Share

ನಿರ್ಣಾಯಕ ಸನ್ನಿವೇಶವಾಗಿರುವ ಕರ್ನಾಟಕ ಚುನಾವಣೆ
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ

 

 

ಒಂದು ದೇಶವನ್ನು ಜಾತ್ಯತೀತ ನೆಲೆಗೆ ತಂದು ನಿಲ್ಲಿಸುವುದು ಕೋಮುವಾದವನ್ನು ಹರಡಿದಷ್ಟು ಸುಲಭವಂತೂ ಆಗಿರಲು ಸಾಧ್ಯವಿಲ್ಲ. ಹಾಗಾಗಿ ಈ ದೇಶದ ಬಹುಸಂಸ್ಕೃತಿ, ಜಾತ್ಯತೀತ ಪರಂಪರೆಯ ಭವಿಷ್ಯವನ್ನು ನಿರ್ಧರಿಸುವ ಸಂದರ್ಭವಾಗಿ ಕರ್ನಾಟಕದ ಚುನಾವಣೆ ಕಾಣಿಸುತ್ತಿದೆ.

 

 

ರುವ ಮೇ 12ರ ಕರ್ನಾಟಕ ವಿಧಾನಸಭಾ ಚುನಾವಣೆಗಳು ಮೂರೂ ರಾಜಕೀಯ ಪಕ್ಷಗಳಿಗೆ ಅವುಗಳದೇ ಆದ ಕಾರಣಗಳಿಗೆ ಮುಖ್ಯವಾದರೆ, ನಮ್ಮ ರಾಜ್ಯ ಮತ್ತು ದೇಶದ ಇತರೆಡೆಗಳ ಜನಸಮುದಾಯದ ಪಾಲಿಗೂ ಈ ಚುನಾವಣೆಯ ಫಲಿತಾಂಶದಿಂದಾಗುವ ಸಾಧಕ ಬಾಧಕಗಳು ಗಂಭೀರ ಚರ್ಚೆಯ ವಿಚಾರಗಳಾಗಿವೆ. ಈ ಸತ್ಯವನ್ನು ನಮ್ಮ ಮಾಧ್ಯಮಗಳೂ ಹೇಳುತ್ತಿರುವಂತೆ ಕಾಣುತ್ತಿಲ್ಲ. ಅವುಗಳ ಸುದ್ದಿ-ವಿಶ್ಲೇಷಣೆಗಳೇನಿದ್ದರೂ ಅಮಿತ್ ಶಾ ಎನ್ನುವ ಚಾಣಕ್ಯನ ತಂತ್ರಗಾರಿಕೆಯ ಉತ್ಪ್ರೇಕ್ಷಿತ ನಡವಳಿಕೆಗಳು, ಯಡಿಯೂರಪ್ಪ ಮುಖ್ಯಮಂತ್ರಿಯಾಗಬಲ್ಲ ಸಾಧ್ಯತೆ, ಸಿದ್ದರಾಮಯ್ಯನವರು ಎದುರಿಸಬಹುದಾದ ಅಥವಾ ಮಾಧ್ಯಮದ ಒಂದು ವರ್ಗವು ಬಯಸುವ ಪ್ರಕಾರ ಎದುರಿಸಬೇಕಾದ ಸೋಲು ಇಂಥ ವಿಚಾರಗಳ ಸುತ್ತಲೇ ಗಿರಕಿ ಹೊಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಯಾಕೆ ರಾಜಕೀಯ ಪಕ್ಷಗಳಿಗೆ ಮಾತ್ರವಲ್ಲದೆ, ಇಡೀ ದೇಶಕ್ಕೆ ಕರ್ನಾಟಕದ ಚುನಾವಣೆ ಮಹತ್ವಪೂರ್ಣವಾಗಿದೆ ಎಂಬುದನ್ನು ವಸ್ತುನಿಷ್ಠವಾಗಿ ಪರಿಶೀಲಿಸಬೇಕು.

ಕಾಂಗ್ರೆಸ್

ರಾಹುಲ್ ಗಾಂಧಿಯವರು ಪಕ್ಷದ ಅದ್ಯಕ್ಷರಾಗಿ ನೇಮಕವಾದ ನಂತರದಲ್ಲಿ ನಡೆಯುತ್ತಿರುವ ದೊಡ್ಡ ರಾಜ್ಯವೊಂದರ ಚುನಾವಣೆ ಇದಾಗಿದ್ದು, ಅವರ ಜನಪ್ರಿಯತೆಯನ್ನು ಮತ್ತು ಪಕ್ಷದ ಮೇಲೆ ಅವರಿಗಿರಬಹುದಾದ ಹಿಡಿತವನ್ನು ಸಾಬೀತುಪಡಿಸಲು ಈ ಚುನಾವಣೆಯಲ್ಲಿ ಅವರು ತಮ್ಮ ಪಕ್ಷವನ್ನು ಗೆಲ್ಲಿಸಲೇಬೇಕಾಗಿದೆ. ಅದೂ ಅಲ್ಲದೆ ಈಶಾನ್ಯ ಭಾರತದ ಚಿಕ್ಕ ರಾಜ್ಯಗಳನ್ನೂ ಸೋತ ನಂತರದಲ್ಲಿ ತಮ್ಮ ಕೈಲಿ ಉಳಿದಿರುವ ಏಕೈಕ ದೊಡ್ಡ ರಾಜ್ಯವನ್ನು ಗೆದ್ದು, ವರ್ಷದ ಕೊನೆಯಲ್ಲಿ ನಡೆಯಲಿರುವ ರಾಜಾಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸಘಡ್ ರಾಜ್ಯಗಳಲ್ಲಿ ಅಧಿಕಾರವನ್ನು ಪುನಃ ಪಡೆಯಲು ಬೇಕಾದ ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಲು ಕರ್ನಾಟಕವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಕಾಂಗ್ರೆಸ್ಸಿಗಿದೆ. ಪಕ್ಷವು ಗಟ್ಟಿಯಾಗಿ ಬೇರು ಬಿಟ್ಟಿರುವ ಮತ್ತು ಅಧಿಕಾರದಲ್ಲಿರುವ ಕರ್ನಾಟಕವನ್ನು ಉಳಿಸಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕ್ರೋಢೀಕರಿಸಿಕೊಳ್ಳುವ ದಿಸೆಯಲ್ಲಿ ಕಾಂಗ್ರೆಸ್ ಈ ಚುನಾವಣೆಯನ್ನು ಗೆಲ್ಲಲೇಬೇಕಿದೆ.

ಅದೂ ಅಲ್ಲದೆ ಕಾಂಗ್ರೆಸ್ಸೇತರ ಸಂಯುಕ್ತ ರಂಗವೊಂದರ ಮಾತು ಕೇಳಿಬರುತ್ತಿರುವ ಈ ಸಂದರ್ಭದಲ್ಲಿ ತನ್ನನ್ನು ಬಿಟ್ಟು ಇಂತಹದೊಂದು ರಂಗ ಕಟ್ಟುವುದರಿಂದ ಬಿಜೆಪಿಗೇ ಅನುಕೂಲವಾಗುತ್ತದೆಯೆಂಬ ಸಂದೇಶವನ್ನು ಅದರ ನಾಯಕರುಗಳಿಗೆ ತಲುಪಿಸಬೇಕಾಗಿದೆ. ಅಷ್ಟಲ್ಲದೆ ಪ್ರಾದೇಶಿಕ ಪಕ್ಷಗಳ ನಾಯಕರುಗಳು ಬಿಜೆಪಿಯನ್ನು ಎದುರಿಸುವ ತಮ್ಮ ಕಾರ್ಯತಂತ್ರದಲ್ಲಿ ಕಾಂಗ್ರೆಸ್ಸನ್ನು ಹೊರಗಿಟ್ಟು ಯಶಸ್ಸು ಸಾಧಿಸಲು ಸಾಧ್ಯವಿಲ್ಲವೆಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಲು ಕರ್ನಾಟಕದ ಚುನಾವಣೆಗಳನ್ನು ಗೆದ್ದು ಶಕ್ತಿ ಪ್ರದರ್ಶನ ಮಾಡಬೇಕಾದ ಅಗತ್ಯ ಕಾಂಗ್ರೆಸ್ಸಿಗೆ ಇದೆ.

ಬಿಜೆಪಿ

ಹಾಗೆ ನೋಡಿದರೆ ಬಿಜೆಪಿ ಪಾಲಿಗೆ ಕರ್ನಾಟವನ್ನು ಹೊರತುಪಡಿಸಿದರೆ ದಕ್ಷಿಣ ಭಾರತದ ಇನ್ಯಾವ ರಾಜ್ಯದಲ್ಲಿಯೂ ಹೇಳಿಕೊಳ್ಳುವಂತಹ ನೆಲೆಯಿಲ್ಲ. ಹೀಗಾಗಿ ದಕ್ಷಿಣ ಭಾರತದ ರಾಜ್ಯಗಳನ್ನು ಗೆಲ್ಲಲು ಅದು ಮೊದಲು ಕರ್ನಾಟಕದಲ್ಲಿ ಗೆಲ್ಲಲೇಬೇಕಾಗಿದೆ. ಈ ರಾಜ್ಯವನ್ನು ಗೆದ್ದಲ್ಲಿ ಇದನ್ನು ಬಳಸಿಕೊಂಡು ಈಗಾಗಲೇ ನಾಯಕನಿರದೆ ಗೊಂದಲದ ಗೂಡಾಗಿರುವ ತಮಿಳುನಾಡು ರಾಜಕಾರಣದಲ್ಲಿ ತನ್ನ ಛಾಪನ್ನು ಮೂಡಿಸಲು ಅದು ಪ್ರಯತ್ನಪಡುವುದು ನಿಶ್ಚಿತ. ಅದೇ ರೀತಿ ಆಂಧ್ರಪ್ರದೇಶದಲ್ಲಿ ತನ್ನ ಮೈತ್ರಿಯಿಂದ ಹೊರನಡೆದಿರುವ ತೆಲುಗುದೇಶಂ ಪಕ್ಷದ ಸ್ಥಾನ ತುಂಬಲು ಇತರ ಸಣ್ಣ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಆಂಧ್ರವನ್ನು ಗೆಲ್ಲುವ ಪ್ರಯತ್ನವನ್ನೂ ಮಾಡಲು ಮುಂದಾಗುತ್ತದೆ. ಕೇರಳದಲ್ಲಿಯೂ ದುರ್ಬಲಗೊಳ್ಳುತ್ತಿರುವ ಕಾಂಗ್ರೆಸ್ಸನ್ನು ಮಣಿಸಲು ಅದು ಎಲ್ಲ ತಂತ್ರಗಳನ್ನು ಅನುಸರಿಸಲು ಹೊರಡುತ್ತದೆ. ಹೀಗಾಗಿ ಬಿಜೆಪಿಗೆ ಕರ್ನಾಟಕದ ಚುನಾವಣೆ ಗೆಲ್ಲುವುದು ಬಹಳ ಅಗತ್ಯವಾಗಿದೆ.

ಜೊತೆಗೆ ಬಹುತೇಕ ರಾಜ್ಯಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ಸನ್ನು ಮತ್ತಷ್ಟು ದುರ್ಬಲಗೊಳಿಸಲು ಆಸೆಪಡುತ್ತಿರುವ ಬಿಜೆಪಿಗೆ ಕನಾಟಕದಲ್ಲಿ ಗೆಲ್ಲಲೇಬೇಕಾಗಿದೆ. ಕನಾಟಕದಲ್ಲಿನ ಬಿಜೆಪಿ ಸೋಲು ಉತ್ತರ ಭಾರತದ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧವಾದ ಅಲೆಯೊಂದನ್ನು ಸೃಷ್ಟಿಸಲು ನೆರವಾಗುತ್ತದೆ. ಯಾಕೆಂದರೆ ಹೆಚ್ಚು ಕಡಿಮೆ ಐದು ವರ್ಷಗಳಿಂದ ಉತ್ತರ ಭಾರತದಲ್ಲಿ ಬಿಜೆಪಿ ಆಡಳಿತವೇ ಇದ್ದು (ರಾಜಾಸ್ಥಾನ್, ಮಧ್ಯಪ್ರದೇಶಗಳಲ್ಲಿ 2013ರಲ್ಲಿಯೇ ಬಿಜೆಪಿ ಅಧಿಕಾರ ಹಿಡಿದಿತ್ತು), ಆಡಳಿತ ವಿರೋಧಿ ಅಲೆ ಏಳುವ ಸಾದ್ಯತೆಯಿದೆ. 2014ರ ಹಾಗೆ ಆ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲುವುದು ಸಾಧ್ಯವಿಲ್ಲ. ಅದೂ ಅಲ್ಲದೆ ಈ ವರ್ಷದ ಕೊನೆಯಲ್ಲಿ ರಾಜಾಸ್ಥಾನ್, ಮಧ್ಯಪ್ರದೇಶ ಮತ್ತು ಛತ್ತೀಸ್ ಘಡ್ ರಾಜ್ಯಗಳಿಗೆ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಗೆಲ್ಲಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಅದೀಗ ಕರ್ನಾಟಕವನ್ನು ಗೆದ್ದು ಆ ರಾಜ್ಯಗಳ ಜನತೆಗೆ ಒಂದು ಸಂದೇಶವನ್ನು ನೀಡಬೇಕಾದ ಒತ್ತಡದಲ್ಲಿದೆ. ಕನಾಟಕದಲ್ಲಿ ಗೆಲ್ಲುವುದರ ಮೂಲಕ, ಕೇಂದ್ರ ಸರಕಾರ ತೆಗೆದುಕೊಂಡ ಆರ್ಥಿಕ ನೀತಿಗಳು ಜನಪರವಾಗಿದ್ದವೆಂಬುದನ್ನು ಒತ್ತಿಹೇಳಲು ಅದು ಕಾದಿದೆ. ಜೊತೆಗೆ ಮೋದಿ ಜನಪ್ರಿಯತೆಯ ಅಲೆ ಇನ್ನೂ ತಗ್ಗಿಲ್ಲವೆಂಬುದನ್ನು ಸಹ ಅದು ತೋರಿಸಿಕೊಡಬೇಕಾಗಿದೆ. ಹೀಗಾಗಿ ಬಿಜೆಪಿಗೆ ಕರ್ನಾಟಕದಲ್ಲಿ ಗೆಲ್ಲುವುದು ಮುಖ್ಯವಾಗಿದ್ದು, ಅದಕ್ಕಾಗಿ ಎಲ್ಲ ತಂತ್ರಗಾರಿಕೆಯನ್ನೂ ಬಳಸುತ್ತಿದೆ.

ಜಾತ್ಯತೀತ ಜನತಾದಳ

ಇನ್ನು ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾ ದಳಕ್ಕೆ ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಾಗದೇ ಹೋದರೂ ಕನಿಷ್ಠ ಐವತ್ತು ಸ್ಥಾನಗಳನ್ನಾದರೂ ಪಡೆಯಲೇಬೇಕಾದ ಅನಿವಾರ್ಯತೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಸಂಪನ್ಮೂಲ ಮತ್ತು ತಂತ್ರಗಾರಿಕೆಗಳ ಮುಂದೆ ಜನತಾದಳ ಸಪ್ಪೆಯಾಗಿ ಗೋಚರಿಸುತ್ತಿದ್ದರೂ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಅದಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಅದರ ಕಾರ್ಯಕರ್ತರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಬೇಕಾದ್ದು ಜನತಾದಳಕ್ಕೆ ಸವಾಲಾಗಿ ಪರಿಣಮಿಸಿದೆ. ಈ ಚುನಾವಣೆಯಲ್ಲೇನಾದರೂ ಅದು ತೀರಾ ಕಡಿಮೆ ಸ್ಥಾನಗಳನ್ನು ಗೆದ್ದರೆ ಮುಂದಿನ ಚುನಾವಣೆಯ ಹೊತ್ತಿಗೆ ಅದು ಅಸ್ಥಿತ್ವದಲ್ಲಿರುವುದು ಕಷ್ಟವಾಗುತ್ತದೆ.

ಇನ್ನು,

ಕನಾಟಕದ ಈ ಬಾರಿಯ ಚುನಾವಣೆ ಪಕ್ಷಗಳ ದೃಷ್ಟಿಯಿಂದ ಹೀಗೆ ಮುಖ್ಯವಾದರೆ, ಇನ್ನು ಜನತೆಯ ದೃಷ್ಟಿಯಿಂದ ಮತ್ತು ಈ ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದಲೂ ಬಹುಮುಖ್ಯ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಬಿಜೆಪಿ ಗೆದ್ದು ಅಧಿಕಾರ ಹಿಡಿದರೆ ರಾಷ್ಟ್ರದಲ್ಲಿ ಮತೀಯ ಶಕ್ತಿಗಳನ್ನು ತಡೆಯಬಲ್ಲ ದೊಡ್ಡ ರಾಜಕೀಯ ಶಕ್ತಿಯೊಂದು ಇಲ್ಲದಂತಾಗಿಬಿಡುತ್ತದೆ. ಉತ್ತರ ಭಾರತದಾದ್ಯಂತ ಹರಡಿ ಹೋಗಿರುವ ಮತೀಯ ರಾಜಕಾರಣ ದಕ್ಷಿಣ ಭಾತದದಲ್ಲಿಯೂ ವ್ಯಾಪಿಸಿಬಿಡುವ ಅಪಾಯವಿದೆ. 2019ರ ಸಾರ್ವತ್ರಿಕ ಚುನಾವಣೆಗಳನ್ನು ಗೆಲ್ಲುವ ಎಲ್ಲ ದಾರಿಗಳನ್ನೂ ಬಳಸಿಕೊಳ್ಳುವ ಬಿಜೆಪಿ ಮತ್ತೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಶಕ್ತವಾಗಿಬಿಡುತ್ತದೆ. ಬಿಜೆಪಿಯನ್ನು ಎದುರಿಸುವ ಬಗ್ಗೆ ಪ್ರಾದೇಶಿಕ ಪಕ್ಷಗಳು ಏನೇ ತಿಪ್ಪರಲಾಗ ಹೊಡೆದರೂ, ಒಬ್ಬ ರಾಷ್ಟ್ರಮಟ್ಟದ ನಾಯಕನಿರದ ಅದರ ಪ್ರಯತ್ನಗಳು ವ್ಯರ್ಥವಾಗುತ್ತ ಹೋಗುತ್ತವೆ.

ಮತೀಯ ಶಕ್ತಿಗಳು ವಿಜೃಂಭಿಸುವ ಒಂದು ದೇಶವನ್ನು ಮತ್ತೆ ಜಾತ್ಯತೀತ ನೆಲೆಗೆ ತಂದು ನಿಲ್ಲಿಸುವುದು ಕೋಮುವಾದವನ್ನು ಹರಡಿದಷ್ಟು ಸುಲಭವಂತೂ ಆಗಿರಲು ಸಾಧ್ಯವಿಲ್ಲ. ಹಾಗಾಗಿ ಈ ದೇಶದ ಬಹುಸಂಸ್ಕೃತಿ, ಜಾತ್ಯತೀತ ಪರಂಪರೆಯ ಭವಿಷ್ಯವನ್ನು ನಿರ್ಧರಿಸುವ ಸಂದರ್ಭವಾಗಿ ಕರ್ನಾಟಕದ ಚುನಾವಣೆ ಕಾಣಿಸುತ್ತಿದೆ. ಇದರ ಗಂಭೀರತೆಯನ್ನು ಅರಿಯದವರು ಅಥವಾ ಅರಿತೂ ಅರಿಯದಂತೆ ನಟಿಸುತ್ತಿರುವವರು ಈ ಚುನಾವಣೆಗಳನ್ನು ಮಧ್ಯಕಾಲೀನ ಯುಗದ ಯುದ್ಧವೆಂಬಂತೆ ಬಿಂಬಿಸುತ್ತ ಜನರನ್ನು ರಂಜಿಸುತ್ತ ದಾರಿ ತಪ್ಪಿಸುತ್ತಿರುವುದು ವಿಪರ್ಯಾಸ.

Share

Leave a comment

Your email address will not be published. Required fields are marked *

Recent Posts More

  • 6 days ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 6 days ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 6 days ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 1 week ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 2 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    6 days ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    2 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    3 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    3 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...