Share

ಒಟ್ನಲ್ಲಿ ಹೀರೋಗ್ ಮಾತ್ರ ಮೋಸ ಆಗ್ಬಾರ್ದು…
ಕೆ ಎಲ್ ಚಂದ್ರಶೇಖರ ಐಜೂರು

 

 

 

 

ಇದು ನಿಜಕ್ಕೂ Male Dominated Chauvinism. ಪುರುಷಾಧಿಪತ್ಯದ ಕ್ರೂರನಡೆ. ಭಾರತೀಯ ಚಿತ್ರರಂಗ ಇನ್ನಾದರೂ ಇಂಥ ಪೂರ್ವಗ್ರಹಗಳಿಂದ ಹೊರಬಂದಿಲ್ಲ ಅನ್ನುವುದೇ ಅತ್ಯಂತ ಖೇದಕರ.

 

 

 

 

‘ಮದುವೆಯಾಗಿ ಮೂರು ದಿನಕ್ಕೆ ನಾನು ಮನೆಬಿಟ್ಟು ಹೊರಬಂದೆ; ನನ್ನ ಗಂಡ ಅವನ ಕಿರುಬೆರಳಿಂದ ಕೂಡ ನನ್ನನ್ನು ಮುಟ್ಟಿಲ್ಲ, ನನ್ನ ಹೊಟ್ಟೆಲಿರೋ ಮಗು ನಿಂದು, ನನ್ನ ನಂಬು.’ –ಇದು ‘ಅರ್ಜುನ್ ರೆಡ್ಡಿ’ ಸಿನಿಮಾ ಇನ್ನೇನು ಮುಗಿಯಬೇಕು ಎನ್ನುವ ಹೊತ್ತಿಗೆ ಚಿತ್ರದ ನಾಯಕನಟಿ ನಾಯಕನಿಗೆ ಹೇಳುವ ಮಾತು.

ಇಲ್ಲಿ ನಾಯಕನಿಗಿಂತ ಚಿತ್ರ ನೋಡುತ್ತಿರುವ ಪ್ರೇಕ್ಷಕರು ನಿಟ್ಟುಸಿರು ಬಿಡಬಹುದು. ‘ಸದ್ಯ ಹೀರೋಗ್ ಅನ್ಯಾಯ ಆಗ್ಲಿಲ್ಲ’ ಎಂದುಕೊಂಡೇ ಜನ ಥೇಟರಿನಿಂದ ಹೊರಬರಬಹುದು. ಇದೇ ಮೊದಲೇನಲ್ಲ; ಬಹುಶಃ ಇಂಥ ಸನ್ನಿವೇಶಗಳು ಭಾರತೀಯ ಚಲನಚಿತ್ರಗಳಲ್ಲಿ ದಂಡಿಯಾಗಿ ಕಾಣಿಸಿಕೊಂಡಿವೆ. ಜಡ್ಡುಗಟ್ಟಿದ ಭಾರತದ ಮಡಿವಂತ ಮನಸ್ಸುಗಳು ಯಾವ ಕಾರಣಕ್ಕೂ ‘ಭಾರತೀಯ ಚಲನಚಿತ್ರಗಳ’ಲ್ಲಿ ನಾಯಕನಟನಿಗೆ ನಾಯಕಿಯಿಂದ ಮೋಸವಾಗುವುದನ್ನು ಸಹಿಸುವುದಿಲ್ಲ. ಇದೊಂದು ರೀತಿ ‘ಯೋನಿ ಪಾವಿತ್ರ್ಯೀಕರಣ’ದ ಅತಿರೇಕ.

ಕನ್ನಡದ ಹಿರಿಯ ನಟರಾದ ಡಾ. ರಾಜ್‍ಕುಮಾರ್, ವಿಷ್ಣುವರ್ಧನ್ ಮೊದಲಾದವರ ಅನೇಕ ಚಿತ್ರಗಳಲ್ಲೂ ಇಂಥ ಅತಿರೇಕಗಳು ಅತ್ಯಂತ ಢಾಳಾಗಿಯೇ ಕಾಣಿಸಿಕೊಂಡಿವೆ. ‘ನಾ ನಿನ್ನ ಮರೆಯಲಾರೆ’ ಚಿತ್ರದಲ್ಲಿ ನಾಯಕನಿಗೆ ಕೈಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗುವ ನಟಿಯ ಬದುಕು ಕೇವಲ ಒಂದೇ ದಿನಕ್ಕೆ ದುರಂತ ಅಂತ್ಯ ಕಾಣುತ್ತದೆ. ‘ಮೊದಲ ರಾತ್ರಿ’ ಘಟಿಸುವ ಮುನ್ನವೇ ಆ ನಟಿಯನ್ನು ಮದುವೆಯಾದವ ಸಾವಿಗೀಡಾಗುತ್ತಾನೆ. ‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ್ದೂ ಇದೇ ಗೋಳಿನ ಕತೆ. ನಾಯಕನಿಗೆ ಬೆನ್ನುಮಾಡಿ ಬೇರೊಬ್ಬನನ್ನು ಪರಿಸ್ಥಿತಿಯ ಅನಿವಾರ್ಯದಿಂದ ವರಿಸುವ ಯಾವ ನಾಯಕನಟಿಯ ಬದುಕೂ ಹಸನಾಗುವುದಿಲ್ಲ.

‘ಯೋನಿ ಪಾವಿತ್ರ್ಯೀಕರಣ’ದ ಅತಿರೇಕ ಮುಂದುವರೆದು ನಾಯಕನಟನಿಗೆ ಯಾವುದೇ ತರಹದಲ್ಲೂ ಅನ್ಯಾಯವಾಗದಂತೆ ಚಿತ್ರಕಥೆ ಬರೆದವರು, ನಿರ್ದೇಶನ ಮಾಡಿದವರು ಹೆಚ್ಚಿನ ಜಾಗ್ರತೆ ವಹಿಸುತ್ತಾರೆ. ಇದು ನಿಜಕ್ಕೂ Male Dominated Chauvinism. ಪುರುಷಾಧಿಪತ್ಯದ ಕ್ರೂರನಡೆ.

ಭಾರತೀಯ ಚಿತ್ರರಂಗ ಇನ್ನಾದರೂ ಇಂಥ ಪೂರ್ವಗ್ರಹಗಳಿಂದ ಹೊರಬಂದಿಲ್ಲ ಅನ್ನುವುದೇ ಅತ್ಯಂತ ಖೇದಕರ.

ಇಷ್ಟು ಮಾತ್ರ ಹೇಳಲು ‘ಅರ್ಜುನ್ ರೆಡ್ಡಿ’ ಒಂದು ನೆಪವಷ್ಟೇ.

————–

ಕೆ.ಎಲ್. ಚಂದ್ರಶೇಖರ ಐಜೂರು

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯ ಕಾನೂನು ಕಾಲೇಜಿನಲ್ಲಿ ಕ್ರಿಮಿನಲ್ ಕಾನೂನು ಉಪನ್ಯಾಸಕ. ‘A Critical Evaluation of Implementation of The Scheduled Castes and the Scheduled Tribes (Prevention of Atrocities) Act, 1989 with special reference to the state of Karnataka’ ಕುರಿತು ಪಿಎಚ್.ಡಿ. ಅಧ್ಯಯನ. 2007-08ರಲ್ಲಿ ಪ್ರಕಟಗೊಂಡ ‘ಕನ್ನಡ ಟೈಮ್ಸ್’ ವಾರಪತ್ರಿಕೆಯ ಸಂಪಾದಕರಾಗಿದ್ದರು. ಕಾನೂನು, ಸಮಾಜ, ಸಿನಿಮಾ ಮತ್ತು ಸಾಹಿತ್ಯ ಇವರ ಆಸಕ್ತಿಯ ಕ್ಷೇತ್ರಗಳು.

Share

Leave a comment

Your email address will not be published. Required fields are marked *

Recent Posts More

  • 1 week ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 2 weeks ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 2 weeks ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 2 weeks ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    1 week ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    4 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    4 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...