Share

ಮೋದಿ ವಿರುದ್ಧ ಮತ್ತೊಮ್ಮೆ ಸಿನ್ಹಾ ಕಟುಟೀಕೆಯ ಹತಾರ
ಕನೆಕ್ಟ್ ಕನ್ನಡ

ಬಿಜೆಪಿಯೊಳಗಿನ ಮತ್ತೊಂದು ಪಡೆಯ ಈ ಅಸ್ತ್ರ ದೇಶದ ಹಿತವನ್ನು ಚಿಂತಿಸುತ್ತಿದೆಯೆಂದೇನೂ ಅಲ್ಲದಿದ್ದರೂ, ಬಿಜೆಪಿಯ ಈಗಿನ ಉನ್ಮಾದಿ ಸ್ಥಿತಿಯನ್ನು ಕೊಂಚ ತಗ್ಗಿಸೀತೆಂದು ಮಾತ್ರ ನಿರೀಕ್ಷಿಸಬಹುದೇನೊ.

 

ಮೋದಿ, ಶಾ ಗ್ಯಾಂಗಿಗೆ ಉಡಿಯೊಳಗಿನ ಕೆಂಡವಾಗಿರುವ, ಸರ್ಕಾರದ ನಡೆಗಳನ್ನು ನಿರಂತರವಾಗಿ ಜರಿಯುತ್ತಲೇ ಬಂದಿರುವ ಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಈಗ ಮತ್ತೆ ಕಟುಟೀಕೆಯ ಹತಾರ ಎತ್ತಿದ್ದಾರೆ. ಮಾತ್ರವಲ್ಲ, ಬಿಜೆಪಿಯ ಸಂಸದರೆಲ್ಲ ಒಮ್ಮೆ ತಮ್ಮನ್ನೇ ತಾವು ಮುಟ್ಟಿನೋಡಿಕೊಳ್ಳಬೇಕಾದ ಜರೂರಿನ ಬಗ್ಗೆ, ಪಕ್ಷದ ಬಾಸ್‍ಗಳೆನ್ನಿಸಿಕೊಂಡು ಯಾರೊಂದಿಗೂ ಮಾತನಾಡುವ ಸೌಜನ್ಯವೂ ಇಲ್ಲದೆ ಕೂತವರ ವಿರುದ್ಧ ಧ್ವನಿಯೆತ್ತಬೇಕಾದ ಅನಿವಾರ್ಯತೆ ಬಗ್ಗೆ ಹೇಳಿದ್ದಾರೆ.

ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ‘ಡಿಯರ್ ಫ್ರೆಂಡ್, ಸ್ಪೀಕ್ ಅಪ್’ ಅಂಕಣದಲ್ಲಿ ಬಿಜೆಪಿ ಸಂಸದರಿಗೆ ಬಹಿರಂಗ ಪತ್ರ ಬರೆದಿರುವ ಸಿನ್ಹಾ, ಮೋದಿ ಸರ್ಕಾರದ ಯಡವಟ್ಟುಗಳನ್ನು ಉಲ್ಲೇಖಿಸುತ್ತ ಖಾರವಾಗಿ ಅಭಿಪ್ರಾಯ ದಾಖಲಿಸಿದ್ದಾರೆ. ಆರ್ಥಿಕತೆ, ವಿದೇಶಾಂಗ ನೀತಿ, ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿರುವ ಸ್ಥಿತಿ, ದೇಶದ ಪ್ರಜಾಪ್ರಭುತ್ವಕ್ಕೆ ಆಪತ್ತು ಬಂದಿರುವುದು ಇದೆಲ್ಲದರ ಬಗ್ಗೆ ಹೇಳಿರುವ ಯಶವಂತ್ ಸಿನ್ಹಾ, ಇದು ದೇಶಕ್ಕೋಸ್ಕರ ನೀವೆಲ್ಲ ಗಟ್ಟಿ ದನಿಯಲ್ಲಿ ಮಾತನಾಡಬೇಕಾದ ಸಂದರ್ಭ ಎಂದು ಪಕ್ಷದ ಸಂಸದರಿಗೆ ಕಿವಿಮಾತು ಹೇಳಿರುವುದು ಗಮನಾರ್ಹ. ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗುತ್ತಿರುವ ಹೊತ್ತಲ್ಲಿ ಎಲ್ಲಿಗೆ ಬಂದು ಮುಟ್ಟಿದ್ದೇವೆ, ಹೇಗೆ ಮತದಾರರ ವಿಶ್ವಾಸವನ್ನು ಕಳೆದುಕೊಂಡುಬಿಟ್ಟಿದ್ದೇವೆ ಎನ್ನುವ ಮೂಲಕ ಬಿಜೆಪಿ ಆತ್ಮಾವಲೋಕನಕ್ಕೆ ಪ್ರೇರಣೆಯಿದೆ ಸಿನ್ಹಾ ಪತ್ರದಲ್ಲಿ.

ಜಗತ್ತಿನಲ್ಲೇ ಅತ್ಯಂತ ಕ್ಷಿಪ್ರಗತಿಯ ಆರ್ಥಿಕತೆ ನಮ್ಮದೆಂದು ಮೊಂಡುವಾದ ಮಾಡುತ್ತಿರುವ ಸರ್ಕಾರ, ಎಂಥ ಅಧೋಗತಿಗೆ ದೇಶವನ್ನು ಇಳಿಸಿದೆ ಎಂಬುದನ್ನು ಸಿನ್ಹಾ ವಿವರಿಸುತ್ತಾರೆ. ನಿರುದ್ಯೋಗ, ರೈತರ ಆತ್ಮಹತ್ಯೆ, ಸಣ್ಣ ಉದ್ಯಮಗಳ ದಿವಾಳಿತನ, ದೊಡ್ಡ ದೊಡ್ಡ ಹಗರಣಗಳ ಹಿಂದಿದ್ದವರೆಲ್ಲ ದೇಶಬಿಟ್ಟು ಓಡಿಹೋಗುವಾಗ ಏನೂ ಮಾಡಲಾಗದೆ ಕೂತಿರುವ ಸರ್ಕಾರದ ಅಸಹಾಯಕತೆ ಇವೆಲ್ಲದರ ಪ್ರಸ್ತಾಪ ಮಾಡುತ್ತಾರೆ ಸಿನ್ಹಾ.

ಕತುವಾ, ಉನ್ನಾವೋದಂಥ ದಾರುಣ ಪ್ರಕರಣಗಳ ನೆರಳಲ್ಲಿ ದೇಶದಲ್ಲಿನ ಮಹಿಳೆಯರು ಎದುರಿಸುತ್ತಿರುವ ಭೀತಿಯ ಬಗ್ಗೆ, ಅತ್ಯಾಚಾರಗಳು ದಿನನಿತ್ಯದ ವಿಚಾರಗಳಾಗುತ್ತಿರುವ ಬಗ್ಗೆ, ಪಕ್ಷದವರೇ ಅತ್ಯಾಚಾರಿಗಳೂ, ಅತ್ಯಾಚಾರಿಗಳನ್ನು ರಕ್ಷಿಸಲು ನಿಲ್ಲುವವರೂ ಆಗಿಹೋಗಿರುವುದರ ಬಗ್ಗೆ, ಅಲ್ಪಸಂಖ್ಯಾತರು, ದಮನಿತರು ಅವಜ್ಞೆಗೆ ಒಳಗಗಿರುವುದರ ಬಗ್ಗೆ, ಸಂವಿಧಾನವೂ ಈ ಸರ್ಕಾರದ ಕೈಯಲ್ಲಿ ಅಪಾಯಕ್ಕೆ ಸಿಲುಕಿರುವುದರ ಬಗ್ಗೆ ಸಿನ್ಹಾ ಹೇಳುವ ಮಾತುಗಳು, ದೇಶವನ್ನು ಗಂಡಾಂತರಕ್ಕೆ ಸಿಲುಕಿಸುವಂತಿರುವ ವಿದೇಶಾಂಗ ನೀತಿಯ ಕುರಿತು ಅವರು ಕಟ್ಟಿಕೊಡುವ ಚಿತ್ರಣ ಸ್ವಯಂಘೋಷಿತ ದೇಶಭಕ್ತರನ್ನು ಕೊಂಚವಾದರೂ ತಾಕುವುದೊ ಇಲ್ಲವೊ ಗೊತ್ತಿಲ್ಲ.

ಇನ್ನು ಪ್ರಜಾಪ್ರಭುತ್ವದೆದುರಿನ ಆತಂಕ ಎಂಥದು ಎಂಬುದನ್ನು ಹೇಳಿರುವ ಭಾಗವಂತೂ ಅತ್ಯಂತ ಮುಖ್ಯವಾಗಿದೆ ಸಿನ್ಹಾ ಬಹಿರಂಗ ಪತ್ರದಲ್ಲಿ. ಬಜೆಟ್ ಅಧಿವೇಶನ ವ್ಯರ್ಥವಾಗುತ್ತಿರುವಾಗ, ಪ್ರತಿಪಕ್ಷದವರೊಡನೆ ಒಮ್ಮೆ ಕೂತು ಒಲಿಸಿಕೊಳ್ಳುವುದಕ್ಕೆ ಮನಸ್ಸು ಮಾಡದ ಪ್ರಧಾನಿ, ಎಲ್ಲ ಮುಗಿದ ಮೇಲೆ ಎಲ್ಲವನ್ನೂ ಬೇರೆಯವರ ತಲೆಗೆ ಕಟ್ಟಲು ಉಪವಾಸ ಕೂರುತ್ತಾರೆ ಎಂದು ಟೀಕಿಸುತ್ತಾರೆ ಸಿನ್ಹಾ. ಪ್ರತಿಪಕ್ಷಗಳ ಮಾತಿಗೆ ಅವಕಾಶವಿದ್ದ ಕಾಲಘಟ್ಟದ ನೆನಪು ಮಾಡುಕೊಟ್ಟಿರುವುದು ಸರಿಯಾಗಿಯೇ ಇದೆ.

ಇಷ್ಟೆಲ್ಲ ವಿವರಿಸಿದ ಬಳಿಕ ನೇರವಾಗಿ, ಬರಲಿರುವ ಲೋಕಸಭಾಚುನಾವಣೆ ಹೊತ್ತಿನ ಸಂದರ್ಭ ಯಾವ ರೀತಿ ಇರಬಹುದೆಂಬುದನ್ನು ಸಂಸದರಿಗೆ ಮನವರಿಕೆ ಮಾಡಿಕೊಡುವ ಯತ್ನ ಮಾಡುತ್ತಾರೆ. ಅರ್ಧಕ್ಕರ್ಧದಷ್ಟು ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯೇ ಹೆಚ್ಚು. ಸಿಕ್ಕಿದರೂ ಗೆಲ್ಲುವ ಅವಕಾಶ ತೀರಾ ಕಡಿಮೆ ಎಂದು ಮನಗಾಣಿಸುತ್ತ, ಪ್ರತಿಪಕ್ಷಗಳೆಲ್ಲ ಒಟ್ಟಾಗಿ ನಿಂತುಬಿಟ್ಟರೆ ಏನೂ ಇರುವುದಿಲ್ಲ ಎಂದು ಬಿಜೆಪಿಯನ್ನು ಎಚ್ಚರಿಸುತ್ತಾರೆ. ಪಕ್ಷದ ಸಂಸದರೆಲ್ಲ ಬಾಯ್ಬಿಡಬೇಕಾದದ್ದು ದೇಶದ ಹಿತದೃಷ್ಟಿಯಿಂದ ಅಗತ್ಯ ಎನ್ನುತ್ತಾರೆ. ಮುಖ್ಯವಾಗಿ, ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿಯವರನ್ನು ಮಹತ್ವದ ಹೆಜ್ಜೆ ತೆಗೆದುಕೊಳ್ಳುವುದಕ್ಕೆ ಕೋರುತ್ತಾರೆ.

ಈಗಾಗಲೇ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ್ದರಿಂದ ಭಕ್ತಸಮೂಹದ ಆಕ್ರೋಶಕ್ಕೆ ತುತ್ತಾಗಿ, ಅದಕ್ಕೆ ತಕ್ಕ ಉತ್ತರವನ್ನೂ ಕೊಟ್ಟಿದ್ದ ಸಿನ್ಹಾ, ಇದೀಗ ಮೋದಿ ಸರ್ಕಾರದ ವಿರುದ್ಧ ನಡೆಸಿರುವ ಪ್ರಹಾರ ಸಂಚಲನಕ್ಕೆ ಕಾರಣವಾಗಿದೆ. ಬಿಜೆಪಿಯೊಳಗಿನ ಮತ್ತೊಂದು ಪಡೆಯ ಈ ಅಸ್ತ್ರ ದೇಶದ ಹಿತವನ್ನು ಚಿಂತಿಸುತ್ತಿದೆಯೆಂದೇನೂ ಅಲ್ಲದಿದ್ದರೂ, ಬಿಜೆಪಿಯ ಈಗಿನ ಉನ್ಮಾದಿ ಸ್ಥಿತಿಯನ್ನು ಕೊಂಚ ತಗ್ಗಿಸೀತೆಂದು ಮಾತ್ರ ನಿರೀಕ್ಷಿಸಬಹುದೇನೊ.

Share

Leave a comment

Your email address will not be published. Required fields are marked *

Recent Posts More

  • 2 weeks ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 2 weeks ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 2 weeks ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 2 weeks ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    2 weeks ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    4 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    4 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...