Share

ನ್ಯಾನೋ ರೈಮೋ – ನಾವೂ ಕಾದಂಬರಿ ಬರೆಯೋಣವೇ?
ಉಷಾ ಕಟ್ಟೆಮನೆ

 

 

 

 

ಪ್ರತಿಯೊಬ್ಬರ ಬದುಕಿನಲ್ಲಿಯೂ ಹಲವಾರು ಕಥೆಗಳಿರುತ್ತವೆ. ಹೆಪ್ಪುಗಟ್ಟಿದ ಕಾವ್ಯವಿರುತ್ತದೆ.

 

 

 

 

ಮಗೆಲ್ಲಾ ಗೊತ್ತಿದೆ; ನವೆಂಬರ್ ತಿಂಗಳೆಂದರೆ ಕರ್ನಾಟಕ ರಾಜ್ಯೋತ್ಸವದ ಮಾಸವೆಂದು. ಅದರೆ ಈ ತಿಂಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ಒಂದು ವಿಶೇಷವಿದೆ. ಅದುವೇ ‘ನ್ಯಾಷನಲ್ ನಾವೆಲ್ ರೈಟಿಂಗ್ ಮಂತ್’. ಇದು ಕಾದಂಬರಿ ಬರೆಯುವ ತಿಂಗಳಂತೆ!

ಏನು ಹಾಗಂದರೆ ಅಂತ ಪ್ರಶ್ನಿಸುತ್ತಿದ್ದೀರಾ?

ಇದು ಅಂತರ್ಜಾಲದಲ್ಲಿ ಸೃಜನಶೀಲ ಬರವಣಿಗಾಗಿ ಹುಟ್ಟಿಕೊಂಡ ಒಂದು ವೇದಿಕೆ. ಅದರ ಹೆಸರು ‘ನ್ಯಾನೋ ರೈಮೋ’ ಅಂದರೆ National writing month. ಈ ಅಂತರ್ಜಾಲ ವೇದಿಕೆಯನ್ನು Charis Baty ಎಂಬ ಹವ್ಯಾಸಿ ಪತ್ರಕರ್ತನೊಬ್ಬ ೧೯೯೯ರ ಜುಲೈ ೨೧ರಂದು ಸಾನ್ ಫ್ರಾನ್ಸಿಸ್ಕೊದಲ್ಲಿ ಆರಂಭಿಸಿದ. ಆ ವರ್ಷ ಈ online ವೇದಿಕೆಯಲ್ಲಿ ೨೧ ಕಾದಂಬರಿ ಬರಹಾಕಾಂಕ್ಷಿಗಳು ತಮ್ಮ ಹೆಸರು ನೊಂದಾಯಿಸಿಕೊಂಡಿದ್ದರು. ಹವಾಮಾನ ಏರುಪೇರು ಕಾರಣಗಳಿಂದಾಗಿ ಮರುವರ್ಷ ಈ ಕಾರ್ಯಾಗಾರವನ್ನು ನವೆಂಬರ್ ತಿಂಗಳಿಗೆ ಬದಲಾಯಿಸಲಾಯ್ತು. ಮತ್ತು ನ್ಯಾನೋ ರೈಮ್ ಚಟುವಟಿಕೆಗಳಿಗಾಗಿ ಸ್ವಂತ website ಅನ್ನು ಲಾಂಚ್ ಮಾಡಿತು. ಮರುವರ್ಷ ಈ ಕಾರ್ಯಾಗಾರದಲ್ಲಿ ಎರಡು ಲಕ್ಷ ಜನ ಭಾಗವಹಿಸಿದ್ದರೆಂದರೆ ಜನರಲ್ಲಿ ಬರೆಯುವ ಹಸಿವು ಎಷ್ಟಿದೆಯೆಂಬುದರ ಅರಿವಾಗಬಹುದು. ನಾವಿಲ್ಲಿ ಗಮನಿಸಬೇಕಾಗಿರುವುದು ಇವರೆಲ್ಲಾ ಸಣ್ಣಪುಟ್ಟ ಕಥೆ ಲೇಖನ ಬರೆಯಲು ಹೊರಟವರಲ್ಲ, ಕಾದಂಬರಿ ಬರೆಯಲು ಮುಂದಾದವರೆಂಬುದು ಮುಖ್ಯ.

ಪ್ರತಿಯೊಬ್ಬರ ಬದುಕಿನಲ್ಲಿಯೂ ಹಲವಾರು ಕಥೆಗಳಿರುತ್ತವೆ. ಹೆಪ್ಪುಗಟ್ಟಿದ ಕಾವ್ಯವಿರುತ್ತದೆ. ಅದನ್ನೆಲ್ಲಾ ಜಗತ್ತಿನೆದುರು ಅಕ್ಷರಗಳಲ್ಲಿ ತೆರೆದಿಡುವ ಸಾಮರ್ಥ್ಯ ಎಲ್ಲರಿಗೂ ದಕ್ಕಿರುವುದಿಲ್ಲ. ಅಂಥವರು ಇಲ್ಲಿ ತಮ್ಮ ಸಾಮರ್ಥ್ಯವನ್ನು ಅಳೆದು ತೂಗಿ ನೋಡಲು ಒಂದು ಅವಕಾಶವಿದೆ. ನಾನು ಕೂಡಾ ಅಂತ ಪ್ರಯತ್ನವೊಂದನ್ನು ಮಾಡಲು ಮುಂದಾಗಿ ನನ್ನ ಹೆಸರನ್ನು ನೊಂದಾಯಿಸಿಕೊಂಡೆ. ಮತ್ತು ಮೊದಲ ದಿನದ ಒಂದು ಸಾವಿರ ಪದಗಳನ್ನು ಇದಕ್ಕಾಗಿಯೇ ನಾನು ರಚಿಸಿಕೊಂಡ ಬ್ಲಾಗಿನಲ್ಲಿ ಅಪ್ಡೇಟ್ ಮಾಡಿ ಬಂದು ಈ ಲೇಖನವನ್ನು ಬರೆಯಲು ಮುಂದಾದೆ.

ಕನ್ನಡದವಳಾದ ನನಗೆ ನವೆಂಬರ್ ಅನ್ನೋದು ಕನ್ನಡದ ತಿಂಗಳು. ಸಾವಿರಾರು ಮೈಲಿ ದೂರದಲ್ಲಿರೋ ಅವರ್ಯಾರೋ ನವೆಂಬರ್ ಅನ್ನು ‘ಕಾದಂಬರಿ ತಿಂಗಳು’ ಅಂತ ಮಾಡಬೇಕಾದ್ರೆ ನಾವ್ಯಾಕೆ ನವೆಂಬರ್ ತಿಂಗಳನ್ನು ‘ಕನ್ನಡ ಕಾದಂಬರಿ ತಿಂಗಳು’ ಅಂತ ಮಾಡಬಾರದು? ಆ ಮೂಲಕ ನವೆಂಬರ್ ತಿಂಗಳಿನಲ್ಲಿ ಅಂತರ್ಜಾಲದಲ್ಲಿ ಕನ್ನಡ ಮನಸ್ಸುಗಳೆಲ್ಲವನ್ನೂ ಒಟ್ಟು ಮಾಡಿಕೊಂಡು ಸೃಜನಶೀಲ ಬರವಣಿಗಳನ್ನು ಆರಂಭಿಸಬಾರದು ಎನ್ನುತ್ತಾ ನ್ಯಾನೋರೈಮಿನ ವೆಬ್ ಸೈಟನ್ನು ಸಂಪರ್ಕಿಸಿ. ಪ್ರಾದೇಶಿಕ ಭಾಷೆಯಲ್ಲಿ ಬರೆಯಬಹುದೇ ಎಂದು ಮಿಂಚಂಚೆಯನ್ನು ರವಾನಿಸಿದೆ. ಅದಕ್ಕೆ ಮರು ಉತ್ತರ ಬರುವ ಮೊದಲೇ ಆಂತರ್ಜಾಲವನ್ನು ಜಾಲಾಡಿ ಪ್ರಾದೇಶಿಕ ಭಾಷೇಯಲ್ಲಿಯೂ ಬರೆಯಬಹುದೆಂಬುದನ್ನು ಮಾಹಿತಿಯನ್ನು ಪಡೆದುಕೊಂಡು ರೈಮೋದ ವೆಬ್ ಸೈಟಿನ ಮಾರ್ಗದರ್ಶನದಲ್ಲಿ wordpressನಲ್ಲಿ ಬ್ಲಾಗ್ ರಚಿಸಿದೆ. ಮೊದಲ ಪೋಸ್ಟ್ ಆಗಿ ‘ಅವಳು ಯಾರು?’ ಎಂಬ ಪೋಸ್ಟ್ ಅಪ್ಡೇಟ್ ಮಾಡಿದೆ. ಇನ್ನು ನಿರಂತರವಾಗಿ ಮೂವತ್ತು ದಿನ ದಿನಕ್ಕೊಂದರಂತೆ ಮೂವತ್ತು postಗಳನ್ನು ಅಪ್ಡೇಟ್ ಮಾಡಬೇಕು.

ನ್ಯಾನೋ ರೈಮಿಗೆ ಬರೆಯಲು ಒಂಚೂರು ನಿಯಮಾವಳಿಗಳಿವೆ. ಮೊದಲನೆಯಾದಾಗಿ ರೈಮೋದ websiteಗೆ ಲಾಗಿನ್ ಆಗಬೇಕು. ಅಲ್ಲಿ ತಮ್ಮ ಬಗೆಗಿನ ಮತ್ತು ತಾವು ಬರೆಯಲಿರುವ ಕಾದಂಬರಿಯ ವಸ್ತುವಿನ ಬಗ್ಗೆ ಪುಟ್ಟ ಟಿಪ್ಪಣಿಯೊಂದನ್ನು ದಾಖಲಿಸಬೇಕು..ಅನಂತರದಲ್ಲಿ website ನಿಮಗೆ ಬ್ಲಾಗ್ ರಚಿಸಿಕೊಳ್ಳಲು ಮಾರ್ಗದರ್ಶನ ಮಾಡುತ್ತದೆ. ಮಿಂಚಂಚೆಯ ಮೂಲಕ ನಿಮ್ಮ ಸಂಶಯಗಳಿಗೆ ಉತ್ತರಿಸುತ್ತದೆ.

ಕಾದಂಬರಿಗೆ ಯಾವುದೇ ಸಬ್ಜೆಕ್ಟ್ ಅನ್ನು ನೀವು ಆಯ್ಕೆ ಮಾಡಿಕೊಳ್ಳಬಹುದು, ಫ್ಯಾಂಟಸಿ, ಕೈಮ್, ವೈನೋದಿಕ, ಪ್ರವಾಸ. ಇತಿಹಾಸ, ವೈಜ್ನಾನಿಕ ಯಾವುದರ ಸುತ್ತ ಬೇಕಾದರೂ ಕಥೆ ಹೆಣೆಯಬಹುದು. ಬರಹದ ಮೊದಲ ಪದ ನವೆಂಬರ್ ಒಂದರ ಮಧ್ಯರಾತ್ರಿ ಬ್ಲಾಗಿನಲ್ಲಿ ದಾಖಲಾಗಿರಬೇಕು. ಕೊನೆಯ ಪದ ನವೆಂಬರ್ ೩೦ರ ಮಧ್ಯರಾತ್ರಿ ೧೧.೫೯.೫೯ಕ್ಕೆ ಮುಕ್ತಾಯವಾಗಿರಬೇಕು. ಸಮಯ ಮೀರಿ ಹೋಯ್ತು ಅಂದುಕೊಂಡಿರಾ? ಪರ್ವಾಗಿಲ್ಲ. ಮುಂದಿನ ವರ್ಷ ಪ್ರಯತ್ನಿಸಬಹುದು.

ಅಲ್ಲಿ ಭಾಗವಹಿಸಿದ ಕೆಲವರು ತಮ್ಮ ಬರವಣಿಗೆಯ ಬಗ್ಗೆ ಹೇಳುತ್ತಾ, ಮೊದಲ ಒಂದೆರಡು ವರ್ಷಗಳಲ್ಲಿ ಅವರ ಪ್ರಯತ್ನ ಸಫಲವಾಗಲಿಲ್ಲ, ಆಮೇಲೆ ತಾವು ಕಾದಂಬರಿಯನ್ನು ಕ್ಲುಪ್ತ ಸಮಯಕ್ಕೆ ಮುಗಿಸಿರುವುದಾಗಿ ಹೇಳಿಕೊಂಡಿದ್ದಾರೆ. ಇನ್ನು ಕೆಲವರಿಗೆ ತಮಲ್ಲಿ ಅಗಾಧ ಅನುಭವ ಮತ್ತು ವಿಷಯಗಳಿದ್ದರೂ ಬರವಣಿಗೆಗೆ ತರಲು ಹಿಂಜರಿಕೆ ಇತ್ತು. ಈಗ ಅದನ್ನು ಸಾಧಿಸಿದ್ದರ ಬಗ್ಗೆ ಹೆಮ್ಮೆ ವ್ಯಕ್ತಪಡಿದ್ದಾರೆ. ಇಂತಹ ಹಿಂಜರಿಕೆಯ ವ್ಯಕ್ತಿತ್ವದವರಿಗಾಗಿಯೇ ಈಗಾಗಲೇ ಹೆಸರು ಪಡೆದ ಕಾದಂಬರಿಕಾರರಿಂದ ತಾವು ತಮ್ಮ ಮೊದಲ ಕಾದಂಬರಿಯನ್ನು ಹೇಗೆ ಬರೆದೆ? ವಸ್ತುವನ್ನು ಹೇಗೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತಾಗಿ online ಉಪನ್ಯಾಸಗಳನ್ನು ರಿಮೋ ಏರ್ಪಡಿಸುತ್ತದೆ.

ಭಾರತದಲ್ಲಿಯೂ ರೈನೋಗೆ ಬರೆಯುವುದರ ಬಗ್ಗೆ ದೆಹಲಿ, ಮುಂಬೈಗಳಲ್ಲಿ ನೊಂದಾಯಿತರ ನಡುವೆ ಆಗಾಗ ಸಂವಾದಗಳು ಏರ್ಪಾಡಾಗುತ್ತಿವೆ. ಅಲ್ಲಿ ಪರಸ್ಪರ ಅನ್ನಿಸಿಕೆ, ಸಂದೇಹ, ಸಲಹೆ. ಸೂಚನೆಗಳ ವಿನಿಮಯವಾಗುತ್ತವೆ. ಹಿಂಜರಿಕೆಯಿರುವವರಿಗೆ ಪ್ರೋತ್ಸಾಹವನ್ನು ತುಂಬಲಾಗುತ್ತದೆ.

ಯಶಸ್ವಿ ೧೬ ವರ್ಷಗಳನ್ನು ಪೂರೈಸಿದ ನ್ಯಾನೋ ರೈಮೋ ಪ್ರಸ್ತುತ ೧೭ನೇ ವರ್ಷಕ್ಕೆ ಕಾಲಿಟ್ಟಿದೆ. ಈ ವರ್ಷದಲ್ಲಿ ಎರಡು ಲಕ್ಷದ ಹದಿನೆಂಟು ಸಾವಿರದ ಎಂಟನೂರ ತೊಂಬತ್ತೇಳು ಜನ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದಾರೆ. ಈ ಅಂತರ್ಜಾಲ ವೇದಿಕೆ ತನ್ನನ್ನು ತಾನು ನ್ನ್ಯಾಷನಲ್ ರೈಟಿಂಗ್ ಮಂತ್ ಎಂದು ಹೇಳಿಕೊಂಡರೂ ಅದು ನಿಜಾರ್ಥದಲ್ಲಿ ಇಂಟರ್ನ್ಯಾಷನಲ್ ಆಗಿದೆ. ಭಾರತದಿಂದಲೂ ಕಳೆದ ವರ್ಷ ೪,೫೦೦ ಜನರು ತಮ್ಮ ಹೆಸರು ನೊಂದಾಯಿಸಿಕೊಂಡಿದ್ದರು. ಸೃಜನಶೀಲ ಬರವಣಿಗೆಯಲ್ಲಿ ನ್ಯಾನೋ ರೈಮೋ ಜಗತ್ತಿನಲ್ಲಿಯೇ ಅತ್ಯಂತ ದೊಡ್ಡದಾದ ವೇದಿಕೆ. ಇದರಲ್ಲಿ ಭಾಗವಹಿಸಿದ ಬರಹಗಾರರು ತಮ್ಮನ್ನು ತಾವು ರೈಮೋಸ್ (’Wrimos’) ಎಂದು ಹೆಮ್ಮೆಯಿಂದ ಕರೆದುಕೊಳ್ಳುತ್ತಾರೆ.

ನಾವು ಕನ್ನಡಿಗರಿಗೆ ನವಂಬರ್ ತಿಂಗಳೆಂದರೆ ಕನ್ನಡದ ತಿಂಗಳು. ಕನ್ನಡದ ಘನತೆಯನ್ನು ಎತ್ತರಿಸುವ ಕೆಲಸಕಾರ್ಯಗಳನ್ನು ಮಾಡಲು ನಾವು ಹವಣಿಸುತ್ತೇವೆ. ಆದರೆ ವಾಸ್ತವದಲ್ಲಿ ನಾವು ಕನ್ನಡದ ಹಬ್ಬವನ್ನು ಮಾತ್ರ ಆಚರಿಸುತ್ತೇವೆ. ಜನಪ್ರಿಯ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತೇವೆ. ದೂರದರ್ಶಿತ್ವವುಳ್ಳ ಯೋಜನೆಗಳನ್ನು ರೂಪಿಸುವುದೇ ಇಲ್ಲ. ನಾವು ನ್ಯಾನೋ ರೈಮೋ ದಂತಹ online ಚಟುವಟಿಕೆಗಳನ್ನು ಹಾಕಿಕೊಳ್ಳುವುದರ ಮುಖಾಂತರ ಕನ್ನಡದ ಯುವ ಮನಸ್ಸುಗಳನ್ನು ಒಂದಾಗಿಸುವ ಪ್ರಯತ್ನ ಮಾಡಬಹುದು. ಇದು ನವೆಂಬರ್ ತಿಂಗಳಿನಲ್ಲಿ ನಡೆಯುವ ಕನ್ನಡ ಕಟ್ಟುವ ನಿಜವಾದ ಕೆಲಸವಾಗಬಹುದು. ಯಾಕೆಂದರೆ ಮುಂಬರುವ ದಿನಮಾನಗಳು ಖಂಡಿತವಾಗಿಯೂ ಅಂತರ್ಜಾಲದ ದಿನಗಳೇ ಆಗಿರುತ್ತವೆ.

ಕಥೆ ಎಂದರೆ ಎಲ್ಲರಿಗೂ ಇಷ್ಟ. ಪುಟ್ಟ ಮಕ್ಕಳು ಕಥೆ ಎಂದೊಡನೆ ಕಣ್ಣರಳಿಸಿ ಗಲ್ಲಕ್ಕೆ ಕೈಯಿಟ್ಟು ಅಜ್ಜಿ ಕಥೆಗಳನ್ನು ಕೇಳುತ್ತಿರುವುದನ್ನು ನೀವೆಲ್ಲಾ ಗಮನಿಸಿಯೇ ಇರುತ್ತೀರಿ. ದೊಡ್ಡವರಾದಂತೆಲ್ಲಾ ನಾವು ಕಲ್ಪನಾ ಜಗತ್ತಿನಿಂದ ಮೆಲ್ಲ ಮೆಲ್ಲನೆ ಕಟು ವಾಸ್ತವದ ಜಗತ್ತಿಗೆ ಬಂದು ಬೀಳುತ್ತೇವೆ. ಆದರೆ ಕಥೆ ಎಂಬುದು ಮತ್ತೆ ಬಾಲ್ಯಕ್ಕೆ ಸೇತುವೆ ಕಟ್ಟುತ್ತದೆ; ಮತ್ತೆ ಯೌವನಕ್ಕೆ ರೆಕ್ಕೆ ಮೂಡುತ್ತದೆ.

ನಾನಂತೂ ಬರೆಯಲು ಆರಂಭಿಸಿದ್ದೇನೆ. ಪ್ರವಾಸದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬ್ಲಾಗ್ ಆರಂಭಿಸಿದ್ದೇನೆ. ಮುಂದೆ ಯಾವ್ಯಾವ ತಿರುವುಗಳನ್ನು ಪಡೆಯುತ್ತದೋ ನನಗೇ ಗೊತ್ತಿಲ್ಲ. ಅಂತೂ ಕಳೆದುಹೋಗುವುದಕ್ಕೆ ಸಿದ್ಧಳಾಗಿದ್ದೇನೆ. ಎಲ್ಲವೂ ಸರಿಯಾದರೆ ಡಿಸೆಂಬರ್ ಮೊದಲ ವಾರದಲ್ಲಿ ‘?’ ಎಂಬ ಕಾದಂಬರಿ ಓದುಗರ ಕೈಸೇರಲೂ ಬಹುದು!

————–

ಉಷಾ ಕಟ್ಟೆಮನೆ

ಪತ್ರಕರ್ತೆಯಾಗಿ, ಅದಕ್ಕೂ ಮೊದಲು ಕನ್ನಡ ಉಪನ್ಯಾಸಕಿಯಾಗಿ ಕೆಲಸ ಮಾಡಿದವರು. ದೃಶ್ಯ ಮಾಧ್ಯಮಕ್ಕಾಗಿಯೂ ಕೆಲಸ ಮಾಡಿದ ಅನುಭವ. ಆದರೆ ಅವರು ಪರಿಚಿತರಾಗಿರುವುದು ತಮ್ಮ ವಿಶಿಷ್ಟ ಸಂವೇದನೆಯ ಬರವಣಿಗೆಯಿಂದಾಗಿ. ಕೆಲ ವರ್ಷಗಳಿಂದ ಕೃಷಿಯಲ್ಲಿಯೂ ತೊಡಗಿಸಿಕೊಂಡಿದ್ದಾರೆ. ದೇಶ ಸುತ್ತುವುದೆಂದರೆ ಇವರಿಗೆ ಅತ್ಯಂತ ಇಷ್ಟ. ‘ಪಾರಿಜಾತದ ಬಿಕ್ಕಳಿಕೆ’ ಅವರ ಪ್ರಕಟಿತ ಕೃತಿ.

Share

2 Comments For "ನ್ಯಾನೋ ರೈಮೋ – ನಾವೂ ಕಾದಂಬರಿ ಬರೆಯೋಣವೇ?
ಉಷಾ ಕಟ್ಟೆಮನೆ
"

  1. Krishna Nayak hichkad
    7th November 2017

    ಇದಿಂದು ಮಾರ್ಗರ್ಶಿ ಲೇಖನ. ಇಂತಹದೊಂದು ಸ್ಪರ್ಧೆ ಕನ್ನಡದಲ್ಲಿ ಅವಶ್ಯಕ. ೨೦೧೪ ರ ‘ನಾನರಮೋ’ ಸ್ಪರ್ಧೆಯಲ್ಲಿ ನನ್ನ ಮಗ ಆಕಾಶ ನಾಯಕ ಭಾಗವಹಿಸಿ, ಏಶಿಯನ್ ರಿಜನ್ ಗೆ ಬಹುಮಾನ ಪಡೆದಿರುತ್ತಾನೆ. ಆ ಇಂಗ್ಲಿಷ್‌ ಕಾದಂಬರಿ MORNING GLORY (scientific psychological thriller) ನ್ನು ಸ್ವಪ್ನಾ ಬುಕ್ ಹೌಸ್, ಬೆಂಗಳೂರು ಈಗಾಗಲೇ ಪ್ರಕಟಿಸಿದೆ.

    Reply
    • ನಿಮ್ಮ ಮಗನಿಗೆ ಅಭಿನಂದನೆಗಳು.
      ಸರ್, ಈ ಖುಷಿಯನ್ನು ನೀವು ಪೇಸ್ಬುಕ್ ನಲ್ಲಿ ಇದ್ದರೆ ನನ್ನ ವಾಲ್ ನಲ್ಲಿ [ಅಲ್ಲಿ ಈ ಲೇಖನವನ್ನು ಹಂಚಿಕೊಂಡಿದ್ದೇನೆ.] ಕಾಮೆಂಟ್ ಆಗಿ ಹಾಕಲು ಸಾಧ್ಯವೇ?
      ನಿಮ್ಮ ಮಗನ ಹಾಗೆ ಕೆಲವು ಜನರಾದರೂ ಕಾದಂಬರಿ ಬರೆಯಲು ಮುಂದಾಗಬಹುದೆನೋ ಎಂಬ ನಿರೀಕ್ಷೆ ನನಗೆ.
      ಥ್ಯಾಂಕ್ಸ್ ಸರ್.

      Reply

Leave a comment

Your email address will not be published. Required fields are marked *

Recent Posts More

  • 1 month ago No comment

    ಪಂಡಿತರ ಹಳ್ಳಿಯ ‘ಮಂದರಗಿರಿ’

                  ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ಹೆಚ್ಚು ಕಾಣಸಿಗುತ್ತಾರೆ. ಹೆಸರುವಾಸಿ ತಾಣಗಳಲ್ಲಿ ಸದಾ ಜನಜಂಗುಳಿಯಿರುತ್ತದೆ. ದೂರದ ಊರುಗಳೆಂದರೆ ಅದಕ್ಕೆ ತಯಾರಿ ಬೇಕು. ಹಲವು ದಿನಗಳ ಸಿದ್ಧತೆ, ಪ್ರಯಾಣ, ವಿಪರೀತ ಖರ್ಚು ಎಲ್ಲವೂ ಹೌದು. ವಯಸ್ಸಾದವರಿಗೆ ...

  • 3 months ago No comment

    ಬಿಜೆಪಿ ವಿರೋಧಿ ರಂಗ: ಪ್ರತಿಪಕ್ಷ ಸಭೆಯಲ್ಲಿ 20 ಪಕ್ಷಗಳು

    ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು.   ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ಅಚ್ಚರಿಯ ವಿಚಾರವೆಂದರೆ, ಈ ಸಭೆಗೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ)ದಿಂದ ಯಾವುದೇ ಮುಖಂಡರು ಆಗಮಿಸಿರಲಿಲ್ಲ. ಡಿ.10ರಂದು, ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ...

  • 3 months ago No comment

    ಅರ್ಧನಾರಿ ಕಥೆಯ ಮತ್ತೆರಡು ಭಾಗಗಳು

    ‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ಆರೋಪಿಸಿದ್ದ ಬಲಪಂಥೀಯ ಕಾರ್ಯಕರ್ತರು ಹಲ್ಲೆಯೆಸಗಿದಾಗ, ತಮ್ಮ ಬರವಣಿಗೆ ಮೇಲೆ ಸ್ವಯಂ ನಿಷೇಧ ಹೇರಿಕೊಂಡಿದ್ದ ಮುರುಗನ್, ಇದೀಗ ಆ ಕಾದಂಬರಿ ಮುಗಿದಲ್ಲಿಂದಲೇ ಆರಂಭಿಸಿ ಮತ್ತೆರಡು ಭಾಗಗಳನ್ನು ಹೊರತಂದಿದ್ದಾರೆ. ಮೊದಲ ...

  • 3 months ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 3 months ago No comment

    ಅಲೆಗಳಾಗುವ ಹಾಡು

        ಕವಿಸಾಲು         ಕನಸುಗಳ ಜಾತ್ರೆ, ಮನಸುಗಳ ಹಬ್ಬ ಎಲ್ಲ ನಿಶ್ಯಬ್ದ, ಮೌನದಲಿ ಮನ ಬಿಡಿಸಿದ ಮೂರ್ತ ರೂಪಕ್ಕೆ ತದ್ರೂಪು ನಿನ್ನದೇ ಸೊಬಗು ಸುರಿವ ಮಳೆ, ಬೀಸೋ ಗಾಳಿ ಒದ್ದೆಯಾದ ಒಡಲಿನಲಿ ಉರಿವ ನನ್ನೆದೆಯ ಮೇಲೆ ಚಿತ್ತಾರ ಬಿಡಿಸುತ್ತವೆ ನಿನ್ನ ಬೆರಳು ಕರಿಕಪ್ಪು ಚಳಿ ರಾತ್ರಿಯಲಿ ಒಂದಪ್ಪುಗೆಯ ಧ್ಯಾನದಲಿ ಬೆನ್ನ ಸುಳಿ ಸೀಳಿ ಮೇಲೇರುವ ನಡುಕದಲಿ ನಿನ್ನೆದೆಯ ಹರವು ಯಾರೋ, ಯಾವತ್ತೋ ಮರಳ ...


Editor's Wall

  • 08 December 2018
    3 months ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 30 November 2018
    3 months ago No comment

    ರಕ್ಕಸ ವ್ಯೂಹದಲ್ಲಿ ಹೆಣ್ಣಿನ ಹೋರಾಟ

    ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ.    2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ ನ.25ರಂದು ಬಿಡುಗಡೆ ಮಾಡಿರುವ ಅಧ್ಯಯನ ವರದಿ. ನವೆಂಬರ್ 25, ...

  • 29 November 2018
    3 months ago No comment

    ರೈತರ ಸಂಕಟಗಳಿಗೆ ಸಿಗುವುದೆ ಮುಕ್ತಿ?

      ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.     ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರ ...

  • 09 November 2018
    4 months ago No comment

    ಹೊಸ ಕಾಲದ ಹರಕೆಯ ಕುರಿಗಳು!

      ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ.     ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...

  • 28 October 2018
    4 months ago No comment

    ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು

      ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...