ಕವಿ ನಾಗರಾಜ್ ಹರಪನಹಳ್ಳಿ ಅವರು ಬರೆದ ಮಳೆಯೆ ಸುರಿ ಮಳೆಯೆ ಭಾವಗೀತೆಯನ್ನು ಕೆಲ ದಿನಗಳ ಹಿಂದೆ ಕನೆಕ್ಟ್ ಕನ್ನಡ ಪ್ರಕಟಿಸಿತ್ತು. ಅದನ್ನೀಗ ನಿಮಗೆ ಕೇಳಿಸೋಣ ಎಂದುಕೊಂಡೆವು. ಈ ಸೊಗಸಾದ ರಚನೆಗೆ ಗಾಯಕಿ ದೀಪ್ತಿ ಅರ್ಗೇಕರ್ ಜೀವ ತುಂಬಿದ್ದಾರೆ. ಅವರ ದನಿಯಲ್ಲಿ ಒಮ್ಮೆ ಆ ಹಾಡು ಕೇಳಿಸಿಕೊಳ್ಳಿ. ಮಳೆ ಸುರಿಯಲಿ.

ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ಹೆಚ್ಚು ಕಾಣಸಿಗುತ್ತಾರೆ. ಹೆಸರುವಾಸಿ ತಾಣಗಳಲ್ಲಿ ಸದಾ ಜನಜಂಗುಳಿಯಿರುತ್ತದೆ. ದೂರದ ಊರುಗಳೆಂದರೆ ಅದಕ್ಕೆ ತಯಾರಿ ಬೇಕು. ಹಲವು ದಿನಗಳ ಸಿದ್ಧತೆ, ಪ್ರಯಾಣ, ವಿಪರೀತ ಖರ್ಚು ಎಲ್ಲವೂ ಹೌದು. ವಯಸ್ಸಾದವರಿಗೆ ...
ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು. ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ಅಚ್ಚರಿಯ ವಿಚಾರವೆಂದರೆ, ಈ ಸಭೆಗೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ)ದಿಂದ ಯಾವುದೇ ಮುಖಂಡರು ಆಗಮಿಸಿರಲಿಲ್ಲ. ಡಿ.10ರಂದು, ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ...
‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ಆರೋಪಿಸಿದ್ದ ಬಲಪಂಥೀಯ ಕಾರ್ಯಕರ್ತರು ಹಲ್ಲೆಯೆಸಗಿದಾಗ, ತಮ್ಮ ಬರವಣಿಗೆ ಮೇಲೆ ಸ್ವಯಂ ನಿಷೇಧ ಹೇರಿಕೊಂಡಿದ್ದ ಮುರುಗನ್, ಇದೀಗ ಆ ಕಾದಂಬರಿ ಮುಗಿದಲ್ಲಿಂದಲೇ ಆರಂಭಿಸಿ ಮತ್ತೆರಡು ಭಾಗಗಳನ್ನು ಹೊರತಂದಿದ್ದಾರೆ. ಮೊದಲ ...
ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...
ಕವಿಸಾಲು ಕನಸುಗಳ ಜಾತ್ರೆ, ಮನಸುಗಳ ಹಬ್ಬ ಎಲ್ಲ ನಿಶ್ಯಬ್ದ, ಮೌನದಲಿ ಮನ ಬಿಡಿಸಿದ ಮೂರ್ತ ರೂಪಕ್ಕೆ ತದ್ರೂಪು ನಿನ್ನದೇ ಸೊಬಗು ಸುರಿವ ಮಳೆ, ಬೀಸೋ ಗಾಳಿ ಒದ್ದೆಯಾದ ಒಡಲಿನಲಿ ಉರಿವ ನನ್ನೆದೆಯ ಮೇಲೆ ಚಿತ್ತಾರ ಬಿಡಿಸುತ್ತವೆ ನಿನ್ನ ಬೆರಳು ಕರಿಕಪ್ಪು ಚಳಿ ರಾತ್ರಿಯಲಿ ಒಂದಪ್ಪುಗೆಯ ಧ್ಯಾನದಲಿ ಬೆನ್ನ ಸುಳಿ ಸೀಳಿ ಮೇಲೇರುವ ನಡುಕದಲಿ ನಿನ್ನೆದೆಯ ಹರವು ಯಾರೋ, ಯಾವತ್ತೋ ಮರಳ ...
ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...
ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. 2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ ನ.25ರಂದು ಬಿಡುಗಡೆ ಮಾಡಿರುವ ಅಧ್ಯಯನ ವರದಿ. ನವೆಂಬರ್ 25, ...
ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರ ...
ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ. ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...
ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು. ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...
Leave a comment