Share

ದಲಿತರ ಪ್ರತಿಭಟನೆ: ನೀಲಿ ಬಣ್ಣದ ಸಂಕೇತವೇನು?
ದ್ರವಿಡ

 

ಇಂದು ಜಾತ್ಯತೀತತೆಯ ಬಣ್ಣಗಳು, ವೈವಿಧ್ಯತೆಯಲ್ಲಿ ಏಕತೆಯ ಬಣ್ಣಗಳು, ಕೋಮು ಸಾಮರಸ್ಯದ ಬಣ್ಣಗಳೆಲ್ಲವನ್ನೂ ಒಂದೇ ಒಂದು ಬಣ್ಣ ತೊಳೆದುಹಾಕುತ್ತಿದೆ. ಹೀಗಿರುವಾಗ, ದಲಿತರ ಪ್ರತಿಭಟನೆಯ ಬಣ್ಣ ಆತ್ಮಬಲವನ್ನು ಒಳಗೊಂಡು ಗಾಢವಾಗಬೇಕಿರುವುದರ ಅಗತ್ಯವನ್ನು ಎಲ್ಲ ದಮನಿತರ ಹೋರಾಟದ ಆಂತರ್ಯವು ಮನಗಾಣಬೇಕಾಗಿದೆ.

 

ಸ್ ಎಸ್‍ಟಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ಮಾ.20ರ ತೀರ್ಪು ವಿರೋಧಿಸಿ ಸಾವಿರಾರು ದಲಿತರು ಮೊನ್ನೆ ದೆಹಲಿ ಮೂಲಕ ಮೆರವಣಿಗೆ ನಡೆಸಿದ ವೇಳೆ ಎಲ್ಲೆಲ್ಲೂ ನೀಲಿ ಧ್ವಜಗಳೇ ರಾರಾಜಿಸುತ್ತಿದ್ದವು. ದಲಿತರ ಪ್ರತಿಭಟನೆಯಲ್ಲಿ ನೀಲಿ ಧ್ವಜಗಳು ಕಣ್ಸೆಳೆಯುತ್ತಿರುವುದು ಇದೇ ಮೊದಲ ಸಲವೇನೂ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಇದೊಂದು ಗುರುತಿನಂತೆ ದಲಿತ ಹೋರಾಟದೊಡನೆ ಬೆರೆತುಕೊಂಡಿದೆ.

2006ರ ಖೈರ್ಲಾಂಜಿ ನರಮೇಧ, 2016ರಲ್ಲಿ ಹೈದರಾಬಾದಿನಲ್ಲಿ ನಡೆದ ದಲಿತ ವಿದ್ಯಾರ್ಥಿ ರೋಹಿತ ವೇಮುಲ ಆತ್ಮಾಹುತಿ ಪ್ರಕರಣ, ಅದೇ ವರ್ಷದ ಉನಾ ದೌರ್ಜನ್ಯದ ವೇಳೆ ನಡೆದ ದಲಿತ ಪ್ರತಿಭಟನೆಗಳಲ್ಲಿ, ಈ ವರ್ಷದ ಶುರುವಿನಲ್ಲಿ ಮಹಾರಾಷ್ಟ್ರದಲ್ಲಿ ನಡೆದ ಭೀಮಾ-ಕೋರೆಗಾಂವ್ ಯುದ್ಧದ ದ್ವಿಶತಮಾನ ಸಂಭ್ರಮಾಚರಣೆ ಹೊತ್ತಲ್ಲಿ ನೀಲಿಧ್ವಜಗಳದ್ದೇ ಸಾಗರವಿತ್ತು. ಕಳೆದ ವರ್ಷದ ಜುಲೈನಲ್ಲಿ ಗುಜರಾತಿನ ಲಾವಾರಾ ಗ್ರಾಮದ ನಾಲ್ಕು ದಲಿತ ಕುಟುಂಬಗಳಿಗೆ ಸೇರಿದ್ದೆಂದು 12 ಎಕರೆ ಜಮೀನಿನ ವಿಚಾರವಾಗಿ ವಾದಿಸಿದ್ದ ದಲಿತರು ನೀಲಿಧ್ವಜಗಳನ್ನು ಮೆರವಣಿಗೆಗಾಗಿ ಮಾತ್ರ ಬಳಸದೆ, ಸಂಬಂಧಿಸಿದವರಿಗೆ ಜಮೀನಿನ ಹಸ್ತಾಂತವಾಯಿತೆಂದು ಅದೇ ನೀಲಿಧ್ವಜಗಳನ್ನು ಆ ಜಮೀನಿನಲ್ಲಿ ನಿಲ್ಲಿಸುವ ಮೂಲಕ ಘೋಷಿಸಿದ್ದ ಸಂದರ್ಭವನ್ನು ನೋಡಿದರೆ ಅದರ ಅರ್ಥವ್ಯಾಪ್ತಿ ತಂತಾನೇ ವಿಸ್ತರಿಸಿಕೊಂಡಿರುವುದು ಕಾಣುತ್ತದೆ.

ಹಾಗಾದರೆ, ದಲಿತರ ಹೋರಾಟದಲ್ಲಿ ಈ ನೀಲಿ ಬಣ್ಣಕ್ಕಿರುವ ಸಂಕೇತವೇನು? ಇಂಥದೊಂದು ಸಾಂಕೇತಿಕತೆಯ ಹಿಂದಿರುವುದು ನೀಲಿಯು ಆಕಾಶದ ಬಣ್ಣವೆಂಬುದೇ ಆಗಿದೆ. ಆಕಾಶ ಯಾವ ತಾರತಮ್ಯವನ್ನೂ ಮಾಡುವುದಿಲ್ಲ. ಅದರಡಿಯ ಎಲ್ಲರೂ ಸಮಾನರು. ಇಂಥ ಹಲವು ಥಿಯರಿಗಳು ನೀಲಿಧ್ವಜದ ಸುತ್ತ ಇವೆಯಾದರೂ, ನೀಲಿಬಣ್ಣವೇ ಯಾಕೆ ದಲಿತರ ಪ್ರತಿಭಟನೆಯ ಬಣ್ಣವಾಯಿತೆಂಬುದಕ್ಕೆ ಖಚಿತ ಇತಿಹಾಸವಿಲ್ಲ ಎಂಬ ವಾದವೂ ಇದೆ. ಬಿ ಆರ್ ಅಂಬೇಡ್ಕರ್ ಅವರು ಇಂಡಿಪೆಂಡೆಂಟ್ ಲೇಬರ್ ಪಾರ್ಟಿಗೆ ನೀಲಿಬಣ್ಣದ ಧ್ವಜವನ್ನು ಆರಿಸಿದ್ದು ಕೂಡ ದಲಿತರು ಮತ್ತು ಶ್ರಮಿಕ ಸಮುದಾಯದ ಮನಸ್ಸನ್ನು ಆವರಿಸಿದ್ದಿತ್ತು. ದೇಶದ ಮೂಲೆಮೂಲೆಗಳಲ್ಲಿ ಕಾಣುವ ಅಂಬೇಡ್ಕರ್ ಪ್ರತಿಮೆಗಳು ನೀಲಿ ಸೂಟ್‍ನಲ್ಲಿರುವುದು ಕೂಡ ಈ ಸಾಂಕೇತಿಕತೆಯ ಸ್ಫೂರ್ತಿ ಎನ್ನಲಾಗುತ್ತದೆ.

ಧೈರ್ಯಗೆಡುವ ಸಂಗತಿಯೆಂದರೆ, ಒಂದೆಡೆ ದಲಿತರು ಸ್ವಾವಲಂಬನೆಯ ಸಂಕೇತವಾಗಿ ನೆಚ್ಚಿದ ಬಣ್ಣವನ್ನೇ ಮತ್ತೊಂದೆಡಯಿಂದ ಅವರನ್ನು ಪ್ರತ್ಯೇಕಿಸಿ ನೋಡುವುದಕ್ಕೆ, ಸಾಮಾಜಿಕವಾಗಿ ಬಹಿಷ್ಕರಿಸುವುದಕ್ಕೆ ಬಳಸಿದ್ದೂ ಇದೆ. 1995ರಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಮೈತ್ರಿ ಸರ್ಕಾರ ಸವರ್ಣೀಯ ಮಕ್ಕಳಿಂದ ಪ್ರತ್ಯೇಕಗೊಳಿಸಲು ದಲಿತ ಮಕ್ಕಳಿಗೆ ನೀಲಿ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಿತ್ತೆಂಬುದನ್ನು ಗಮನಿಸಬೇಕು (‘Civil Society, Public Sphere and Citizenship: Dialogues and Perceptions’ ಎಂಬ ಪುಸ್ತಕದಲ್ಲಿ ಈ ಕುರಿತು ಚರ್ಚೆಯಿದೆ).

ಇಂಥ ಕ್ಷುದ್ರ ರಾಜಕಾರಣದ ಈ ಕಾಲದಲ್ಲಿನ ಮತ್ತೂ ಒಂದು ಆತಂಕದ ಸಂಗತಿಯನ್ನು ಗಮನಿಸಬೇಕು. ಏನೆಂದರೆ ಬಣ್ಣಗಳ ಬಗ್ಗೆ ಇವತ್ತು ಎಷ್ಟು ಎಚ್ಚರ ವಹಿಸಿದರೂ ಕಡಿಮೆಯೇ. ಇಂದು ಜಾತ್ಯತೀತತೆಯ ಬಣ್ಣಗಳು, ವೈವಿಧ್ಯತೆಯಲ್ಲಿ ಏಕತೆಯ ಬಣ್ಣಗಳು, ಕೋಮು ಸಾಮರಸ್ಯದ ಬಣ್ಣಗಳೆಲ್ಲವನ್ನೂ ಒಂದೇ ಒಂದು ಬಣ್ಣ ತೊಳೆದುಹಾಕುತ್ತಿದೆ. ಹೀಗಿರುವಾಗ, ದಲಿತರ ಪ್ರತಿಭಟನೆಯ ಬಣ್ಣ ಆತ್ಮಬಲವನ್ನು ಒಳಗೊಂಡು ಗಾಢವಾಗಬೇಕಿರುವುದರ ಅಗತ್ಯವನ್ನು ಎಲ್ಲ ದಮನಿತರ ಹೋರಾಟದ ಆಂತರ್ಯವು ಮನಗಾಣಬೇಕಾಗಿದೆ.

Share

Leave a comment

Your email address will not be published. Required fields are marked *

Recent Posts More

  • 6 days ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 6 days ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 6 days ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 1 week ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 2 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    6 days ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    2 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    3 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    3 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...