Share

ಕೊಂಕಣಿ ಪ್ರತಿಭೆಯನ್ನರಸಿ ಕರ್ನಾಟಕಕ್ಕೆ ಬಂದ ಪ್ರಶಸ್ತಿ
ಕಾದಂಬಿನಿ

 

 

ಅತಿಥಿ

 

 

 

 

 

ಬಾರಿ ಕರ್ನಾಟಕವು ಎರಡು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿತು ಎಂದರೆ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಪ್ರಮಾದವೇನಾದರೂ ಆಯಿತೇ? ಒಂದೇ ಪುರಸ್ಕಾರವನ್ನು ಇಬ್ಬರಿಗೆ ಹಂಚಿರಬಹುದೇ? ಎಂದೆಲ್ಲ ಯೋಚಿಸಿ ತಲೆ ಕೆರೆದುಕೊಳ್ಳುತ್ತಿದ್ದೀರಾ? ಇಲ್ಲಿದೆ ನೋಡಿ ಉತ್ತರ. ಕನ್ನಡಕ್ಕೆ 2018ರ ಕೇಂದ್ರಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಘೋಷಣೆಯಾದಾಗಲೇ ಕರ್ನಾಟಕದ ಕೊಂಕಣಿ ಕವಯತ್ರಿ ವಿಲ್ಮಾ ಬಂಟ್ವಾಳ ಇವರ ‘ಮುಖ್ಡಿಂ’ ಎಂಬ ಕವಿತಾ ಸಂಕಲನಕ್ಕೂ ಈ ಯುವ ಪುರಸ್ಕಾರ ಲಭಿಸಿತು.

ಕರ್ನಾಟಕದ ಆಡಳಿತ ಭಾಷೆ ಕನ್ನಡವಾದರೂ ಇಲ್ಲಿ ಕೊಂಕಣಿ, ತುಳು, ಕೊಡವ, ಬ್ಯಾರಿ ಸೇರಿದಂತೆ ಅನೇಕ ಭಾಷೆಗಳನ್ನಾಡುವವರಿದ್ದಾರೆ. ಇವರಿಗೆ ತಮ್ಮದೇ ಆಹಾರ, ಉಡುಗೆ ತೊಡುಗೆ, ಸಂಸ್ಕೃತಿ, ಸಾಹಿತ್ಯ, ಕಲೆ, ಜಾನಪದವಿದ್ದು ಕನ್ನಡ ನೆಲದ ಈ ಕನ್ನಡೇತರ ಭಾಷಿಕರು ಕೊಟ್ಟ ಕೊಡುಗೆಗಳು ಕರ್ನಾಟಕದ ಅಪೂರ್ವ ಆಸ್ತಿಯೂ ಅಸ್ಮಿತೆಯೂ ಆಗಿದೆ. ಕರ್ನಾಟಕದ ಕೊಂಕಣಿ ಭಾಷಿಕರ ಕುರಿತು ಹೇಳುವುದಾದರೆ ಸಾಹಿತಿ ನಾ.ಡಿಸೋಜರ ‘ಕೊಂಕಣಿ – ಅಸ್ತಿತ್ವಕ್ಕಾಗಿ ಹೋರಾಟ’ ಎಂಬ ಬರಹದ ಪ್ರಕಾರ ಭಾರತದಲ್ಲಿ 50ಕ್ಕಿಂತ ಹೆಚ್ಚು ಕೊಂಕಣಿ ಭಾಷಿಕರಿದ್ದು ಗೋವಾ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಕರ್ನಾಕಟ ಹೀಗೆ ಹರಡಿ ಹಂಚಿಹೋಗಿದ್ದರೂ ಬರೋಬ್ಬರಿ 25 ಲಕ್ಷಕ್ಕಿಂತ ಹೆಚ್ಚು ಜನ ಕರ್ನಾಟಕದಲ್ಲಿಯೇ ಇದ್ದು ತಮ್ಮದೇ ವಿಶಿಷ್ಟತೆ ಮತ್ತು ವೈವಿಧ್ಯತೆಗಳಿಂದ ಕನ್ನಡ ನಾಡಿನ ಹಿರಿಮೆ, ಗರಿಮೆ, ಸೌಂದರ್ಯವನ್ನು ಹೆಚ್ಚಿಸಿದ್ದಾರೆ. ಕರ್ನಾಟಕವೊಂದರಲ್ಲಿಯೇ ಸುಮಾರು ಹದಿನೈದರಷ್ಟು ಬಗೆಯ ಕೊಂಕಣಿಗಳಿದ್ದರೂ ಇದಕ್ಕೆ ತನ್ನದೇ ಆದ ಲಿಪಿಯಿಲ್ಲದ ಕಾರಣ ಕೊಂಕಣಿ ಸಾಹಿತ್ಯವು ಕನ್ನಡ, ದೇವನಾಗರಿ, ರೋಮನ್, ತಮಿಳು, ಮಲೆಯಾಳ ಹೀಗೆ ಆಯಾ ಪ್ರದೇಶದ ಲಿಪಿಗಳಲ್ಲಿ ಮೈವೆತ್ತು ಅಮೂಲ್ಯ ಕೃತಿಗಳನ್ನು ಕೊಡುತ್ತ ತನ್ನ ಅಸ್ಮಿತೆಯನ್ನು ಕಾಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೂ ಗೋವಾ ಕೊಂಕಣಿಗರ ಪಾಲಾಗುತ್ತಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರವು ಈ ಬಾರಿ ಕರ್ನಾಟಕದ ಕೊಂಕಣಿ ಕವಯತ್ರಿಗೆ ಲಭಿಸಿದ್ದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

ಕವಯತ್ರಿ ವಿಲ್ಮಾ ಬಂಟ್ವಾಳರ ಕುರಿತು:

ವಿಲ್ಮಾ ಬಂಟ್ವಾಳ ಕಾವ್ಯನಾಮದ ಲೇಖಕಿಯ ನಿಜನಾಮಧೇಯ ವಿಲ್ಮಾ ಲವೀನಾ ಡಿಸೋಜ. 1989ನೇ ಇಸವಿಯ ಅಕ್ಟೋಬರ್ 26ರಂದು ಮಂಗಳೂರು ಸಮೀಪದ ಬಂಟ್ವಾಳದಲ್ಲಿ ವಲೇರಿಯನ್ ಡಿಸೋಜ ಮತ್ತು ಲಿಲ್ಲಿ ಡಿಸೋಜರ ಮಗಳಾಗಿ ಜನಿಸಿದ ವಿಲ್ಮಾ ಬಂಟ್ವಾಳದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿಯನ್ನು ಹಾಗೂ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿಯನ್ನು ಪ್ರಥಮ ರ್ಯಾಂಕ್ ಪಡೆಯುವುದರೊಂದಿಗೆ ಮುಗಿಸಿದರು. ಕೆಲಕಾಲ ಮಂಗಳೂರಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿಯಾಗಿದ್ದು ಪ್ರಸ್ತುತ ಬೆಂಗಳೂರಿನ ಸೈಂಟ್ ಜೋಸೆಪ್ಸ್ ಕಾಲೇಜಿನಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಪತಿ ವಿಜಯ್ ಮೋನಿಸ್ ಇಂಜಿನಿಯರ್ ಆಗಿದ್ದು ಈ ದಂಪತಿಗೆ ಎರಡು ತಿಂಗಳ ಮಗುವಿದೆ.

ವಿಲ್ಮಾ ಅವರು ರಾಜ್ಯ ಸರಕಾರದ KSET ಪರೀಕ್ಷೆಯನ್ನು ಗಣಿತಶಾಸ್ತ್ರದಲ್ಲಿ ಉತ್ತೀರ್ಣರಾಗಿದ್ದು ಇದೀಗ ಪಿಎಚ್ಡಿ ಶಿಕ್ಷಣವನ್ನು ಆರಂಭಿಸಿದ್ದಾರೆ. ಬಾಲ್ಯದಿಂದಲೇ ಚಿತ್ರಕಲೆ, ಸಾಹಿತ್ಯದ ಕಡೆ ವಿಶೇಷ ಒಲವು ತೋರುತ್ತಿದ್ದ ವಿಲ್ಮಾ ಎಂಟನೇ ತರಗತಿಯಿಂದಲೇ ಬರೆಯಲಾರಂಭಿಸಿದರು. ಕೊಂಕಣಿ ನಿಯತಕಾಲಿಕೆಗಳಾದ ರಾಕ್ಣೊ, ದಿರ್ವೆಂ, ಆಮ್ಚೊ ಯುವಕ್, ನಮಾನ್ ಬಾಳೋಕ್ ಜೆಜು ಹಾಗೆಯೇ ಕವಿತಾ.ಕಾಮ್ ಕಿಟಾಳ್.ಕಾಮ್ ನಂತಹ ಅಂತರ್ಜಾಲ ಪತ್ರಿಕೆಗಳಲ್ಲಿ ಕವಿತೆ, ಲೇಖನಗಳು ಪ್ರಕಟವಾದವು. ಕಿಟಾಳ್.ಕಾಮ್ ನಲ್ಲಿ ಇವರು ‘ಆಂಕ್ರಿ’ ಎಂಬ ಅಂಕಣಬರಹ ಬರೆಯುತ್ತಿದ್ದರು. ‘ಬಾಳೊಕ್’ ಪತ್ರಿಕೆಯ ಸಂಪಾದಕಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದರು. ಹೀಗೆ ಸಾಹಿತ್ಯ ಕ್ಷೇತ್ರದಲ್ಲಿ ಬಲವಾದ ಹೆಜ್ಜೆಗುರುತುಗಳನ್ನು ಮೂಡಿಸುತ್ತ ಸಾಗುತ್ತಿರುವ ವಿಲ್ಮಾರಿಗೆ 2010ರಲ್ಲಿ ಲಿಯೋ ರೋಡ್ರಿಗಸ್ ಕಿಟಾಳ್ ಯುವ ಪುರಸ್ಕಾರ ಕೂಡ ಲಭಿಸಿತ್ತು.

ವಿಲ್ಮಾ ಬಂಟ್ವಾಳ್ ಎಂಬ ಈ ಅಪ್ರತಿಮ ಪ್ರತಿಭೆಯ ‘ಮುಖ್ಡಿಂ’ ಕವಿತಾ ಸಂಕಲನಕ್ಕೆ ಈ ಬಾರಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಲಭಿಸಿದೆ. ‘ಮುಖ್ಡಿಂ’ ಪದಕ್ಕೆ ಮುಖವಾಡ ಎಂಬರ್ಥವಿದೆ. ಕವಿ ಮೆಲ್ವಿನ್ ರೋಡ್ರಿಗಸ್ ಮುನ್ನುಡಿ ಬರೆದು ಗೋವಾ ಕೊಂಕಣಿ ಅಕಾಡೆಮಿ ಪ್ರಕಟಿಸಿರುವ ಈ ಕೃತಿಯನ್ನು 2014ರಲ್ಲಿ ಗೋವಾದ ಕಾಣ್ಕೋಣ್ ನಲ್ಲಿ ನಡೆದ ಯುವ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಸಾಹಿತಿ ವಿವೇಕ ಶಾನಭಾಗ ಬಿಡುಗಡೆಗೊಳಿಸಿದ್ದರು. ಈ ಪುರಸ್ಕಾರವು 50,000 ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

Share

Leave a comment

Your email address will not be published. Required fields are marked *

Recent Posts More

  • 1 month ago No comment

    ಪಂಡಿತರ ಹಳ್ಳಿಯ ‘ಮಂದರಗಿರಿ’

                  ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ಹೆಚ್ಚು ಕಾಣಸಿಗುತ್ತಾರೆ. ಹೆಸರುವಾಸಿ ತಾಣಗಳಲ್ಲಿ ಸದಾ ಜನಜಂಗುಳಿಯಿರುತ್ತದೆ. ದೂರದ ಊರುಗಳೆಂದರೆ ಅದಕ್ಕೆ ತಯಾರಿ ಬೇಕು. ಹಲವು ದಿನಗಳ ಸಿದ್ಧತೆ, ಪ್ರಯಾಣ, ವಿಪರೀತ ಖರ್ಚು ಎಲ್ಲವೂ ಹೌದು. ವಯಸ್ಸಾದವರಿಗೆ ...

  • 3 months ago No comment

    ಬಿಜೆಪಿ ವಿರೋಧಿ ರಂಗ: ಪ್ರತಿಪಕ್ಷ ಸಭೆಯಲ್ಲಿ 20 ಪಕ್ಷಗಳು

    ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು.   ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ಅಚ್ಚರಿಯ ವಿಚಾರವೆಂದರೆ, ಈ ಸಭೆಗೆ ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ)ದಿಂದ ಯಾವುದೇ ಮುಖಂಡರು ಆಗಮಿಸಿರಲಿಲ್ಲ. ಡಿ.10ರಂದು, ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ...

  • 3 months ago No comment

    ಅರ್ಧನಾರಿ ಕಥೆಯ ಮತ್ತೆರಡು ಭಾಗಗಳು

    ‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ಆರೋಪಿಸಿದ್ದ ಬಲಪಂಥೀಯ ಕಾರ್ಯಕರ್ತರು ಹಲ್ಲೆಯೆಸಗಿದಾಗ, ತಮ್ಮ ಬರವಣಿಗೆ ಮೇಲೆ ಸ್ವಯಂ ನಿಷೇಧ ಹೇರಿಕೊಂಡಿದ್ದ ಮುರುಗನ್, ಇದೀಗ ಆ ಕಾದಂಬರಿ ಮುಗಿದಲ್ಲಿಂದಲೇ ಆರಂಭಿಸಿ ಮತ್ತೆರಡು ಭಾಗಗಳನ್ನು ಹೊರತಂದಿದ್ದಾರೆ. ಮೊದಲ ...

  • 3 months ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 3 months ago No comment

    ಅಲೆಗಳಾಗುವ ಹಾಡು

        ಕವಿಸಾಲು         ಕನಸುಗಳ ಜಾತ್ರೆ, ಮನಸುಗಳ ಹಬ್ಬ ಎಲ್ಲ ನಿಶ್ಯಬ್ದ, ಮೌನದಲಿ ಮನ ಬಿಡಿಸಿದ ಮೂರ್ತ ರೂಪಕ್ಕೆ ತದ್ರೂಪು ನಿನ್ನದೇ ಸೊಬಗು ಸುರಿವ ಮಳೆ, ಬೀಸೋ ಗಾಳಿ ಒದ್ದೆಯಾದ ಒಡಲಿನಲಿ ಉರಿವ ನನ್ನೆದೆಯ ಮೇಲೆ ಚಿತ್ತಾರ ಬಿಡಿಸುತ್ತವೆ ನಿನ್ನ ಬೆರಳು ಕರಿಕಪ್ಪು ಚಳಿ ರಾತ್ರಿಯಲಿ ಒಂದಪ್ಪುಗೆಯ ಧ್ಯಾನದಲಿ ಬೆನ್ನ ಸುಳಿ ಸೀಳಿ ಮೇಲೇರುವ ನಡುಕದಲಿ ನಿನ್ನೆದೆಯ ಹರವು ಯಾರೋ, ಯಾವತ್ತೋ ಮರಳ ...


Editor's Wall

  • 08 December 2018
    3 months ago No comment

    170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

    ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು. ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ...

  • 30 November 2018
    3 months ago No comment

    ರಕ್ಕಸ ವ್ಯೂಹದಲ್ಲಿ ಹೆಣ್ಣಿನ ಹೋರಾಟ

    ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ.    2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ ನ.25ರಂದು ಬಿಡುಗಡೆ ಮಾಡಿರುವ ಅಧ್ಯಯನ ವರದಿ. ನವೆಂಬರ್ 25, ...

  • 29 November 2018
    3 months ago No comment

    ರೈತರ ಸಂಕಟಗಳಿಗೆ ಸಿಗುವುದೆ ಮುಕ್ತಿ?

      ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.     ಕಳೆದ ಇಪ್ಪತ್ತು ವರ್ಷಗಳಲ್ಲಿ 3 ಲಕ್ಷ ರೈತರ ಆತ್ಮಹತ್ಯೆಗಳಾಗಿವೆ ಎನ್ನುವುದು ಭಾರತದ ರೈತರ ಸಂಕಟಗಳ ತೀವ್ರತೆಯನ್ನು ತೋರಿಸುತ್ತದೆ. ನರೇಂದ್ರ ...

  • 09 November 2018
    4 months ago No comment

    ಹೊಸ ಕಾಲದ ಹರಕೆಯ ಕುರಿಗಳು!

      ಅಮಾಯಕತೆಯನ್ನು ಮತ್ತೆ ಮತ್ತೆ ಮೌನಕ್ಕೆ ಕಟ್ಟಿಹಾಕುವ ಇವತ್ತಿನ ಸಂದರ್ಭದಲ್ಲಿ, ಮಾತು ಸೋಲದಂತೆ ಕಾಯುವುದಕ್ಕೆ ಮೌನದ ಜರೂರು ಇನಿತಾದರೂ ಇದೆ ಎಂದು ನಂಬುವುದೂ ಸಾಧ್ಯವಿಲ್ಲ.     ಗೆಳೆಯರೊಬ್ಬರು ಕೆಲ ದಿನಗಳ ಹಿಂದೆ, ನಿಮ್ಮ ಇಷ್ಟದ ಮೂರ್ನಾಲ್ಕು ಕಥೆಗಳನ್ನು ಹೆಸರಿಸಿ ಎಂದು ಕೇಳಿದರು. ನಾನು ಯೋಚಿಸಿದೆ. ಇಷ್ಟದ ಯಾವುದೇ ಕೃತಿಯನ್ನು ನಮ್ಮೊಳಗೇ ಗುರುತಿಸಿಕೊಳ್ಳುವುದು ಸುಲಭ ಮತ್ತು ಅದು ನಮಗೆ ಆಪ್ತವಾಗುವಂಥದ್ದು. ಆದರೆ ಯಾಕೆ ಇಷ್ಟ ಎಂದು ವಿವರಿಸಬೇಕಾಗಿ ಬಂದಾಗಲೇ ...

  • 28 October 2018
    4 months ago No comment

    ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು

      ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ತೆರೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಂತೆ ಕಾಣಿಸುತ್ತಿದೆ. ಆದರೆ ಅಪಸ್ವರಗಳು ಅದೇ ಹೆಣ್ಣಿನ ದನಿಯನ್ನು ಅಡಗಿಸುವಷ್ಟೇ ಗಟ್ಟಿಯಾದ ಅಬ್ಬರದೊಂದಿಗಿರುವುದೂ ಸುಳ್ಳಲ್ಲ. ಪತ್ರಕರ್ತೆ ಪ್ರಿಯಾ ರಮಾನಿ ಪತ್ರಿಕೋದ್ಯಮದಲ್ಲಿ ಲೈಂಗಿಕ ಕಿರುಕುಳ ಅನುಭವಿಸಿ ನೊಂದ ...