Share

‘ಹ್ಯಾಪಿ ಡೆತ್’ – ಅನಂತನಾಗ್ ನೆನಪಿಸುವ ಆ ಘಟನೆ…
ಶಿವಶಂಕರ್ ಜಿ

 

 

 

ಅನಂತನಾಗ್ ಅವರನ್ನು ತೆರೆಯ ಮೇಲೆ ಒಬ್ಬ ಪ್ರಬುದ್ಧ ನಟರನ್ನಾಗಿ ಮಾತ್ರ ನೋಡಿದ್ದೇವೆ. ಆದರೆ ಅವರೊಳಗಿನ ‘ಲೇಖಕ’ನನ್ನು ಕಾಣಬೇಕಾದರೆ, ಅವರ ‘ನನ್ನ ತಮ್ಮ ಶಂಕರ’ ಕೃತಿಯನ್ನು ಓದಬೇಕು.

 

 

 

“ಕಮೂ ಬರೆದ ಹಲವು ಪ್ರಬಂಧಗಳು, ಕಾದಂಬರಿಗಳಲ್ಲಿ ನನಗೆ ಅತ್ಯಂತ ಪ್ರಿಯವಾದದ್ದು ಅವನ ‘ಎ ಹ್ಯಾಪಿ ಡೆತ್’. ಆದರೆ ಇದನ್ನು ಓದುತ್ತಿದ್ದಾಗ ಅವನಿಗೆ ನಮ್ಮ ಅಧ್ಯಾತ್ಮದ ಪರಿಚಯ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎನಿಸುತ್ತಿತ್ತು.

ಇಲ್ಲೊಂದು ಘಟನೆ ನೆನಪಾಗುತ್ತದೆ. ನನ್ನ ಅಪ್ಪ – ಅಮ್ಮ ಮನೆಯಲ್ಲೊಮ್ಮೆ ಏನೋ ತುಂಬ ಗಂಭೀರವಾಗಿ ಮಾತನಾಡುತ್ತಿರುವುದನ್ನು ನನ್ನ ತಮ್ಮ ಶಂಕರ ಕೇಳಿಸಿಕೊಂಡ. ‘ಅಪ್ಪ ಅಮ್ಮ ಸಾವಿನ ಬಗ್ಗೆ ತುಂಬ ಸೀರಿಯಸ್ಸಾಗಿ ಮಾತಾಡ್ತಿದ್ದಾರೆ, ನೋಡು’ ಎಂದ. ಇಬ್ಬರೂ ಅವರಿಬ್ಬರ ಮಾತು ಕೇಳಿಸಿಕೊಂಡೆವು.

ಅಪ್ಪ ಹೇಳುತ್ತಿದ್ದರು – ‘ನೋಡು, ನಾವು ಮರಣವನ್ನು ಆಹ್ವಾನಿಸಲು ಸಿದ್ಧರಾಗಿರಬೇಕು. ಆದರೆ ಸಾವು ನಿದ್ದೆಯಲ್ಲಿ ಬಂದರೆ ಚೆನ್ನ. ಆಗ ಆ ಸಾವಿನ ನೋವು ಗೊತ್ತಾಗೊಲ್ಲ.’

ಅದಕ್ಕೆ ಅಮ್ಮ ಕೊಟ್ಟ ಉತ್ತರ, ‘ಅಲ್ಲ, ಸಾವನ್ನು ಕೂಡ ನಾವು ಬದುಕಿನಂತೆಯೇ ಎದುರಿಸಬೇಕು. ಆದ್ದರಿಂದ ನಾವು ಎಚ್ಚರವಾಗಿದ್ದಾಗಲೇ ಸಾವು ಬರಬೇಕು.’

ಈ ಮಾತು ಕೇಳಿ ನನಗೆ ಆಗ ಓದುತ್ತಿದ್ದ ಕಮೂ ಪುಸ್ತಕ ನೆನಪಿಗೆ ಬಂತು. ‘ಹ್ಯಾಪಿ ಡೆತ್’ ಎಂದು ತಮಾಷೆ ಮಾಡಿದೆ.

ಇದಾದ ಸ್ವಲ್ಪ ಸಮಯದಲ್ಲೇ ಕಾರು ಅಪಘಾತದಲ್ಲಿ ಶಂಕರ ತೀರಿಕೊಂಡ. ಈ ಪುಸ್ತಕ ಬರೆದ ಸ್ವಲ್ಪ ಸಮಯದಲ್ಲೇ ಕಮೂ ಕೂಡ ಕಾರು ಅಪಘಾತದಲ್ಲಿಯೇ ಸಾವನ್ನಪ್ಪಿದ್ದ. ಸಾವೇನೋ ಸತ್ತವರಿಗೆ ಸಂತಸವೇ ಹೌದು. ಆದರೆ ಬದುಕಿರುವವರಿಗೆ?

ಇಂಥ ಜಿಜ್ಞಾಸೆಯಲ್ಲಿ ಕಮೂವಿನ ಪುಸ್ತಕ ನನ್ನ ಮೇಲೆ ಪ್ರಭಾವ ಬೀರಿತು.” -ಅನಂತನಾಗ್.

*

ನಾವು ಅನಂತನಾಗ್ ಅವರನ್ನು ತೆರೆಯ ಮೇಲೆ ಒಬ್ಬ ಪ್ರಬುದ್ಧ ನಟರನ್ನಾಗಿ ಮಾತ್ರ ನೋಡಿದ್ದೇವೆ. ಆದರೆ ಅವರೊಳಗಿನ ‘ಲೇಖಕ’ನನ್ನು ಕಾಣಬೇಕಾದರೆ, ಅವರ ‘ನನ್ನ ತಮ್ಮ ಶಂಕರ’ ಕೃತಿಯನ್ನು ಓದಬೇಕು. ಅನಂತ್ ಚಿತ್ರೀಕರಣದ ಬಿಡುವಿನಲ್ಲಿ ಸದಾ ಓದುತ್ತಲೇ ಇರುತ್ತಾರೆ ಎಂಬುದನ್ನು ಕೇಳಿದ್ದೇನೆ. ಅವರ ಅಧ್ಯನಶೀಲತೆ, ಸೂಕ್ಷ್ಮ ಗ್ರಹಿಕೆಗಳು, ಆಲ್ಬರ್ಟ್ ಕಮೂ ಬಗ್ಗೆ ಹೇಳುವ ಪರಿ ಬೆರಗು ಹುಟ್ಟಿಸುವಂಥವು.

—–

ಶಿವಶಂಕರ್ ಜಿ

ಬೆಂಗಳೂರು ಬಾಷ್ ಲಿಮಿಟೆಡ್ನಲ್ಲಿ ಟೆಕ್ನೀಷಿಯನ್. ಸಾಹಿತ್ಯ, ಸಂಗೀತ, ರಂಗಭೂಮಿ ಹಾಗೂ ಜಾಗತಿಕ ಸಿನಿಮಾ ಆಸಕ್ತಿಯ ಕ್ಷೇತ್ರಗಳು. ಚಾರಣ ಮತ್ತು ಬರಹ ಹವ್ಯಾಸ. ವಿದಾಯ, ಇಬ್ಬಂದಿ, ತಿರುವು – ಧಾರಾವಾಹಿಯಾಗಿರುವ ಕಥೆಗಳು. ಈಟೀವಿಗಾಗಿ ಪಿ.ಎಚ್. ವಿಶ್ವನಾಥ್ ನಿರ್ದೇಶಿಸಿದ ‘ಪ್ರೇಮ ಕಥೆಗಳು’ ಧಾರಾವಾಹಿಗೆ ಚಿತ್ರಕಥೆ, ಸಂಭಾಷಣೆ. ‘ಸರ್ವಶಿಕ್ಷಣ ಅಭಿಯಾನ’ಕ್ಕಾಗಿ ಹಲವಾರು ಸಾಕ್ಷ್ಯ ಚಿತ್ರಗಳಿಗೆ ಚಿತ್ರಕಥೆ, ಸಂಭಾಷಣೆ ಹಾಗೂ ಸಹನಿರ್ದೇಶನ. ಜಾಲ, ಗಲಿಬಿಲಿ ಕಲ್ಲೇಶಿ ಧಾರಾವಾಹಿಗೆ ಶೀರ್ಷಿಕೆ ಗೀತೆ ರಚನೆ.

Share

Leave a comment

Your email address will not be published. Required fields are marked *

Recent Posts More

  • 1 week ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 2 weeks ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 2 weeks ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 2 weeks ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    1 week ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    4 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    4 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...