Share

ರೈತರ ಸಂಕಟಗಳಿಗೆ ಸಿಗುವುದೆ ಮುಕ್ತಿ?
ಕಾದಂಬಿನಿ

 

ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.

 

 

ಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಅಧಿಕಾರದ ಗದ್ದುಗೆಯೇರಲು ರೈತರಿಗೆ ಅನೇಕ ಭರವಸೆಗಳನ್ನು ನೀಡಿತ್ತು. ಆದರೆ ಅಧಿಕಾರ ಹಿಡಿದ ಕೆಲ ಸಮಯದಲ್ಲಿ, ಕೊಟ್ಟ ಮಾತಿನಂತೆ 14 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ವಾಮಿನಾಥನ್ ಆಯೋಗದ ವರದಿ ಜಾರಿಮಾಡಬೇಕು, ರೈತರಲ್ಲಿ ಸುರಕ್ಷಾ ಭಾವ ಮೂಡುವಂತೆ ತಮ್ಮ ಉತ್ಪಾದನಾ ವೆಚ್ಚದ ಕನಿಷ್ಟ 50% ಹೆಚ್ಚು ದರ ನಿಗದಿಪಡಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು ರೈತರು ಕೃಷಿಮಂತ್ರಿಗಳನ್ನು ಭೇಟಿಯಾದ ಸಂದರ್ಭದಲ್ಲಿ ಈ ಭರವಸೆಗಳನ್ನೆಲ್ಲ ‘ಚುನಾವಣಾ ಪ್ರಚಾರದ ಜುಮ್ಲಾ’ ಎನ್ನಲಾಯಿತು. ಅಂಕಿ ಅಂಶಗಳ ಪ್ರಕಾರ ಮೋದಿ ಸರಕಾರದ ಮೊದಲ ಮೂರು ವರ್ಷಗಳಲ್ಲಿಯೇ 36 ಸಾವಿರ ರೈತರ ಆತ್ಮಹತ್ಯೆಗಳಾಗಿವೆ, ಬಿಜೆಪಿ ಸರಕಾರವಿರುವ ಮಹಾರಾಷ್ಟ್ರದಲ್ಲಿಯೇ 12 ಸಾವಿರ ರೈತರ ಆತ್ಮಹತ್ಯೆಗಳಾಗಿವೆ. ಕೆಲ ರಾಜ್ಯಗಳಲ್ಲಿ ಆದ ಆತ್ಮಹತ್ಯೆಗಳು ಅಂಕಿ ಅಂಶದಲ್ಲಿ ಸೇರಿಯೇ ಇಲ್ಲ. 70% ಆತ್ಮಹತ್ಯೆಗಳು ಬಿಜೆಪಿ ಹಾಗೂ ಎಂಡಿಎ ಸರಕಾರವಿರುವಲ್ಲಿಯೇ ಆಗಿರುವುದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಕೊಟ್ಟ ಆಸ್ವಾಸನೆಗಳನ್ನೇ ಅಣಕಿಸುವಂತಿವೆ.

ಇದು ಸಾಲದೆಂಬಂತೆ ತೀರ ಇತ್ತೀಚೆ ಫಸಲ್ ಬಿಮಾ ಯೋಜನೆಯ ಹಗರಣ ಹಾಗೂ ಕೃಷಿ ಮಂತ್ರಾಲಯವೇ ನೋಟು ಅಮಾನ್ಯೀಕರಣವು ಕೃಷಿ ಕ್ಷೇತ್ರದ ಸೊಂಟ ಮುರಿದಿದೆ ಎನ್ನುವುದನ್ನು ಒಪ್ಪಿಕೊಂಡಿದೆ ಎನ್ನುವ ಸುದ್ದಿಗಳು ಜೋರಾಗಿ ಸದ್ದು ಮಾಡಿದವು. ಒಟ್ಟಾರೆಯಾಗಿ ಕೊಟ್ಟ ಮಾತು ತಪ್ಪಿದ ಮೋದಿ ಸರಕಾರದ ನಡೆಯ ವಿರುದ್ಧ ಸಂಘರ್ಷಗಳು ನಡೆಯುತ್ತಲೇ ಇವೆ.

 

ಕಳೆದ ವರ್ಷ ರೈತರ 200 ಕಿಲೋಮೀಟರುಗಳ ಸುದೀರ್ಘ ನಾಸಿಕ್-ಮುಂಬಯಿ ಲಾಂಗ್ ಮಾರ್ಚ್ ನಡೆಯಿತು. ರಾಜಸ್ಥಾನ್, ಹಿಮಾಚಲ್ ಪ್ರದೇಶ, ಹರಿಯಾಣಾ ಹೀಗೆ ದೇಶದ ಅನೇಕ ರಾಜ್ಯಗಳಲ್ಲಿ ಕೇಂದ್ರ ಸರಕಾರದ ರೈತವಿರೋಧಿ ನೀತಿಯ ವಿರುದ್ಧ ರ್ಯಾಲಿಗಳು ನಡೆದವು.

ಮಧ್ಯ ಪ್ರದೇಶದಲ್ಲಿ ಸರಕಾರವು ಆರು ರೈತರನ್ನು ಗುಂಡಿಟ್ಟು ಹತ್ಯೆ ಮಾಡಿದ ‘ಮಂಡ್ಸೋರ್ ಕಾಂಡ’ದ ನಂತರ ಸುಮಾರು 200ಕ್ಕಿಂತ ಹೆಚ್ಚು ರೈತ ಸಂಘಟನೆಗಳು ಒಂದಾಗಿ ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು. ಇದೇ ಸಮಿತಿಯು ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಇದೇ ನವೆಂಬರ್ 29-30 ರಂದು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಿದೆ.

ಸ್ವಾಮಿನಾಥನ್ ವರದಿಯ ಜಾರಿ ಹಾಗೂ ರೈತರ ಸಾಲ ಹಾಗೂ ಬೆಳೆಗಳ ಬೆಲೆ ನಿಗದಿಗಾಗಿ 21 ದಿನಗಳ ವಿಶೇಷ ಜಂಟಿ ಸಂಸತ್ ಅಧಿವೇಶನದ ಆಗ್ರಹವನ್ನು ಮುಂದಿಟ್ಟುಕೊಂಡು ಆಯೋಜಿಸಿರುವ ಈ ಕಿಸಾನ್ ಮುಕ್ತಿಮಾರ್ಚ್ ಗೆ ವಿವಿಧ ರಾಜ್ಯಗಳಿಂದ ಅಂದಾಜು ಎರಡು ಲಕ್ಷ ರೈತರು ಹಾಗೂ ರೈತರಿಗಾಗಿ ಫೋಟೋಗ್ರಾಫರುಗಳು, ರೈತರಿಗಾಗಿ ವಕೀಲರು, ರೈತರಿಗಾಗಿ ವಿದ್ಯಾರ್ಥಿಗಳು, ರೈತರಿಗಾಗಿ ಟೆಕ್ಕಿಗಳು ಎಂಬ ಸರಣಿಯಲ್ಲಿ ರೈತರೊಂದಿಗೆ ಬೆಸೆದ ಗುಂಪುಗಳು, ಜನಸಾಮಾನ್ಯರು ಹೀಗೆ ಸುಮಾರು ‘ದೆಹಲಿ ಚಲೋ, ರಾಜಭವನ್ ಚಲೋ’ ಘೋಷಣೆಗಳೊಂದಿಗೆ ದೆಹಲಿಯ ನಾಲ್ಕು ದಿಕ್ಕುಗಳಿಂದ ರಾಮಲೀಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ. ಈಗಾಗಲೇ ಈ ‘ಕಿಸಾನ್ ಮುಕ್ತಿ ಮಾರ್ಚ್’ ಯಶಸ್ವಿಯಾಗಿ ಆರಂಭಗೊಂಡಿದೆ. ಆದರೆ ರೈತರ ಸಂಕಟಗಳಿಗೆ ಮುಕ್ತಿ ಕೊಡುವ ವಿಚಾರಕ್ಕೆ ನರೇಂದ್ರ ಮೋದಿ ಸರಕಾರ ಹೇಗೆ ಸ್ಪಂದಿಸುತ್ತದೆ ಕಾದು ನೋಡಬೇಕಿದೆ.

Share

Leave a comment

Your email address will not be published. Required fields are marked *

Recent Posts More

  • 6 days ago No comment

    ಬಿಜೆಪಿ ವಿರೋಧಿ ರಂಗ: ಪ್ರತಿಪಕ್ಷ ಸಭೆಯಲ್ಲಿ 20 ಪಕ್ಷಗಳು

    ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು.   ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ಅಚ್ಚರಿಯ ವಿಚಾರವೆಂದರೆ, ಈ ಸಭೆಗೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ)ದಿಂದ ಯಾವುದೇ ಮುಖಂಡರು ಆಗಮಿಸಿರಲಿಲ್ಲ. ಡಿ.10ರಂದು, ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ...

  • 1 week ago No comment

    ಅರ್ಧನಾರಿ ಕಥೆಯ ಮತ್ತೆರಡು ಭಾಗಗಳು

    ‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ಆರೋಪಿಸಿದ್ದ ಬಲಪಂಥೀಯ ಕಾರ್ಯಕರ್ತರು ಹಲ್ಲೆಯೆಸಗಿದಾಗ, ತಮ್ಮ ಬರವಣಿಗೆ ಮೇಲೆ ಸ್ವಯಂ ನಿಷೇಧ ಹೇರಿಕೊಂಡಿದ್ದ ಮುರುಗನ್, ಇದೀಗ ಆ ಕಾದಂಬರಿ ಮುಗಿದಲ್ಲಿಂದಲೇ ಆರಂಭಿಸಿ ಮತ್ತೆರಡು ಭಾಗಗಳನ್ನು ಹೊರತಂದಿದ್ದಾರೆ. ಮೊದಲ ...

  • 1 week ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 1 week ago No comment

    ಅಲೆಗಳಾಗುವ ಹಾಡು

        ಕವಿಸಾಲು         ಕನಸುಗಳ ಜಾತ್ರೆ, ಮನಸುಗಳ ಹಬ್ಬ ಎಲ್ಲ ನಿಶ್ಯಬ್ದ, ಮೌನದಲಿ ಮನ ಬಿಡಿಸಿದ ಮೂರ್ತ ರೂಪಕ್ಕೆ ತದ್ರೂಪು ನಿನ್ನದೇ ಸೊಬಗು ಸುರಿವ ಮಳೆ, ಬೀಸೋ ಗಾಳಿ ಒದ್ದೆಯಾದ ಒಡಲಿನಲಿ ಉರಿವ ನನ್ನೆದೆಯ ಮೇಲೆ ಚಿತ್ತಾರ ಬಿಡಿಸುತ್ತವೆ ನಿನ್ನ ಬೆರಳು ಕರಿಕಪ್ಪು ಚಳಿ ರಾತ್ರಿಯಲಿ ಒಂದಪ್ಪುಗೆಯ ಧ್ಯಾನದಲಿ ಬೆನ್ನ ಸುಳಿ ಸೀಳಿ ಮೇಲೇರುವ ನಡುಕದಲಿ ನಿನ್ನೆದೆಯ ಹರವು ಯಾರೋ, ಯಾವತ್ತೋ ಮರಳ ...

  • 2 weeks ago No comment

    ಹೊಸ್ತಿನ ಹಗಲು

    ಕವಿಸಾಲು   ಬಯಲ ಗದ್ದೆಯ ಭತ್ತದ ಕದರು ರೈತರ ಬೆವರ ಬಸಿಯುವ ಕೊಯಿಲು ಕಂಬಳಕಿಂಪಿನ ಪಾಂಗಿನ ಅಮಲು ಹೊಡತಲೆ ಹಗಣದ ಕವಳದ ಸಾಲು ಆಚರಿಸುತಿದೆ ಹೊಸ್ತಿನ ಹಗಲು. ನೇಗಿಲ ಬುಡದಲಿ ಸಸಿಬುಡ ಬೇರು ಕದರಿನ ನಡುವಲಿ ಗಂಧದ ಕೆದರು ಮಣ್ಣೊಳಗ್ಹುದುಗಿದ ಎರೆಹುಳು ಪಾಡು ಹರಡಿದ ಗಿಣಿಗಳ ಹಾಡಿನ ಜಾಡು ಆಚರಿಸುತಿದೆ ಹೊಸ್ತಿನ ಹಗಲು. ಮಣ್ಣಿನ ಬಣ್ಣದ ಮನಸಿನ ತೆವಲು ಕೆಂದರಕಿ ಹೂವಿನ ಕಮಾನು ಹೊಸಿಲು ಹೂಡುವ ಎತ್ತಿನ ಅಡಸಲ ...


Editor's Wall

  • 08 December 2018
    1 week ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 30 November 2018
    2 weeks ago No comment

    ರಕ್ಕಸ ವ್ಯೂಹದಲ್ಲಿ ಹೆಣ್ಣಿನ ಹೋರಾಟ

    ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ.    2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ ನ.25ರಂದು ಬಿಡುಗಡೆ ಮಾಡಿರುವ ಅಧ್ಯಯನ ವರದಿ. ನವೆಂಬರ್ 25, ...

  • 29 November 2018
    2 weeks ago No comment

    ರೈತರ ಸಂಕಟಗಳಿಗೆ ಸಿಗುವುದೆ ಮುಕ್ತಿ?

      ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.     ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರ ...

  • 09 November 2018
    1 month ago No comment

    ಹೊಸ ಕಾಲದ ಹರಕೆಯ ಕುರಿಗಳು!

      ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ.     ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...

  • 28 October 2018
    2 months ago No comment

    ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು

      ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...