ಅಧಿಕ ಪ್ರಸಂಗ | ಹೀಗೊಂದು ಕ್ಲೀನಿಂಡಿಯಾ ನಾಟಕ
ಬ್ಯಾಸ್ಗೆ. ಎಕ್ಸಾಮುಗಳೆಲ್ಲ ಮುಗಿದು, ಇದ್ದಬದ್ದ ಒಂದೆರಡು ನೋಟುಬುಕ್ಕುಗಳನ್ನೂ ಆಗಲೇ ರದ್ದಿರೂಪದಲ್ಲಿ ಮಾರಿ ಅದಕ್ಕೆ ಪ್ರತಿಯಾಗಿ ಒಂದೆರಡು ಬಟಾಟೆ ವಡಾ ಹೊಟ್ಟೆಗಿಳಿಸಿ ಕೃತಾರ್ಥರಾಗಿರುವ ಕಾಲೇಜು ಹುಡುಗರಲ್ಲಿ ಕೆಲವರ ಗ್ಯಾಂಗು ಲಂಕೇಶರ ಪದ್ಯದಲ್ಲಿ ಬರುವ ಕರಿಯವ್ನ ಗುಡಿಯಂಥದೇ ಗುಡಿಯೆದುರಿನ ನೆಲ್ಲಿಬೇಣದಲ್ಲಿ ಬಂದು ತಾಡುವುದಿದೆ. ...