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಆದರೆ ಅದು ನಾವು ಸುಧಾರಿಸಲಿಕ್ಕಾಗದೇ ಇರುವಂಥದ್ದಲ್ಲ. ಪ್ರಜಾಪ್ರಭುತ್ವ ಅಪಾಯದಲ್ಲಿದೆಯೆಂದು ನಾವು ಹೇಳಿದರೆ ಯಾರೋ ಕೆಲವರು ನಮ್ಮನ್ನು ಹೊಡೆದಾರು. ಅಷ್ಟಾದರೂ ನಾವು ಜನತೆ ಇದನ್ನು ಸರಿಪಡಿಸುವುದು ಸಾಧ್ಯ” ಎಂಬ ಅಮರ್ತ್ಯರ ಮಾತುಗಳಲ್ಲಿ ದೊಡ್ಡ ಭರವಸೆಯಿದೆ. ಅದು ಜನತೆಯ ಆತ್ಮವಿಶ್ವಾಸವಾಗಬೇಕು. ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಆಗಲೇ ಕೊನೆಗಾಲ.

(ಚಿತ್ರಕೃಪೆ: ಪಿಟಿಐ)

Share

Leave a comment

Your email address will not be published. Required fields are marked *

Recent Posts More

  • 4 days ago No comment

    ಕವಿಸಾಲು | ಕೈಗಳ ಚಾಚಿ ನೋಡು

        ಕವಿಸಾಲು         ಕಟ್ಟಿಕೊಂಡ ಚೌಕಟ್ಟುಗಳ ಮುರಿದುಬಿಡು ಹರಿಯಬಿಡು ಬಿಳಿ ಗೆಣ್ಣುಗಳಿಗೆ ಮೈಯ ತುಂಬ ಹರಿವ ಮಿಂಚುಗಳನು ತುಂಬಿಕೊಳ್ಳಲಿ ರಕ್ತ, ಮಾಂಸಕ್ಕೆ ಮತ್ತೊಮ್ಮೆ ಭಾವಗಳು ಸುಖಿಸಲಿ ಬೊಗಸೆ ತುಂಬ ಬಿಗಿಯಾಗಿ ಮುಚ್ಚಿದ ಮುಷ್ಠಿಯನ್ನು ಬಿಚ್ಚಿ ಒಮ್ಮೆ ನನಗೆ ತೋರಿಸಿಬಿಡು ಬಚ್ಚಿಟ್ಟುಕೊಂಡಿರುವುದು ನಿನ್ನನ್ನೋ ಕಳೆದುಹೋದರೆ ಎಂಬ ಭಯದಲ್ಲಿ ಭದ್ರವಾಗಿ ಹಿಡಿದ ನೆನಪುಗಳನ್ನೋ ಚೆನ್ನಾಗಿ ಗೊತ್ತು ನಿನ್ನ ಬೆಳಗಾಗುವುದು ಆ ಹಸ್ತ ದರ್ಶನದಲಿ ರಾತ್ರಿಯಾಗುವುದು ಅದೇ ...

  • 7 days ago No comment

    ಹೊಸ ಕಾಲದ ಹರಕೆಯ ಕುರಿಗಳು!

      ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ.     ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...

  • 2 weeks ago No comment

    ಕಥನ | ಮುಕ್ತಾಯ

      ಕಥನ       ದಿನದ ಮುಕ್ತಾಯಕ್ಕೆ ಡೈರಿ ಬರೆಯುವುದೊಂದು ಚಟ ನನ್ನ ಪಾಲಿಗೆ. ಅದೆಷ್ಟೋ ಸುಳ್ಳುಗಳನ್ನು ಬರೆದ ಈ ಪಾಪಿ ಕೈಗಳು ಸತ್ಯವನ್ನು ಬರೆಯುವುದು ಇಲ್ಲಿ ಮಾತ್ರ. ಅಂದ ಹಾಗೆ ಇಂದು ಈ ದಿನದ ಮುಕ್ತಾಯವಷ್ಟೇ ಅಲ್ಲ ನನ್ನ ಜೀವನದ್ದೂ ಕೂಡಾ. ರಣರಂಗದಲ್ಲಿ ವೈರಿಗಳೊಡನೆ ಕಾದಾಡುವಾಗ, ಅದೆಷ್ಟೋ ಸೈನಿಕರ ಛಿದ್ರವಾದ ಶವಗಳನ್ನು ಮಣ್ಣು ಮಾಡಿ ಎದೆಗುಂದಿದಾಗ, ಯುಧ್ಧಖೈದಿಯಾಗಿ ಶತ್ರುದೇಶಕ್ಕೆ ಸೆರೆಸಿಕ್ಕಿ ಅವರು ಕೊಟ್ಟ ಚಿತ್ರಹಿಂಸೆಗಳನ್ನು ಅನುಭವಿಸಿದಾಗ ...

  • 2 weeks ago No comment

    ಕವಿಸಾಲು | ಕಾಡುತ್ತಿರು ಆಗಾಗ ನೀನು

        ಕವಿಸಾಲು         ಎಷ್ಟೊಂದು ಸಾರಿ ಮಾತಾಡುತ್ತಿದ್ದೆ ನಿನ್ನೊಡನೆ ಕೂತು ಗಿಡ, ಬಳ್ಳಿ, ಮರ ಮೋಡಗಳನು ಮನ ಮುಟ್ಟುವ ಪ್ರತಿ ಅಲೆಗಳನು ಕರೆದು ಮಾತಾಡಿಸುತ್ತಿದ್ದೆವು ಹದವಾಗಿ ಬೆರೆತು ರಾತ್ರೋ ರಾತ್ರಿಯ ಕಪ್ಪಿನಲಿ ಕೌತುಕದ ಅಪ್ಪುಗೆಯಲಿ ನಡುಗುವ ಚಳಿಯಲಿ ಒಂದಾಗಿ ಬೆಚ್ಚಗೆ ಕುಳಿತು ಕರಿ ಗಿರಿಶಿಖರಗಳ ಬೆಳ್ಳಿರೇಖೆಗಳನು ಫಳ್ಳನೆ ಮಿನುಗುವ ನಕ್ಷತ್ರಗಳನೂ ಕೈಯಲ್ಲಿ ಹಿಡಿದು ಕುಳಿತು ಮುಖಾಮುಖಿಯಾಗಿ ಕೂತು ಹರಟುತ್ತಿದ್ದೆವು ನಾವೊಂದಾಗಿದ್ದಾಗ ನಮಗನಿಸಿದ್ದನ್ನು ದಿನಚರಿ ...

  • 3 weeks ago No comment

    ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು

      ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...


Editor's Wall

  • 09 November 2018
    7 days ago No comment

    ಹೊಸ ಕಾಲದ ಹರಕೆಯ ಕುರಿಗಳು!

      ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ.     ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...

  • 28 October 2018
    3 weeks ago No comment

    ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು

      ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...

  • 31 August 2018
    3 months ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...

  • 30 August 2018
    3 months ago No comment

    ಕಾದಂಬಿನಿ ಕಾಲಂ | ತಮ್ಮ ಶವಪೆಟ್ಟಿಗೆಗೆ ತಾವೇ ಹೊಡೆದುಕೊಂಡ ಮೊದಲ ಮೊಳೆ

                        ಬಹುದೊಡ್ಡ ಪ್ರಜಾಪ್ರಭುತ್ವದ ಅಖಂಡ ಭಾರತವನ್ನು ಅಷ್ಟು ಸುಲಭವಾಗಿ ಸರ್ವಾಧಿಕಾರದ ಹಿಡಿತದಲ್ಲಿ ಬಂಧಿಸುವುದು ಸಾಧ್ಯವಿಲ್ಲ.   2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಕಳವಳಕಾರಿ ಘಟನಾವಳಿಗಳು ಜರುಗುತ್ತಾ ಈ ದೇಶದ ಪ್ರಜ್ಞಾವಂತ ನಾಗರೀಕರ ಕಣ್ಣೆದುರು ಭಯದ ನೆರಳು ಕವಿಯುವಂತೆ ಮಾಡುತ್ತಿವೆ. ದೇಶದೊಳಗೆ ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಸುಳ್ಳು ಸುದ್ಧಿ ಹಬ್ಬಿಸುವುದು, ಆತಂಕ ಸೃಷ್ಟಿಸುವುದು ಇನ್ನೂ ...

  • 26 August 2018
    3 months ago No comment

    ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

        ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.” ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ...